ಐದು ವರ್ಷವೂ ನಾನೇ ಮುಖ್ಯಮಂತ್ರಿ : ಸಿದ್ದರಾಮಯ್ಯ

ಹೊಸಪೇಟೆ : ಯಾವ ಉಹಾಪೋಹಗಳಿಗೂ ಕಿವಿಗೊಡಬೇಡಿ. ಪೂರ್ಣ ಐದು ವರ್ಷ ಕಾಂಗ್ರೆಸ್‌ ಪಕ್ಷವೇ ಅಧಿಕಾರ ನಡೆಸಲಿದೆ, ಮುಂದಿನ 5 ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ಕೆಲಸ ಇಲ್ಲದೇ ಇರುವವರು ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ಮಾತನಾಡುತ್ತಾರೆ ಎಂದು … Continued

ರಾಜ್ಯದ ಮೂವರು ಬಿಜೆಪಿ ನಾಯಕರಿಗೆ ಹೈಕಮಾಂಡ್ ದಿಢೀರ್‌ ಬುಲಾವ್

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದ ಮೂವರು ನಾಯಕರಿಗೆ ದೆಹಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ ಎಂದು ವರದಿಯಾಗಿದೆ. ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ, ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಸಂಸದ ಪಿ.ಸಿ. ಮೋಹನ ಅವರಿಗೆ ಬಿಜೆಪಿ ಹೈಕಮಾಂಡ್‌ನಿಂದ ಬುಲಾವ್ ಬಂದಿದೆ. ಇಂದು ಮಧ್ಯಾಹ್ನ 3:30ಕ್ಕೆ ಬಿಜೆಪಿ ಕಚೇರಿಯಲ್ಲಿ ಭೇಟಿಯಾಗಲು ಮೂವರೂ ನಾಯಕರಿಗೆ … Continued

ಮತ್ತೆ ಕರ್ನಾಟಕಕ್ಕೆ ಹಿನ್ನಡೆ: ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2,600 ಕ್ಯೂಸೆಕ್ ಕಾವೇರಿ ನೀರು ಬಿಡಲು ಶಿಫಾರಸು

ನವದೆಹಲಿ: ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕದಿಂದ ತಮಿಳುನಾಡಿಗೆ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ ಸೋಮವಾರ ಸೂಚನೆ ಶಿಫಾರಸು ಮಾಡಿದೆ. ಸೋಮವಾರ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಕರ್ನಾಟಕವು ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್​ ನೀರು ಹರಿಸಬೇಕು ಎಂದು ಶಿಫಾರಸು ಮಾಡಲಾಗಿದೆ. ಕಾವೇರಿ ನೀರು ನಿಯಂತ್ರಣಾ … Continued

ನವೆಂಬರ್ 5ರ ವರೆಗೆ ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಪ್ರದೇಶಗಳಲ್ಲಿ ನವೆಂಬರ್ 5ರವರೆಗೆ ಗುಡುಗು, ಸಿಡಿಲಿನ ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, … Continued

ಕರ್ನಾಟಕದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು : ಬೆಳ್ಳಂ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ, ಹಾಸನ, ಬೀದರ, ಬೆಳಗಾವಿ, ಹಾವೇರಿ ಸೇರಿದಂತೆ 90 ಕಡೆ ದಾಳಿ ಮಾಡಿದ್ದಾರೆ. ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ವಿವಿಧ ಇಲಾಖೆಗಳ ಸರ್ಕಾರಿ ಅಧಿಕಾರಿಗಳ ಮನೆ ಹಾಗೂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಬೆಂಗಳೂರಿನಲ್ಲಿಯೇ 1೦ಕ್ಕೂ ಹೆಚ್ಚು ಕಡೆ ಲೋಕಾಯುಕ್ತ … Continued

ಎಸ್‌ ಎಸ್‌ ಎಲ್‌ ಸಿ, ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸಂಭವನೀಯ ವೇಳಾಪಟ್ಟಿ ಪ್ರಕಟ…

ಬೆಂಗಳೂರು : 2023-24 ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ (SSLC/ PUC Exam) ವ್ಯವಸ್ಥೆಯಲ್ಲಿ ಬದಲಾವಣೆ ತರಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ತೀರ್ಮಾನಿಸಿದೆ. ಈ ಕಾರಣದಿಂದ ವಾರ್ಷಿಕ ಪರೀಕ್ಷೆಯ ಸಂಭವನೀಯ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಕುರಿತು ಎಸ್ ಎಸ್‌ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ … Continued

ರಾಜ್ಯದಲ್ಲಿ 5980 ಡಾಟಾ ಎಂಟ್ರಿ ಆಪರೇಟರುಗಳ ನೇರ ನೇಮಕಾತಿ : ವಿದ್ಯಾರ್ಹತೆ, ವೇತನ, ಇತರ ಮಾಹಿತಿಗಳ ಬಗ್ಗೆ ಇಲ್ಲಿದೆ…

ಬೆಂಗಳೂರು : ಎಲ್ಲ ಗ್ರಾಮ ಪಂಚಾಯತಗಳಲ್ಲಿ ಡಾಟಾ ಎಂಟ್ರಿ ಆಪರೇಟರ್‌ ಗಳ ನೇರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಶೀಘ್ರದಲ್ಲೇ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಲಿದೆ. ರಾಜ್ಯದ ಎಲ್ಲ ಗ್ರಾಮ ಪಂಚಾಯತಗಳಲ್ಲೂ ಪ್ರತಿ ಗ್ರಾಪಂಗೆ ಒಬ್ಬರಂತೆ ಒಟ್ಟು 5,980 ಡಾಟಾ ಎಂಟ್ರಿ ಆಪರೇಟರ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಸರ್ಕಾರ ಸೂಚನೆ … Continued

ಮಾಜಿ ಸಿಎಂ ಯಡಿಯೂರಪ್ಪಗೆ ಝಡ್ ಶ್ರೇಣಿ ಭದ್ರತೆ ನೀಡಿದ ಕೇಂದ್ರ

ನವದೆಹಲಿ: ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ (MHA) ಬಿಜೆಪಿ ನಾಯಕ ಮತ್ತು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ Z ಕೆಟಗರಿ ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಭದ್ರತೆ ನೀಡಿದೆ. ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಭದ್ರತೆ ಒದಗಿಸಲಾಗುತ್ತದೆ ಮತ್ತು ಸಿಆರ್‌ಪಿಎಫ್ ಸಿಬ್ಬಂದಿ ಶೀಘ್ರದಲ್ಲೇ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ. ಯಡಿಯೂರಪ್ಪ ಅವರಿಗೆ ಕೇಂದ್ರ … Continued

ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷಗೆ 14 ದಿನಗಳ ನ್ಯಾಯಾಂಗ ಬಂಧನ

ಬೆಂಗಳೂರು: ಹುಲಿ ಉಗುರಿನ ಲಾಕೆಟ್‌ ಅನ್ನು ಕುತ್ತಿಗೆ ಸರದಲ್ಲಿ ಧರಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 2ನೇ ಎಸಿಜೆಎಂ ಕೋರ್ಟ್ ನ ಮ್ಯಾಜಿಸ್ಟ್ರೇಟ್ ನಿವಾಸಕ್ಕೆ ಇಂದು ಸೋಮವಾರ ವರ್ತೂರು ಸಂತೋಷ ಅವರನ್ನು ಅರಣ್ಯಾಧಿಕಾರಿಗಳು ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ … Continued

ಕೋಲಾರ: ಮಾರಕಾಸ್ತ್ರಗಳಿಂದ ಕೊಚ್ಚಿ ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ಕೋಲಾರ: ಜಿಲ್ಲೆಯ ಶ್ರೀನಿವಾಸಪುರದಲ್ಲಿ ಮಾಜಿ ಸ್ಪೀಕರ್ ರಮೇಶಕುಮಾರ ಆಪ್ತ, ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಎಂ.ಶ್ರೀನಿವಾಸ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಶ್ರೀನಿವಾಸಪುರ ತಾಲೂಕು ಹೊಗಳಗೆರೆ ಬಳಿ ಕಾಂಗ್ರೆಸ್‌ ಮುಖಂಡ ಎಂ.ಶ್ರೀನಿವಾಸ ಅವರ ಮೇಲೆ ಆರು ಮಂದಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದು, ತೀವ್ರವಾಗಿ ಗಾಐಗೊಂಡಿದ್ದ ಅವರನ್ನು ತಕ್ಷಣವೇ ಕೋಲಾರದ ಜಾಲಪ್ಪ ಆಸ್ಪತ್ರೆಗೆ ಒಯ್ಯಲಾಗಿತ್ತು. … Continued