ನಮ್ಮದೇ ನಿಜವಾದ ಜೆಡಿಎಸ್ : ಯಾವ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗಲ್ಲ : ಸಿ.ಎಂ.ಇಬ್ರಾಹಿಂ

ಬೆಂಗಳೂರು : ಲೋಕಸಭೆ ಚುಣಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದ್ದಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಅವರು ಈಗ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರಿಗೇ ಸಡ್ಡು ಹೊಡೆದಿದ್ದಾರೆ. ನಮ್ಮದೇ ಅಸಲಿ ಜೆಡಿಎಸ್. ನಾವು ಯಾವುದೇ ಕಾರಣಕ್ಕೂ ಎನ್‌ಡಿಎ ಮೈತ್ರಿಕೂಟದ ಜೊತೆ ಹೋಗುವುದಿಲ್ಲ ಎಂದು ಸಿಎಂ … Continued

ಕರ್ನಾಟಕ ಸೇರಿ ನಾಲ್ಕು ರಾಜ್ಯಗಳ 55 ಸ್ಥಳಗಳ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ: 102 ಕೋಟಿ ರೂ.ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಆದಾಯ ತೆರಿಗೆ ಇಲಾಖೆ (Income Tax departmen) ನಗದು, ಚಿನ್ನ, ವಜ್ರಾಭರಣ, ಐಷಾರಾಮಿ ವಾಚ್‌ಗಳು ಸೇರಿದಂತೆ 102 ಕೋಟಿ ರೂ.ಗಳಿಗೂ ಅಧಿಕ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ. ಕರ್ನಾಟಕ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಸರ್ಕಾರಿ ಗುತ್ತಿಗೆದಾರರು ಮತ್ತು ರಿಯಲ್ ಎಸ್ಟೇಟ್ ಡೆವಲಪರ್‌ಗಳ ಮೇಲೆ ನಡೆಸಿದ ಸರಣಿ ದಾಳಿಗಳ ನಂತರ ಇದನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ಟೋಬರ್ 12ರಂದು … Continued

ದಸರಾ ಹಬ್ಬಕ್ಕೆ ಕೆಎಸ್‌ಆರ್‌ಟಿಸಿಯಿಂದ 2000 ಹೆಚ್ಚುವರಿ ಬಸ್‌ ಕಾರ್ಯಾಚರಣೆ

ಬೆಂಗಳೂರು : ದಸರಾ ಹಬ್ಬದ ಪ್ರಯುಕ್ತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ(ಕೆಎಸ್‌ಆರ್‌ಟಿಸಿ) 2000 ಹೆಚ್ಚುವರಿ ಬಸ್‌‌ಗಳನ್ನು ನಿಯೋಜನೆ ಮಾಡಲಾಗಿದೆ. ಹಾಗೂ ಹಬ್ಬದ ಪ್ರಯುಕ್ತ ಪ್ರಯಾಣಿಕರಿಗೆ ವಿಶೇಷ ರಿಯಾಯಿತಿ ನೀಡಲಾಗಿದೆ. ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗಾಗಿ (Mysore Dasara) ಮೈಸೂರಿಗೆ ತೆರಳುವ ಪ್ರವಾಸಿಗರಿಗಾಗಿ 600 ದಸರಾ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗಿದೆ. ಸಾಲು ಸಾಲಾಗಿ ಹಬ್ಬಗಳು ಬರುತ್ತಿರುವ … Continued

ಕರ್ನಾಟಕಕ್ಕೆ ಮತ್ತೆ ಶಾಕ್: ಮತ್ತೆ 15 ದಿನ ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸು

ನವದೆಹಲಿ : ರಾಜ್ಯದಲ್ಲಿ ಮುಂಗಾರು ಮಳೆಯಿಲ್ಲದೆ ನೀರಿಗೆ ಬರ ಎದುರಾಗಿದೆ. ಇಂತಹ ಸನ್ನಿವೇಶದಲ್ಲಿಯೂ ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ಮತ್ತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬುಧವಾರ ನವದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ಅಕ್ಟೋಬರ್ 16ರಿಂದ 31ರವರೆಗೆ ಮತ್ತೆ ಪ್ರತಿದಿನ 3 ಸಾವಿರ ಕ್ಯೂಸೆಕ್ … Continued

ಕರ್ನಾಟಕದಲ್ಲಿ ಇನ್ಮುಂದೆ ರೇಬೀಸ್ ಲಸಿಕೆ ಉಚಿತ

ಬೆಂಗಳೂರು : ಎಪಿಎಲ್ ಅಥವಾ ಬಿಪಿಎಲ್ ಕಾರ್ಡ್ ಎಂಬುದನ್ನು ಪರಿಶೀಲಿಸದೆ ಪ್ರಾಣಿ ಕಡಿತಕ್ಕೆ ಒಳಗಾದವರಿಗೆ ಎಲ್ಲರಿಗೂ ಆಂಟಿ ರೇಬೀಸ್ ಲಸಿಕೆ (ಎಆರ್‌ವಿ) ಮತ್ತು ರೇಬೀಸ್ ಇಮ್ಯುನೊಗ್ಲಾಬ್ಯುಲಿನ್ (ಆರ್‌ಐಜಿ) ಅನ್ನು ಉಚಿತವಾಗಿ ನೀಡಲು ರಾಜ್ಯ ಆರೋಗ್ಯ ಇಲಾಖೆ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಸೂಚಿಸಿದೆ. ಈ ಕುರಿತು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಸುತ್ತೋಲೆ … Continued

ಕ್ರಿಕೆಟ್‌ ವಿಶ್ವಕಪ್‌ ನಲ್ಲಿ ಇಂಗ್ಲೆಂಡ್ ವಿರುದ್ಧ ಸೆಂಚುರಿ ಸಿಡಿಸಿದ ನ್ಯೂಜಿಲೆಂಡ್ ಆಟಗಾರ ʼರಚಿನ್ʼ ರವೀಂದ್ರ ಕನ್ನಡಿಗ ; ಈ ಆಟಗಾರನ ಹೆಸರಲ್ಲಿರುವ ವಿಶೇಷತೆ ಏನು..?

ಗಾಯಗೊಂಡಿದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್ ವಿಲಿಯಮ್ಸನ್ ಅವರ ಅನುಪಸ್ಥಿತಿಯಲ್ಲಿ ಕಣಕ್ಕಿಳಿದು ಹಾಲಿ ವಿಶ್ವ ಚಾಂಪಿಯನ್‌ ಇಂಗ್ಲೆಂಡ್‌ ಅದ್ಭುತ ಆಟದೊಂದಿಗೆ ಗಮನ ಸೆಳೆದ ಭಾರತೀಯ ಮೂಲದ ಯುವ ಕ್ರಿಕೆಟರ್‌ ರಚಿನ್ ರವೀಂದ್ರ ಈಗ ಭಾರಿ ಸುದ್ದಿಯಾಗಿದ್ದಾರೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ಗುರುವಾರ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಯ (ICC ODI World Cup 2023) … Continued

ಲೋಕಸಭೆ ಚುನಾವಣೆ 2024 : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ : ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹೆಚ್ಚು ಸ್ಥಾನ, ಕಾಂಗ್ರೆಸ್‌ಗೆ ಲಾಭದ ಸಾಧ್ಯತೆ

ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯ ಪ್ರಕಾರ ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) 16 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ, ಕಾಂಗ್ರೆಸ್ 10 ಮತ್ತು ಜೆಡಿಎಸ್‌ 2 ಸ್ಥಾನಗಳನ್ನು ಗಳಿಸಬಹುದಾಗಿದೆ. ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿ ಬಿಜೆಪಿ ಶೇ.44ರಷ್ಟು ಮತಗಳನ್ನು ಪಡೆಯಬಹುದು ಹಾಗೂ ಕಾಂಗ್ರೆಸ್ ಶೇ.40ರಷ್ಟು ಮತಗಳನ್ನು ಗಳಿಸುವ ಸಾಧ್ಯತೆಯಿದೆ ಮತ್ತು ಜೆಡಿಎಸ್ ಶೇ.11ರಷ್ಟು ಮತಗಳನ್ನು ಪಡೆಯುವ ಸಾಧ್ಯತೆಯಿದೆ. … Continued

ವಿಮಾನದಲ್ಲಿ ಬಂದು ರೈಲಿನಲ್ಲಿ ಕಳ್ಳತನ ಮಾಡ್ತಿದ್ರು ..! : ಮಂಗಳೂರಲ್ಲಿ ರೈಲ್ವೆ ಪೊಲೀಸರಿಗೆ ಸಿಕ್ಕಿಬಿದ್ರು ಹೈಟೆಕ್‌ ಕಳ್ಳರು…!

ಮಂಗಳೂರು : ವಿಮಾನದಲ್ಲಿ ಆಗಮಿಸಿ ಮಂಗಳೂರಿನಲ್ಲಿ ರೈಲು ಪ್ರಯಾಣಿಕರ ಚಿನ್ನಾಭರಣಗಳನ್ನು ಕದಿಯುತ್ತಿದ್ದ ಕಳ್ಳರಿಬ್ಬರನ್ನು ರೈಲ್ವೇ ಪೊಲೀಸರು ಬಂಧಿಸುವಲ್ಲಿ ಯಶಸ್ಸಿಯಾಗಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ಜಿಲ್ಲೆಯ ಅಭಯ ರಾಜ್‌ ಸಿಂಗ್ (26) ಹಾಗೂ ರಾಜಪುರದ ಹರಿಶಂಕರ (25) ಎಂಬವರು ಬಂಧಿತ ಆರೋಪಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾನೆ. ಸೆಪ್ಟೆಂಬರ್ 28ರಂದು ಮಂಗಳೂರು ಮತ್ತು ಸುರತ್ಕಲ್ ನಡುವೆ ಸಂಚರಿಸುತ್ತಿದ್ದ … Continued

ರಾಜ್ಯದಲ್ಲಿ ಬರ ಪರಿಸ್ಥಿತಿ : ನಾಳೆಯಿಂದ ಕೇಂದ್ರ ತಂಡದಿಂದ 12 ಜಿಲ್ಲೆಗಳಲ್ಲಿ ಪರಿಶೀಲನೆ

ಬೆಂಗಳೂರು : ಮುಂಗಾರು ಮಳೆ ಕೈಕೊಟ್ಟಿದ್ದರಿಂದ ರಾಜ್ಯದಲ್ಲಿ ಬರಗಾಲದ ಪರಿಸ್ಥಿತಿ ತಲೆದೋರಿದೆ. ಈ ಹಿನ್ನೆಲೆಯಲ್ಲಿ ಬರ ಸಮೀಕ್ಷೆಗಾಗಿ ನಾಳೆ, ಗುರುವಾರ ರಾಜ್ಯಕ್ಕೆ ಕೇಂದ್ರ ಸರ್ಕಾರದ ಮೂರು ತಂಡ ಭೇಟಿ ನೀಡಿ ಬರದ ಸ್ಥಿತಿಯ ಕುರಿತು ಪರಿಶೀಲನೆ ನಡೆಸಲಿದೆ. ನಾಳೆಯಿಂದ ಅಕ್ಟೋಬರ್ 9ರ ವರೆಗೆ ಬೆಳಗಾವಿ, ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಗದಗ, ಕೊಪ್ಪಳ, ವಿಜಯನಗರ, ಚಿಕ್ಕಬಳ್ಳಾಪುರ, … Continued

ಕರ್ನಾಟಕದ ಜಾತಿ ಗಣತಿ ವರದಿ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿ.ಕೆ. ಹರಿಪ್ರಸಾದ ಒತ್ತಾಯ

ಬೆಂಗಳೂರು : ಬಿಹಾರದಲ್ಲಿ ನಡೆಸಿದ ಜಾತಿಗಣತಿ ಮಾದರಿಯಲ್ಲಿ ಕರ್ನಾಟಕದಲ್ಲೂ ರಾಜ್ಯ ಸರ್ಕಾರ ನಡೆಸಿದ್ದ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಬೇಕು ಎಂದು ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ಕರ್ನಾಟಕವು 2017 ರಲ್ಲಿ ರಾಜ್ಯವು ನಡೆಸಿದ ಜಾತಿ ಗಣತಿಯ ವರದಿ ಬಿಡುಗಡೆ ಮಾಡುವಂತೆ ಅವರು ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ … Continued