ರಾಜ್ಯೋತ್ಸವ ಪ್ರಶಸ್ತಿ : ಆನ್‌ ಲೈನ್‌ ಅರ್ಜಿ ಪ್ರಕ್ರಿಯೆ ಕೈಬಿಟ್ಟ ಸರ್ಕಾರ

ಬೆಂಗಳೂರು: ಈ ಬಾರಿ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಕೈಬಿಟ್ಟಿದೆ. ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರಾದ 70 ಮಂದಿಯನ್ನು ಇಲಾಖೆಯ ಸಲಹಾ ಸಮಿತಿ ಹಾಗೂ ಉನ್ನತ ಆಯ್ಕೆ ಸಮಿತಿಗಳು ಆಯ್ಕೆ ಮಾಡಲಿವೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ. ಆದರೆ, ಈಗಾಗಲೇ ಇಲಾಖೆಗೆ ಬಂದಿರುವ ಸ್ವಯಂ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2-3 ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ಇನ್ನು ಮೂರು ದಿನ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಅಕ್ಟೋಬರ್ 10 ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಎರಡು ದಿನ ಗುಡುಗು ಸಹಿತ ಹಗುರ ಮಳೆಯಾಗಲಿದೆ. ಅಕ್ಟೋಬರ್ … Continued

ಜಾತಿ ಗಣತಿ ಅವಧಿ ವಿಸ್ತರಣೆ; ರಾಜ್ಯಾದ್ಯಂತ ಶಾಲಾ ಸಮಯದಲ್ಲಿ ಬದಲಾವಣೆ

ಬೆಂಗಳೂರು: ಅವಧಿಯೊಳಗೆ ಜಾತಿ ಗಣತಿ (Caste Census) ಮುಗಿಯದ ಕಾರಣ ಅದರ ಅವಧಿ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಕರ್ನಾಟಕದಾದ್ಯಂತ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಸಮಯ (school timings) ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಸೋಮವಾರ ಆದೇಶ ಹೊರಡಿಸಿದೆ. ಜಾತಿ ಗಣತಿ ಸಮೀಕ್ಷಾ ಕಾರ್ಯಕ್ಕೆ ಶಾಲಾ ಶಿಕ್ಷಕರನ್ನು ನಿಯೋಜಿಸಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ ಮತ್ತು … Continued

ವಾಯುಭಾರ ಕುಸಿತ : ಕರ್ನಾಟಕದ 20 ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ವ್ಯಾಪಕ ಮಳೆ: ಮುನ್ಸೂಚನೆ

ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಇನ್ನೂ ಒಂದು ವಾರ ಧಾರಾಕಾರ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಅಕ್ಟೋಬರ್ 9ರ ವರೆಗೆ ಗಾಳಿ ಸಹಿತ ಮಳೆ ಆಗಲಿದೆ ಎಂದು ಐಎಂಡಿ ವರದಿ ತಿಳಿಸಿದೆ. ಪಶ್ಚಿಮ-ಮಧ್ಯ ಮತ್ತು ವಾಯುವ್ಯ ಬಂಗಾಳ … Continued

ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಭವಿಷ್ಯ ನುಡಿದ ಕೋಡಿಮಠ ಸ್ವಾಮೀಜಿ

ಧಾರವಾಡ: ಕೋಡಿಮಠದ ಸ್ವಾಮೀಜಿಗಳು ರಾಜ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ರಾಜಕೀಯ ಭವಿಷ್ಯ ನುಡಿದಿದ್ದಾರೆ. ಸಂಕ್ರಾಂತಿಯ ವರೆಗೆ ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರಕ್ಕೆ ಯಾವ ತೊಂದರೆ ಇಲ್ಲ ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ದಸರಾ ಕಾರ್ಯಕ್ರಮಕ್ಕೆಂದು ಧಾರವಾಡಕ್ಕೆ ಆಗಮಿಸಿದ್ದಾಗ ಮಾಧ್ಯಮಗಳ ಜತೆ ಮಾತನಾಡಿದ ಅವರು, ಸದ್ಯಕ್ಕೆ ಯಾವುದೇ ರಾಜಕೀಯ ಬದಲಾವಣೆಗಳು ಕಂಡುಬರುವುದಿಲ್ಲ. ಕರ್ನಾಟಕದಲ್ಲಿ … Continued

ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ : ಎಲ್ಲ ನೇಮಕಾತಿಗಳಲ್ಲಿ ವಯೋಮಿತಿ ಸಡಿಲಿಕೆ ಮಾಡಿ ರಾಜ್ಯ ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಉದ್ಯೋಗಾಕಾಂಕ್ಷಿಗಳಿಗೆ ದಸರಾ ಗಿಫ್ಟ್ ನೀಡಿದ್ದು, ನಾಗರಿಕ ಸೇವಾ ಹುದ್ದೆಗಳಿಗೆ ಮಾಡುವ ನೇರ ನೇಮಕಾತಿಗಳಲ್ಲಿ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಮೂಲಕ ನಡೆಸುವ ನೇರ ನೇಮಕಾತಿಯಲ್ಲಿ ಭಾಗವಹಿಸುವ ಎಲ್ಲ ಪ್ರವರ್ಗಗಳ ಅಭ್ಯರ್ಥಿಗಳಿಗೂ ಒಂದು ಬಾರಿಗೆ ಅನ್ವಯವಾಗುವಂತೆ ಮೂರು ವರ್ಷಗಳ ವಯೋಮಿತಿ ಸಡಿಲಿಕೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಐದಾರು ದಿನ ಭಾರೀ ಮಳೆ : ಹವಾಮಾನ ಇಲಾಖೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ (ಸೆಪ್ಟೆಂಬರ್‌ 28ರಿಂದ) ಅಕ್ಟೋಬರ್ 4ರ ವರೆಗೆ ಭಾರೀ ಮಳೆಯಾಗಲಿದೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉತ್ತರ ಕರ್ನಾಟಕದಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಅಕ್ಟೋಬರ್ 2ರ ವರೆಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. … Continued

34 ನಿಗಮ-ಮಂಡಳಿಗಳಿಗೆ ಅಧ್ಯಕ್ಷರ ನೇಮಕ ; ಸಂಪೂರ್ಣ ಪಟ್ಟಿ…

ಬೆಂಗಳೂರು : ರಾಜ್ಯದ 34 ನಿಗಮ/ಮಂಡಳಿ, ಪ್ರಾಧಿಕಾರಗಳಿಗೆ (boards and corporations) ನೂತನ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರನ್ನು ನೇಮಕಗೊಂಡ ದಿನಾಂಕದಿಂದ ಮುಂದಿನ ಎರಡು ವರ್ಷಗಳ ಅವಧಿ ವರೆಗೆ ನೇಮಿಸಲಾಗಿದೆ. ವಿವಿಧ ನಿಗಮ-ಮಂಡಳಿಗಳ ಅಧ್ಯಕ್ಷರ ಪಟ್ಟಿ ಪಿ.ರಘು – ಸಫಾಯಿ ಕರ್ಮಚಾರಿ ಆಯೋಗ ಶಿವಲೀಲಾ ವಿನಯ ಕುಲಕರ್ಣಿ – … Continued

ಕರ್ನಾಟಕದಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌, ಆರೆಂಜ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 27 ರಿಂದ ಐದು ದಿನ ವ್ಯಾಪಕವಾಗಿ ಮಳೆಯಾಗಲಿದೆ . ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಶನಿವಾರದಿಂದ (ಸೆಪ್ಟೆಂಬರ್ 27) ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಹವಾಮಾನ ಇಲಾಖೆ ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ನೀಡಿದೆ. ಸೆಪ್ಟೆಂಬರ್ 27 ರಿಂದ ಕರ್ನಾಟಕದ ಉತ್ತರ ಭಾಗದಲ್ಲಿಯೇ ಜೋರಿದ್ದು, … Continued

ಗೋಕರ್ಣದ ಬೆಟ್ಟದ ಗುಹೆಯಲ್ಲಿ ಪತ್ತೆಯಾಗಿದ್ದ ರಷ್ಯಾದ ಮಹಿಳೆ-ಮಕ್ಕಳನ್ನ ವಾಪಸ್ ರಷ್ಯಾಕ್ಕೆ ಕಳುಹಿಸಲು ಹೈಕೋರ್ಟ್ ಗ್ರೀನ್‌ ಸಿಗ್ನಲ್

ಬೆಂಗಳೂರು: ಜುಲೈನಲ್ಲಿ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಕಾಡಿನ ಗುಹೆಯಲ್ಲಿ ವಾಸಿಸುತ್ತಿದ್ದ ರಷ್ಯಾದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳಿಗೆ ಅವರ ದೇಶ ರಷ್ಯಾಕ್ಕೆ ಮರಳಲು ಅನುಮತಿ ನೀಡಲು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಅನುಮತಿ ನೀಡಿದೆ. ನೀನಾ ಕುಟಿನಾ ಅವರ ಮಾಜಿ ಪತಿ ಮತ್ತು ಮಕ್ಕಳ ತಂದೆ ಇಸ್ರೇಲಿ ಪ್ರಜೆ ಡ್ರೋರ್ ಶ್ಲೋಮೋ ಗೋಲ್ಡ್‌ಸ್ಟೈನ್ … Continued