ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ದಾಳಿ: ವ್ಯಕ್ತಿ ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಭಾನುವಾರ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಆಲ್ದೂರು ಹೋಬಳಿ ವ್ಯಾಪ್ತಿಯ ಕಂಚುಕಲ್ಲು ದುರ್ಗಾ ಗ್ರಾಮದ ಕಿನ್ನಿ (60) ಎಂಬವರು ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅರೆನೂರು-ಕಂಚುಕಲ್ ದುರ್ಗಾ ರಸ್ತೆಯಲ್ಲಿ ಈ ದುರ್ಘಟನೆ ನಡೆದಿದೆ. ಹಳ್ಳಿಯ ಕಾಲು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆಯ ಮುನ್ಸೂಚನೆ : ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನ ಭಾರೀಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗೂ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ, ಕಲಬುರಗಿ, ಕೊಪ್ಪಳ, ಯಾದಗಿರಿ ಜಿಲ್ಲೆಗಳಲ್ಲಿ ಜೋರಾಗಿ ಮಳೆ ಸುರಿಯುವ ಮುನ್ಸೂಚನೆ ನೀಡಲಾಗಿದೆ. ಹಾಗೂ ಯೆಲ್ಲೋ ಅಲರ್ಟ್‌ … Continued

2023-24ನೇ ಸಾಲಿನ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಕಟ: ಇಲ್ಲಿದೆ ಪಟ್ಟಿ

ಬೆಂಗಳೂರು: ಸೆಪ್ಟೆಂಬರ್ 5ರಂದು ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2023-24ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರ ಪಟ್ಟಿ ಪ್ರಕಟಿಸಿದೆ. ಪ್ರಾಥಮಿಕ ಶಾಲೆಯ 20 ಮತ್ತು ಪ್ರೌಢಶಾಲೆಯ 11 ಮಂದಿ ಸೇರಿದಂತೆ 31 ಶಿಕ್ಷಕರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಲ್ಲದೆ, ಇಬ್ಬರು ಪ್ರಾಂಶುಪಾಲರು ಮತ್ತು 8 ಮಂದಿ ಉಪನ್ಯಾಸಕರನ್ನು … Continued

ಸಿಎಂ ಸಿದ್ದರಾಮಯ್ಯ ಸರ್ಕಾರದ ಎಲ್ಲ 33 ಸಚಿವರಿಗೆ ಹೊಸ ಐಷಾರಾಮಿ ಕಾರಿನ ಭಾಗ್ಯ…

ಬೆಂಗಳೂರು : ಸಂಪುಟದ 33 ಸಚಿವರಿಗಾಗಿ ಸಿದ್ದರಾಮಯ್ಯ ಸರ್ಕಾರವು ಹೊಸ ಕಾರು ಖರೀದಿಸಲು ಆದೇಶ ನೀಡಿದ್ದು, ಪ್ರತಿಯೊಬ್ಬ ಸಚಿವರಿಗೂ ಸುಮಾರು 30 ಲಕ್ಷ ರೂಪಾಯಿ ಮೌಲ್ಯದ ಹೊಸ ಇನೋವಾ ಹೈಬ್ರಿಡ್ ಕಾರು ಶೀಘ್ರದಲ್ಲೇ ದೊರಕಲಿದೆ. ಹೊಸ ಕಾರುಗಳನ್ನು ಖರೀದಿಸಲು ಕರ್ನಾಟಕ ಸರ್ಕಾರವು 9.9 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಎಲ್ಲ 33 … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್‌ 2 ರಿಂದ ನಾಲ್ಕೈದು ದಿನ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆಪ್ಟೆಂಬರ್‌ 2 ರಿಂದ 7ರ ವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ … Continued

ಮೈಸೂರು: ಗೃಹಲಕ್ಷ್ಮೀ ಯೋಜನೆ ಚಾಲನೆ, ಮನೆ ಯಜಮಾನಿಗೆ ಖಾತೆಗೆ 2 ಸಾವಿರ ರೂ. ಜಮೆ

ಮೈಸೂರು: ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ ಘೋಷಿಸಿದ್ದ ಗೃಹಲಕ್ಷ್ಮೀ ಯೋಜನೆಗೆ ಬುಧವಾರ ಅದ್ದೂರಿ ಚಾಲನೆ ನೀಡಲಾಯಿತು. ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದರು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಈ ಯೋಜನೆಗೆ ಚಾಲನೆ ನೀಡುತ್ತಿದ್ದಂತೆ ಮನೆ ಯಜಮಾನಿ ಖಾತೆಗೆ 2000 ರೂಪಾಯಿ ಹಣ ಜಮೆಯಾಗಿದೆ. ಬಳಿಕ ಮಾತನಾಡಿದ ರಾಹುಲ್‌ … Continued

ಕುಮಟಾ: ಹೆಗಡೆಯಲ್ಲಿ ಅತಿ ದೊಡ್ಡ ಬಿಳಿ ಹೆಬ್ಬಾವು ಪ್ರತ್ಯಕ್ಷ – ರಕ್ಷಣೆ

ಕುಮಟಾ : ಸಮೀಪದ ಹೆಗಡೆ ಗ್ರಾಮದ ಗಾಂಧಿ ನಗರದ ಮನೆಯಂಗಳದಲ್ಲಿ ಬಿಳಿ ಹೆಬ್ಬಾವು ಕಾಣಿಸಿಕೊಂಡಿದ್ದು, ಅದನ್ನು ರಕ್ಷಣೆ ಮಾಡಲಾಗಿದೆ. ಆರ್ ಟಿ ಒ ಕಚೇರಿ ಹೋಮ್ ಗಾರ್ಡ್ ಗಣೇಶ ಮುಕ್ರಿ ಅವರ ಮನೆಯ ಅಂಗಳದಲ್ಲಿ ಕಾಣಿಸಕೊಂಡ ಹೆಬ್ಬಾವನ್ನು ಪವನ್ ನಾಯ್ಕ ರಕ್ಷಣೆ ಮಾಡಿದ್ದಾರೆ. ಗಣೇಶ ಮುಕ್ರಿ ಅವರು ಉರಗ ತಜ್ಞ ಪವನ್‌ ನಾಯ್ಕ ಅವರಿಗೆ ಮಾಹಿತಿ … Continued

ತಾಳಿ ಕಟ್ಟುವಾಗ ಮದುವೆ ನಿರಾಕರಿಸಿದ ಯುವತಿ

ತುಮಕೂರು : ಜಿಲ್ಲೆಯ ಕೊರಟಗೆರೆ ತಾಲೂಕಿನ ಕೋಳಾಲ ಗ್ರಾಮದಲ್ಲಿ ಭಾನುವಾರ ತಾಳಿ ಕಟ್ಟುವ ಸಮಯದಲ್ಲಿ ವಧುವು ಮದುವೆ ನಿರಾಕರಿಸಿ, ಪ್ರಿಯಕರನ ಜೊತೆ ಮದುವೆಯಾಗುವುದಾಗಿ ಹೇಳಿ ಹಸಮಣೆಯಿಂದ ಎದ್ದು ಹೋದ ಘಟನೆ ನಡೆದಿದೆ. ದೊಡ್ಡಬಳ್ಳಾಪುರದ ತಾಲೂಕಿನ ಮೂಡ್ಲಕಾಳೇನಹಳ್ಳಿಯ ಯುವಕ ಮತ್ತು ನೆಲಮಂಗಲ ತಾಲೂಕಿನ ದೊಡ್ಡಬೆಲೆ ಗ್ರಾಮದ ಯುವತಿ ಮದುವೆ ಭಾನುವಾರ ಕೋಳಾಲ ಗ್ರಾಮದ ಕಲ್ಯಾಣ ಮಂಟಪದಲ್ಲಿ ನಡೆಯಬೇಕಿತ್ತು. … Continued

ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರಗೆ ಸಾಂವಿಧಾನಿಕ ಹುದ್ದೆ ನೀಡಿದ ಸರ್ಕಾರ…!

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ರಾಜ್ಯ ಸರ್ಕಾರದಿಂದ ಸಾಂವಿಧಾನಿಕ ಹುದ್ದೆ ನೀಡಲಾಗಿದೆ. ಆಶ್ರಯ ಸಮಿತಿ ಅಧ್ಯಕ್ಷರಾಗಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಜೊತೆಗೆ, ಕೆಡಿಪಿ ಸದಸ್ಯರಾನ್ನಾಗಿಯೂ ಅವರನ್ನು ನೇಮಿಸಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ಯತೀಂದ್ರ, ‘ಕಳೆದ 15 ದಿನದ ಹಿಂದೆಯೇ … Continued

ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ: ಆಹಾರ ಸಚಿವ ಮುನಿಯಪ್ಪ ಸ್ಪಷ್ಟನೆ

ಹಾಸನ : ರಾಜ್ಯದಲ್ಲಿ ಯಾವುದೇ ಬಿಪಿಎಲ್​ ಕಾರ್ಡ್​ ರದ್ದು ಮಾಡುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟನೆ ನೀಡಿದ್ದಾರೆ. ಹಾಸನದಲ್ಲಿ ಶನಿವಾರ ಮಾತನಾಡಿದ ಅವರು, ಬಿಜೆಪಿ ಸರ್ಕಾರದ ಅವಧಿಯಲ್ಲಿ 3 ಲಕ್ಷ ಜನರು ಅರ್ಜಿ ಹಾಕಿದ್ದರು. ಅರ್ಜಿ ಬಗ್ಗೆ ಪರಿಶೀಲನೆ ಮಾಡಿ ಅನುಮೋದನೆ ಮಾಡಲು ಸೂಚಿಸಲಾಗಿದೆ. 3 ತಿಂಗಳಲ್ಲಿ ಅರ್ಹರಿಗೆ ಬಿಪಿಎಲ್ ಮತ್ತು ಎಪಿಎಲ್ … Continued