5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಏಪ್ರಿಲ್‌ 14 ರಂದು ರಾಜ್ಯದಲ್ಲಿ ಮೋದಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೆಬ್ಬಾಳ ಮತ್ತು ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.

ಅತಿಹೆಚ್ಚು ಆದಾಯ ಪಡೆದ ಮುಜರಾಯಿ ದೇವಾಲಯಗಳ ಪಟ್ಟಿ ಬಿಡುಗಡೆ ; ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ 1ನೇ ಸ್ಥಾನ : ರಾಜ್ಯದ 8 ಶ್ರೀಮಂತ ದೇವಾಲಯಗಳು..

ಬೆಂಗಳೂರು : 2023-24ರಲ್ಲಿ ಅತಿಹೆಚ್ಚು ಆದಾಯ ಕಂಡ ಮುಜರಾಯಿ ಇಲಾಖೆಯ ದೇವಾಲಯಗಳ ಮಾಹಿತಿಯನ್ನು ಇಲಾಖೆ ಆಯುಕ್ತರು ಬಿಡುಗಡೆಗೊಳಿಸಿದ್ದು, ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಮೊದಲನೇ ಸ್ಥಾನವನ್ನು ಉಳಿಸಿಕೊಂಡಿದೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು 2023-24ನೇ ಆರ್ಥಿಕ ವರ್ಷದಲ್ಲಿ ₹146.01 ಕೋಟಿ ಆದಾಯ ಗಳಿಸಿದೆ ಎಂದು ಮುಜರಾಯಿ ಆಯುಕ್ತರು ತಿಳಿಸಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯ ದೇವಾಲಯವು ಸತತ 13ನೇ ವರ್ಷ ಆದಾಯದಲ್ಲಿ … Continued

ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ದೂರು ದಾಖಲು

ಬೆಂಗಳೂರು: ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂಬ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಸಚಿವ ದಿನೇಶ ಗುಂಡೂರಾವ್ ಕುಟುಂಬದವರನ್ನು ಅವಮಾನಿಸಿರುವ ಶಾಸಕ ಯತ್ನಾಳ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಶೇಷಾದ್ರಿಪುರ ಪೊಲೀಸ್ … Continued

ಕರ್ನಾಟಕದ ಮೊದಲ ಹಂತದ ಚುನಾವಣೆ: 60 ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿರುವ 14 ಕ್ಷೇತ್ರಗಳ ಪೈಕಿ 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದ್ದು, ಇದರಲ್ಲಿ 60 ನಾಮಪತ್ರಗಳು ತಿರಸ್ಕೃತಗೊಂಡಿವೆ. 14 ಕ್ಷೇತ್ರಗಳಲ್ಲಿ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರ ಸಲ್ಲಿಕೆಯಾಗಿದ್ದು, 13 ಕ್ಷೇತ್ರಗಳ ನಾಮಪತ್ರ ಪರಿಶೀಲನೆ ಕಾರ್ಯ ಪೂರ್ಣಗೊಂಡಿದೆ. ಅವುಗಳಲ್ಲಿ 276 ಅಭ್ಯರ್ಥಿಗಳ 384 ನಾಮಪತ್ರ ಕ್ರಮಬದ್ಧವಾಗಿವೆ … Continued

ಕರ್ನಾಟಕವೂ ಸೇರಿದಂತೆ ಕೆಲವು ರಾಜ್ಯಗಳಿಗೆ 2 ದಿನ ಬಿಸಿ ಗಾಳಿ, ಕೆಲವು ಕಡೆ “ತೀವ್ರ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ನವದೆಹಲಿ: ಪೂರ್ವ ಭಾರತ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಇನ್ನೆರಡು ದಿನಗಳಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ವೇಳೆ ಭಾರತದ ಈಶಾನ್ಯ ಪ್ರದೇಶದಲ್ಲಿ ಏಪ್ರಿಲ್ 9 ರವರೆಗೆ ತೀವ್ರ ಮಳೆ ಮತ್ತು ಗುಡುಗು ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಹೇಳಿದೆ. ಒಡಿಶಾ, ಪಶ್ಚಿಮ ಬಂಗಾಳ, … Continued

ಏಪ್ರಿಲ್ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ಬಿರು ಬಿಸಲು ಹಾಗೂ ತಾಪಮಾನ ಹೆಚ್ಚಳದಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಸಮಾಧಾನಕರ ಸುದ್ದಿ ನೀಡಿದೆ. ಏಪ್ರಿಲ್​ 8ರ ಬಳಿಕ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 6ರಂದು ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ … Continued

ಲೋಕಸಭೆ ಚುನಾವಣೆ : ಕರ್ನಾಟಕದಲ್ಲಿ 26 ಕೋಟಿ ರೂ. ನಗದು, 33 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಮದ್ಯ ವಶ

ಬೆಂಗಳೂರು : ಮಾರ್ಚ್ 16 ರಂದು ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಕರ್ನಾಟಕದಲ್ಲಿ 33 ಕೋಟಿ ರೂ.ಗೂ ಅಧಿಕ ಮೌಲ್ಯದ 26.68 ಕೋಟಿ ರೂಪಾಯಿ ನಗದು ಮತ್ತು ಮದ್ಯವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಬುಧವಾರ ಬಹಿರಂಗಪಡಿಸಿದೆ. ಇವುಗಳಿಗೆ ಸಂಬಂಧಿಸಿದಂತೆ ಒಟ್ಟು 1,205 ಪ್ರಕರಣಗಳು ದಾಖಲಿಸಲಾಗಿದೆ ಎಂದು ಅದು ಹೇಳಿದೆ. ಕರ್ನಾಟಕದಲ್ಲಿ 28 ಕ್ಷೇತ್ರಗಳನ್ನು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಏಪ್ರಿಲ್ 6ರಿಂದ ಮೂರು ದಿನಗಳ ಕಾಲ ಮಳೆ ಮುನ್ಸೂಚನೆ

ಬೆಂಗಳೂರು : ಭಾರತೀಯ ಹವಾಮಾನ ಇಲಾಖೆ (IMD) ಏಪ್ರಿಲ್ 6ರಿಂದ 8 ರವರೆಗೆ ಹಲವಾರು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಕೊಡಗು, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಲ್ಲಿ ಏಪ್ರಿಲ್ 6 ರಂದು ಅಲ್ಪ ಪ್ರಮಾಣದ ಮಳೆಯಾಗುವ ನಿರೀಕ್ಷೆಯಿದೆ. ಏಪ್ರಿಲ್ 7 ರಂದು ದಕ್ಷಿಣ ಕನ್ನಡ, ಬೀದರ, ಕಲಬುರ್ಗಿ, ಚಿಕ್ಕಮಗಳೂರು, … Continued

ಏಪ್ರಿಲ್‌ ಎರಡನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ..?

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಫಲಿತಾಂಶ ಬೇಗನೆ ಪ್ರಕಟವಾಗುವ ಸಾಧ್ಯತೆ ಇದೆ. ದ್ವಿತೀಯ ಪಿಯುಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಮುಕ್ತಾಯ ಹಂತಕ್ಕೆ ತಲುಪಿದ್ದು, ಇದೇ ಏಪ್ರಿಲ್‌ 10ಕ್ಕೆ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಯಾರಿ ನಡೆಸಿದೆ ಎಂದು ಹೇಳಲಾಗಿದೆ. ರಾಜ್ಯದ 1,124 ಕೇಂದ್ರಗಳಲ್ಲಿ ಮಾರ್ಚ್‌ 1ರಿಂದ … Continued