ಕುಮಟಾ: ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ -ಮನೆಗೇ ತೆರಳಿ ವಿದ್ಯಾರ್ಥಿನಿ ಅದಿತಿ ವೈದ್ಯಗೆ ಸನ್ಮಾನಿಸಿದ ಶಾಸಕರು

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾದ ಕೊಂಕಣ ಶಿಕ್ಷಣ ಸಂಸ್ಥೆಯ ಸರಸ್ವತಿ ವಿದ್ಯಾ ಕೇಂದ್ರದ ವಿದ್ಯಾರ್ಥಿನಿ ಅದಿತಿ ಪ್ರಕಾಶ ವೈದ್ಯ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಕ್ಕೆ 625 ಅಂಕ ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಗ್ರಾಮೀಣ ಪ್ರತಿಭೆಯಾದ ಈ ವಿದ್ಯಾರ್ಥಿನಿಯ ಸಾಧನೆಗೆ ಕುಮಟಾ -ಹೊನ್ನಾವರ ಶಾಸಕ ದಿನಕರ ಶೆಟ್ಟಿ … Continued

ಕರ್ನಾಟಕ ಗ್ರಾಮೀಣ ಬ್ಯಾಂಕ್​ಗಳಲ್ಲಿ 806 ಹುದ್ದೆಗಳ ನೇಮಕಾತಿ : ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭ

ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (ಐಬಿಪಿಎಸ್‌) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌ಗಳಲ್ಲಿ (ಆರ್‌ಆರ್‌ಬಿ) ಖಾಲಿಯಿರುವ 8612 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಇದರಲ್ಲಿ ರಾಜ್ಯದ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ಗಳು ಸೇರಿದ್ದು, ಈ ಎರಡು ಬ್ಯಾಂಕ್‌ಗಳಲ್ಲಿ ಖಾಲಿ ಇರುವ … Continued

ಉಚಿತ ಪ್ರಯಾಣದ ಬಸ್‌ ಗಳಿಗೆ ಸ್ಟಿಕ್ಕರ್ ಅಂಟಿಸುವ ನಿರ್ಧಾರ: ಸರ್ಕಾರದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು : ಉಚಿತ ಪ್ರಯಾಣದ ಬಸ್ ಗಳಿಗೆ ಸ್ಟಿಕ್ಕರ್ ಅಂಟಿಸುವುದಾಗಿ ಹೇಳಿರುವ ರಾಜ್ಯ ಸರ್ಕಾರದ ಮತ್ತೊಂದು ಷರತ್ತಿನ ಬಗ್ಗೆ ರಾಜ್ಯ ಬಿಜೆಪಿ ಘಟಕ ಕಿಡಿಕಾರಿದೆ. ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಉಚಿತ ಪ್ರಯಾಣದ ಬಸ್‌ಗಳಿಗೆ ಸ್ಟಿಕ್ಕರ್ ಅಂಟಿಸುವ ಹೇಳಿಕೆ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದೆ. ಸಿದ‍್ಧರಾಮಯ್ಯನವರೇ, ಬಸ್ ಹತ್ತುವ ಮಹಿಳೆಯರು ಬಸ್ ನಂಬರ್ … Continued

ಹೊಸ ಮನೆಗಳು, ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ : ಇಂಧನ ಸಚಿವ ಕೆ.ಜೆ ಜಾರ್ಜ್

ಬೆಂಗಳೂರು : ಹೊಸ ಮನೆಗಳು ಹಾಗೂ ಮನೆ ಶಿಫ್ಟ್ ಮಾಡಿದವರಿಗೂ ಉಚಿತ ವಿದ್ಯುತ್ ನೀಡಲಾಗುತ್ತದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರ್.ಆರ್ ನಂಬರಿಗೆ ವೋಟರ್ ಲಿಂಕ್ ಆಗಿದ್ದರೆ ಸಾಕು. ಉಚಿತ ವಿದ್ಯುತ್ ನೀಡಲಾಗುತ್ತದೆ. ಮನೆ ಅಗ್ರಿಮೆಂಟ್ ಪತ್ರ ಇದ್ದರೂ ಫ್ರಿ ವಿದ್ಯುತ್ ನೀಡುತ್ತೇವೆ. ಅಡ್ರೆಸ್ ಇರುವ … Continued

ಮುಂದಿನ 24 ಗಂಟೆಗಳಲ್ಲಿ ತೀವ್ರಗೊಳ್ಳಲಿರುವ ಬಿಪೋರ್‌ ಜಾಯ್‌ ಚಂಡಮಾರುತ : ಕರ್ನಾಟಕ ಸೇರಿ 3 ರಾಜ್ಯಗಳಿಗೆ ಮುನ್ನೆಚ್ಚರಿಕೆ

ನವದೆಹಲಿ: ಬಿಪೋರ್‌ಜೋಯ್‌ ಚಂಡಮಾರುತವು ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದ್ದು, ಉತ್ತರ-ಈಶಾನ್ಯಕ್ಕೆ ಚಲಿಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶನಿವಾರ ತಿಳಿಸಿದೆ. ಚಂಡಮಾರುತ ಪರಿಣಾಮ ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಹೇಳಿದೆ. ಚಂಡಮಾರುತವು ಪ್ರಸ್ತುತ ಗೋವಾದಿಂದ ಪಶ್ಚಿಮಕ್ಕೆ 690 ಕಿಮೀ, ಮುಂಬೈನಿಂದ ಪಶ್ಚಿಮ-ನೈಋತ್ಯಕ್ಕೆ 640 ಕಿಮೀ … Continued

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ : ಯಾವ ಸಚಿವರಿಗೆ ಯಾವ ಜಿಲ್ಲೆಯ ಹೊಣೆ ? ಇಲ್ಲಿದೆ ಪಟ್ಟಿ

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಮೂಲಕ ಕಳೆದ ಕೆಲ ದಿನಗಳಿಂದ ಇದ್ದ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ಯಾರಿಗೆ ಯಾವ ಜಿಲ್ಲೆಯ ಉಸ್ತುವಾರಿ ನೀಡಲಾಗಿದೆ ಎನ್ನುವ ಪಟ್ಟಿ ಈ ಕೆಳಗಿನಂತಿದೆ ನೋಡಿ.ಯಾರಿಗೆ ಯಾವ ಜಿಲ್ಲೆಯನ್ನು ನೀಡಲಾಗಿದೆ ಎಂಬುದರ ಪಟ್ಟಿ ಇಲ್ಲಿದೆ. ಡಿ.ಕೆ.ಶಿವಕುಮಾರ- ಬೆಂಗಳೂರು ನಗರ ಉಸ್ತುವಾರಿ ತುಮಕೂರು … Continued

ಜೂನ್‌ 11ರಂದು ಶಕ್ತಿ ಯೋಜನೆಗೆ ಚಾಲನೆ: ಕಂಡಕ್ಟರ್‌ ಆಗಲಿದ್ದಾರೆ ಸಿಎಂ ಸಿದ್ದರಾಮಯ್ಯ…!

ಬೆಂಗಳೂರು: ರಾಜ್ಯ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಮೂರನ್ನು ಪ್ರಾರಂಭಿಸಲು ಸಿದ್ಧತೆ ನಡೆಸಿದೆ. ಅದರಂತೆ ಜೂನ್ 11 ರಂದು ಬೆಂಗಳೂರಿನಲ್ಲಿ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ನಿಶಾನೆ ತೋರಲಿದ್ದಾರೆ. ಇದೇ ಭಾನುವಾರ ಜೂನ್‌ 11ರಂದು ಮೊದಲ ಯೋಜನೆಗೆ ವಿಧಾನಸೌಧ ಮುಂಭಾಗದಲ್ಲಿ ಅಧಿಕೃತವಾಗಿ ಚಾಲನೆ ದೊರೆಯಲಿದೆ. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಲ … Continued

ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ : ಕೋಪದಲ್ಲಿ ಕ್ರೇನಿಗೆ ಗುದ್ದಿ ದಂತ ಮುರಿದುಕೊಂಡ ಆನೆ..!

ರಾಮನಗರ: ಐದು ದಿನಗಳ ಅಂತರದಲ್ಲಿ ಇಬ್ಬರನ್ನು ಸಾಯಿಸಿದ್ದ ಕಾಡಾನೆ ಕೊನೆಗೂ ಸೆರೆ ಸಿಕ್ಕಿದೆ. ತೆಂಗಿನಕಲ್ಲು ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಕೊನೆಗೂ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಸಿಕ್ಕಿಬಿದ್ದ 40 ವರ್ಷದ ಗಂಡಾನೆಯನ್ನು ಲಾರಿಗೆ ಹತ್ತಿಸುವ ವೇಳೆ ಅದರ ದಂತ ಮುರಿದು ಹೋಗಿದೆ. ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅರಳಾಳುಸಂದ್ರ ಗ್ರಾಮದ ಬಳಿಯ … Continued

ಮಕ್ಕಳ ಹಿತದೃಷ್ಟಿಯಿಂದ ಈ ವರ್ಷವೇ ಪಠ್ಯಪುಸ್ತಕ ಪರಿಷ್ಕರಣೆ : ಶಿಕ್ಷಣ ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಈ ವರ್ಷವೇ ರಾಜ್ಯದ ಶಾಲಾ ಪಠ್ಯಪುಸ್ತಕಗಳನ್ನು ಪರಿಷ್ಕರಿಸಲಾಗುವುದು ಎಂದು ಕರ್ನಾಟಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುರುವಾರ ಹೇಳಿದ್ದಾರೆ. ಈ ವರ್ಷ ಪಠ್ಯಪುಸ್ತಕಗಳಲ್ಲಿ ಏನಿರಬೇಕು ಮತ್ತು ಏನಿರಬಾರದು ಎಂಬುದನ್ನು ಪರಿಶೀಲಿಸಿದ ಬಳಿಕ ತಜ್ಞರು ಪಠ್ಯಪುಸ್ತಕಗಳನ್ನು ಪರಿಷ್ಕರಿಸುತ್ತಾರೆ. ಸಚಿವ ಸಂಪುಟದಲ್ಲೂ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಪಠ್ಯಪುಸ್ತಕದಲ್ಲಿ ಏನಿರಬೇಕು, ಯಾವುದನ್ನು … Continued

ಪೋಕ್ಸೊ ಪ್ರಕರಣ: ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ ಶಿವಮೂರ್ತಿ ಮುರುಘಾ ಶರಣರು

ಬೆಂಗಳೂರು : ಪೋಕ್ಸೊ ಕಾಯಿದೆ ಅಡಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗ ಮುರುಘಾ ಮಠದ ಪೀಠಾಧಿಪತಿ ಶಿವಮೂರ್ತಿ ಮುರುಘಾ ಶರಣರು ಜಾಮೀನು ಕೋರಿ ಬುಧವಾರ ಕರ್ನಾಟಕ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಮೈಸೂರಿನ ನಜರಾಬಾದ್‌ ಠಾಣೆಯಲ್ಲಿ ದಾಖಲಾಗಿರುವ ಪ್ರಥಮ ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಗ್ರಾಮೀಣ ಠಾಣೆಯ ಪೊಲೀಸರು ಎರಡು ಪ್ರತ್ಯೇಕ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊದಲ ಆರೋಪ … Continued