ತೀವ್ರ ಚಂಡಮಾರುತವಾಗಿ ರೂಪುಗೊಂಡ ‘ಬಿಪರ್‌ಜೋಯ್’ ಚಂಡಮಾರುತ ; ಕರ್ನಾಟಕ, ಮಹಾರಾಷ್ಟ್ರ ಸೇರಿ ನಾಲ್ಕು ರಾಜ್ಯಗಳಲ್ಲಿ ಪರಿಣಾಮ: ಐಎಂಡಿ

ನವದೆಹಲಿ: ಕಳೆದ 6 ಗಂಟೆಗಳಲ್ಲಿ 2 ಕಿಮೀ ವೇಗದಲ್ಲಿ ಉತ್ತರಾಭಿಮುಖವಾಗಿ ಚಲಿಸಿದ ‘ಬಿಪರ್‌ಜೋಯ್’ ಹೆಸರಿನ ಚಂಡಮಾರುತವು ತೀವ್ರ ಚಂಡಮಾರುತವಾಗಿ ಪರಿವರ್ತನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಬುಧವಾರ ತಿಳಿಸಿದೆ. ಐಎಂಡಿ (IMD)ಯು ಬುಧವಾರ ಬೆಳಿಗ್ಗೆ 9ಕ್ಕೆ ನವೀಕರಿಸಲಾದ ಇತ್ತೀಚಿನ ಬುಲೆಟಿನ್‌ನಲ್ಲಿ ತನ್ನ ತೀವ್ರತೆಯನ್ನು ಉಳಿಸಿಕೊಂಡು ಮುಂದಿನ 24 ಗಂಟೆಗಳಲ್ಲಿ ಸುಮಾರು ಉತ್ತರದ ಕಡೆಗೆ ಚಲಿಸುವ … Continued

11 ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರ 11 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದೆ. ಈ ಕುರಿತು ಇಂದು, ಸೋಮವಾರ ಅಧಿಸೂಚನೆ ಹೊರಡಿಸಿದೆ. 1990ರ ಕರ್ನಾಟಕ ಕೇಡರ್ ಐಎಎಸ್ ಅಧಿಕಾರಿ ಕಪಿಲ ಮೋಹನ ಅವರನ್ನು ಪ್ರವಾಸೋದ್ಯಮ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಉಮಾಶಂಕರ ಎಸ್.ಆರ್. ಅವರನ್ನು ಸಹಕಾರ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ … Continued

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್‌’ ವಿತರಿಸಲು ಕ್ರಮ

ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು ಸೇರಿದಂತೆ) ಮತ್ತು ಲಿಂಗತ್ವ ಅಲ್ಪಸಂಖ್ಯಾತರು … Continued

ಶೀಘ್ರವೇ 15000 ಪೊಲೀಸ್ ಪೇದೆಗಳ ಹುದ್ದೆ ಭರ್ತಿ: ಗೃಹ ಸಚಿವ ಡಾ. ಜಿ.ಪರಮೇಶ್ವರ

ಬೆಂಗಳೂರು : ಶೀಘ್ರವೇ 15000 ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಹೇಳಿದರು. ಸುದ್ದಿಗಾರರ ಜೊತೆ ಮಾತನಾಡಿದ ಅವರು ಶೀಘ್ರವೇ 15,000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ ಎಂದರು. ಪೊಲೀಸ್ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನೀಗಿಸುವ ನಿಟ್ಟಿನಲ್ಲಿ 15, 000 ಪೊಲೀಸ್ ಪೇದೆಗಳ ನೇಮಕಾತಿ ಮಾಡಲಾಗುತ್ತದೆ. ಇದರಿಂದ … Continued

ಅನ್ನಭಾಗ್ಯ, ಯುವ ನಿಧಿ ಗ್ಯಾರಂಟಿ ಯೋಜನಗಳಿಗೆ ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಂಗಳೂರು: ಕಾಂಗ್ರೆಸ್ಸಿನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಗ್ಯಾರಂಟಿಗಳ ಪೈಕಿ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಮತ್ತು ಅನ್ನ ಭಾಗ್ಯ ಯೋಜನೆಯಡಿ ಅಂತ್ಯೋದಯ ಹಾಗೂ ಆದ್ಯತಾ (ಬಿಪಿಎಲ್) ಕುಟುಂಬಗಳ ಪ್ರತಿ ಸದಸ್ಯರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ವಿತರಿಸಲು ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಶುಕ್ರವಾರ ನಡೆದ ಸಂಪುಟ ಸಭೆಯ ನಿರ್ಣಯದಂತೆ ಈ ಆದೇಶಗಳನ್ನು ಹೊರಡಿಸಲಾಗಿದೆ. ಕೌಶಲಾಭಿವೃದ್ಧಿ, … Continued

4055 ಅತಿಥಿ ಉಪನ್ಯಾಸಕರ ನೇಮಕಾತಿಗೆ ಆದೇಶ

ಬೆಂಗಳೂರು: 2023-24ನೇ ಶೈಕ್ಷಣಿಕ ಸಾಲಿಗಾಗಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕರುಗಳ ಹುದ್ದೆಗಳಿಗೆ 4055 ಅತಿಥಿ ಉಪನ್ಯಾಸಕರುಗಳನ್ನು ನೇಮಕ ಮಾಡಲು ಸರ್ಕಾರ ಮುಂದಾಗಿದೆ. 2023-24ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿರುವ ಉಪನ್ಯಾಸಕರ ಹುದ್ದೆಗಳು, ಬಡ್ತಿ, ವಯೋನಿವೃತ್ತಿ, ನಿಧನ ಹಾಗೂ ಇತರೆ ಕಾರಣಗಳಿಂದ ತೆರವಾಗಬಹುದಾದ ಉಪನ್ಯಾಸಕರ ಹುದ್ದೆಗಳು … Continued

ಶಿಕ್ಷಣ ಇಲಾಖೆಯಿಂದ ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿ ಪ್ರಕಟ: ಜೂನ್‌ 6ರಿಂದ ಶಿಕ್ಷಕರ ವರ್ಗಾವಣೆ ಆರಂಭ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲಾ ಮತ್ತು ಪ್ರೌಢ ಶಾಲಾ ಶಿಕ್ಷಕರು ಬಹಳ ದಿನಗಳಿಂದ ನಿರೀಕ್ಷಿಸುತ್ತಿದ್ದ ವರ್ಗಾವಣೆ (Teacher Transfer) ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಇಲಾಖೆಯು ಮತ್ತೆ ಆರಂಭಿಸಿದ್ದು, ಪರಿಷ್ಕೃತ ವರ್ಗಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಯು ಜೂನ್‌ 6 ರಿಂದ ಜುಲೈ 31 ರವರೆಗೆ ನಡೆಯಲಿದೆ. ವರ್ಗಾವಣೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಸರ್ಕಾರ ಮೇ … Continued

ನಾಲ್ವರು ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಇಂದು ಅಧಿಸೂಚನೆ ಹೊರಡಿಸಿದ್ದು, ಹೊರ್ಟಿಕಲ್ಚರ್ ಮತ್ತು ಸೆರಿಕಲ್ಟರ್ ಇಲಾಖೆಯ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಜೇಂದ್ರಕುಮಾರ ಕಠಾರಿಯ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದೆ. ಐಎಎಸ್ ಅಧಿಕಾರಿ ಪಂಕಜಕುಮಾರ ಪಾಂಡೆ ಅವರನ್ನು ಎಂಎಸ್ಎಂಇ ಮತ್ತು … Continued

ನಾಳೆಯಿಂದ ಸರ್ಕಾರಿ ನೌಕರರ ವರ್ಗಾವಣೆ: ಆಯಾ ಇಲಾಖೆ ಸಚಿವರಿಗೆ ಅಧಿಕಾರ

ಬೆಂಗಳೂರು: ನಾಳೆಯಿಂದ (ಜೂನ್‌ 1) 15 ದಿನಗಳೊಳಗೆ ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆ ಮಾಡಲು ಆದೇಶಿಸಲಾಗಿದೆ. ರಾಜ್ಯ ಸರ್ಕಾರಿ ನೌಕರರ ಪ್ರಸಕ್ತ ಸಾಲಿನ ಸಾರ್ವತ್ರಿಕ ವರ್ಗಾವಣೆ ಪ್ರಕ್ರಿಯೆಯನ್ನು ಜೂನ್ 1ರಿಂದ 15ರೊಳಗೆ ಪೂರ್ಣಗೊಳಿಸುವಂತೆ ಸರ್ಕಾರ ಸೂಚಿಸಿದೆ. ಗ್ರೂಪ್ ಎ, ಬಿ, ಸಿ, ಡಿ ಅಧಿಕಾರಿಗಳು, ನೌಕರರಿಗೆ ಅನ್ವಯವಾಗುವಂತೆ ಕಾರ್ಯನಿರತ ವೃಂದ ಬಲದ ಶೇಕಡ 6 ರಷ್ಟು … Continued

ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ರಾಜ್ಯದ ಎಲ್ಲ ಮಹಿಳೆಯರಿಗೂ ಉಚಿತ ಪ್ರಯಾಣ: ಸಾರಿಗೆ ಸಚಿವ ರಾಮಲಿಂಗರೆಡ್ಡಿ ಹೇಳಿಕೆ

ಬೆಂಗಳೂರು: ಸಾರಿಗೆ ಸಂಸ್ಥೆ ಬಸ್ ಗಳಲ್ಲಿ ಎಲ್ಲಾ ಮಹಿಳೆಯರೂ ಉಚಿತ ಪ್ರಯಾಣ ಮಾಡಬಹುದು ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದ್ದಾರೆ. ಮಹಿಳೆಯರಿಗೆ ಉಚಿತ ಬಸ್ ಪಾಸ್ ವಿತರಣೆ ಸಂಬಂಧ ಇಂದು, ಮಂಗಳವಾರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ಸರ್ಕಾರಿ ಬಸ್ಸು​ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದು. ಸಾರಿಗೆ … Continued