ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ರದ್ದುಪಡಿಸಿದ ಹೈಕೋರ್ಟ್‌

ಬೆಂಗಳೂರು: ಚಿತ್ರದುರ್ಗದ ಮುರುಘರಾಜೇಂದ್ರ ಮಠಕ್ಕೆ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ಐಎಎಸ್‌ ಅಧಿಕಾರಿ ಪಿ ಎಸ್‌ ವಸ್ತ್ರದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಹೊರಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ರದ್ದುಪಡಿಸಿದೆ. ಆದಾಗ್ಯೂ, ಪರ್ಯಾಯ ವ್ಯವಸ್ಥೆಯಾಗುವವರೆಗೆ ಆಡಳಿತಾಧಿಕಾರಿ ಮುಂದಿನ ಒಂದು ತಿಂಗಳು ದೈನಂದಿನ ಚಟುವಟಿಕೆ ಮುಂದುವರಿಸಲು ನ್ಯಾಯಾಲಯ ಅನುಮತಿ ನೀಡಿದೆ. ಚಿತ್ರದುರ್ಗದ ಡಿ ಎಸ್‌ ಮಲ್ಲಿಕಾರ್ಜುನ ಒಳಗೊಂಡು … Continued

ಇಂದಿನಿಂದ ನೂತನ ಸರ್ಕಾರದ 3 ದಿನಗಳ ಮೊದಲ ಅಧಿವೇಶನ

ಬೆಂಗಳೂರು: ಇಂದಿನಿಂದ (ಮೇ 22ರಿಂದ 24ರ ವರೆಗೆ) ಮೂರು ದಿನಗಳ ಕಾಲ ನೂತನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಆರಂಭವಾಗಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣವಚನ ಸ್ವೀಕರಿಸಲಿದ್ದಾರೆ ಹಾಗೂ ಕೊನೆಯ ದಿನ ನೂತನ ಸಭ್ಯಾಧ್ಯಕ್ಷರ ಆಯ್ಕೆ ನಡೆಯಲಿದೆ. ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸೋಮವಾರದಿಂದ ಮೂರು ದಿನಗಳ … Continued

ಸಿದ್ದರಾಮಯ್ಯ -ಶಿವಕುಮಾರ ಜೊತೆ 8 ಸಚಿವರ ಪ್ರಮಾಣ ವಚನಕ್ಕೆ ಕ್ಷಣಗಣನೆ : ಇಲ್ಲಿದೆ ಸಚಿವರ ಪಟ್ಟಿ

ಬೆಂಗಳೂರು :ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು 2 ನೇ ಬಾರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಮೊದಲ ಬಾರಿಗೆ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಇಂದು ಮಧ್ಯಾಹ್ನ 12:30 ಕ್ಕೆ ಬೆಂಗಳೂರಿನ ಕಂಠೀರ ಕ್ರೀಡಾಂಗಣದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ದೆಹಲಿಯಲ್ಲಿ ತಡರಾತ್ರಿ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, … Continued

ಮುಖ್ಯಮಂತ್ರಿ ಆಯ್ಕೆ ಇನ್ನೂ ಅಂತಿಮವಾಗಿಲ್ಲ, ಚರ್ಚೆ ನಡೆಯುತ್ತಿದೆ: ಸುರ್ಜೇವಾಲಾ ಸ್ಪಷ್ಟನೆ

ನವದೆಹಲಿ : ಮುಖ್ಯಮಂತ್ರಿ ಹುದ್ದೆಗೆ ಯಾರು ಎಂಬುದು ಇನ್ನೂ ಅಂತಿಮವಾಗಿಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಕೊಡಬೇಡಿ. ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರು ಎಂಬದುರ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರೇ ತೀರ್ಮಾನ ಮಾಡುತ್ತಾರೆ. ಅವರ ನೇತೃತ್ವದಲ್ಲಿಯೇ ಸಮಾಲೋಚನೆ ನಡೆಯುತ್ತಿದೆ. ಮುಖ್ಯಮಂತ್ರಿ ಆಯ್ಕೆ … Continued

ಸಿಎಂ ಹುದ್ದೆಗೆ ಸಿದ್ದರಾಮಯ್ಯ- ಶಿವಕುಮಾರ ಪೈಪೋಟಿ ನಡುವೆ ತಮ್ಮ ಸಮುದಾಯಕ್ಕೆ ಸಿಎಂ ಸ್ಥಾನ ನೀಡಿ ಎಂದು ಬೇಡಿಕೆ ಇಟ್ಟ ವೀರಶೈವ ಮಹಾಸಭಾ

ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ‘ಡಿಕೆ ಶಿವಕುಮಾರ ಅಥವಾ ಸಿದ್ದರಾಮಯ್ಯ’ ಎಂಬ ಗೊಂದಲದಲ್ಲಿ ಕಸರತ್ತು ನಡೆಸುತ್ತಿರುವ ಕಾಂಗ್ರೆಸ್ಸಿನಲ್ಲಿ ಈಗ ಕರ್ನಾಟಕದ ಮುಖ್ಯಮಂತ್ರಿ ಸ್ಥಾನಕ್ಕೆ ಮತ್ತೊಂದು ಲಾಬಿ ಶುರುವಾಗಿದೆ. ಪ್ರಭಾವಿ ಲಿಂಗಾಯತ ಸಮುದಾಯವನ್ನು ಪ್ರತಿನಿಧಿಸುವ ಅಖಿಲ ಭಾರತ ವೀರಶೈವ ಮಹಾಸಭಾ ಉನ್ನತ ಹುದ್ದೆಗೆ ಬಿಡ್ ಮಾಡಿದೆ, ಹೊಸದಾಗಿ ಆಯ್ಕೆಯಾದ ಕಾಂಗ್ರೆಸ್ ಶಾಸಕರಲ್ಲಿ 34 ಲಿಂಗಾಯತ ಶಾಸಕರಿದ್ದಾರೆ ಎಂದು ಉಲ್ಲೇಖಿಸಲಾಗಿದೆ. … Continued

7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಲಾಗಿದ್ದ 7ನೇ ವೇತನ ಆಯೋಗದ ವರದಿ ಸಲ್ಲಿಕೆ ಅವಧಿಯನ್ನು 6 ತಿಂಗಳ ಕಾಲ ವಿಸ್ತರಿಸಿ ಸರ್ಕಾರ ಆದೇಶ ಹೊರಡಿಸಲಾಗಿದೆ. ರಾಜ್ಯಸರ್ಕಾರ 2022ರ ನವೆಂಬರ್‌ 19 ರಂದು ನಿವೃತ್ತ ಮುಖ್ಯಕಾರ್ಯದರ್ಶಿ ಸುಧಾಕರ ರಾವ್ ಅಧ್ಯಕ್ಷತೆಯಲ್ಲಿ 7ನೇ ವೇತನ ಆಯೋಗವನ್ನು ರಚಿಸಿ, 6 ತಿಂಗಳೊಳಗೆ ವರದಿ ನೀಡುವಂತೆ … Continued

ಮತ ಹಾಕಲು ಹೋಗಿದ್ದ ಗರ್ಭಿಣಿಗೆ ಮತದಾನ ಕೇಂದ್ರದಲ್ಲೇ ಹೆರಿಗೆ…!

ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನದ ವೇಳೆ ತುಂಬು ಗರ್ಭಿಣಿಯೊಬ್ಬರುಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ.. ಬಳ್ಳಾರಿಯ ಕೂರ್ಲಂಗುದಿ ಗ್ರಾಮದಲ್ಲಿ ಗರ್ಭಿಣಿ ಮಣಿಲಾ (23) ಎಂಬ ಗರ್ಭಿಣಿ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿದ್ದರಿಂದ ಗರ್ಭಿಣಿ ಸರತಿ ಸಾಲಿನಲ್ಲಿ ನಿಂತಿದ್ದರು ಮತ … Continued

ಎಸ್ಎಸ್ಎಲ್‌‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ15ರ ವರೆಗೆ ಅವಕಾಶ

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಸೋಮವಾರ (ಮೇ ೮) ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 08 ರಿಂದ) ನೋಂದಣಿ ಆರಂಭವಾಗಿದ್ದು, ಮೇ 15ರ ವರೆಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಮರುಮೌಲ್ಯ ಮಾಪನ ಮಾಡಲು ಮೇ 15 … Continued

ಇಂದು ಬೆಳಿಗ್ಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಬಹುದು…

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೇ8ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ … Continued

ಮೋಚಾ ಚಂಡಮಾರುತದ ಪ್ರಭಾವ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಧಾನವಾಗಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದೆ. ಇದು ಮೇ 8ರಂದು ಪ್ರಾರಂಭವಾಗಲಿದ್ದು, ಮೇ 9ರ ನಂತರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಭಾನುವಾರದ ನಂತರ ಗಾಳಿಯು ಗಂಟೆಗೆ … Continued