ಮತ ಹಾಕಲು ಹೋಗಿದ್ದ ಗರ್ಭಿಣಿಗೆ ಮತದಾನ ಕೇಂದ್ರದಲ್ಲೇ ಹೆರಿಗೆ…!

ಬಳ್ಳಾರಿ : ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ, ಬುಧವಾರ ನಡೆಯುತ್ತಿರುವ ಮತದಾನದ ವೇಳೆ ತುಂಬು ಗರ್ಭಿಣಿಯೊಬ್ಬರುಮತ ಕೇಂದ್ರದಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ವರದಿಯಾಗಿದೆ.. ಬಳ್ಳಾರಿಯ ಕೂರ್ಲಂಗುದಿ ಗ್ರಾಮದಲ್ಲಿ ಗರ್ಭಿಣಿ ಮಣಿಲಾ (23) ಎಂಬ ಗರ್ಭಿಣಿ ಮತ ಚಲಾಯಿಸಲು ಬಂದಿದ್ದರು. ಈ ವೇಳೆ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಅಗಮಿಸಿದ್ದರಿಂದ ಗರ್ಭಿಣಿ ಸರತಿ ಸಾಲಿನಲ್ಲಿ ನಿಂತಿದ್ದರು ಮತ … Continued

ಎಸ್ಎಸ್ಎಲ್‌‌ಸಿಯಲ್ಲಿ ಫೇಲ್ ಆದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ನೋಂದಾಯಿಸಲು ಮೇ15ರ ವರೆಗೆ ಅವಕಾಶ

ಬೆಂಗಳೂರು: ರಾಜ್ಯದ ಈ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಇಂದು ಸೋಮವಾರ (ಮೇ ೮) ಪ್ರಕಟವಾಗಿದ್ದು, ಶೇ. 83.8 ಮಂದಿ ಉತ್ತೀರ್ಣರಾಗಿದ್ದಾರೆ. ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನೋಂದಣಿ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಇಂದಿನಿಂದಲೇ (ಮೇ 08 ರಿಂದ) ನೋಂದಣಿ ಆರಂಭವಾಗಿದ್ದು, ಮೇ 15ರ ವರೆಗೆ ಅವಕಾಶ ನೀಡಲಾಗಿದೆ. ಅಲ್ಲದೆ, ಮರುಮೌಲ್ಯ ಮಾಪನ ಮಾಡಲು ಮೇ 15 … Continued

ಇಂದು ಬೆಳಿಗ್ಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ : ನಿಮ್ಮ ಫಲಿತಾಂಶ ಹೀಗೆ ಚೆಕ್ ಮಾಡಬಹುದು…

ಬೆಂಗಳೂರು: ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಮೇ8ರಂದು ಬೆಳಿಗ್ಗೆ 10 ಗಂಟೆಗೆ ಪ್ರಕಟವಾಗಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ದಿನಾಂಕ 08-05-2023ರಂದು ಬೆಳಿಗ್ಗೆ 10 ಗಂಟೆಗೆ ಮಂಡಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ, ಪ್ರಕಟಿಸಲಾಗುತ್ತದೆ … Continued

ಮೋಚಾ ಚಂಡಮಾರುತದ ಪ್ರಭಾವ : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆ ಸಾಧ್ಯತೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯ ಆಗ್ನೇಯ ಭಾಗ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿಧಾನವಾಗಿ ಮೋಚಾ ಚಂಡಮಾರುತ ರೂಪುಗೊಳ್ಳುತ್ತಿದೆ. ಇದು ಮೇ 8ರಂದು ಪ್ರಾರಂಭವಾಗಲಿದ್ದು, ಮೇ 9ರ ನಂತರ ತೀವ್ರ ಸ್ವರೂಪ ಪಡೆದುಕೊಳ್ಳಲಿದೆ. ಭಾನುವಾರದ ನಂತರ ಗಾಳಿಯು ಗಂಟೆಗೆ … Continued

ಎಲ್‌ಕೆಜಿ ಪ್ರವೇಶಕ್ಕೆ ಮಕ್ಕಳಿಗೆ 4 ವರ್ಷ ವಯಸ್ಸು ಆಗುವುದು ಕಡ್ಡಾಯ

ಬೆಂಗಳೂರು: ಪ್ರಸಕ್ತ ಶೈಕ್ಷಣಿಕ ಸಾಲಿನಿಂದ ನಾಲ್ಕು ವರ್ಷ ತುಂಬಿದ ಮಕ್ಕಳು ಮಾತ್ರ ಶಿಶಿವಿಹಾರ (ಎಲ್‌ಕೆಜಿ) ಸೇರಲು ಅರ್ಹರು ಎಂದು ರಾಜ್ಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. 1ನೇ ತರಗತಿಗೆ ಪ್ರವೇಶ ಪಡೆಯುವ ವಿದ್ಯಾರ್ಥಿಗೆ ಕಡ್ಡಾಯವಾಗಿ ಆರು ವರ್ಷ ತುಂಬಿರಬೇಕು ಎಂಬ ನಿಯಮ 2025-26ನೇ ಸಾಲಿನಿಂದ ಜಾರಿಯಾಗಲಿದೆ. ಹಾಗಾಗಿ, ಆ ವೇಳೆಗೆ ಮಕ್ಕಳ ದಾಖಲಾತಿಗೆ ವಯಸ್ಸಿನ ಸಮಸ್ಯೆ … Continued

ರಾಜ್ಯದಲ್ಲಿ ಇನ್ನೂ 3 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಮೂರು ದಿನಗಳ ಕಾಲ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರ್ಗಿ, ರಾಯಚೂರು, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ಹೇಳಿದೆ. ಬೆಂಗಳೂರು ನಗರ, … Continued

ಸಿಇಟಿ-2023 : ವಿಶೇಷ ಕ್ಯಾಟಗರಿ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಕೆ ವೇಳಾಪಟ್ಟಿಯಲ್ಲಿ ಬದಲಾವಣೆ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (KEA) ಸಿಇಟಿ-2023ರ ವಿಶೇಷ ಕ್ಯಾಟಗರಿಗಳ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ಸಲ್ಲಿಸುವ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯನ್ನೂ ಪ್ರಕಟಿಸಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಿಧಾನಸಭೆ ಚುನಾವಣೆಯನ್ನು ಮೇ 10ರಂದು ನಡೆಸುತ್ತಿರುವುದರಿಂದ ಹಾಗೂ ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟಿಸುವ ಹಿನ್ನೆಲೆಯಲ್ಲಿ … Continued

ಕರ್ನಾಟಕ ಸೇರಿ ಅನೇಕ ರಾಜ್ಯಗಳಲ್ಲಿ 5 ದಿನ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ತಮಿಳುನಾಡಿನ ಕರಾವಳಿಯಲ್ಲಿ ಹವಾಮಾನ ಬದಲಾವಣೆಯಿಂದಾಗಿ ಮುಂದಿನ ಐದು ದಿನ ಕರ್ನಾಟಕ ಸೇರಿ ಹಲವಾರು ರಾಜ್ಯಗಳಲ್ಲಿ ಮಳೆಯಾಗಲಿದೆ ಎಂದು ದೇಶದ ಕೇಂದ್ರ ಹವಾಮಾನ ಮುನ್ಸೂಚನೆ ಸಂಸ್ಥೆ ಭಾರತ ಹವಾಮಾನ ಇಲಾಖೆ (IMD) ಬುಧವಾರ ಮುನ್ಸೂಚನೆ ನೀಡಿದೆ. ದೇಶದ ಮಧ್ಯ, ಪೂರ್ವ ಮತ್ತು ಪಶ್ಚಿಮ ಭಾಗಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ನಿರೀಕ್ಷೆಯಿದ್ದರೆ, ದಕ್ಷಿಣ ಮತ್ತು ಈಶಾನ್ಯ ಭಾಗಗಳಲ್ಲಿ … Continued

ಮೈಸೂರಿನ ಮೈಲಾರಿ ಹೋಟೆಲ್​​ನಲ್ಲಿ ದೋಸೆ ಮಾಡಿದ ಪ್ರಿಯಾಂಕಾ ಗಾಂಧಿ; ನಂತ್ರ ಕಾಂಗ್ರೆಸ್​ ನಾಯಕರೊಂದಿಗೆ ಉಪಹಾರ ಸೇವನೆ | ವೀಕ್ಷಿಸಿ

ಮೈಸೂರು: ಮೈಸೂರು ನಗರದ 80 ವರ್ಷ ಹಳೆಯ ಮೈಲಾರಿ ದೋಸೆ ಹೋಟೆಲ್‌ಗೆ ಭೇಟಿ ನೀಡಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು (Priyanka Gandhi) ತಾವೇ ಕಾವಲಿ ಮೇಲೆ ದೋಸೆ ಹೊಯ್ದಿದ್ದಾರೆ(makes dosa). ದೋಸೆ ಮಾಡಿದ ನಂತರ ತಾವೂ ಸವಿದು, ಕಾಂಗ್ರೆಸ್​ ನಾಯಕರಿಗೂ ನೀಡಿದ್ದಾರೆ. ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಿಯಾಂಕಾ ಗಾಂಧಿ … Continued

ಶೃಂಗೇರಿ ಮಠಕ್ಕೆ ಭೇಟಿ ನೀಡಿದ ಪ್ರಿಯಾಂಕಾ ಗಾಂಧಿ : ಅಪ್ಪನೊಂದಿಗೆ ಬಂದಿದ್ದೆ ಎಂದು ನೆನಪಿಸಿಕೊಂಡ ಇಂದಿರಾ ಗಾಂಧಿ ಮೊಮ್ಮಗಳು

ಚಿಕ್ಕಮಗಳೂರು: ಇಂದಿರಾಗಾಂಧಿ ಮೊಮ್ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ ಸಹ ಶೃಂಗೇರಿ ಮಠಕ್ಕೆ ಬುಧವಾರ ಭೇಟಿ ನೀಡಿದ್ದಾರೆ. ಮಠಕ್ಕೆ ಭೇಟಿ ನೀಡಿ ಶಾರದಾಂಬೆ ಹಾಗೂ ಗುರುಗಳ ದರ್ಶನ ಪಡೆದಿರುವ ಅವರು ನರಸಿಂಹವನದಲ್ಲಿರುವ ಕಿರಿಯ ಶ್ರೀಗಳಾದ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ವೇಳೆ ಶ್ರೀಗಳು ಪ್ರಿಯಾಂಕಾ ಅವರಿಗೆ ಶಾರದಾಂಬೆಯ ಮೂರ್ತಿ ನೀಡಿ ಶುಭ ಹಾರೈಸಿದ್ದಾರೆ. ಶ್ರೀಗಳಿಂದ ಆಶೀರ್ವಾದ … Continued