ಚಿತ್ರದುರ್ಗದಲ್ಲಿ ನಡೆದ ಇಸ್ರೋದ ಮರುಬಳಕೆ ಉಡಾವಣಾ ವಾಹನದ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿ | ವೀಕ್ಷಿಸಿ

ಬೆಂಗಳೂರು: ಭಾನುವಾರ, ಏಪ್ರಿಲ್ 2 ರಂದು, ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಯ ಮರುಬಳಕೆ ಮಾಡಬಹುದಾದ ಉಡಾವಣಾ ವಾಹನದ ಮೂಲ ಮಾದರಿಯ ಲ್ಯಾಂಡಿಂಗ್ ಪರೀಕ್ಷೆ ಯಶಸ್ವಿಯಾಗಿ ನಡೆಯಿತು. ರಕ್ಷಣಾ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಡಿಆರ್‌ಡಿಒ) ಮತ್ತು ಭಾರತೀಯ ವಾಯುಪಡೆಯ (ಐಎಎಫ್) ಸಹಕಾರದೊಂದಿಗೆ ಕರ್ನಾಟಕದ ಚಿತ್ರದುರ್ಗದ ಏರೋನಾಟಿಕಲ್ ಟೆಸ್ಟ್ ರೇಂಜ್ (ಎಟಿಆರ್) ನಲ್ಲಿ ಭಾನುವಾರ ಮುಂಜಾನೆ … Continued

ಲಂಚ ಪ್ರಕರಣ: ಶಾಸಕ ಮಾಡಾಳು ವಿರೂಪಾಕ್ಷಪ್ಪಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿರುವ ಬಿಜೆಪಿ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಲೋಕಾಯುಕ್ತ ಪೊಲೀಸ್‌ ಕಸ್ಟಡಿ ಶನಿವಾರ ಅಂತ್ಯವಾದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಅವರಿಗೆ ಏಪ್ರಿಲ್‌ 11ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಅಲ್ಲದೆ, ವಿರೂಪಾಕ್ಷಪ್ಪ ಅವರ ಪರವಾಗಿ ಜಾಮೀನು ಕೋರಿ ಅರ್ಜಿ ಸಲ್ಲಿಸಲಾಗಿದೆ. ಐದು ದಿನಗಳ ಲೋಕಾಯುಕ್ತ ಪೊಲೀಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ … Continued

ಚುನಾವಣಾ ಅಕ್ರಮ: ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಚುನಾವಣಾ ಅಕ್ರಮದ ಆರೋಪದ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್‌ ಶಾಸಕ ಗೌರಿಶಂಕರ ಆಯ್ಕೆಯನ್ನು ಹೈಕೋರ್ಟ್‌ ಅನೂರ್ಜಿತಗೊಳಿಸಿದೆ. ಹೈಕೋರ್ಟ್‌ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಅವಕಾಶ ನೀಡಬೇಕು ಎಂಬ ಗೌರಿಶಂಕರ ಅವರ ಮಧ್ಯಂತರ ಮನವಿಯನ್ನು ಇದೇ ವೇಳೆ ಪುರಸ್ಕರಿಸಿದ ಹೈಕೋರ್ಟ್‌ ಆದೇಶವನ್ನು ಒಂದು ತಿಂಗಳ ವರೆಗೆ ಅಮಾನತಿನಲ್ಲಿರಿಸಿದೆ ಎಂದು ಬಾರ್‌ & ಬೆಂಚ್‌ ವರದಿ … Continued

ಬೆಂಗಳೂರಲ್ಲಿ ಒಂದೇ ದಿನ 100ಕ್ಕಿಂತ ಹೆಚ್ಚು ಕೋವಿಡ್‌ ಪ್ರಕರಣಗಳು ದಾಖಲು: ರಾಜ್ಯದಲ್ಲಿ ಏರಿಕೆಯತ್ತ ಕೊರೊನಾ

ಬೆಂಗಳೂರು: ಭಾನುವಾರ ರಾಜ್ಯದಲ್ಲಿ ಹೊಸದಾಗಿ 209 ಪ್ರಕರಣಗಳು ದಾಖಲಾಗಿದ್ದು, ಬೆಂಗಳೂರಿನಲ್ಲಿ 100ಕ್ಕೂ ಹೆಚ್ಚು ಕೋವಿಡ್‌-19 ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಸಕ್ರಿಯ ಕೋವಿಡ್‌ ಪ್ರಕರಣಗಳು 709  ಪ್ರಕರಣಗಳಿವೆ. ಕರ್ನಾಟಕ ಆರೋಗ್ಯ ಇಲಾಖೆ ಪ್ರಕಟಿಸಿದ ಹೆಲ್ತ್‌ ಬುಲೆಟಿನ್‌ ಬಿಡುಗಡೆ ಮಾಡಿದ್ದು ಭಾನುವಾರ ಕೊರೊನಾ ಸಂಬಂಧಿತ ಸಾವು ವರದಿಯಾಗಿಲ್ಲ ಎಂದು ತಿಳಿಸಿದೆ.ಭಾನುವಾರ ಬೆಂಗಳೂರು ನಗರದಲ್ಲಿ 120 ಜನರಿಗೆ ಕೊರೊನಾ ಸೋಂಕು … Continued

ರಾಜ್ಯದ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ

ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಾರ್ಚ್‌ 26ರಿಂದ ನಾಲ್ಕು ದಿನಗಳ ಕಾಲ ಮಳೆ ಮುನ್ಸೂಚನೆ ನೀಡಲಾಗಿದೆ. ಮಾರ್ಚ್‌ 26ರಿಂದ 29ರವರೆಗೆ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಹಾಸನ, ಮೈಸೂರು ಹಾಗೂ ರಾಮನಗರದಲ್ಲಿ ಗುಡುಗು ಮಿಂಚು ಸಹಿತ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ. ಅಲ್ಲದೆ, ಕೊಡಗು, ಬಳ್ಳಾರಿ, ಕಲಬುರಗಿ, ರಾಯಚೂರು … Continued

ವೀಡಿಯೊ | ದಾವಣಗೆರೆಯಲ್ಲಿ ರೋಡ್‌ ಶೋ ವೇಳೆ ಪ್ರಧಾನಿ ಮೋದಿ ಭದ್ರತೆಯಲ್ಲಿ ಲೋಪ : ವಾಹನದತ್ತ ನುಗ್ಗಿದ ವ್ಯಕ್ತಿ

ದಾವಣಗೆರೆ : ಶನಿವಾರ ದಾವಣಗೆರೆಯಲ್ಲಿ ಚುನಾವಣಾ ರ್ಯಾಲಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಭದ್ರತೆಯನ್ನು ವ್ಯಕ್ತಿಯೊಬ್ಬ ಉಲ್ಲಂಘಿಸಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವ್ಯಕ್ತಿಯೊಬ್ಬ ಬ್ಯಾರಿಕೇಡ್ ಮೇಲೆ ಹಾರಿ ಪ್ರಧಾನಿಯ ಬಳಿಗೆ ಹೋಗಲು ಪ್ರಯತ್ನಿಸಿದ್ದಾನೆ. ಆತ ಭದ್ರತಾ ಕ್ರಮಗಳನ್ನು ಉಲ್ಲಂಘಿಸಿ ಪ್ರಧಾನಿ ವಾಹನದತ್ತ ಧಾವಿಸುತ್ತಿರುವಾಗ ಪೊಲೀಸರು ಮತ್ತು ಭದ್ರತಾ ಸಿಬ್ಬಂದಿ ಧಾವಿಸಿ ತಕ್ಷಣವೇ ಆತನನ್ನು ತಡೆದಿದ್ದಾರೆ. … Continued

ದೇಶದಲ್ಲಿದ್ದ ‘ಗ್ರಹಿಕೆ ರಾಜಕಾರಣ’ವನ್ನು ʼಕಾರ್ಯನಿರ್ವಹಣೆ ರಾಜಕಾರಣʼವನ್ನಾಗಿ ಬದಲಾಯಿಸಿದ್ದು ಬಿಜೆಪಿ ಸರ್ಕಾರ: ಪ್ರಧಾನಿ ಮೋದಿ ಪ್ರತಿಪಾದನೆ

ದಾವಣಗೆರೆ : ಬಿಜೆಪಿಯು ದೇಶದಲ್ಲಿನ ‘ಗ್ರಹಿಕೆಯ ರಾಜಕೀಯ’ವನ್ನು ‘ಕಾರ್ಯನಿರ್ವಹಣೆʼಯ ರಾಜಕೀಯವಾಗಿ ಪರಿವರ್ತಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಲೋಕಸಭೆಯ ಸದಸ್ಯತ್ವದಿಂದ ಶುಕ್ರವಾರ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಕ್ಕೆ ಪ್ರತಿಪಕ್ಷಗಳ ನಾಯಕರು ರ್ಯಾಲಿ ಮಾಡಲು ಪ್ರಯತ್ನಿಸುತ್ತಿರುವುದರ ನಡುವೆ, ಪ್ರಧಾನಿ ನರೇಂದ್ರ ಮೋದಿ ಶನಿವಾರ ದಾವಣಗೆರೆಯಲ್ಲಿ ನಡೆದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಮಹಾ … Continued

ರಾಜ್ಯದಲ್ಲಿ ಏರುತ್ತಿರುವ ಕೊರೊನಾ ಸೋಂಕು

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು, ಶುಕ್ರವಾರ ಒಂದೇ ದಿನ ಹೊಸದಾಗಿ 131 ಮಂದಿಗೆ ಕೊರೊನಾ ಸೋಂಕು ದಾಖಲಾಗಿದೆ. ಹಾಗೂ ಸೋಂಕಿನಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಓರ್ವ ವೃದ್ಧೆ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರಿನಲ್ಲಿ 61, ಶಿವಮೊಗ್ಗದಲ್ಲಿ 27, ಚಿಕ್ಕಮಗಳೂರು 13, ಮೈಸೂರು 5, ಬಳ್ಳಾರಿ, ಹಾಸನ ತಲಾ 4 ಮಂದಿಗೆ ಕೊರೊನಾ ಸೋಂಕು … Continued

ಮೊದಲ ಪಟ್ಟಿಯಲ್ಲಿ ತಂದೆ-ಮಕ್ಕಳಿಗೆ ಟಿಕೆಟ್ ನೀಡಿದ ಕಾಂಗ್ರೆಸ್‌ :ಕುಟುಂಬ ರಾಜಕಾರಣಕ್ಕೆ ಮಣೆ

ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದೆ. ಸಿದ್ದರಾಮಯ್ಯ ಅವರಿಗೆ ವರುನಾದಿಂದ ಟಿಕೆಟ್‌ ನೀಡಲಾಗಿದ್ದರೆ ಡಿ.ಕೆ.ಶಿವಕುಮಾ ಅವರಿಗೆ ಕನಕಪುರದಿಂದ ಟಿಕೆಟ್‌ ನೀಡಲಾಗಿದೆ. ಇನ್ನು ಕಾಂಗ್ರೆಸ್‌ನಲ್ಲಿ ೯೦ ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೂ ಟಿಕೆಟ್‌ ನೀಡಲಾಗಿದೆ. ಅನೇಕ ಕಡೆ ಪ್ರಮುಖ ನಾಯಕ ಜೊತೆಗೆ ಅವರ ಮಕ್ಕಳಿಗೂ ಟಿಕೆಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮಾಜಿ ಸಚಿವ … Continued

ಕಾಂಗ್ರೆಸ್ 4ನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆ ; ಪದವೀಧರರಿಗೆ ಪ್ರತಿ ತಿಂಗಳು 3,000 ರೂ. ನಿರುದ್ಯೋಗ ಭತ್ಯೆ ಘೋಷಿಸಿದ ರಾಹುಲ್‌ ಗಾಂಧಿ

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕರ್ನಾಟಕದ ನಿರುದ್ಯೋಗಿ ಪದವೀಧರರಿಗೆ ಎರಡು ವರ್ಷಗಳವರೆಗೆ ಮಾಸಿಕ 3,000 ರೂ. ಮತ್ತು ಡಿಪ್ಲೋಮಾ ಕೋರ್ಸ್‌ ಮುಗಿಸಿದವರಿಗೆ ತಿಂಗಳಿಗೆ 1,500 ರೂ. ನೀಡಲಾಗುವುದು ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ನಡೆದ ಯುವಕ್ರಾಂತಿ ಸಮಾವೇಶದಲ್ಲಿ ಅವರು ನಿರುದ್ಯೋಗಿ ಯುವಕರಿಗಾಗಿ ʼಯುವ ನಿಧಿʼ ಎಂಬ ಪಕ್ಷದ … Continued