ರಾಜ್ಯದಲ್ಲಿ ನಿಧಾನಗತಿಯಲ್ಲಿ ಏರುತ್ತಿರುವ ಕೊರೊನಾ, ಭಾನುವಾರ 78 ಮಂದಿಗೆ ಸೋಂಕು, ಓರ್ವ ಸಾವು

ಬೆಂಗಳೂರು: ದೇಶದಲ್ಲಿ ಕೋವಿಡ್-19 ಸಂಖ್ಯೆ ಏರಿಕೆಯಾಗುತ್ತಿದ್ದು, ಕರ್ನಾಟಕದಲ್ಲಿಯೂ ಕೊರೊನಾ ಸಂಖ್ಯೆ ಏರಿಕೆಯಾಗುತ್ತಿವೆ. ಇಂದು, ಭಾನುವಾರ ರಾಜ್ಯಾದ್ಯಂತ 78 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಅಲ್ಲದೆ, ಒಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯ ಆರೋಗ್ಯ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಬಳ್ಳಾರಿ, ಕೋಲಾರ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ ಮೂವರಿಗೆ, ಬೆಂಗಳೂರು ಗ್ರಾಮಾಂತರ, … Continued

5 ಮತ್ತು 8ನೇ ತರಗತಿಗೆ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ಒಪ್ಪಿಗೆ

ಬೆಂಗಳೂರು : ರಾಜ್ಯದಲ್ಲಿ 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ನಡೆಸಲು ಹೈಕೋರ್ಟ್ ವಿಭಾಗೀಯ ಪೀಠ ಅನುಮತಿ ನೀಡಿದೆ. 5 ಮತ್ತು 8ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು ಮಾಡಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, 5 ಮತ್ತು 8ನೇ … Continued

5, 8ನೇ ತರಗತಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪಠ್ಯಕ್ರಮದ 5 ಮತ್ತು 8ನೇ ತರಗತಿಗಳ ವಿದ್ಯಾರ್ಥಿಗಳಿಗೆ ಮಾರ್ಚ್‌ 13ರಿಂದ 18ರವರೆಗೆ ನಡೆಸಲು ಉದ್ದೇಶಿಸಿದ್ದ ಏಕರೂಪದ ಪರೀಕ್ಷೆಯನ್ನು (ಮೌಲ್ಯಾಂಕನ) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಮುಂದೂಡಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದ್ದು, ಹೈಕೋರ್ಟ್ ಆದೇಶದಂತೆ 5 ಮತ್ತು 8ನೇ ತರಗತಿ … Continued

ಅಂತರ್ಜಾತಿ ವಿವಾಹವಾದ ದಂಪತಿಗೆ ಸಾಮಾಜಿಕ ಬಹಿಷ್ಕಾರ: 12 ಮಂದಿ ಬಂಧನ

ಚಾಮರಾಜನಗರ: ಚಾಮರಾಜನಗರ ಜಿಲ್ಲೆಯಲ್ಲಿ ಅಂತರ್ಜಾತಿ ದಂಪತಿಗೆ ಬಹಿಷ್ಕಾರ ಹಾಕಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಶುಕ್ರವಾರ 12 ಜನರನ್ನು ಬಂಧಿಸಿದ್ದಾರೆ. ಅಂತರ್ಜಾತಿ ದಂಪತಿಯನ್ನು ಗೋವಿಂದರಾಜು (ಉಪ್ಪಾರ ಸೆಟ್ಟಿ ಸಮುದಾಯ) ಮತ್ತು ಶ್ವೇತಾ (ದಲಿತ) ಎಂದು ಗುರುತಿಸಲಾಗಿದೆ. ಆರೋಪಿಗಳ ಮೇಲೆ ಪೊಲೀಸರು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. … Continued

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ, ಚುನಾವಣಾ ನಿರ್ವಹಣಾ ಸಮಿತಿ ರಚನೆ: ಬೊಮ್ಮಾಯಿ, ಶೋಭಾ ಕರಂದ್ಲಾಜೆಗೆ ಮಹತ್ವದ ಹೊಣೆ

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸನಿಹವಾಗುತ್ತಿದ್ದಂತೆಯೇ ಬಿಜೆಪಿ ಪ್ರಚಾರ ಸಮಿತಿ ಹಾಗೂ ನಿರ್ವಹಣಾ ಸಮಿತಿಗೆ ನೇಮಕ ಮಾಡಲಾಗಿದೆ. ಬಿಜೆಪಿಯಿಂದ ಚುನಾವಣಾ ಪ್ರಚಾರ ಸಮಿತಿ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಪಟ್ಟಿ ಬಿಡುಗಡೆಯಾಗಿದ್ದು, ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ನೇಮಕ ಮಾಡಲಾಗಿದೆ. ಹಾಗೂ ಶೋಭಾ ಕರಂದ್ಲಾಜೆಯವರನ್ನು ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥೆಯನ್ನಾಗಿ ನೇಮಿಸಲಾಗಿದೆ. … Continued

ಭದ್ರಾವತಿ ಸೇರಿ ರಾಜ್ಯದ 4 ನಗರಗಳಲ್ಲಿ ಟ್ರೂ 5ಜಿ ಸೇವೆ ಆರಂಭಿಸಿದ ರಿಲಯನ್ಸ್ ಜಿಯೋ

ಬೆಂಗಳೂರು: ರಿಲಯನ್ಸ್ ಜಿಯೋ ಬುಧವಾರ (ಮಾರ್ಚ್ 8) ರಾಮನಗರ, ಭದ್ರಾವತಿ, ದೊಡ್ಡಬಳ್ಳಾಪುರ, ಚಿಂತಾಮಣಿ ಸೇರಿದಂತೆ ದೇಶಾದ್ಯಂತ 27 ನಗರಗಳಲ್ಲಿ ಟ್ರೂ 5ಜಿ ಸೇವೆಗಳನ್ನು ಪ್ರಾರಂಭಿಸುತ್ತಿರುವುದಾಗಿ ಪ್ರಕಟಿಸಿದೆ. ಇದರೊಂದಿಗೆ ಜಿಯೋ ರಾಮನಗರ, ರಾಮನಗರ, ಭದ್ರಾವತಿ, ದೊಡ್ಡಬಳ್ಳಾಪುರ, ಚಿಂತಾಮಣಿಯಲ್ಲಿ ಮುಂದಿನ ಪೀಳಿಗೆಯ ಟ್ರೂ 5ಜಿ ತಂತ್ರಜ್ಞಾನವನ್ನು ಪರಿಚಯಿಸಿದ ಮೊದಲ ಟೆಲಿಕಾಂ ಆಪರೇಟರ್ ಆಗಿದೆ. ಜಿಯೋ ಟ್ರೂ 5ಜಿ 1 … Continued

ದ್ವಿತೀಯ ಪಿಯುಸಿ ಪರೀಕ್ಷೆ ; ವಿದ್ಯಾರ್ಥಿಗಳಿಗೆ ಸಾರಿಗೆ ಸಂಸ್ಥೆ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ

ಹುಬ್ಬಳ್ಳಿ : ಮಾರ್ಚ್ 9ರಿಂದ 29ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾಗುವ ಹೆಚ್ಚಿನ ವಿದ್ಯಾರ್ಥಿಗಳಿಗೆ ಅವರ ಬೇರೆ ವಿದ್ಯಾಸಂಸ್ಥೆಗಳ ಪರೀಕ್ಷಾ ಕೇಂದ್ರಗಳಿಗೆ ತೆರಳಿ ಪರೀಕ್ಷೆ ಬರೆಯಬೇಕಾಗುವುದರಿಂದ ಶಿಕ್ಷಣ ಇಲಾಖೆಯ ಕೋರಿಕೆಯ … Continued

ಆಪ್‌ ತೊರೆದು ಬಿಜೆಪಿ ಸೇರಿದ ನಿವೃತ್ತ ಐಪಿಎಸ್‌ ಅಧಿಕಾರಿ ಭಾಸ್ಕರ ರಾವ್‌

ಬೆಂಗಳೂರು : ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ ರಾವ್ ಅವರು ಆಮ್ ಆದ್ಮಿ ಪಕ್ಷ ತೊರೆದು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಯಾದರು. ಬಿಜೆಪಿ ರಾಜ್ಯಾಧ್ಯಕ್ಷ ನಳಿನಕುಮಾರ ಕಟೀಲು ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು. ಪಕ್ಷದ ಶಾಲು ಹಾಕಿ, ಧ್ವಜ ನೀಡಿ ಭಾಸ್ಕರ ರಾವ್ ಅವರನ್ನು ಕಟೀಲು ಪಕ್ಷಕ್ಕೆ ಸ್ವಾಗತಿಸಿದರು. … Continued

ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹಾಗೂ ಶೀಘ್ರವೇ ಈ ಕುರಿತು ಬೇಗ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ. 7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಈ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದೆ. … Continued

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು. ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. … Continued