ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳಕ್ಕೆ ನಿರ್ಧಾರ : ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಶೇ.17ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಹಾಗೂ ಶೀಘ್ರವೇ ಈ ಕುರಿತು ಬೇಗ ಆದೇಶ ಹೊರಡಿಸುವುದಾಗಿ ತಿಳಿಸಿದ್ದಾರೆ. 7 ನೇ ವೇತನ ಆಯೋಗ ರಚನೆಗೆ ಆಗ್ರಹಿಸಿ ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಸರ್ಕಾರ ಈ ಮಧ್ಯಂತರ ಪರಿಹಾರವನ್ನು ಘೋಷಣೆ ಮಾಡಿದೆ. … Continued

ಇಂದಿನಿಂದ ರಾಜ್ಯ ಸರ್ಕಾರಿ ನೌಕರರ ಮುಷ್ಕರ: ಈ ಎಲ್ಲ ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು : 7ನೇ ವೇತನ ಆಯೋಗ ಜಾರಿ ಮತ್ತು ಹೊಸ ಪಿಂಚಣಿ ಯೋಜನೆ (NPS) ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ (OPS) ಜಾರಿಗೊಳಿಸುವಂತೆ ಆಗ್ರಹಿಸಿ ನಾಳೆ ಮಾರ್ಚ್‌ 1ರಿಂದ ಸರ್ಕಾರಿ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸುವುದಾಗಿ ಹೇಳಿದ್ದು, ಬಹುತೇಕ ಎಲ್ಲ ಸೇವೆಗಳಲ್ಲೂ ವ್ಯತ್ಯಯವಾಗಬಹದು. ಬುಧವಾರದಿಂದ ಸರ್ಕಾರಿ ನೌಕರರು ರಾಜ್ಯಾದ್ಯಂತ ಕರ್ತವ್ಯಕ್ಕೆ ಹಾಜರಾಗದೆ ಅನಿರ್ಧಿಷ್ಟವಧಿ ಪ್ರತಿಭಟನೆಗೆ ಮುಂದಾಗಿದ್ದಾರೆ. … Continued

ಶಿವಮೊಗ್ಗ ವಿಮಾನ ನಿಲ್ದಾಣ ಲೋಕಾರ್ಪಣೆ, ಯಡಿಯೂರಪ್ಪಗೆ ಜನ್ಮದಿನದ ಶುಭಾಷಯ ಕೋರಿದ ಪ್ರಧಾನಿ ಮೋದಿ

ಶಿವಮೊಗ್ಗ: ಕೆಲವೇ ದಿನಗಳ ಅಂತರದಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಐದನೇ ಬಾರಿ ರಾಜ್ಯಕ್ಕೆ ಭೇಟಿ ನೀಡಿದ್ದು, ನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಇಂದು, ಸೋಮವಾರ ಲೋಕಾರ್ಪಣೆ ಮಾಡಿದ್ದಾರೆ. ಅಲ್ಲದೆ, ಇಂದು, ಸೋಮವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ 80ನೇ ಜನ್ಮದಿನವೂ ಆಗಿದ್ದು, ಮೋಧಿ ಶುಭ ಹಾರೈಸಿದ್ದಾರೆ. ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣಕ್ಕೆ … Continued

ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯದಲ್ಲಿ ಇಂದಿನಿಂದ ಟೋಲ್ ಸಂಗ್ರಹ

ಬೆಂಗಳೂರು: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯ ಮೊದಲ ಹಂತದ ಟೋಲ್‌ ಕೇಂದ್ರಗಳು ಇಂದಿನಿಂದ (ಫೆಬ್ರವರಿ 27ರಿಂದ) ಆರಂಭವಾಗಿದ್ದು, ಇಂದು ಬೆಳಿಗ್ಗೆ 8 ಗಂಟೆಯಿಂದಲೇ ಟೋಲ್​ ಸಂಗ್ರಹ ಆರಂಭವಾಗಿದೆ. ಮಾರ್ಚ್ 11ರಂದು ಪ್ರಧಾನಿ ನರೇಂದ್ರ ಮೋದಿ ಹತ್ತುಪಥಗಳ ಹೆದ್ದಾರಿಯನ್ನು ಉದ್ಘಾಟಿಸಲಿದ್ದು, ಅದಕ್ಕೂ ಮುನ್ನವೇ ಪ್ರಯಾಣಿಕರು ಟೋಲ್ ಕಟ್ಟಬೇಕಿದೆ. 117 ಕಿ.ಮೀ ಉದ್ದದ ಹೆದ್ದಾರಿಯ ಬೆಂಗಳೂರು–ನಿಡಘಟ್ಟವರೆಗಿನ 56 ಕಿ.ಮೀ. ಉದ್ದದ … Continued

ಫೆಬ್ರವರಿ 27ರಂದು ಪ್ರಧಾನಿ ಮೋದಿಯಿಂದ ಶಿವಮೊಗ್ಗ ವಿಮಾನ ನಿಲ್ದಾಣ ಉದ್ಘಾಟನೆ- 2 ರೈಲ್ವೆ ಯೋಜನೆಗಳ ಶಂಕುಸ್ಥಾಪನೆ, ಬೆಳಗಾವಿಯಲ್ಲಿ 2,700 ಕೋಟಿ ರೂ. ಯೋಜನೆಗಳಿಗೆ ಚಾಲನೆ

ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಫೆಬ್ರವರಿ 27 ರಂದು ಕರ್ನಾಟಕಕ್ಕೆ ಭೇಟಿ ನೀಡಲಿದ್ದು, ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣದ ಉದ್ಘಾಟನೆ ಮತ್ತು 1,000 ಕೋಟಿ ರೂ.ಗಳ ಎರಡು ರೈಲ್ವೆ ಯೋಜನೆಗಳ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎಂದು ಪಿಎಂಒ ಪ್ರಕಟಣೆ ತಿಳಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣವನ್ನು ಸುಮಾರು 450 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗಿದೆ. ವಿಮಾನ ನಿಲ್ದಾಣದ ಪ್ರಯಾಣಿಕರ … Continued

ಬಿಜೆಪಿಯಿಂದ 4 ಕಡೆಯಿಂದ ವಿಜಯ ಸಂಕಲ್ಪ ಯಾತ್ರೆ, 150ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲುವ ಗುರಿ

ಬೆಂಗಳೂರು: ಬಿಜೆಪಿಯು 4 ಸ್ಥಳಗಳಿಂದ ವಿಜಯ ಸಂಕಲ್ಪ ಯಾತ್ರೆಯನ್ನು ಮಾರ್ಚ್ ತಿಂಗಳಿನಲ್ಲಿ ಆರಂಭಿಸಲಿದ್ದು, ಇದು ರಾಜ್ಯದ ಎಲ್ಲ ಕ್ಷೇತ್ರಗಳಲ್ಲಿ ಸಂಚರಿಸಲಿದೆ ಎಂದು ರಾಜ್ಯದ ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ ಮತ್ತು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು, ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, … Continued

ಮಂಗಳೂರು ಪೊಲೀಸ್‌ ಆಯುಕ್ತ ಸೇರಿ 7 ಐಪಿಎಸ್​ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತ ಸೇರಿದಂತೆ 7 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ ಅವರನ್ನು ವರ್ಗಾವಣೆ ಮಾಡಿದ್ದು, ಅವರನ್ನು ಡಿಐಜಿ ರೈಲ್ವೆ ಹುದ್ದೆಗೆ ನಿಯೋಜಿಸಲಾಗಿದೆ. ಅವರ ಸ್ಥಾನಕ್ಕೆ ಮಂಗಳೂರು ನಗರ ನೂತನ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಜೈನ್ ಅವರನ್ನು … Continued

ಬಿಜೆಪಿ ಸೇರ್ಪಡೆ ಕಾರ್ಯಕ್ರಮಕ್ಕೆ ಬಾರದ ಹಿರಿಯ ನಟ ಅನಂತ ನಾಗ್ …!

ಬೆಂಗಳೂರು : ಕನ್ನಡದ ಹಿರಿಯ ನಟ ಅನಂತ ನಾಗ್  ಮಂಗಳವಾರ ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರಲಿದ್ದಾರೆ ಎಂದು ವರದಿಯಾಗಿತ್ತು. ಆದರೆ ಅವರು ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ. ಮಂಗಳವಾರ ಸಂಜೆ 4:30ಕ್ಕೆ ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲು​ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಈ ವೇಳೆ  ಸಚಿವರಾದ ಮುನಿರತ್ನ, ಡಾ. ಸುಧಾಕರ ಮುಂತಾದವರು … Continued

ಬೃಹತ್ ಹವಾಮಾನ ಬದಲಾವಣೆಯ ಅಪಾಯ ಎದುರಿಸುತ್ತಿರುವ ವಿಶ್ವದ ಟಾಪ್-100 ಪ್ರಾಂತ್ಯಗಳ ಪಟ್ಟಿಯಲ್ಲಿ ಕರ್ನಾಟಕವೂ ಸೇರಿ ಭಾರತದ 14 ರಾಜ್ಯಗಳು…!

ನವದೆಹಲಿ: ಭಾರತದಲ್ಲಿ ಕನಿಷ್ಠ 14 ರಾಜ್ಯಗಳು ಹವಾಮಾನ ವೈಪರೀತ್ಯ ಮತ್ತು ಹವಾಮಾನ ಬದಲಾವಣೆಯಿಂದ ಹಾನಿಗೊಳಗಾಗುವ ಏಷ್ಯಾದ ಟಾಪ್-100 ಪ್ರಾಂತ್ಯಗಳಲ್ಲಿ ಸೇರಿವೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಕ್ರಾಸ್ ಡಿಪೆಂಡೆನ್ಸಿ ಇನಿಶಿಯೇಟಿವ್ (XDI) ಮೂಲಕ ಎಕ್ಸ್‌ಡಿಐ (XDI) ಗ್ರೋಸ್‌ ಡೊಮೆಸ್ಟಿಕ್ ಕ್ಲೈಮೇಟ್ ರಿಸ್ಕ್ ಡೇಟಾದ ಮೂಲಸೌಕರ್ಯಕ್ಕೆ ಸಂಭವನೀಯ ಹಾನಿಯ ಮೊದಲ ವಿಶ್ಲೇಷಣೆಯ ಪ್ರಕಾರ, ಹವಾಮಾನ ವೈಪರೀತ್ಯದ ಪರಿಣಾಮಕ್ಕೆ … Continued

ಮೇದರ ಅಭಿವೃದ್ಧಿ ನಿಗಮ ಸ್ಥಾಪನೆಗೆ ರಾಜ್ಯ ಸರ್ಕಾರದ ಆದೇಶ: 8 ಸಮುದಾಯಗಳಿಗೆ ಅನುಕೂಲ

ಬೆಂಗಳೂರು: ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯದ ಅತ್ಯಂತ ಹಿಂದುಳಿದ ಸಮುದಾಯವಾಗಿರುವ ಮೇದರ , ಬಟ್ಟರ್, ಗೌರಿ, ಗೌರಿ ಮರಾಠ, ಗೌರಿಗ, ಮೇದರಿ, ಬುರುಡ್ ಸಮುದಾಯಗಳ ಸರ್ವತೋಮುಖ ಅಭಿವೃದ್ಧಿಗಾಗಿ ಕರ್ನಾಟಕ ಮೇದರ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಿ, ಆದೇಶ ಹೊರಡಿಸಲಾಗಿದೆ ಎಂದು ಮುಖ್ಯಮಂತ್ರಿಯವರ ಕಚೇರಿ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಮಾಹಿತಿ … Continued