ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ನಾಲ್ಕೈದು ದಿನ ಗುಡುಗು ಸಹಿತ ಮಳೆ ; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇನ್ನಷ್ಟು ದಿನ ಪೂರ್ವ ಮುಂಗಾರು ಮಳೆ ಅಬ್ಬರಿಸುವ ಮುನ್ಸೂಚನೆ ಸಿಕ್ಕಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ (Karnataka Rains) ಬೀಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. .ವಾಯುಭಾರ ಕುಸಿತವು ಸದ್ಯ ಈಶಾನ್ಯ ಮಧ್ಯಪ್ರದೇಶದಿಂದ ವಿದರ್ಭ, ತೆಲಂಗಾಣ, … Continued

ಕರ್ನಾಟಕ ಮಾಜಿ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಹತ್ಯೆ

ಬೆಂಗಳೂರು: ನಿವೃತ್ತ ಪೊಲೀಸ್​ ಮಹಾನಿರ್ದೇಶಕ ಓಂ ಪ್ರಕಾಶ ಅವರನ್ನು ಹತ್ಯೆ ಮಾಡಲಾಗಿದೆ. ಬೆಂಗಳೂರಿನ ಹೆಚ್​ಎಸ್​ಆರ್​ ಲೇಔಟ್​​ ನಿವಾಸದಲ್ಲಿ ರಕ್ತದ ಮಡವಿನಲ್ಲಿ ಬಿದ್ದಿರುವ 68 ವರ್ಷದ ಓಂ ಪ್ರಕಾಶ್ ಅವರ ಮೃತದೇಹ ಪತ್ತೆಯಾಗಿದೆ. 1981ರ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿದ್ದ ಓಂ ಪ್ರಕಾಶ ಅವರು 2015ರಲ್ಲಿ ರಾಜ್ಯದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದರು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು … Continued

ಜೆಇಇ ಮೇನ್‌ ಫಲಿತಾಂಶ ಪ್ರಕಟ : ಕರ್ನಾಟಕದ ಒಬ್ಬ ಸೇರಿ 24 ವಿದ್ಯಾರ್ಥಿಗಳಿಗೆ 100ಕ್ಕೆ ನೂರು ಅಂಕ ; ಪಟ್ಟಿ ಇಲ್ಲಿದೆ…

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತನ್ನ ಪೋರ್ಟಲ್ jeemain.nta.nic.in ನಲ್ಲಿ ಜೆಇಇ (ಮುಖ್ಯ) 2025 ಸೆಷನ್ 2 ರ ಪೇಪರ್ 1 (B.E./B.Tech.) ಫಲಿತಾಂಶಗಳನ್ನು ಅಧಿಕೃತವಾಗಿ ಘೋಷಿಸಿದೆ. ಏಪ್ರಿಲ್‌ನಲ್ಲಿ 15 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 300 ನಗರಗಳ 531 ಕೇಂದ್ರಗಳಲ್ಲಿ ಒಂಬತ್ತು ಶಿಫ್ಟ್‌ಗಳಲ್ಲಿ ಪರೀಕ್ಷೆಯನ್ನು ನಡೆಸಲಾಯಿತು. ಈ ವರ್ಷದ ಪರೀಕ್ಷೆಯಲ್ಲಿ ಎರಡೂ ಸೆಷನ್‌ಗಳಲ್ಲಿ ಒಟ್ಟು … Continued

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಆದಾಯದಲ್ಲಿ ಹೆಚ್ಚಳ ; ಮತ್ತೆ ರಾಜ್ಯದ ಅತೀ ಶ್ರೀಮಂತ ದೇಗುಲದ ಪಟ್ಟ

ಮಂಗಳೂರು : ರಾಜ್ಯದ ಪ್ರಸಿದ್ಧ ದೇವಾಲಯ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಏರಿಕೆಯಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು. ಕಳೆದ ವರ್ಷಕ್ಕಿಂತ ಈ ಬಾರಿ 9.94 ಕೋಟಿ … Continued

ಸಚಿವ ರಾಮಲಿಂಗಾ ರೆಡ್ಡಿ ಸಂಧಾನ ಯಶಸ್ವಿ; ಲಾರಿ ಮುಷ್ಕರ ವಾಪಸ್‌

ಬೆಂಗಳೂರು: ರಾಜ್ಯದಲ್ಲಿ ಡೀಸೆಲ್ ಬೆಲೆ, ಟೋಲ್‌ ದರ ಹೆಚ್ಚಳ ವಿರೋಧಿಸಿ 3 ದಿನಗಳಿಂದ ಲಾರಿ ಮಾಲೀಕರ ಸಂಘ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ ಅಂತ್ಯವಾಗಿದೆ. ಏ. 14ರ ಮಧ್ಯರಾತ್ರಿಯಿಂದ ರಾಜ್ಯದಲ್ಲಿ ಮುಷ್ಕರ ನಡೆಸುತ್ತಿದ್ದ ಲಾರಿ ಮಾಲೀಕರೊಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಗುರುವಾರ (ಏ. 17) ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಲಾರಿ ಮಾಲೀಕರ ಬೇಡಿಕೆ ಈಡೇರಿಸಲು ಮುಂದಾಗುವುದಾಗಿ … Continued

ಜಾತಿ ಗಣತಿ ವರದಿ: ತೀರ್ಮಾನಕ್ಕೆ ಬರಲಾಗದೆ ಮುಗಿದ ಸಚಿವ ಸಂಪುಟ ಸಭೆ

ಬೆಂಗಳೂರು : ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ ಜಾತಿ ಗಣತಿ (Caste Census) ವರದಿ ಬಗ್ಗೆ ನಿರ್ಧರಿಸಲು ಕರೆಯಲಾಗಿದ್ದ ಸಚಿವ ಸಂಪುಟ ಸಭೆಯಲ್ಲಿ ಹಲವು ಸಚಿವರು ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಯಾವುದೇ ನಿರ್ಧಾರ ಕೈಗೊಳ್ಳದೆ ಮುಕ್ತಾಯವಾಗಿದೆ. ಹಲವು ಸಚಿವರು ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ಯಾವುದೇ ಸ್ಪಷ್ಪ ನಿರ್ಧಾರಕ್ಕೆ ಬರಲು ಸಾಧ್ಯವಾಗಲಿಲ್ಲʼʼ … Continued

1ನೇ ತರಗತಿ ದಾಖಲಾತಿಗೆ ಈ ವರ್ಷ ವಯೋಮಿತಿ ಸಡಿಲಿಕೆ : ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ

ಬೆಂಗಳೂರು: 1ನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿಯನ್ನು ಈ ವರ್ಷದ ಮಟ್ಟಿಗೆ ಸಡಿಲಗೊಳಿಸಲಾಗಿದೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ನಿರ್ಧಾರ ಪ್ರಕಟಿಸಿದೆ. ಅದರ ಪ್ರಕಾರ 5 ವರ್ಷ 5 ತಿಂಗಳಾಗಿರುವ ಮಕ್ಕಳಿಗೆ ಇನ್ನು 1ನೇ ತರಗತಿಗೆ ದಾಖಲಾತಿ ಮಾಡಲು ಸಾಧ್ಯವಾಗಲಿದೆ. ಆದರೆ ಎಲ್​ಕೆಜಿ, ಯುಕೆಜಿ ಆಗಿದ್ದರೆ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ. … Continued

ಇಂದು (ಏ.14)ಮಧ್ಯರಾತ್ರಿಯಿಂದ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು: ಡೀಸೆಲ್‌ ದರ ಏರಿಕೆ ಹಾಗೂ ಟೋಲ್‌ ಶುಲ್ಕ ಹೆಚ್ಚಳ ವಿರೋಧಿಸಿ ಸೋಮವಾರ ( ಏ.14) ಮಧ್ಯರಾತ್ರಿಯಿಂದಲೇ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ರಾಜ್ಯ ಲಾರಿ ಮಾಲೀಕರ ಸಂಘ ಸಜ್ಜಾಗಿದೆ. ಹೊರ ರಾಜ್ಯಗಳ ಲಾರಿ ಮಾಲೀಕರು ಸೇರಿದಂತೆ ರಾಜ್ಯವ್ಯಾಪಿ ಬೆಂಬಲಿಸಿದ್ದಾರೆ. ಯಾವುದೇ ಕಾರಣಕ್ಕೂ ಮುಷ್ಕರ ಹಿಂಪಡೆಯುವುದಿಲ್ಲ. ಕೆಲ ಬಣದ ನಾಯಕರು ಸರ್ಕಾರದೊಟ್ಟಿಗೆ ಕೈಜೋಡಿಸಿದ್ದು ವಿರೋಧ ಮಾಡುತ್ತಿದ್ದಾರೆ. ಈಗಾಗಲೇ ಹಲವು … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 5 ದಿನ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಮುಂದಿನ ಐದು ದಿನ ಕರ್ನಾಟಕದಾದ್ಯಂತ ಗುಡುಗು, ಮಿಂಚು ಮತ್ತು ಬಲವಾದ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಆಂಧ್ರಪ್ರದೇಶದ ಮಧ್ಯ ಕರಾವಳಿ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ ಸುಮಾರು 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಈ ಹವಾಮಾನ ಬದಲಾವಣೆ ಸಂಭವಿಸಿದೆ … Continued

ಕರ್ನಾಟಕ ಜಾತಿಗಣತಿ ವರದಿಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿ 51% ಹೆಚ್ಚಳಕ್ಕೆ ಶಿಫಾರಸು..?

ಬೆಂಗಳೂರು : ಜಾತಿಗಣತಿ ಆಯೋಗವು ರಾಜ್ಯದಲ್ಲಿ ಇತರ ಹಿಂದುಳಿದ ವರ್ಗಗಳಿಗೆ (ಒಬಿಸಿ) ಮೀಸಲಾತಿ ಕೋಟಾವನ್ನು ಪ್ರಸ್ತುತ ಶೇ. 32 ರಿಂದ ಶೇ. 51 ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ ಎಂದು ಹೇಳಲಾಗಿದೆ. ಶುಕ್ರವಾರ ಜಾತಿಗಣತಿ ವರದಿ ಕ್ಯಾಬಿನೆಟ್‌ನಲ್ಲಿ ಮಂಡನೆಯಾಗಿದೆ. ವರದಿಯಲ್ಲಿ ಏನಿದೆ ಎಂಬುದನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಏಪ್ರಿಲ್ 17ರ ಕ್ಯಾಬಿನೆಟ್‌ನಲ್ಲಿ ವರದಿ ಅಂಗೀಕಾರದ ಬಳಿಕ … Continued