ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ​ ಜಾರಿ: ರಾಜ್ಯಾದ್ಯಂತ ಈ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ, ಹೊಸ ವರ್ಷಾಚರಣೆಗೆ ರಾತ್ರಿ 1ರ ಗಡುವು

ಬೆಳಗಾವಿ: ಚೀನಾ ಸೇರಿದಂತೆ ಹಲವು ದೇಶಗಳಲ್ಲಿ ಕೊರೊನಾ ವೈರಸ್‌ನ ಹೊಸ ತಳಿಯ ಕಾರಣಕ್ಕೆ ಕೋವಿಡ್‌ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಜನಸಾಮಾನ್ಯರಿಗೆ ತೊಂದರೆಯಾಗದಂತೆ ಹಾಗೂ ಆರ್ಥಿಕ ಚಟುವಟಿಕೆಗೆ ಅಡ್ಡಿಯಾಗದಂತೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಮಾರ್ಗಸೂಚಿಗಳನ್ನು ಜಾರಿ ಮಾಡಲಾಗಿದೆ. ಮಾರ್ಗಸೂಚಿಗೆ ಸಂಬಂಧಿಸಿದಂತೆ ಸೋಮವಾರ ನಡೆದ ಸರ್ಕಾರದ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿರುವ ಆರೋಗ್ಯ ಸಚಿವ ಸುಧಾಕರ ಮತ್ತು ಕಂದಾಯ … Continued

ಹೊಸ ರಾಜಕೀಯ ಪಕ್ಷ ಘೋಷಿಸಿದ ಮಾಜಿ ಸಚಿವ ಜನಾರ್ದನ ರೆಡ್ಡಿ

ಬೆಂಗಳೂರು: ಬಿಜೆಪಿಯ ಬಗ್ಗೆ ಅಲ್ಲಲ್ಲಿ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಹಾಗೂ ಗಣಿ ಉದ್ಯಮಿ ಜನಾರ್ದನ ರೆಡ್ಡಿ ಈಗ ಹೊಸ ರಾಜಕೀಯ ಪಕ್ಷ ಘೋಷಣೆ ಮಾಡಿದ್ದಾರೆ. ನೂತನ ರಾಜಕೀಯ ಪಕ್ಷಕ್ಕೆ ‘ಕಲ್ಯಾಣ ರಾಜ್ಯ ಪ್ರಗತಿ ಪಕ್ಷ’ ಎಂಬ ಹೆಸರಿಡಲಾಗಿದೆ ಎಂದು ಹೇಳಿದರು. ನಗರದಲ್ಲಿನ ತಮ್ಮ ಮನೆ ‘ಪಾರಿಜಾತ’ದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಹೊಸ ಪಕ್ಷವನ್ನು ಘೋಷಣೆ ಮಾಡಿದರು … Continued

ವಿಧಾನ ಪರಿಷತ್‌ ಸಭಾಪತಿಯಾಗಿ ಆಯ್ಕೆಯಾದ ಬಸವರಾಜ ಹೊರಟ್ಟಿಗೆ ಸನ್ಮಾನ

ವಿಧಾನ ಪರಿಷತ್‌ ಸಭಾಪತಿಯಾಗಿ ಅವಿರೋಧವಾಗಿ ಆಯ್ಕೆಯಾದ ಬಸವರಾಜ ಹೊರಟ್ಟಿ ಅವರನ್ನು ಸನ್ಮಾನಿಸಲಾಯಿತು. ಶಾಂತಿನಿಕೇತನ ಇಂಗ್ಲಿಷ್‌ ಮಾಧ್ಯಮ ಶಾಲೆ ಅಧ್ಯಕ್ಷರಾದ ಭವರಲಾಲ ಸಿ. ಜೈನ್, ಮುಖ್ಯ ಕಾರ್ಯದರ್ಶಿ ವಿವೇಕ್ ಆರ್ ಷಾ, ಖಜಾಂಚಿ ಪೂರಣ್‌ ಕುಮಾರ್ ನಹತಾ, ನಿರ್ದೇಶಕ ದಾನೇಶ್ ಎ. ಕಟಾರಿಯಾ, ಮನೋಜ್ ಜ್ಯುವೆಲರ್ಸ್ ದಿಲೀಪ್ ವಿ ತೇಲಿಸೆರಾ ಇದ್ದರು.

ವಿಧಾನ ಪರಿಷತ್ ಉಪಸಭಾಪತಿಯಾಗಿ ಎಂ.ಕೆ ಪ್ರಾಣೇಶ ಆಯ್ಕೆ

ಬೆಳಗಾವಿ: ಕರ್ನಾಟಕ ವಿಧಾನ ಪರಿಷತ್ ಉಪಸಭಾಪತಿಯಾಗಿ ಬಿಜೆಪಿಯ ಎಂ.ಕೆ. ಪ್ರಾಣೇಶ ಆಯ್ಕೆಯಾಗಿದ್ದಾರೆ. ಕಾಂಗ್ರೆಸ್‌ನಿಂದ ಅನಿಲಕುಮಾರ ಅರಳಿ ಅವರು ಸ್ಪರ್ಧಿಸಿದ್ದರು. ಇಂದು (ಡಿಸೆಂಬರ್ 23) ರಂದು 11 ಗಂಟೆಗೆ ವಿಧಾನ ಪರಿಷತ್ ಉಪ ಸಭಾಪತಿ ಆಯ್ಕೆಗೆ ಚುನಾವಣೆ ನಡೆದಿದ್ದು, ಎಂ.ಕೆ ಪ್ರಾಣೇಶ್ 39 ಮತಗಳನ್ನು ಪಡೆಯುವ ಮೂಲಕ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿ ಅಗತ್ಯ ಸಂಖ್ಯಾಬಲ(39) ಹೊಂದಿದ್ದರೂ ಅಡ್ಡಮತದ ಭೀತಿಯಿಂದ … Continued

ಪ್ರಥಮ ಪಿಯುಸಿ-ದ್ವಿತೀಯ ಪಿಯುಸಿ ಪ್ರಾಯೋಗಿಕ, ಪೂರ್ವ ಸಿದ್ಧತಾ ಪರೀಕ್ಷೆ, ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ (Karnataka School Examination and Evaluation Board) 2022-23ನೇ ಸಾಲಿನ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ, ಪ್ರಾಯೋಗಿಕ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳನ್ನು ವೇಳಾಪಟ್ಟಿಯಂತೆ ನಡೆಸಲು ಕಾಲೇಜು ಆಡಳಿತ ಮಂಡಳಿಗೆ ಸುತ್ತೋಲೆ ಹೊರಡಿಸಿದೆ. 2022-23ನೇ … Continued

ಕಡ್ಡಾಯವಾಗಿ ಆನ್‌ಲೈನ್ ಮೂಲಕವೇ ಶಿಕ್ಷಕರಿಗೆ 17 ಸೇವಾ ಸೌಲಭ್ಯ ಮಂಜೂರು ಮಾಡಿ : ಶಿಕ್ಷಣ ಇಲಾಖೆ ಸೂಚನೆ

ಬೆಂಗಳೂರು: ಶಿಕ್ಷಕರಿಗೆ 17 ಸೇವಾ ಸೌಲಭ್ಯಗಳನ್ನು ಮಂಜೂರು ಮಾಡುವಾಗ ಕಡ್ಡಾಯವಾಗಿ ಆನ್ ಲೈನ್ ಮುಖಾಂತರವೇ ಪ್ರಸ್ತಾವನೆಗಳನ್ನು ಸ್ವೀಕರಿಸಿ ಇತ್ಯರ್ಥಪಡಿಸಬೇಕು. ಅದರ ಹೊರತಾಗಿ ಯಾವುದೇ ಕಾರಣಕ್ಕೂ ಭೌತಿಕವಾಗಿ ಪ್ರಸ್ತಾವನೆ ಸ್ವೀಕರಿಸದಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಈ ಕುರಿತು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದು, ಆಡಳಿತದಲ್ಲಿ ಪಾರದರ್ಶಕತೆ ಕಾಯ್ದುಕೊಂಡು, ಶಿಕ್ಷಕರಿಗೆ, ಅಧಿಕಾರಿಗಳಿಗೆ, ಸಿಬ್ಬಂದಿ ವರ್ಗದವರಿಗೆ … Continued

ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧ ಆಯ್ಕೆ‌

ಬೆಳಗಾವಿ: ವಿಧಾನಪರಿಷತ್ ನೂತನ ಸಭಾಪತಿಯಾಗಿ ಬಸವರಾಜ ಹೊರಟ್ಟಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ಅವರು ಮಂಗಳವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು. ಬಸವರಾಜ ಹೊರಟ್ಟಿ ಹೊರತಾಗಿ ಬೇರೆ ಯಾರು ನಾಮಪತ್ರ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ‌ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಹಂಗಾಮಿ ಸಭಾಪತಿಯಾಗಿದ್ದ ರಘುನಾಥ ಮಲ್ಕಾಪುರೆ ಅವರು ಅಧಿಕಾರ ಹಸ್ತಾಂತರ ಮಾಡಿದರು. … Continued

ಮಗನಿಗಾಗಿ ರಾಮನಗರ ಕ್ಷೇತ್ರ ತ್ಯಾಗ ಮಾಡಿದ ಅನಿತಾ ಕುಮಾರಸ್ವಾಮಿ

ರಾಮನಗರ: ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರ ಪತ್ನಿ, ರಾಮನಗರ ಜೆಡಿಎಸ್ ಶಾಸಕಿ ಅನಿತಾ ಕುಮಾರಸ್ವಾಮಿ ಅವರು ಪುತ್ರ ನಿಖಿಲ್‌ಗಾಗಿ ತಮ್ಮ ಕ್ಷೇತ್ರವನ್ನು ತ್ಯಾಗ ಮಾಡಿದ್ದಾರೆ. 2023ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ರಾಮನಗರ ಕ್ಷೇತ್ರದಿಂದ ಪುತ್ರ ನಿಖಿಲ್‌ ಸ್ಪರ್ಧಿಸಲಿದ್ದಾರೆ ಎಂದು ಸ್ವತಃ ಅನಿತಾ ಕುಮಾರಸ್ವಾಮಿ ಶನಿವಾರ ಘೋಷಿಸಿದ್ದು, ಈ ಮೂಲಕ ಊಹಾಪೋಹಹಳಿಗೆ ತೆರೆ … Continued

ಆರೋಪಿಗಳ ಬಗ್ಗೆ ಮಾಹಿತಿ ನೀಡುವವರಿಗೆ 5 ಲಕ್ಷ ರೂಪಾಯಿ ಬಹುಮಾನ..!

ಬೆಂಗಳೂರು: ಗಂಭೀರ ಸ್ವರೂಪದ ಅಪರಾಧ ಪ್ರಕರಣಗಳಲ್ಲಿ ತಲೆಮರೆಸಿಕೊಂಡ ಆರೋಪಿಗಳ ಮಾಹಿತಿ ನೀಡುವವರಿಗೆ ನೀಡಲಾಗುತ್ತಿದ್ದ ಬಹುಮಾನದ ಮೊತ್ತವನ್ನು 20 ಸಾವಿರ ರೂ.ಗಳಿಂದ 5 ಲಕ್ಷ ರೂಪಾಯಿಗೆ ಹೆಚ್ಚಿಸಿ ಗೃಹ ಇಲಾಖೆ ಗುರುವಾರ ಆದೇಶ ಹೊರಡಿಸಿದೆ. ರಾಷ್ಟ್ರೀಯ ಸುರಕ್ಷತೆ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಉಂಟುಮಾಡುವ, ಮಾದಕ ವಸ್ತು ಹಾಗೂ ಆಯುಧ ಕಳ್ಳಸಾಗಣೆ, ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ … Continued

ವರದಕ್ಷಿಣೆ ಕಿರುಕುಳ ಪ್ರಕರಣ: ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

ಬೆಂಗಳೂರು: ಅತ್ತಿಗೆಗೆ ವರದಕ್ಷಿಣೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ಸಿನೆಮಾ ನಟಿ ಹಾಗೂ ಕಿರುತೆರೆ ಕಲಾವಿದೆ ಅಭಿನಯಾ ಅವರಿಗೆ ಹೈಕೋರ್ಟ್‌ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಪ್ರಕರಣದಲ್ಲಿ ಅಭಿನಯ ಅವರ ತಾಯಿ ಜಯಮ್ಮ ಅವರಿಗೆ 5 ವರ್ಷ ಜೈಲು ಶಿಕ್ಷೆ ನೀಡಿದೆ. ವರದಕ್ಷಿಣ ಕಿರುಕುಳಕ್ಕೆ ಸಂಬಂಧಿಸಿದಂತೆ ಅಭಿನಯಾ ಅಣ್ಣ … Continued