ನಾಳೆ (ಏ.8) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ; ಈ ವೆಬ್‌ಸೈಟ್‌ಗಳಲ್ಲಿ ರಿಸಲ್ಟ್ ನೋಡಬಹುದು…

ಬೆಂಗಳೂರು: ರಾಜ್ಯದಲ್ಲಿ ದ್ವಿತೀಯ ಪಿಯು ಫಲಿತಾಂಶ ನಾಳೆ (ಏಪ್ರಿಲ್‌  8) ಮಂಗಳವಾರ ಮಧ್ಯಾಹ್ನ 12:30ಕ್ಕೆ ಪ್ರಕಟವಾಗಲಿದೆ. . ಕೆಎಸ್ಇಎಬಿ ಕರ್ನಾಟಕ ಮಂಡಳಿಯ 12ನೇ ತರಗತಿಯ ಪರೀಕ್ಷಾ ಫಲಿತಾಂಶ 2025 ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆಯಾಗಲಿದೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸುದ್ದಿಗೋಷ್ಠಿ ನಡೆಯಲಿದೆ. ನಂತರ ಮಂಗಳವಾರ ಮಧ್ಯಾಹ್ನ 1:30ರ ಬಳಿಕ ವಿದ್ಯಾರ್ಥಿಗಳಿಗೆ ಇಂಟರ್‌ನೆಟ್‌ನಲ್ಲಿ ಫಲಿತಾಂಶ ನೋಡಬಹುದಾಗಿದೆ. … Continued

ಭೋವಿ ನಿಗಮ ಅಕ್ರಮ ; ಹಿಂದಿನ ಪ್ರಧಾನ ವ್ಯವಸ್ಥಾಪಕನ ಬಂಧಿಸಿದ ಇ.ಡಿ.

ಬೆಂಗಳೂರು : ಶೋಧ ಕಾರ್ಯಾಚರಣೆಯ ನಂತರ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ (ಕೆಬಿಡಿಸಿ) ಮಾಜಿ ಪ್ರಧಾನ ವ್ಯವಸ್ಥಾಪಕರನ್ನು ಬಂದಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇ.ಡಿ.)ಭಾನುವಾರ ತಿಳಿಸಿದೆ. ಬಿ ಕೆ ನಾಗರಾಜಪ್ಪ ಅವರನ್ನು ಏಪ್ರಿಲ್ 5 ರಂದು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ. ಬೆಂಗಳೂರಿನ ವಿಶೇಷ ಪ್ರಿವೆನ್ಶನ್ ಆಫ್ ಮನಿ … Continued

ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

 ಬೆಂಗಳೂರು : ಬೆಂಗಳೂರು ಸೇರಿ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಎರಡ್ಮೂರು ದಿನ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಚಾಮರಾಜನಗರ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಾವಣಗೆರೆ, ಚಿತ್ರದುರ್ಗ, ವಿಜಯನಗರ, … Continued

2025-26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ಮೇ 29 ರಿಂದ ಶಾಲೆಗಳು ಆರಂಭ, ದಸರಾ, ಬೇಸಿಗೆ ರಜೆಗಳ ಮಾಹಿತಿ ಇಲ್ಲಿದೆ…

ಬೆಂಗಳೂರು : ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ಇಲಾಖೆಯು 2025- 26ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ರಾಜ್ಯಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಇದು ಅನ್ವಯವಾಗಲಿದೆ ಎಂದು ತಿಳಿಸಿದೆ. ಮೇ 29ರಿಂದ ಶಾಲೆಗಳು ಆರಂಭವಾಗಲಿದೆ. ಮೇ 29 ರಿಂದ ಸೆಪ್ಟೆಂಬರ್ 19 ರವರೆಗೆ ಮೊದಲ ಅವಧಿ ಹಾಗೂ … Continued

ಡೀಸೆಲ್‌ ದರ ಏರಿಕೆ ; ಏ.15ರಿಂದ ಅನಿರ್ದಿಷ್ಟಾವಧಿ ಲಾರಿ ಮುಷ್ಕರ

ಬೆಂಗಳೂರು : ರಾಜ್ಯ ಸರ್ಕಾರ ಡೀಸೆಲ್‌ ಮೇಲಿನ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿರುವ ಲಾರಿ ಮಾಲೀಕರು, ಏಪ್ರಿಲ್ 15 ರಂದು ಮುಷ್ಕರಕ್ಕೆ ಕರೆ ನೀಡಿದ್ದಾರೆ. ಲಾರಿ ಮಾಲೀಕರು ಸಭೆ ನಡೆಸಿ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈ ಬಗ್ಗೆ ಲಾರಿ ಮಾಲೀಕರ ಸಂಘದ ಅಧ್ಯಕ್ಷ ಷಣ್ಮುಗಪ್ಪ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ಎಲ್ಲ ಬಗೆಯ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು : ಮುಂದಿನ ನಾಲ್ಕೈದು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಾಳಿ ಮಳೆಯಾಗುವ ಸಾಧ್ಯತೆಗಳಿವೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ … Continued

ಪತ್ನಿ ಕೊಲೆ ಪ್ರಕರಣದಲ್ಲಿ 1.5 ವರ್ಷ ಜೈಲಲ್ಲಿದ್ದ ಪತಿ ; ಪತ್ನಿ ಕೋರ್ಟ್‌ ಮುಂದೆ ಹಾಜರು…!

 ಮೈಸೂರು : ಹೆಂಡತಿ ಕೊಲೆ ಆರೋಪದ ಮೇಲೆ  ಗಂಡ ಸುಮಾರು 1.5 ವರ್ಷ ಜೈಲಿನಲ್ಲಿದ್ದ ಪ್ರಕರಣಕ್ಕೆ ಥ್ರಿಲ್ಲರ್‌ ಸಿನೆಮಾದಲ್ಲಿ ನಡೆಯುವಂತೆ ಟ್ವಿಸ್ಟ್​ ಸಿಕ್ಕಿದೆ. ಕೊಲೆಯಾಗಿದ್ದಾಳೆ ಎಂದು ತಿಳಿದಿದ್ದ ಪತ್ನಿ ನ್ಯಾಯಾಲಯಕ್ಕೆ ಹಾಜರಾದ ನಂತರ ಪ್ರಕರಣದ ಬಗ್ಗೆ ಸರಿಯಾದ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಮೈಸೂರು ಸೆಷನ್ಸ್​ ನ್ಯಾಯಾಲಯ ಪೊಲೀಸರಿಗೆ ಆದೇಶಿಸಿದೆ. ಕೊಲೆಯಾಗಿದ್ದಾಳೆಂದು ನಂಬಲಾಗಿದ್ದ ಮಹಿಳೆ ಈಗ … Continued

ಕರ್ನಾಟಕದ ಜನರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್‌ ; ಡೀಸೆಲ್ ದರ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಅನೇಕ ಅಗತ್ಯ ವಸ್ತುಗಳ ಬೆಲೆ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರ, ಈಗ ಮತ್ತೊಂದು ಬೆಲೆ ಏರಿಕೆಯ ಶಾಕ್ ನೀಡಿದ್ದು, ರಾಜ್ಯದಲ್ಲಿ ಡೀಸೆಲ್ ಬೆಲೆ ಹೆಚ್ಚಳ ಮಾಡಿದೆ. ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹಾಲು, ವಿದ್ಯುತ್ ದರ ಏರಿಕೆ ಮಾಡಿರುವ ಸರ್ಕಾರ, ಈಗ ಈ ಪಟ್ಟಿಗೆ ಡೀಸೆಲ್ ಅನ್ನು ಸೇರಿಸಿದೆ. ಡೀಸೆಲ್ ಬೆಲೆ ಮೇಲಿನ ಮಾರಾಟ ತೆರಿಗೆಯನ್ನು … Continued

ಚಂಡಮಾರುತದ ಪರಿಚಲನೆಯ ಪ್ರಭಾವ : ಕರ್ನಾಟಕದ ಹಲವು ಜಿಲ್ಲೆಗಳಿಗೆ ಏಪ್ರಿಲ್ 6ರ ವರೆಗೂ ಗಾಳಿ ಮಳೆಯ ಮುನ್ಸೂಚನೆ

ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ 6 ದಿನಗಳ ಕಾಲ ಮಳೆ ಅಬ್ಬರಿಸುವ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್‌ 1 ಮತ್ತು 2ರಂದು ಕರ್ನಾಟಕದ ಕರಾವಳಿ ಹಾಗೂ ಒಳನಾಡಿನಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ … Continued

ಏಪ್ರಿಲ್‌ ನಿಂದ ಜೂನ್‌ ಅವಧಿಯಲ್ಲಿ ಕರ್ನಾಟಕ ಸೇರಿ ದೇಶಾದ್ಯಂತ ತಾಪಮಾನ ಇನ್ನಷ್ಟು ಹೆಚ್ಚಳ ; ಹವಾಮಾನ ಇಲಾಖೆ ಮುನ್ನೆಚ್ಚರಿಕೆ

ನವದೆಹಲಿ: ಭಾರತವು ಏಪ್ರಿಲ್‌ನಿಂದ ಜೂನ್‌ ವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸುವ ನಿರೀಕ್ಷೆಯಿದೆ, ಮಧ್ಯ ಮತ್ತು ಪೂರ್ವ ಭಾರತ ಮತ್ತು ವಾಯುವ್ಯ ಬಯಲು ಪ್ರದೇಶಗಳಲ್ಲಿ ಹೆಚ್ಚಿನ ಶಾಖದ ದಿನಗಳು ಇರುತ್ತವೆ ಎಂದು ಐಎಂಡಿ (IMD) ಸೋಮವಾರ (ಮಾರ್ಚ್ 31) ತಿಳಿಸಿದೆ. ದೇಶಾದ್ಯಂತ ಬಿಸಿಲ ಬೇಗೆ ಹೆಚ್ಚಾಗಿದ್ದು, ಮುಂದಿನ ದಿನಗಳಲ್ಲಿ ಪ್ರಖರತೆ ಇನ್ನಷ್ಟು ಜಾಸ್ತಿಯಾಗಲಿದೆ ಎಂದು ಭಾರತೀಯ … Continued