ಎಸಿಬಿ ರದ್ದುಗೊಳಿಸಿದ್ದ ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂಕೋರ್ಟ್

ನವದೆಹಲಿ: 2016 ರಲ್ಲಿ ರಾಜ್ಯ ಸರ್ಕಾರ ಸ್ಥಾಪಿಸಿದ್ದ ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಖಾಸಗಿ ದೂರುದಾರರು ಸಲ್ಲಿಸಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ. ಭ್ರಷ್ಟ ರಾಜಕಾರಣಿಗಳು, ಸಚಿವರು ಮತ್ತು ಅಧಿಕಾರಿಗಳನ್ನು ಲೋಕಾಯುಕ್ತದಿಂದ ರಕ್ಷಿಸುವ ಪ್ರಯತ್ನದಲ್ಲಿ ರಾಜ್ಯ ಸರ್ಕಾರವು ಎಸಿಬಿಯನ್ನು ಸ್ಥಾಪಿಸಿದೆ ಎಂದು ಗಮನಿಸಿದ ಕರ್ನಾಟಕ ಹೈಕೋರ್ಟ್ ಆಗಸ್ಟ್ 11 … Continued

ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಳ: ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ಒಮ್ಮತದ ಒಲವು – ಸಿ.ಟಿ. ರವಿ

ಬೆಂಗಳೂರು: ಎಸ್.ಟಿ ವರ್ಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಲಾಗಿದ್ದು, ಈ ನಿಟ್ಟಿನಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿಳಿಸಿದ್ದಾರೆ.ಎಸ್.ಟಿ ಮೀಸಲಾತಿಯ ಪ್ರಮಾಣ ಹೆಚ್ಚಳ ಮಾಡುವ ಕುರಿತಾಗಿ ಅಕ್ಟೋಬರ್ 9ರ ಒಳಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್‌ ಗಾಂಧಿ-ಸಿದ್ದರಾಮಯ್ಯ ರನ್ನಿಂಗ್‌ ರೇಸ್‌ | ವೀಕ್ಷಿಸಿ

ಮಂಡ್ಯ: ಇಳಿ ವಯಸ್ಸಿನಲ್ಲಿಯೂ ಉತ್ಸಾಹ ಭರಿತವಾಗಿಯೇ ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡಿರುವಂತ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಜೊತೆ ಭಾರತ್‌ ಜೋಡೋ ಯಾತ್ರೆಯಲ್ಲಿ ರನ್ನಿಂಗ್‌ ಮಾಡಿದ್ದಾರೆ…! ಈ ದೃಶ್ಯಾವಳಿಯನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಟ್ವೀಟ್‌ ಮಾಡಿದೆ.ಜಗ್ಗದ, ಕುಗ್ಗದ ಉತ್ಸಾಹ ನಮ್ಮದು, ನುಗ್ಗುವುದೊಂದೇ ದ್ಯೇಯ ನಮ್ಮದು, ನಡೆದಷ್ಟೂ ನೂರ್ಮಡಿಯಾಗುತ್ತಿರುವ … Continued

ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ: ಯೆಲ್ಲೋ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದ ಹಲವೆಡೆ ಮುಂದಿನ ಐದು ದಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಆಂಧ್ರಪ್ರದೇಶ ಕರಾವಳಿ ಪ್ರದೇಶದ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯಿಂದ ರಾಜ್ಯದ 9 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹೇಳಲಾಗಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಾದ ಕಲಬುರ್ಗಿ, ಕೊಪ್ಪಳ, ರಾಯಚೂರು, … Continued

ರಾಜ್ಯದಲ್ಲಿ ಅಕ್ಟೋಬರ್‌ 15ರ ವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಅಂತ್ಯಗೊಂಡಿದ್ದರೂ ಅಕ್ಟೋಬರ್‌  15ರ ವರೆಗೆ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಕ್ಟೋಬರ್‌ 10ರ ಬಳಿಕ ಮಳೆಯ ಪ್ರಮಾಣ ಕೊಂಚ ತಗ್ಗಲಿದೆ. ಉಳಿದ ಜಿಲ್ಲೆಗಳಿಗೆ ಹೋಲಿಸಿದರೆ ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಅತಿ ಹೆಚ್ಚು ಮಳೆ ಸುರಿಯಲಿದೆ ಎಂದು ಹವಾಮಾನ … Continued

ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರಿಂದ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮತಾಂತರ ನಿಷೇಧ ಮಸೂದೆಗೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ. ಈ ವಿಧೇಯಕಕ್ಕೆ ಸೆಪ್ಟೆಂಬರ್‌ 28ರಂದು ರಾಜ್ಯಪಾಲರು ಅಂಕಿತ ಹಾಕಿದ್ದು, ಅದನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್‌ 30ರಂದು ರಾಜ್ಯಪತ್ರದಲ್ಲಿ ಪ್ರಕಟಿಸಿದೆ. ಕಳೆದ ವರ್ಷ ಬೆಳಗಾವಿ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರಪಡೆಯಲಾಗಿತ್ತು. ಆದರೆ, ವಿಧಾನಪರಿಷತ್ತಿನಲ್ಲಿ ಅಂಗೀಕಾರ ಸಾಧ್ಯವಾಗಿರಲಿಲ್ಲ. ಇದೇ ಸೆಪ್ಟೆಂಬರ್‌ 17ರಂದು ಕೆಲವು ತಿದ್ದುಪಡಿಗಳೊಂದಿಗೆ ವಿಧಾನಪರಿಷತ್ತಿನಲ್ಲಿ ವಿಧೇಯಕ … Continued

ಪ್ರಜಾಪ್ರಭುತ್ವದ ಸಂಸ್ಥೆಗಳು ವಿಪಕ್ಷಗಳಿಗೆ ಬಂದ್, ಪಾದಯಾತ್ರೆ ಬಿಟ್ಟು ಬೇರೆ ಮಾರ್ಗವೇ ಇರಲಿಲ್ಲ: ಗುಂಡ್ಲುಪೇಟೆ ಸಮಾವೇಶದಲ್ಲಿ ರಾಹುಲ್‌ ಗಾಂಧಿ

ಚಾಮರಾಜನಗರ: ಪ್ರಜಾಪ್ರಭುತ್ವದ ಹಲವು ಸಂಸ್ಥೆಗಳನ್ನು ವಿಪಕ್ಷಗಳಿಗೆ ಬಂದ್ ಮಾಡಲಾಗಿದೆ. ಎಲ್ಲವೂ ಸರ್ಕಾರ ಹಿಡಿತದಲ್ಲಿಟ್ಟುಕೊಂಡು ತನಗೆ ಬೇಕಾದಂತೆ ಕುಣಿಸುತ್ತಿದೆ. ಸಂಸತ್ತಿನಲ್ಲಿ ನಮಗೆ ಮಾತನಾಡಲು ಬಿಡುತ್ತಿಲ್ಲ ಹೀಗಾಗಿ ಯಾತ್ರೆಯೊಂದೇ ಮಾರ್ಗವಾಗಿದೆ. ಅದಕ್ಕಾಗಿ ಪಾದಯಾತ್ರೆ ಮಾಡುತ್ತಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದರು. ಇಂದು, ಶುಕ್ರವಾರ ತಮಿಳುನಾಡು ಮೂಲಕ ಕರ್ನಾಟಕವನ್ನು ಪ್ರವೇಶಿಸಿದ ನಂತರ ಗುಂಡ್ಲುಪೇಟೆಯಲ್ಲಿ ನಡೆದ ಕಾಂಗ್ರೆಸ್‌ನ ಭಾರತ ಜೋಡೋ ಪಾದಯಾತ್ರೆ … Continued

ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಬದ್ಧ : ವಿಧಾನಸಭೆಗೆ ತಿಳಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಅದು ಜಿಲ್ಲೆಯಲ್ಲಿ ಎಲ್ಲಿ ನಿರ್ಮಾಣವಾಗಬೇಕು ಎಂಬುದನ್ನು ಜಾಗದ ಲಭ್ಯತೆ ಆಧಾರದ ಮೇಲೆ ನಿರ್ಧಾರ ಮಾಡಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ಕಲಾಪ ಸಂದರ್ಭದಲ್ಲಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಆರ್.ವಿ.ದೇಶಪಾಂಡೆ, … Continued

ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿ ರಾಜ್ಯದ ಹಲವೆಡೆ ಏಕಕಾಲಕ್ಕೆ ಎನ್‌ಐಎ ದಾಳಿ

ಬೆಂಗಳೂರು: ಗುರುವಾರ ನಸುಕಿನ ಜಾವ ಬೆಂಗಳೂರು, ಮಂಗಳೂರು, ಶಿರಸಿ ಸೇರಿದಂತೆ ರಾಜ್ಯದ ಹಲವೆಡೆ ರಾಷ್ಟ್ರೀಯ ತನಿಖಾ ದಳದ (NIA) ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ಪಿಎಫ್​ಐ, ಎಸ್​ಡಿಪಿಐ ಪದಾಧಿಕಾರಿಗಳ ಮನೆಗಳು ಹಾಗೂ ಪಿಎಫ್​ಐ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕರ್ನಾಟಕದಲ್ಲಿ ಬೆಂಗಳೂರು, ಶಿವಮೊಗ್ಗ, ಮಂಗಳೂರು, ಉತ್ತರ ಕನ್ನಡ, ಕೊಪ್ಪಳ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ದಾಳಿಗಳನ್ನು ನಡೆಸಲಾಗಿದೆ. … Continued

ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100 ವಿದ್ಯುತ್ ಬೈಕ್‌ಗಳ ವಿತರಣೆ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ 100ರಂತೆ ಬಾಬು ಜಗಜೀವನರಾಮ್ ಅವರ ಹೆಸರಿನಲ್ಲಿ ಎಸ್ಸಿ-ಎಸ್ಟಿ ಸಮುದಾಯದವರಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ … Continued