ಹಿರಿಯೂರು ಬಳಿ ಅಪಘಾತ ; ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿಗೆ ಗಂಭೀರ ಗಾಯ

ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ಶುಕ್ರವಾರ (ಮಾರ್ಚ್‌ 14) ಸಂಜೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಜವನಗೊಂಡನಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಕಾರಿನಿಂದ ಕೆಳಗಿಳಿದು ನಿಂತಿದ್ದ ರುದ್ರಪ್ಪ ಲಮಾಣಿ ಅವರಿಗೆ ಬೈಕ್​ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಬೈಕ್​ ಡಿಕ್ಕಿ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಕೆಲವೆಡೆ ಗುರುವಾರ ಮಳೆಯಾಗಿದ್ದು, ಬಿಸಿಲಿನ ಬೇಗೆ ಕೊಂಚ ಕಡಿಮೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಎರಡು ದಿನಗಳ ಕಾಲ ಮಳೆ(Rain)ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶುಕ್ರವಾರ ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು … Continued

ಕರ್ನಾಟಕದಲ್ಲೇ ಅತಿ ಹೆಚ್ಚು 42.9°C ಉಷ್ಣಾಂಶ ಉತ್ತರ ಕನ್ನಡದಲ್ಲಿ ದಾಖಲು…! ಕರಾವಳಿಯ 27 ಕಡೆ 38°Cಗಿಂತ ಹೆಚ್ಚು ತಾಪಮಾನ…!!

ಬೆಂಗಳೂರು : ಕರ್ನಾಟಕದ ಕರಾವಳಿ ಭಾಗ ತಾಪಮಾನ ಹೆಚ್ಚಳದಿಂದ ಬಿಸಿ ಕೆಂಡವಾಗಿ ಮಾರ್ಪಟ್ಟಿದೆ. ಕರಾವಳಿ ಭಾಗದ ಅನೇಕ ಪ್ರದೇಶಗಳಲ್ಲಿ ತಾಪಮಾನ ಬುಧವಾರ ತಾಪಮಾನ 1.6°C ನಿಂದ 3.0°Cರಷ್ಟು ಹೆಚ್ಚಳವಾಗಿದೆ. ಬುಧವಾರ (ಮಾರ್ಚ್ 12) ಬೆಳಿಗ್ಗೆ 8:30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡ ಜಿಲ್ಲೆಯ ಸಾವಂತವಾಡ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ ಗರಿಷ್ಠ 42.9 … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಾರ್ಚ್ 11ರಿಂದ ಎರಡು ದಿನ ಮಳೆಯಾಗುವ ಸಾಧ್ಯತೆ ; ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಈ ವಾರ ಮುಂಗಾರುಪೂರ್ವ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 11 ಮತ್ತು 12 ರಂದು ದಕ್ಷಿಣ ಒಳನಾಡಿನ ಕೆಲವು ಭಾಗಗಳು ಮತ್ತು ಕರಾವಳಿ ಪ್ರದೇಶದ ಕೆಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ … Continued

ಕರ್ನಾಟಕದ 14 ಜಿಲ್ಲೆಗಳಲ್ಲಿ 3 ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮೂರು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮಾರ್ಚ್​ 12ರಿಂದ ಮೂರು ದಿನಗಳ ಕಾಲ ಕರ್ನಾಟಕದ 14ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, … Continued

ಕರ್ನಾಟಕ ಬಜೆಟ್‌ 2025 | ₹1.16 ಲಕ್ಷ ಕೋಟಿ ಹೊಸ ಸಾಲ ಪಡೆಯಲು ನಿರ್ಧಾರ ; ರಾಜ್ಯದ ಒಟ್ಟು ಸಾಲ…?

ಬೆಂಗಳೂರು: ಹಣಕಾಸು ಸಚಿವರೂ ಆಗಿರುವ ಸಿಎಂ ಸಿದ್ದರಾಮಯ್ಯ 2025-26ನೇ ಸಾಲಿಗೆ ದಾಖಲೆಯ 4.09 ಲಕ್ಷ ಕೋಟಿ ರೂ. ಗಾತ್ರದ ಬಜೆಟ್‌ ಅನ್ನು ಮಂಡಿಸಿದ್ದಾರೆ. ಇದರಲ್ಲಿ 19,262 ಕೋಟಿ ರೂ.‌ ರಾಜಸ್ವ ಕೊರತೆಯನ್ನು ಅವರು ಉಲ್ಲೇಖಿಸಿದ್ದಾರೆ. ಈ ಬಾರಿಯೂ ಪಂಚ ಗ್ಯಾರಂಟಿಗೆ 51,034 ಕೋಟಿ ರೂ. ಅನುದಾನ ನೀಡಲಾಗಿದೆ. ಹಾಗೂ ಕೆಲವು ಹೊಸ ಯೋಜನೆಗಳನ್ನು ಘೋಷಣೆ ಮಾಡಲಾಗಿದೆ. … Continued

ಕರ್ನಾಟಕ ಬಜೆಟ್ 2025 | ಅಲ್ಪಸಂಖ್ಯಾತರಿಗೆ ಸಿದ್ದರಾಮಯ್ಯ ಭರಪೂರ ಕೊಡುಗೆ

ಬೆಂಗಳೂರು: ಕರ್ನಾಟಕದ ೨೦೨೫ರ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ನಲ್ಲಿ ಮುಸ್ಲಿಮರಿಗೆ ಹಾಗೂ ರಾಜ್ಯದ ಇನ್ನುಳಿದ ಅಲ್ಪಸಂಖ್ಯಾತ ಸಮುದಾಯಗಳಿಗೆ ವಿವಿಧ ಯೋಜನೆಗಳನ್ನು ಘೋಷಿಸಿದ್ದಾರೆ. ಅವುಗಳಲ್ಲಿ ಪ್ರಮುಖವಾದವೆಂದರೆ, 2 ಕೋಟಿ ರೂ.ವರೆಗಿನ ಗುತ್ತಿಗೆ ಕಾಮಗಾರಿಗಳಲ್ಲಿ ಪ್ರವರ್ಗ 2, 2ಎ ವರ್ಗದವರಿಗೆ (ಅಲ್ಪಸಂಖ್ಯಾತರು) ಮೀಸಲಾತಿ ಕಲ್ಪಿಸಲು ನಿರ್ಧರಿಸಲಾಗಿದೆ. ವಕ್ಫ್ ಆಸ್ತಿಗಳ ರಕ್ಷಣೆಗಾಗಿ 150 ಕೋಟಿ … Continued

ಬೆಂಗಳೂರು ನಗರ ವಿವಿಗೆ ಡಾ.ಮನಮೋಹನ ಸಿಂಗ್‌ ಹೆಸರು ; ಬಜೆಟ್‌ ನಲ್ಲಿ ಘೋಷಣೆ

ಬೆಂಗಳೂರು: ಜ್ಞಾನಭಾರತಿ ಕ್ಯಾಂಪಸ್​ ನಲ್ಲಿರುವ ಬೆಂಗಳೂರು ವಿಶ್ವವಿದ್ಯಾಲಯದ ಹೆಸರನ್ನು ಬದಲಾಯಿಸಲಾಗುತ್ತಿದ್ದು, ಅದಕ್ಕೆ ಮಾಜಿ ಪ್ರಧಾನಿ, ದಿವಂಗತ ಡಾ.ಮನಮೋಹನ್ ಸಿಂಗ್ ಅವರ ಹೆಸರನ್ನುಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಜೆಟ್ ​​ನಲ್ಲಿ ಘೋಷಣೆ ಮಾಡಿದ್ದಾರೆ. ಎರಡು ಅವಧಿಗೆ ಒಟ್ಟು ಹತ್ತು ವರ್ಷ ಕಾಲ ಭಾರತದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ 2024ರ ಡಿಸೆಂಬರ್ ತಿಂಗಳಲ್ಲಿ ನಿಧನರಾಗಿದ್ದಾರೆ. ಭಾರತದ ಆಧುನಿಕ … Continued

ಕರ್ನಾಟಕ ಬಜೆಟ್‌ 2025 | ಬೆಂಗಳೂರಿಗೆ ಭರ್ಜರಿ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ಕರ್ನಾಟಕ ಬಜೆಟ್‌ 2025ರಲ್ಲಿ ಬೆಂಗಳೂರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರ್ಜರಿ ಕೊಡುಗೆ ನೀಡಿದ್ದಾರೆ. ಮಹಾನಗರಕ್ಕೆ ಕಳೆದ ವರ್ಷಕ್ಕೆ ಹೆಚ್ಚಿನ ಅನುದಾನ ನೀಡಿದ್ದಕಿಂತ 7 ಸಾವಿರ ಕೋಟಿ ರೂ.ಗಷ್ಟು ಹೆಚ್ಚಿಗೆ ನೀಡಲಾಗಿದೆ. ಅಲ್ಲದೆ, ಟನಲ್‌ ಯೋಜನೆಗೆ 40,000 ಕೋಟಿ ರೂ. ಮೀಸಲಿಡಲಾಗಿದೆ. ಬಿಬಿಎಂಪಿಯ ಅಂದಾಜು ಮೊತ್ತ 40,000 ಕೋಟಿ ರೂಪಾಯಿ ವೆಚ್ಚದ ಉತ್ತರ- ದಕ್ಷಿಣ ಮತ್ತು … Continued

ರಾಜ್ಯದಲ್ಲಿ ಹೆಚ್ಚಿದ ತಾಪಮಾನ : ಆರೋಗ್ಯ ಇಲಾಖೆ ನೀಡಿದ ಸಲಹೆಗಳೇನು..?

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ತಾಪಮಾನ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಮಕ್ಕಳು, ಕಾರ್ಮಿಕರು ಸೇರಿ ವಿವಿಧ ವರ್ಗದವರು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಆರೋಗ್ಯ ಇಲಾಖೆ ಸಲಹೆಗಳನ್ನು ನೀಡಿದೆ.. ಮಧ್ಯಾಹ್ನ 12ರಿಂದ 3 ಗಂಟೆಯವರೆಗೆ ಆದಷ್ಟು ಹೊರ ಹೋಗುವುದನ್ನು ತಪ್ಪಿಸಿಕೊಳ್ಳಿ ಎಂದು ಸಲಹೆ ನೀಡಿದೆ. ಈ ಅವಧಿಯಲ್ಲಿ ಒಳಾಂಗಣ ಹಾಗೂ ಹೊರಾಂಗಣ ಪ್ರದೇಶಗಳಲ್ಲಿ ಹೆಚ್ಚಿನ … Continued