ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ : ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

ಯಾದಗಿರಿ : ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆಗಳು ಜೋರಾಗಿ ನಡೆದಿವೆ. ಇದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಗರು ಹಾಗೂ ಮುಖ್ಯಮಂತ್ರಿ ಆಕಾಂಕ್ಷಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಬೆಂಬಲಿಗರ ಮಧ್ಯೆ ವಾಗ್ಯುದ್ಧಕ್ಕೂ ಕಾರಣವಾಗಿದೆ. ಹೈಕಮಾಂಡ್‌ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ ಅವರ ವಿಚಾರದಲ್ಲಿ  ಅಧಿಕಾರ ಹಂಚಿಕೆ ಸೂತ್ರ ಸಿದ್ಧಪಡಿಸಿದೆ ಎನ್ನಲಾಗಿದೆ.ಕಳೆದ ದಿನಗಳಿಂದ ಡಿ.ಕೆ. ಶಿವಕುಮಾರ ಅವರ ಬಣದ ನಾಯಕರು ಮುಖ್ಯಮಂತ್ರಿಯನ್ನು … Continued

ಕರ್ನಾಟಕದ ಕರಾವಳಿ ಕೆಂಡ : 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ಉಷ್ಣಾಂಶ ದಾಖಲು ; ಉತ್ತರ ಕನ್ನಡದಲ್ಲಿ ರಾಜ್ಯದಲ್ಲೇ ಅತಿ ಹೆಚ್ಚು ತಾಪಮಾನ

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು, ಮಾರ್ಚ್‌ 2 ಮತ್ತು 3ರಂದು ಸಹ ಬಿಸಿಗಾಳಿ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಉತ್ತರ ಕನ್ನಡದ ಸಾವಂತವಾಡಿ ಹೋಬಳಿಯಲ್ಲಿ ಕರ್ನಾಟಕದಲ್ಲೇ ಅತಿ ಹೆಚ್ಚು ಅಂದರೆ 41.1 ಡಿಗ್ರಿ ಸೆಲ್ಸಿಯಸ್‌  ಉಷ್ಣಾಂಶ ದಾಖಲಾಗಿದೆ. ಕಳೆದ 24 ಗಂಟೆಗಳಲ್ಲಿ 17 ಕಡೆ 39 ಡಿಗ್ರಿಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. … Continued

ಕರ್ನಾಟಕದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಕನ್ನಡದ ಲೇಬಲ್ ಕಡ್ಡಾಯ ; ಸರ್ಕಾರದಿಂದ ಆದೇಶ

ಬೆಂಗಳೂರು : ಕರ್ನಾಟಕದಲ್ಲಿ ತಯಾರಾಗುವ ಎಲ್ಲ ಉತ್ಪನ್ನಗಳ ಮೇಲೆ ಹೆಸರು ಹಾಗೂ ಅವುಗಳ ಬಳಕೆಯ ಕುರಿತಾದ ನಿರ್ದೇಶನಗಳನ್ನು ಕನ್ನಡದಲ್ಲಿಯೂ ಮುದ್ರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಭಾಷೆಯು ನೆಲದ ಸಂಸ್ಕೃತಿ, ಸಂಪ್ರದಾಯ ಮತ್ತು ಮೌಲ್ಯಗಳನ್ನು ಪ್ರತಿಬಿಂಬಿಸುತ್ತದೆ. ಒಂದು ಭಾಷೆ … Continued

ಮಾ.1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ

ಬೆಂಗಳೂರು : 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್‌ 1ರಿಂದ ಮಾರ್ಚ್ 20ರ ವರೆಗೆ ರಾಜ್ಯಾದ್ಯಂತ ನಡೆಯಲಿದೆ. ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ. 1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್, ಸ್ಮಾರ್ಟ್ ವಾಚ್, ಈಯರ್ ಫೋನ್ … Continued

ಕರಾವಳಿ ಜಿಲ್ಲೆಗಳಲ್ಲಿ ಬಿಸಿ ಗಾಳಿ : ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಉಷ್ಣ ಅಲೆ (ಬಿಸಿ ಗಾಳಿ) ಮುನ್ನೆಚ್ಚರಿಕೆ ನೀಡಿದ್ದು, ಜನರು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಶಿಯಸ್‌ ದಾಟಿದ್ದು, ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ. ಬುಧವಾರ (ಫೆ 26) ಅಪರಾಹ್ನ ಬಿಡುಗಡೆ … Continued

ಮಹಾರಾಷ್ಟ್ರ- ಕರ್ನಾಟಕದ ನಡುವೆ ಬಸ್‌ ಸಂಚಾರ ಸ್ಥಗಿತ

ಬೆಳಗಾವಿ : ಕನ್ನಡದಲ್ಲಿ ಮಾತನಾಡಿ ಎಂದು ಹೇಳಿದ್ದಕ್ಕೆ ಬಸ್ ನಿರ್ವಾಹಕನ ಮೇಲೆ ಕೆಲವು ಮರಾಠಿ ಭಾಷಿಕರು ಹಲ್ಲೆ ನಡೆಸಿದ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಇದು ರಾಜಕೀಯ ಪ್ರೇರಿತವಾದದ್ದು, ಕೂಡಲೇ ಈ ಕೇಸನ್ನು ವಾಪಸ್ ಪಡೆಯಬೇಕೆಂದು ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನೆ ಪ್ರತಿಭಟನೆ ಮಾಡುತ್ತಿದೆ. … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪರಿಚಲನೆ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿಮುಂದಿನ ಒಂದೆರಡು ದಿನಗಳ ಕಾಲ  ಅಲ್ಲಲ್ಲಿ ಮಳೆಯಾಗುವ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಕಡೆ … Continued

ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಬಂದ್ ; ಶಿಕ್ಷಣ ಇಲಾಖೆ ಆದೇಶ

ಬೆಂಗಳೂರು: ಬಿಸಿಯೂಟ ಯೋಜನೆಯಡಿ ಸರ್ಕಾರಿ ಹಾಗೂ ಅನುದಾನಿತ ಶಾಲೆ ಮಕ್ಕಳಿಗೆ ವಿತರಿಸುತ್ತಿದ್ದ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆಯಾಗಿರುವ ಬಗ್ಗೆ ಮತ್ತು ವಿತರಣೆಯ ಸಮಸ್ಯೆಗಳ ಕುರಿತು ಧಾರವಾಡ ಮತ್ತು ಕಲಬುರಗಿಯಲ್ಲಿನ ಶಿಕ್ಷಣ ಇಲಾಖೆ ಅಪರ ಆಯುಕ್ತರು ಇಲಾಖೆಗೆ ದೂರು ನೀಡಿದ್ದರು. … Continued

ಕರ್ನಾಟಕದಲ್ಲಿ ಜಿಪಂ, ತಾಪಂ ಚುನಾವಣೆಗೆ ಕೊನೆಗೂ ಕಾಲ ಸನ್ನಿಹಿತ…

ಬೆಂಗಳೂರು : ಜಿಲ್ಲಾ ಪಂಚಾಯತ ಮತ್ತು ತಾಲೂಕು ಪಂಚಾಯತ ಮೀಸಲು ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮೇ ಅಂತ್ಯದೊಳಗೆ ಅಧಿಸೂಚನೆ ಪ್ರಕಟಿಸಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟಿಗೆ ತಿಳಿಸಿದೆ. ರಾಜ್ಯ ಸರ್ಕಾರದ ಮುಚ್ಚಳಿಕೆಯನ್ನು ಆಧರಿಸಿ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್‌ ಸೋಮವಾರ ಇತ್ಯರ್ಥಪಡಿಸಿದೆ ಎಂದು ಬಾರ್‌ & ಬೆಂಚ್‌ ವರದಿ ಮಾಡಿದೆ. ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯತ … Continued

ಎಐಸಿಸಿ ಪುನರ್ರಚನೆ : 11 ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸದಾಗಿ ಪ್ರಧಾನ ಕಾರ್ಯದರ್ಶಿಗಳು, ಉಸ್ತುವಾರಿಗಳ ನೇಮಕ

ನವದೆಹಲಿ : ಕಾಂಗ್ರೆಸ್ ಪಕ್ಷವು ಪ್ರಮುಖ ಪ್ರಮುಖ ಪದಾಧಿಕಾರಿಗಳ ಪುನರ್ರಚನೆಗೆ ಮುಂದಾಗಿದ್ದು, 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಹೊಸದಾಗಿ ಪ್ರಧಾನ ಕಾರ್ಯದರ್ಶಿಗಳು ಮತ್ತು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಪಕ್ಷದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯದಂತೆ ಪಕ್ಷದ ಸಂಘಟನೆಯ ಪುನರ್ ರಚನೆ ಪ್ರಕ್ರಿಯೆಗೆ ಪಕ್ಷ ಚಾಲನೆ ನೀಡಿದೆ. ಹಲವು ರಾಜ್ಯಗಳ ಉಸ್ತುವಾರಿ ಬದಲಿಸಿ ಕಾಂಗ್ರೆಸ್‌ … Continued