ಕರ್ನಾಟಕದ 9 ಹೊಸ ವಿಶ್ವವಿದ್ಯಾಲಯಗಳನ್ನು ಮುಚ್ಚಲು ಸರ್ಕಾರದ ನಿರ್ಧಾರ…?!

ಬೆಂಗಳೂರು: ಬಿಜೆಪಿ (BJP) ಸರ್ಕಾರದ ಅವಧಿಯಲ್ಲಿ ಆರಂಭಿಸಿದ್ದ 10 ಹೊಸ ವಿಶ್ವವಿದ್ಯಾಲಯಗಳ ಪೈಕಿ 9 ವಿಶ್ವವಿದ್ಯಾಲಯ(University)ಗಳನ್ನು ಮುಚ್ಚಲು ಸಚಿವ ಸಂಪುಟ ಉಪಸಮಿತಿ ತೀರ್ಮಾನಿಸಿದೆ ಎಂದು ತಿಳುದಬಂದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅಧ್ಯಕ್ಷತೆಯ ಈ ಉಪಸಮಿತಿ ಸಭೆ ವಿಶ್ವವಿದ್ಯಾಲಯಗಳ ಆರ್ಥಿಕ ಸ್ಥಿತಿಗತಿಯ ಪರಿಶೀಲನೆ ಕುರಿತು ಗುರುವಾರ ಮೊದಲ ಸಭೆ ನಡೆಯಿತು. ಸಭೆಯಲ್ಲಿ ಈ ತೀರ್ಮಾನ ಕೈಗೊಂಡಿದೆ. ಉದ್ದೇಶಿತ … Continued

ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅಂಕಿತ ಹಾಕಿದ್ದಾರೆ. ಈ ಮಸೂದೆಯನ್ನು ಅಧಿವೇಶನದಲ್ಲಿ ಮಂಡಿಸಲು ರಾಜ್ಯ ಸರ್ಕಾರಕ್ಕೆ ಆರು ತಿಂಗಳ ಕಾಲಾವಕಾಶವನ್ನು ರಾಜ್ಯಪಾಲರು ನೀಡಿದ್ದಾರೆ. ಈ ಹಿಂದೆ ರಾಜ್ಯ ಸರ್ಕಾರ ರಾಜ್ಯಪಾಲರ ಅನುಮೋದನೆಗಾಗಿ ಮೈಕ್ರೋ ಫೈನಾನ್ಸ್‌ ಕುರಿತ ಸುಗ್ರೀವಾಜ್ಞೆಯನ್ನು ಕಳುಹಿಸಿತ್ತು. ಆದರೆ ರಾಜಭವನ ಕೆಲ ಸ್ಪಷ್ಟನೆ ಕೇಳಿ ಸರ್ಕಾರಕ್ಕೆ ಸುಗ್ರೀವಾಜ್ಞೆಯನ್ನು … Continued

ಕೇಂದ್ರ ಬಜೆಟ್ 2025 | ಕರ್ನಾಟಕಕ್ಕೆ ತೆರಿಗೆ-ಸುಂಕದ ಪಾಲು 51 ಸಾವಿರ ಕೋಟಿ ರೂ.; ಇದು ತಮಿಳುನಾಡು, ಆಂಧ್ರಕ್ಕಿಂತ ಕಡಿಮೆ

ಬೆಂಗಳೂರು: ಭಾರತದ ಎರಡನೇ ಅತಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯವಾದ ಕರ್ನಾಟಕಕ್ಕೆ ಕೇಂದ್ರ ಸರ್ಕಾರವು 2025-26ನೇ ಹಣಕಾಸು ವರ್ಷದಲ್ಲಿ 51,876 ಕೋಟಿ ರೂಪಾಯಿಗಳನ್ನು ತೆರಿಗೆ ಮತ್ತು ಸುಂಕದಲ್ಲಿ ತನ್ನ ಪಾಲು ಎಂದು ವಿತರಿಸಲಿದೆ. ದಕ್ಷಿಣದ ರಾಜ್ಯಗಳಲ್ಲೇ ಅತಿ ಹೆಚ್ಚು ಪಾಲು ತಮಿಳುನಾಡು ಪಡೆಯಲಿದ್ದು, ಅದು 58,021.50 ಕೋಟಿ ರೂಪಾಯಿಗಳನ್ನು ಪಡೆಯಲಿದೆ. 57,566.31 ಕೋಟಿ ರೂ.ಗಳೊಂದಿಗೆ ಆಂಧ್ರಪ್ರದೇಶ … Continued

ಮಹಾಕುಂಭ ಮೇಳದಲ್ಲಿ ಕಾಲ್ತುಳಿತ : ಚಿತ್ರದುರ್ಗದಿಂದ ತೆರಳಿದ್ದ ನಾಗಸಾಧು ಸಾವು

ಚಿತ್ರದುರ್ಗ: ಉತ್ತರ ಪ್ರದೇಶದ ಪ್ರಯಾಗ​ರಾಜ್ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕರ್ನಾಟಕದ ಮತ್ತೊಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಕಳೆದ ಆರೇಳು ವರ್ಷಗಳಿಂದ ಚಿತ್ರದುರ್ಗ ತಾಲೂಕಿನ ಸಿಬಾರ ಬಳಿಯ ಬಂಜಾರ ಗುರುಪೀಠದಲ್ಲಿ ವಾಸವಾಗಿದ್ದ ನಾಗಾಸಾಧು ರಾಜನಾಥ ಮಹಾರಾಜ್ (48) ಮೃತಪಟ್ಟಿದ್ದಾರೆ ಎಂದು ತಿಳುದುಬಂದಿದೆ. ರಾಜನಾಥ ಮಹಾರಾಜ್ ಅವರು ಹದಿನೈದು ದಿನಗಳ ಹಿಂದೆ ಕುಂಭಮೇಳಕ್ಕೆ ತೆರಳಿದ್ದರು. ಕಾಲ್ತುಳಿತದಲ್ಲಿ ಗಾಯಗೊಂಡಿದ್ದ ಅವರು … Continued

ಕರ್ನಾಟಕದ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಹೊಸದಾಗಿ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ; ಪಟ್ಟಿ ಬಿಡುಗಡೆ

ಬೆಂಗಳೂರು : ಕರ್ನಾಟಕದ 23 ಜಿಲ್ಲೆಗಳಿಗೆ ಬಿಜೆಪಿಯ ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಲಾಗಿದ್ದು ರಾಜ್ಯ ಬಿಜೆಪಿಯು ಆಯ್ಕೆಯಾದ ಜಿಲ್ಲಾಧ್ಯಕ್ಷರ ಪಟ್ಟಿಯನ್ನು ಬಿಡುಗಡೆ ಮಾಡಿದೆ. ದೇಶಾದ್ಯಂತ ಬಿಜೆಪಿಯ ಸಂಘಟನಾ ಪರ್ವ 2024-25 ನಡೆಯುತ್ತಿದ್ದು, ಇದರ ಅಂಗವಾಗಿ ರಾಜ್ಯದಲ್ಲಿ ಮೊದಲ ಹಂತದಲ್ಲಿ 23 ಸಂಘಟನಾತ್ಮಕ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಮುಗಿಸಲಾಗಿದ್ದು, ಬುಧವಾರ ಆಯ್ಕೆಯಾದ ಜಿಲ್ಲಾಧ್ಯಕ್ಷರ ಹೆಸರುಗಳನ್ನು ಜಿಲ್ಲಾ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನ ಮಳೆಯ ಮುನ್ಸೂಚನೆ

ಬೆಂಗಳೂರು : ಹವಾಮಾನ ಇಲಾಖೆಯು ದಕ್ಷಿಣ ಭಾರತದ ಹೆಚ್ಚಿನ ರಾಜ್ಯಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಫೆಬ್ರವರಿ 1ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಅದು ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡು … Continued

ಕರ್ನಾಟಕದ 9 ಸಾಧಕರಿಗೆ ಪದ್ಮ ಪ್ರಶಸ್ತಿ

ಬೆಂಗಳೂರು: ದೇಶದ ಅತ್ಯುನ್ನತ ನಾಗರಿಕ ಸೇವಾ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಹಾಗೂ ಪದ್ಮಶ್ರೀ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಶನಿವಾರ ಪ್ರಕಟಿಸಿದೆ. ರಾಜ್ಯದ 9 ಸಾಧಕರಿಗೆ ಪದ್ಮ ಪ್ರಶಸ್ತಿಗಳು ಲಭಿಸಿವೆ. ಒಬ್ಬರಿಗೆ ಪದ್ಮ ವಿಭೂಷಣ, ಇಬ್ಬರು ಸಾಧಕರಿಗೆ ಪದ್ಮಭೂಷಣ ಹಾಗೂ 6 ಜನ ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಸೇರಿದಂತೆ 9 ಜನರು ಪದ್ಮ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪದ್ಮ … Continued

ಕರ್ನಾಟಕದ ಸಿಇಟಿ ಪರೀಕ್ಷೆಯ ದಿನಾಂಕ ಪ್ರಕಟ ; ಜ.23ರಿಂದ ಅರ್ಜಿ ಸಲ್ಲಿಕೆ ಆರಂಭ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಸಿಇಟಿ 2025ರ ವೇಳಾಪಟ್ಟಿ ಪ್ರಕಟಿಸಿದೆ. ಸಿಇಟಿ ಪರೀಕ್ಷೆಯು ಏಪ್ರಿಲ್‌ 16 (ಬುಧವಾರ) ಹಾಗೂ 17 (ಗುರುವಾರ)ಪರೀಕ್ಷೆ ನಡೆಯಲಿದೆ ಎಂದು ಮಾಹಿತಿ ನೀಡಿದೆ. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಜನವರಿ 23 ರಿಂದ ಫೆಬ್ರವರಿ 21ರ ತನಕ ಅರ್ಜಿ ಸಲ್ಲಿಕೆ ಮಾಡಿ ನೋಂದಣಿ ಮಾಡಿಕೊಳ್ಳಬಹುದು. ಇಂಜಿನಿಯರಿಂಗ್, ಪಶು ವೈದ್ಯಕೀಯ ಸೇರಿದಂತೆ ವಿವಿಧ … Continued

ಪವಾಡ….| ಆಸ್ಪತ್ರೆಯಲ್ಲಿ ‘ಮೃತ’ ವ್ಯಕ್ತಿ ಶವಾಗಾರಕ್ಕೆ ಸ್ಥಳಾಂತರಿಸುವಾಗ ಜೀವಂತ…!

ಕಣ್ಣೂರು : ಕೇರಳದ ಕಣ್ಣೂರಿನ 67 ವರ್ಷದ ವ್ಯಕ್ತಿಯೊಬ್ಬರು ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದ ವ್ಯಕ್ತಿಯೊಬ್ಬರು ಸೋಮವಾರ ತಡರಾತ್ರಿ ಶವಾಗಾರದಲ್ಲಿ ಜೀವಂತವಾಗಿರುವುದು ಕಂಡುಬಂದಿದೆ…! ಕಣ್ಣೂರಿನ ಪಚ್ಚಪೊಯಿಕಾ ಮೂಲದ ವೆಳ್ಳುವಕ್ಕಂಡಿ ಪವಿತ್ರನ್ ಎಂದು ಗುರುತಿಸಲಾದ ವ್ಯಕ್ತಿಯನ್ನು ಪಾರ್ಶ್ವವಾಯು ಮತ್ತು ಉಸಿರಾಟದ ಸಮಸ್ಯೆಗಳ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೆಂಟಿಲೇಟರ್‌ನಲ್ಲಿ ಇರಿಸಲಾಗಿದ್ದರೂ, ಅವರ ಸ್ಥಿತಿಯು ಹದಗೆಟ್ಟಿತು, ಅರೋಗ್ಯ ಸುಧಾರಣೆಯಾಗದ … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 2 ದಿನ ಮಳೆಯ ಸಾಧ್ಯತೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಪರಿಚಲನೆ ಏರ್ಪಟ್ಟಿದ್ದು, ರಾಜ್ಯದಲ್ಲಿ ಎರಡು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಆಗ್ನೇಯ ಮತ್ತು ನೈರುತ್ಯ ಬಂಗಾಳ ಕೊಲ್ಲಿಯ ಮೇಲೆ ಚಂಡಮಾರುತದ ಪರಿಚಲನೆಯ ಇದ್ದು, ಸಮುದ್ರ ಮಟ್ಟದಿಂದ 3.1 ಕಿ.ಮೀ.ವರೆಗೆ ವಿಸ್ತರಿಸಿದೆ. ಜನವರಿ 13 ಮತ್ತು 14ರಂದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ … Continued