ಕೊರೊನಾ ಏರಿಕೆ ಬೆನ್ನಲ್ಲೇ ಹೊಸ ಮಾರ್ಗಸೂಚಿ ಜಾರಿಗೆ

ಬೆಂಗಳೂರು: ರಾಜ್ಯದಲ್ಲಿ ಹಾಗೂ ಬೆಂಗಳೂರಿನಲ್ಲಿ ನಿರೀಕ್ಷೆಗೂ ಕೊರೊನಾ ಸೋಂಕು ವೇಗವಾಗಿ ಏರಿಕೆಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ. ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲೆ ಕಚೇರಿಗಳು, ವಿದ್ಯಾಸಂಸ್ಥೆ, ಕಾಲೇಜುಗಳು ಹಾಗೂ ಅಪಾರ್ಮೆಂಟ್‍ಗಳಲ್ಲಿ ಕೋವಿಡ್-19 ಪರೀಕ್ಷೆ, ಐಸೋಲೇಷನ್, ಚಿಕಿತ್ಸೆ ಹಾಗೂ ಕ್ವಾರಂಟೈನ್‍ಗೆ ಸಂಬಂಧಿಸಿದಂತೆ ಪರಿಷ್ಕೃತ ಮಾರ್ಗಸೂಚಿ ಹೊರಡಿಸಿದೆ. ಅಪಾರ್ಟ್‍ಮೆಂಟ್‍ಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೆಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. … Continued

ಪಠ್ಯದಲ್ಲಿ ಕನಕದಾಸರ ಜೀವನ ಚರಿತ್ರೆ ಈ ಹಿಂದಿನಂತೆಯೇ ಪ್ರಕಟಿಸಲು ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು: ದಾಸ ಶ್ರೇಷ್ಠ ಕನಕದಾಸರ ಜೀವನ ಚರಿತ್ರೆಯನ್ನು ಶಾಲಾ ಪಠ್ಯದಲ್ಲಿ ಈ ಹಿಂದೆ ಇದ್ದಂತ್ತೆಯೇ ಮುಂದುವರೆಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಕಾಗಿನೆಲೆಯ ಕನಕ ಗುರುಪೀಠದ ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ನಿನ್ನೆ, ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಮನವಿ ನೀಡಿದ್ದ ಬೆನ್ನಲ್ಲೇ ಮುಖ್ಯಮಂತ್ರಿ ಬೊಮ್ಮಾಯಿ ಇಂದು, ಮಂಗಳವಾರ ಪಠ್ಯ ಪುಸ್ತಕದಲ್ಲಿ … Continued

ಕರ್ನಾಟಕದ ಕರಾವಳಿಯಲ್ಲಿ ಇನ್ನೂ ಎರಡು ದಿನ ಭಾರೀ ಮಳೆ: ಕರಾವಳಿಗೆ ಆರೆಂಜ್ ಅಲರ್ಟ್, ಉತ್ತರ ಕರ್ನಾಟಕಕ್ಕೆ ಹಳದಿ​ ಅಲರ್ಟ್​ ಘೋಷಣೆ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಮಳೆ ಜೋರಾಗಿ ಸುರಿಯುತ್ತಿದ್ದು, ಮಲೆನಾಡಿನಲ್ಲೂ ಕೃಷಿ ಚಟುವಟಿಕೆಗಳು ಚುರುಕುಗೊಂಡಿವೆ. ಇಂದಿನಿಂದ 2 ದಿನಗಳ ಕಾಲ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಜಿಲ್ಲೆಗಳಲ್ಲಿ ಮಳೆ ಮುಂದುವರೆಯುವ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಜೋರು ಮಳೆ … Continued

ಕರ್ನಾಟಕದಲ್ಲಿ ಶುಕ್ರವಾರ 816 ಮಂದಿಗೆ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದ್ದು, ಸಾವಿನ ಪ್ರಕರಣ ಶೂನ್ಯವಾಗಿದೆ. ಕಳೆದ 24 ಗಂಟೆಯಲ್ಲಿ 816 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಇದೇವೇಳೆ 703 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಈ ಮೂಲಕ ಇದುವರೆಗೆ 39,19,155 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು 22,527 ಮಂದಿಯನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. … Continued

ವೃತ್ತಿಪರ ಕೋರ್ಸ್‌ಗಳ ಪ್ರವೇಶ: ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಒಪ್ಪಿಗೆ

ಬೆಂಗಳೂರು: ಇಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶ ಶುಲ್ಕವನ್ನು ಈ ವರ್ಷ ಶೇಕಡಾ 10ರಷ್ಟು ಹೆಚ್ಚಿಸಲು ಉನ್ನತ ಶಿಕ್ಷಣ ಇಲಾಖೆ ಒಪ್ಪಿಗೆ ನೀಡಿದೆ. ಖಾಸಗಿ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳ ಒಕ್ಕೂಟದ ಜೊತೆ ಇಂದು, ಬುಧವಾರ ಸಭೆ ನಡೆಸಿದ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ … Continued

ಉಕ್ರೇನ್‌ನಲ್ಲಿ ಮೃತಪಟ್ಟಿದ್ದ ನವೀನ್ ಗ್ಯಾನ ಗೌಡರ್ ಕುಟುಂಬದವರನ್ನು ಭೇಟಿಯಾದ ಪ್ರಧಾನಿ ಮೋದಿ

ಬೆಂಗಳೂರು : ಕೊಮ್ಮಘಟ್ಟದಲ್ಲಿ ನಡೆದ ಸಮಾವೇಶದ ವೇದಿಕೆಯ ಹಿಂಭಾಗದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉಕ್ರೇನ್ ನಲ್ಲಿ ಮೃತಪಟ್ಟ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಗ್ಯಾನ ಗೌಡರ್ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ನವೀನ್ ಅವರ ತಂದೆ ಶೇಖರ ಗೌಡ, ತಾಯಿ, ಸಹೋದರ ಅವರನ್ನು ಪ್ರಧಾನಿ ಭೇಟಿಯಾಗಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ವೇಳೆ ಹಾಜರಿದ್ದರು. … Continued

ದ್ವಿತೀಯ ಪಿಯು ಫಲಿತಾಂಶ: ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮೊದಲ ಸ್ಥಾನ ಪಡೆದವರು

ಬೆಂಗಳೂರು: ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್‌ 2021-2022ನೇ ಸಾಲಿನ ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಅನೇಕ ವಿದ್ಯಾರ್ಥಿಗಳು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಬೆಂಗಳೂರು: ಕರ್ನಾಟಕ ಪಿಯು ಬೋರ್ಡ್‌ 2021-2022ನೇ ಸಾಲಿನ ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದು, ಶೇ.61.88ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಸೀಮ್ರಾನ್ ಶೇಷರಾವ್ … Continued

ನಾಳೆ ದ್ವಿತೀಯ ಪಿಯು ಫಲಿತಾಂಶ ಪ್ರಕಟ: ಸಚಿವ ನಾಗೇಶ

ಬೆಂಗಳೂರು: ದ್ವಿತೀಯ ಪಿಯು ಫಲಿತಾಂಶವನ್ನು ನಾಳೆ, ಶನಿವಾರ (ಜೂನ್ 18) ಬೆಳಿಗ್ಗೆ 11 ಗಂಟೆಗೆ ಪ್ರಕಟಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ ತಿಳಿಸಿದ್ದಾರೆ. ಈ ಕುರಿತು ಶಿಕ್ಷಣ ಸಚಿವರು ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು ನಾಳೆ (ಜೂನ್ 18) ಪ್ರಕಟಿಸಲಾಗುತ್ತದೆ.ವಿದ್ಯಾರ್ಥಿಗಳಿಗೆ ಶುಭಾಶಯಗಳು’ ಎಂದು ಬರೆದಿದ್ದಾರೆ. … Continued

ಸರ್ಕಾರಿ ಅಧಿಕಾರಿಗಳಿಗೆ ಬೆಳ್ಳಂಬೆಳಿಗ್ಗೆ ಎಸಿಬಿ ಶಾಕ್‌ : ರಾಜ್ಯದ 80 ಕಡೆ ಏಕಕಾಲದಲ್ಲಿ ದಾಳಿ

ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ರಾಜ್ಯ ಸರ್ಕಾರದ 21 ಅಧಿಕಾರಿಗಳ ಮೇಲೆ ಶುಕ್ರವಾರ ಬೆಳ್ಳಂಬೆಳಿಗ್ಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ಮಾಡಿದ್ದು, 80 ಸ್ಥಳಗಳಲ್ಲಿ ಶೋಧ ನಡೆಸುತ್ತಿದೆ. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ 21 ಜನರ ವಿರುದ್ಧ ಮೊಕದ್ದಮೆ ದಾಖಲಿಸಿದ್ದು, ಆರೋಪಿತರ ಮನೆ, ಕಚೇರಿಗಳು, ಅವರ ಸಂಬಂಧಿಕರು ಮತ್ತು ಆಪ್ತರ ಮನೆಗಳ … Continued

ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಹೆಚ್ಚಳ: 833 ಮಂದಿಗೆ ಹೊಸದಾಗಿ ಕೊರೊನಾ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಇಂದು, ಗುರುವಾರ ಇನ್ನಷ್ಟು ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 833 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 458 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಹಾಗೂ ಪಾಸಿಟಿವಿಟಿ ರೇಟ್ ಶೇ. 3.47ಕ್ಕೆ ಏರಿಕೆಯಾಗಿದೆ. ರಾಜ್ಯದ ಸಕ್ರಿಯ ಪ್ರಕರಣಗಳ ಸಂಖ್ಯೆ 4,371ಕ್ಕೆ … Continued