ಕರ್ನಾಟಕಕ್ಕೆ ಜೂನ್ 2ರಂದು ಮುಂಗಾರು ಪ್ರವೇಶ ಸಾಧ್ಯತೆ

ಬೆಂಗಳೂರು: ಜೂನ್ 2ರಂದು ರಾಜ್ಯದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಪ್ರದೇಶಗಳಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ವಾಡಿಕೆಗಿಂತ ಮೂರು ದಿನ ಮುಂಚಿತವಾಗಿ ಮಾನ್ಸೂನ್ ಮೇ 29 ರಂದು ಕೇರಳವನ್ನು ಪ್ರವೇಶಿಸಿದೆ. ಸಾಮಾನ್ಯವಾಗಿ ಮಾನ್ಸೂನ್ ಕೇರಳ ಪ್ರವೇಶಿಸಿದ ಮೂರರಿಂದ ನಾಲ್ಕು ದಿನಗಳ ನಂತರ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆಯಾಗುತ್ತದೆ … Continued

ವಿಧಾನ ಪರಿಷತ್​ಗೆ ಸವದಿ, ನಾರಾಯಣಸ್ವಾಮಿ ಸೇರಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ನಡೆದಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು. ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಏಳು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಮೂರು ಪಕ್ಷಗಳೂ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮೇ 24ರಂದು ನಾಮಪತ್ರ ಸಲ್ಲಿಸಲು … Continued

ರಾಜ್ಯ ಸಭಾ ಚುನಾವಣೆ: ಜೈರಾಮ ರಮೇಶ್ ಕಾಂಗ್ರೆಸ್ ಅಭ್ಯರ್ಥಿ

ಬೆಂಗಳೂರು: ರಾಜ್ಯಸಭೆಗೆ ನಡೆಯಲಿರುವ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೇಂದ್ರದ ಮಾಜಿ ಸಚಿವ ಜೈರಾಂ ರಮೇಶ್ ಆಯ್ಕೆಯಾಗಿದ್ದಾರೆ. ಮೇ 30ರಂದು ಜೈರಾಂ ರಮೇಶ್ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸಿರುವ ಜೈರಾಂ ರಮೇಶ್‌ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹಾಗೂ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಎಐಸಿಸಿಯಿಂದ ಟಿಕೆಟ್‌ ಖಚಿತವಾದ ಬಳಿಕ ವರಿಷ್ಠರ ನಿರ್ದೇಶನದ … Continued

ಬಿಜೆಪಿ ಪರಿಷತ್‌ ಅಭ್ಯರ್ಥಿಗಳ ಪಟ್ಟಿ ಪ್ರಕಟ: ವಿಜಯೇಂದ್ರಗೆ ನಿರಾಸೆ

ಬೆಂಗಳೂರು: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಬಿಜೆಪಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಕೊನೆಗೂ ಅಧಿಕೃತವಾಗಿ ಹೊರಬಿದ್ದಿದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ವಿಜಯೇಂದ್ರಗೆ ಟಿಕೆಟ್ ನಿರಾಕರಿಸಲಾಗಿದ್ದು, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿಗೆ ಲಿಂಗಾಯತರ ಕೋಟದಡಿಯಲ್ಲಿ ಪರಿಷತ್‌ ಟಿಕೆಟ್‌ ದೊರೆತಿದೆ. ಹಾಲಿ ಪರಿಷತ್‌ ಸದಸ್ಯರಾಗಿರುವ ಲಕ್ಷ್ಮಣ ಸವದಿಗೆ ಮತ್ತೊಂದು ಅವಕಾಶ ನೀಡಿರುವ ಹೈಕಮಾಂಡ್‌, ಹೇಮಲತಾ … Continued

ಪರಿಷತ್ ಚುನಾವಣೆ : ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಿಸಿದ ಜೆಡಿಎಸ್‌

ಬೆಂಗಳೂರು: ಜೆಡಿಎಸ್ ಅಭ್ಯರ್ಥಿಗಳ ವಿಧಾನ ಪರಿಷತ್ತಿನ ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹಾಗೂ ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಅವರಿಗೆ ಟಿಕೆಟ್ ನೀಡಲಾಗಿದೆ. ಜೆಡಿಎಸ್‌ ಪಕ್ಷದಿಂದ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶ್ರೀಶೈಲ ಅವರಿಗೆ ಟಿಕೆಟ್ ನೀಡಲಾಗಿದೆ. ಹೊರಟ್ಟಿ ಬಿಜೆಪಿ ಸೇರ್ಪಡೆಯಾದ … Continued

ಪರಿಷತ್ ಚುನಾವಣೆ‌ : ಮೂರೂ ಪಕ್ಷಗಳಿಂದ ನಾಳೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಸಾಧ್ಯತೆ, ಅಚ್ಚರಿ ಅಭ್ಯರ್ಥಿಯೋ? ಹೈಕಮಾಂಡ್‌ಗೆ ಕಳುಹಿಸಿದ ಪಟ್ಟಿಗೆ ಮಾನ್ಯತೆಯೋ..?

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ವಿಧಾನಪರಿಷತ್‍ನ ಏಳು ಸ್ಥಾನಗಳಿಗೆ ನಡೆಯುತ್ತಿರುವ ದ್ವೈವಾರ್ಷಿಕ ಚುನಾವಣೆಗೆ ನಾಮಪತ್ರ ಸಲ್ಲಿಸಲು ಇದೇ 24 ಕೊನೆಯ ದಿನವಾಗಿದ್ದರೂ, ಯಾವುದೇ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಇದುವರೆಗೆ ಪ್ರಕಟಿಸಿಲ್ಲ. ಮೇ 17ರಿಂದಲೇ ನಾಮಪತ್ರ ಸಲ್ಲಿಕೆಗೆ ಅವಕಾಶವಿದ್ದರೂ ಈತನಕ ಯಾವೊಬ್ಬ ಅಭ್ಯರ್ಥಿಯೂ ನಾಮಪತ್ರ ಸಲ್ಲಿಸಿಲ್ಲ. ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ತಮ್ಮ ಅಭ್ಯರ್ಥಿಗಳನ್ನು … Continued

ಪಿಯು ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ಪಾಲನೆ ಕಡ್ಡಾಯ, ಜೂನ್‌​ 9ಕ್ಕೆ ಕಾಲೇಜು ಆರಂಭ- ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಹಿಜಬ್ ವಿವಾದ ಹಿನ್ನಲೆಯಲ್ಲಿ ಪಿಯುಸಿ ಬೋರ್ಡ್ ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಈ ವರ್ಷದಿಂದ ಕಡ್ಡಾಯವಾಗಿ ಸಮವಸ್ತ್ರ ನಿಯಮ ಪಾಲನೆ ಮಾಡಬೇಕು ಎಂದು ಪಿಯು ಬೋರ್ಡ್‌ ಎಲ್ಲ ಕಾಲೇಜುಗಳಿಗೆ ಸೂಚಿಸಿದೆ.2022-23ನೇ‌ ಸಾಲಿನ‌ ಶೈಕ್ಷಣಿಕ ವರ್ಷಕ್ಕೆ ಪಿಯು ಬೋರ್ಡ್‌ ಕಾಲೇಜು ಪ್ರವೇಶ ಸಂಬಂಧ 128 ಪುಟಗಳ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಪದವಿಪೂರ್ವ ಶಿಕ್ಷಣ ಇಲಾಖಾ ವ್ಯಾಪ್ತಿಯಲ್ಲಿನ ಪಿಯು … Continued

ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ ಮಲ್ಕಾಪುರೆ ನೇಮಕ

ಬೆಂಗಳೂರು: ಬಸವರಾಜ ಹೊರಟ್ಟಿ ಅವರು ವಿಧಾನ ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ವಿಧಾನಪರಿಷತ್ ಹಂಗಾಮಿ ಸಭಾಪತಿಯಾಗಿ ಬಿಜೆಪಿಯ ಪರಿಷತ್‌ ಸದಸ್ಯ ರಘುನಾಥರಾವ್ ಮಲ್ಕಾಪುರೆ ಅವರನ್ನು ನಿಯುಕ್ತಿ ಮಾಡಲಾಗಿದೆ. ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರು ಬಿಜೆಪಿ ಸೇರ್ಪಡೆಯಾಗಲಿರುವ ಕಾರಣದಿಂದ ರಾಜೀನಾಮೆ ನೀಡಿದ್ದರು. ವಿಧಾನ ಪರಿಷತ್ ಹಂಗಾಮಿ ಸಭಾಪತಿಯಾಗಿ ರಘುನಾಥ ರಾವ್ ಮಲ್ಕಾಪುರೆ ಅವರು ಇಂದು, ಮಂಗಳವಾರ … Continued

ರಾಜ್ಯದಲ್ಲಿ ಇನ್ನೂ ನಾಲ್ಕೈದು ದಿನ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ಅಸಾನಿ ಚಂಡಮಾರುತ ಕ್ಷೀಣವಾಗಿದ್ದರೂ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಕಳೆದ ಎರಡು ವಾರಗಳಿಂದ ರಾಜ್ಯದ ಒಳನಾಡಿನಲ್ಲಿ ಬೀಳುತ್ತಿರುವ ಮಳೆ ಸದ್ಯಕ್ಕೆ ನಿಲ್ಲುವ ಲಕ್ಷಣಗಳು ಗೋಚರಿಸುತ್ತಿಲ್ಲ. ಕಳೆದ ನಾಲ್ಕು ದಿನಗಳಿಂದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಭಾಗಗಳಲ್ಲಿ ಜಿಟಿಜಿಟಿ ಮಳೆ ಬೀಳುತ್ತಿದ್ದು, ಮೋಡ ಮುಸುಕಿದ … Continued

ಸಂಪುಟ ವಿಸ್ತರಣೆ: ಅಮಿತ್ ಶಾ ಭೇಟಿ ಮಾಡಿದ ಸಿಎಂ, ಯಾವಾಗ ಏನುಬೇಕಾದರೂ ಆಗಬಹುದು ಎಂದ ಬೊಮ್ಮಾಯಿ

ನವದೆಹಲಿ: ರಾಜ್ಯದ ಸಚಿವ ಸಂಪುಟದ ಕುರಿತು ಕೇಂದ್ರ ಗೃಹ ಸಚಿವ ಅಮಿತ ಶಾ ಅವರ ಜೊತೆ ಸಮಾಲೋಚನೆ ನಡೆಸಲಾಗಿದೆ. ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಯಾವಾಗ ಏನೂ ಬೇಕಾದರೂ ಆಗಬಹುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಮಿಕವಾಗಿ ಹೇಳಿದ್ದಾರೆ. ನವದೆಹಲಿಯಲ್ಲಿ ಇಂದು, ಬುಧವಾರ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ ಬಳಿಕ … Continued