ಎಸ್ಎಸ್ಎಲ್‌ಸಿ (SSLC), ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು 2024-25 ನೇ ದ್ವೀತಿಯ ಪಿಯುಸಿ ಮತ್ತು ಎಸ್ಎಸ್ಎಲ್‌ಸಿ ವಾರ್ಷಿಕ ಪರೀಕ್ಷೆ-1ರ ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಪ್ರಕಟಿಸಿದ ತಾತ್ಕಾಲಿಕ ವೇಳಾಪಟ್ಟಿಯ ಪ್ರಕಾರ, ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 19 ರ ವರೆಗೆ ಹಾಗೂ ಎಸ್ಎಸ್ಎಲ್‌ಸಿ ಪರೀಕ್ಷೆಗಳನ್ನು … Continued

ಫೆಂಗಲ್‌ ಚಂಡಮಾರುತ : ಭಾರಿ ಮಳೆ ಮುನ್ಸೂಚನೆ ; ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಡಿ.3 ರಂದು ರಜೆ ಘೋಷಣೆ

ಬೆಂಗಳೂರು: ಫೆಂಗಲ್ ಚಂಡಮಾರುತದ ಪರಿಣಾಮ ಇನ್ನೂ ಎರಡು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಭರ್ಜರಿ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ಡಿ.3 ರಂದು ರಜೆ ಘೋಷಣೆ ಮಾಡಲಾಗಿದೆ. ಮೈಸೂರು, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ, ಉಡುಪಿ, ಕೊಡಗು … Continued

ಫೆಂಗಲ್‌ ಚಂಡಮಾರುತದ ಪ್ರಭಾವ ; ಕರ್ನಾಟಕದಲ್ಲಿ 3 ದಿನ ಮಳೆ ; ಹಲವು ಜಿಲ್ಲೆಗಳ ಶಾಲಾ ಕಾಲೇಜಿಗೆ ಇಂದು ರಜೆ ಘೋಷಣೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಫೆಂಗಲ್‌ ಚಂಡಮಾರುತದಿಂದ ರಾಜ್ಯದಲ್ಲಿ ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಜೋರಾಗಿ ಬಳೆ ಬೀಳುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ರಾಜ್ಯದ ಐದು ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಯಾವ್ಯಾವ ಜಿಲ್ಲೆಗಳಿಗೆ ಹೆಚ್ಚು ಮಳೆ ಚಂಡಮಾರುತದ ಹಿನ್ನೆಲೆಯಲ್ಲಿ ಡಿ. 2 ಮತ್ತು 3 ರಂದು 35 … Continued

ಫೆಂಗಲ್ ಚಂಡಮಾರುತದ ಪ್ರಭಾವ : ಕರ್ನಾಟಕದ 15 ಜಿಲ್ಲೆಗಳಲ್ಲಿ ಡಿ.1ರಿಂದ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಮೇಲೆ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿ ತಮಿಳುನಾಡಿಗೆ ಅಪ್ಪಳಿಸಲಿರುವ ಚಂಡಮಾರುತ ‘ಫೆಂಗಲ್’ (Cyclone Fengal) ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆಯೂ ಆಗಲಿದೆ. ಈ ಚಂಡಮಾರುತದ ಪ್ರಭಾವದಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ. ಅದರಲ್ಲಿಯೂ ವಿಶೇಷವಾಗಿ ದಕಿಷಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚು … Continued

ಒಂದು ತಿಂಗಳಲ್ಲಿ 5 ಕೊಲೆ ; ರೈಲು ಪ್ರಯಾಣಿಕರೇ ಟಾರ್ಗೆಟ್‌ : ಊರಿಂದ ಊರಿಗೆ ಅಲೆಯುತ್ತಿದ್ದ ಈತನನ್ನು ಪೊಲೀಸರು ಬಂಧಿಸಿದ್ದೇ ರೋಚಕ…!

ಅಹಮದಾಬಾದ್‌ : ಒಂದು ತಿಂಗಳ ಅಂತರದಲ್ಲಿ ಐವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ವ್ಯಕ್ತಿಯನ್ನು ಪೊಲೀಸರು ಗುಜರಾತಿನಲ್ಲಿ ಬಂಧಿಸಿದ್ದಾರೆ. ರೈಲು ಪ್ರಯಾಣಿಕರನ್ನೇ ಟಾರ್ಗೆಟ್‌ ಮಾಡಿ ಅವರನ್ನು ಕೊಲೆ ಮಾಡಿ ಪರಾರಿಯಾಗಿ ಊರಿಂದ ಊರಿಗೆ ಸಂಚರಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದೇ ರೋಚಕ. ಬಂಧಿತನನ್ನು ಹರಿಯಾಣದ ರೋಟಕ್‌ ನಿವಾಸಿ ರಾಹುಲ್‌ ಕರವೀರ ಜಾಟ್‌ ಎಂದು ಗುರುತಿಸಲಾಗಿದೆ. ಗುಜರಾತ್‌ನಲ್ಲಿ … Continued

ಬೆಚ್ಚಿ ಬೀಳಿಸಿದ ಘಟನೆ | ಆಸ್ಪತ್ರೆಯ ಟಾಯ್ಲೆಟ್‌ ಕಮೋಡದಲ್ಲಿ ನವಜಾತ ಶಿಶು ಹಾಕಿ ಫ್ಲಶ್‌ ಮಾಡಿದರು…!

ರಾಮನಗರ: ಆಘಾತಕಾರಿ ಘಟನೆಯೊಂದರಲ್ಲಿ ರಾಜ್ಯದ ರಾಮನಗರ ಜಿಲ್ಲೆಯ ಹಾರೋಹಳ್ಳಿ (Harohalli) ಸಮೀಪದ ಆಸ್ಪತ್ರೆಯೊಂದರ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆಯಾದ ಬಗ್ಗೆ ವರದಿಯಾಗಿದೆ. ನವಜಾತ ಶಿಶುವನ್ನು ಆಸ್ಪತ್ರೆಯ ಟಾಯ್ಲೆಟ್‌ನಲ್ಲಿ ಹಾಕಿ ಫ್ಲಶ್ ಮಾಡಲಾಗಿದೆ ಎಂದು ಹೇಳಲಾಗಿದೆ. ಸ್ವಚ್ಛತೆ ಸಂಬಂಧ ಆಸ್ಪತ್ರೆಯಲ್ಲಿ ಟಾಯ್ಲೆಟ್ ಪರಿಶೀಲನೆ ಮಾಡುವ ವೇಳೆ ಈ ನವಜಾತ ಶಿಶುವಿನ ದೇಹ ಪತ್ತೆಯಾಗಿದೆ. ಆಸ್ಪತ್ರೆಯ … Continued

ಬಂಗಾಳಕೊಲ್ಲಿಯಲ್ಲಿ ʼಫೆಂಗಲ್‌ʼ ಚಂಡಮಾರುತ ; ಕರ್ನಾಟಕದ ಹಲವು ಜಿಲ್ಲೆಗಳಲ್ಲಿ 3-4 ದಿನ ಮಳೆ, ಜೋರಾದ ಚಳಿಯ ಸಾಧ್ಯತೆ

ಬೆಂಗಳೂರು: ವಾಯುಭಾರ ಕುಸಿತದಿಂದ ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ʼಫೆಂಗಲ್ʼ ಚಂಡಮಾರುತದ ಪರಿಣಾಮ ತಮಿಳನಾಡಿನಲ್ಲಿ ಡಿಸೆಂಬರ್‌ 1ರವರೆಗೂ ಭಾರಿ ಮಳೆ ಮುಂದುವರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ. ನವೆಂಬರ್‌ 29ರಂದು ಚಂಡಮಾರುತ ತೀರಕ್ಕೆ ಅಪ್ಪಳಿಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಬುಧವಾರವೂ ಭಾರಿ ಮಳೆ ಹಿನ್ನೆಲೆಯಲ್ಲಿ ತಮಿಳುನಾಡಿನ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಗುರುವಾರವೂ … Continued

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿಸುದ್ದಿ : ತುಟ್ಟಿ ಭತ್ಯೆ ಹೆಚ್ಚಳ ಮಾಡಿದ ಸರ್ಕಾರ

ಬೆಂಗಳೂರು: ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು ಹೆಚ್ಚಳ ಮಾಡಿದೆ. 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಅಡಿಯಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರುಗಳಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರ (DA) 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% … Continued

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮದಿಂದ ಹಿಂದೂ ಮಹಾಸಾಗರದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗಿದ್ದು, ಿದರ ಪರಿನಾಮದಿಂದ ಕರ್ನಾಟಕದಲ್ಲಿ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹಿಂದೂ ಮಹಾಸಾಗರದಲ್ಲಿ ಚಂಡಮಾರುತ ಪರಿಚಲನೆ ಉಂಟಾಗಿದೆ. ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಪ್ರದೇಶವು ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಕರ್ನಾಟಕದ ದಕ್ಷಿಣ ಒಳನಾಡಿನ … Continued

ರದ್ದಾದವರಿಗೆ ಅದೇ ಐಡಿಯಲ್ಲಿ 7 ದಿನದೊಳಗೆ ಬಿಪಿಎಲ್ ಕಾರ್ಡ್‌ : ಸಚಿವ ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಏಳು ದಿನದೊಳಗೆ ಅದೇ ಐಡಿಯಲ್ಲಿ ಲಾಗಿನ್‌ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ. ಬಿಪಿಎಲ್‌ ಕಾರ್ಡ್‌ ರದ್ದತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ. 7 ದಿನದೊಳಗೆ ಬಿಪಿಎಲ್ … Continued