ರದ್ದಾದವರಿಗೆ ಅದೇ ಐಡಿಯಲ್ಲಿ 7 ದಿನದೊಳಗೆ ಬಿಪಿಎಲ್ ಕಾರ್ಡ್‌ : ಸಚಿವ ಮುನಿಯಪ್ಪ

ಬೆಂಗಳೂರು : ಬಿಪಿಎಲ್ ಕಾರ್ಡ್‌ ರದ್ದಾದವರಿಗೆ ಏಳು ದಿನದೊಳಗೆ ಅದೇ ಐಡಿಯಲ್ಲಿ ಲಾಗಿನ್‌ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಆಹಾರ ಖಾತೆಯ ಸಚಿವ ಮುನಿಯಪ್ಪ ಹೇಳಿದ್ದಾರೆ. ಬಿಪಿಎಲ್‌ ಕಾರ್ಡ್‌ ರದ್ದತಿಗೆ ಸಂಬಂಧಿಸಿದಂತೆ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ರೇಷನ್ ಕಾರ್ಡ್ ಗೊಂದಲಕ್ಕೆ ಅಧಿಕಾರಿಗಳಲ್ಲ, ನಾನೇ ಹೊಣೆ. 7 ದಿನದೊಳಗೆ ಬಿಪಿಎಲ್ … Continued

ಲೋಕಾಯುಕ್ತ ದಾಳಿ: ಟೌನ್​ ಪ್ಲಾನಿಂಗ್ ನಿರ್ದೇಶಕರ ಮನೆಯಲ್ಲಿ ಸಿಕ್ಕ ಕೆಜಿಗಟ್ಟಲೆ ಚಿನ್ನ-ಬೆಳ್ಳಿ ನೋಡಿ ದಂಗುಬಡಿದ ಅಧಿಕಾರಿಗಳು…!

ಬೆಂಗಳೂರು: ಇಂದು, ಗುರುವಾರ ಬೆಳಿಗ್ಗೆ ಬೆಂಗಳೂರು ರಾಜ್ಯದ 4 ಸ್ಥಳಗಳ 25 ಕಡೆ ದಾಳಿ ಲೋಕಾಯುಕ್ತ ಅಧಿಕಾರಿಗಳು (Lokayukta Raid) ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪವಿದ್ದ ಅಧಿಕಾರಿಗಳ ಮನೆ ಹಾಗೂ ಕಚೇರಿಗಳಿಗೆ ದಾಳಿ ನಡೆಸಲಾಗಿದೆ. ಬೆಂಗಳೂರಿನಲ್ಲಿ ಟೌನ್​ ಪ್ಲಾನಿಂಗ್ ನಿರ್ದೇಶಕ ತಿಪ್ಪೇಸ್ವಾಮಿ ಮನೆ ಮೇಲೆ ದಾಳಿ ನಡೆಸಿದ ವೇಳೆ ಕಂಡುಬಂದ ಅಕ್ರಮ ಆಸ್ತಿಪಾಸ್ತಿ ಕಂಡು ಅಧಿಕಾರಿಗಳೇ ದಂಗಾಗಿದ್ದಾರೆ. … Continued

ಮಾಜಿ ಸಚಿವ ಮನೋಹರ ತಹಶೀಲ್ದಾರ ನಿಧನ

ಬೆಂಗಳೂರು: ಮಾಜಿ ಸಚಿವ ಮನೋಹರ ತಹಶೀಲ್ದಾರ (78) ಇಂದು, ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಾಮರಾಜ ಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿಅವರು ನಿಧನರಾಗಿದ್ದಾರೆ. 2015ರಲ್ಲಿ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಅಬಕಾರಿ ಸಚಿವರಾಗಿದ್ದ ಮನೋಹರ ತಹಶೀಲ್ದಾರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದ ಕಾರಣ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಯಾಗಿದ್ದರು. ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ತೊರೆದು … Continued

ವೀಡಿಯೊ..| ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ; ಸಭೆಯಲ್ಲಿ ಮಧು ಬಂಗಾಪ್ಪಗೆ ಮುಜುಗರ : ಕ್ರಮಕ್ಕೆ ಸೂಚನೆ

ಬೆಂಗಳೂರು: ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಗೆಪಾಟಲಿಗೀಡಾದ ಘಟನೆ ನಡೆದಿದೆ. ಆನ್ಲೈನ್ ಸಂವಾದ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ವರ್ಚುವಲ್ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತೀವ್ರ ಮುಜುಗರಕ್ಕೆ ಒಳಗಾದ ಘಟನೆ ನಡೆದಿದೆ. ವಿದ್ಯಾರ್ಥಿಗಳ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೋರ್ವ ಶಿಕ್ಷಣ ಸಚಿವ … Continued

ಕರ್ನಾಟಕದಲ್ಲಿ ಮುಂದಿನ 2 ವಾರ ಮತ್ತೆ ಮಳೆ ; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಮುಂದಿನ ಎರಡು ವಾರ ರಾಜ್ಯಾದ್ಯಂತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 25ರ ವರೆಗೂ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಅಲ್ಲದೆ, ಬಳ್ಳಾರಿ, ದಾವಣಗೆರೆ, … Continued

ವಕ್ಫ್ ಆಸ್ತಿ ವಿವಾದ: ನೈಜ ವರದಿ ಸಂಗ್ರಹಿಸಲು 3 ತಂಡ ರಚಿಸಿದ ಬಿಜೆಪಿ

ಬೆಂಗಳೂರು: ರಾಜ್ಯಾದ್ಯಂತ ರೈತರು ಹಾಗೂ ಮಠಗಳ ಪಹಣಿಯಲ್ಲಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ನೈಜ ವರದಿಯನ್ನು ಸಂಗ್ರಹಿಸಲು ಪ್ರತಿಪಕ್ಷ ಬಿಜೆಪಿಯಿಂದ ‘ನಮ್ಮ ಭೂಮಿ- ನಮ್ಮ ಹಕ್ಕು’ ಘೋಷವಾಕ್ಯದಡಿ ಮೂರು ತಂಡಗಳನ್ನು ರಚಿಸಲಾಗಿದೆ. ಈ ತಂಡಗಳು ಆಯಾಯ ಜಿಲ್ಲಾ ಕೇಂದ್ರಗಳಿಗೆ ಭೇಟಿ ನೀಡಿ ಸರ್ಕಾರದಿಂದ ವಕ್ಫ್ ಆಸ್ತಿ ಎಂದು ನಮೂದಿಸಿರುವುದರ ಬಗ್ಗೆ ವಿಸ್ಕೃತ ವರದಿ ಸಂಗ್ರಹಿಸಲಿದ್ದಾರೆ. … Continued

ಕರ್ನಾಟಕದ 6 ಜಿಲ್ಲೆಗಳಲ್ಲಿ ಭರ್ಜರಿ ಮಳೆ ; ಹಲವು ಜಿಲ್ಲೆಗಳಲ್ಲಿ ಮಳೆ : ಮುನ್ಸೂಚನೆ

ಬೆಂಗಳೂರು: ಚಂಡಮಾರುತ ಪರಿಚಲನೆಯಿಂದಾಗಿ ಮುಂದಿನ 24 ಗಂಟೆಗಳು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಗುಡುಗು ಸಮೇತ ಮಳೆ ಬೀಳಲಿದೆ ಎಂಬ ಮುನ್ಸೂಚನೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಚಾಮರಾಜನಗರ, ರಾಮನಗರ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿ, … Continued

2025ರ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಪ್ರಕಟಿಸಿದ ರಾಜ್ಯ ಸರ್ಕಾರ; ಇಲ್ಲಿದೆ ಪಟ್ಟಿ

ಬೆಂಗಳೂರು: ರಾಜ್ಯ ಸರ್ಕಾರ 2025ರ ಸಾರ್ವತ್ರಿಕ (public holidays 2025) ಹಾಗೂ ಪರಿಮಿತ ರಜಾದಿನಗಳ (restricted holiday 2025) ಪಟ್ಟಿಯನ್ನು ಗುರುವಾರ ಪ್ರಕಟ ಮಾಡಿದೆ. ಎಂದಿನಂತೆ 2ನೇ ಮತ್ತು 4ನೇ ಶನಿವಾರ ಮತ್ತು ಭಾನುವಾರ ರಜೆ ಇರಲಿದೆ. ಇನ್ನು ಈ ಪಟ್ಟಿಯಲ್ಲಿ ಭಾನುವಾರಗಳಂದು ಬರುವ ಗಣರಾಜ್ಯೋತ್ಸವ (ಜ. 26), ಯುಗಾದಿ (ಮಾ. 30), ಮೊಹರಂನ ಕಡೆಯ … Continued

ಸಲ್ಮಾನ್ ಖಾನಗೆ ಜೀವ ಬೆದರಿಕೆ ಪ್ರಕರಣ ; ಮುಂಬೈ ಪೊಲೀಸರಿಂದ ರಾಯಚೂರಿನ ಯುವಕ ವಶಕ್ಕೆ

ಮುಂಬೈ : ಗ್ಯಾಂಗ್‌ಸ್ಟರ್‌ ಲಾರೆನ್ಸ್ ಬಿಷ್ಟೋಯಿ ಹೆಸರಲ್ಲಿ ನಟ ಸಲ್ಮಾನ್ ಖಾನ್‌ ಜೀವ ಬೆದರಿಕೆ ಹಾಕಿ 5 ಕೋಟಿ ರೂ.ಗಳಿಗೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಯಚೂರು ಜಿಲ್ಲೆಯ ಮಾನ್ವಿಯ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಬಿಷ್ಟೋಯಿ ಹೆಸರಲ್ಲಿ ಸಲ್ಮಾನ್ ಖಾನ್‌ ಗೆ ಬೆದರಿಕೆ ಹಾಕಿ ಬಂಧನಕ್ಕೆ ಒಳಗಾದ ಈ ವ್ಯಕ್ತಿಯನ್ನು … Continued

ಇಂದಿನಿಂದ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ : ದಕ್ಷಿಣ ಕರ್ನಾಟಕದಲ್ಲಿ ಜೋರು; ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ನವೆಂಬರ್‌ 13ರಿಂದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ನವೆಂಬರ್‌ 13ರಂದು ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಉಳಿದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತು ಕರಾವಳಿಯ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ … Continued