ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆ ತರಬೇತಿ ಕೋರ್ಸ್ ಶೀಘ್ರವೇ ಆರಂಭ: ಸಿಎಂ ಬೊಮ್ಮಾಯಿ

ಬೆಂಗಳೂರು: ಶಾಲಾ- ಕಾಲೇಜುಗಳ ಮಕ್ಕಳಿಗೆ ಶೀಘ್ರದಲ್ಲಿಯೇ ಆತ್ಮರಕ್ಷಣೆ ತರಬೇತಿ ಪ್ರಾರಂಭಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಮಾಜ ಕಲ್ಯಾಣ ಇಲಾಖೆ ಇಂದು, ಭಾನುವಾರ ವಿಧಾನಸೌಧದ ಮುಂಭಾಗದಲ್ಲಿ ಆಯೋಜನೆ ಮಾಡಿದ್ದ ‘ಓಬವ್ವ ಆತ್ಮ ರಕ್ಷಣಾ ಕಲೆ ತರಬೇತಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿರುವ ಪೊಲೀಸ್ ತರಬೇತಿ ಶಾಲೆಗಳನ್ನು ಬಳಸಿಕೊಂಡು ಶಾಲಾ-ಕಾಲೇಜುಗಳ ಹೆಣ್ಣು … Continued

ಕರ್ನಾಟಕದಲ್ಲಿ ಬಹುದಿನಗಳ ನಂತರ 10 ಸಾವಿರಕ್ಕಿಂತ ಕಡಿಮೆ ದೈನಂದಿನ ಕೊರೊನಾ ಸೋಂಕು ದಾಖಲು

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಭಾನುವಾರ ಬಹುದಿನಗಳ ನಂತರ ದೈನಂದಿನ ಕೊರೊನಾ ಸೋಂಕು 10 ಸಾವಿರಕ್ಕಿಂತ ಕಡಿಮೆ ದಾಖಲಾಗಿದೆ. ರಾಜ್ಯದಲ್ಲಿ ಇಂದು 8,425 ಹೊಸ ಸೋಂಕು ದಾಖಲಾಗಿದ್ದು, ಇದೇ ಸಮಯದಲ್ಲಿ 47 ಜನರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಇಂದು 19,800 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕಾರಾತ್ಮಕತೆ ದರ 6.51%ಕ್ಕೆ ಇಳಿದಿದೆ. ಒಟ್ಟು ರಾಜ್ಯದಲ್ಲಿ 97,781 ಸಕ್ರಿಯ … Continued

ಕರ್ನಾಟಕದಲ್ಲಿ ಶನಿವಾರ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆ..

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದ್ದು, ಶನಿವಾರ ಮತ್ತಷ್ಟು ಕಡಿಮೆಯಾಗಿದೆ. ಇಂದು ಹೊಸದಾಗಿ 12,009 ಕೊರೊನಾ ಸೋಂಕು ದಾಖಲಾಗಿದೆ. ಇದೇವೇಳೆ ರಾಜ್ಯದಲ್ಲಿ ಸೋಂಕಿಗೆ 50 ಜನರು ಮೃತಪಟ್ಟಿದ್ದಾರೆ ಹಾಗೂ 25,854 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ 1,09,203 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಮರಣ ಪ್ರಮಾಣ ಶೇ.0.41% ರಷ್ಟಿದೆ. ಪಾಸಿಟಿವಿಟಿ … Continued

ಕರ್ನಾಟಕದಲ್ಲಿ ಶುಕ್ರವಾರ ಸೋಂಕು ಮತ್ತಷ್ಟು ಇಳಿಕೆ, 53 ಜನರು ಸಾವು

ಬೆಂಗಳೂರು: ಕರ್ನಾಟಕದಲ್ಲಿ ಶುಕ್ರವಾರ ದೈನಂದಿನ ಕೊರೊನಾ ಸೋಂಕು ಮತ್ತಷ್ಟು ಇಳಿಕೆಯಾಗಿದೆ. ಇಂದು, ಶುಕ್ರವಾರ ಹೊಸದಾಗಿ 14,950 ಜನರಿಗೆ ಸೋಂಕು ದಾಖಲಾಗಿದೆ. ಇದೇವೇಳೆ ರಾಜ್ಯದಲ್ಲಿ 53 ಜನ ಸೋಂಕಿನಿಂದ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಒಟ್ಟು 40,599 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1,23,098 ರಷ್ಟಿದೆ. ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ … Continued

ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 16,436 ಜನರಿಗೆ ಕೊರೊನಾ ಸೋಂಕು ದಾಖಲು, 60 ಜನರ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಗುರುವಾರ ಹೊಸದಾಗಿ 16,436 ಜನರಿಗೆ ಸೋಂಕು ದೃಢಪಟ್ಟಿದೆ. ಹಾಗೂ ಸೋಂಕಿಗೆ 60 ಮಂದಿ ಮೃತಪಟ್ಟಿದ್ದಾರೆ. ಇದೇವೇಳೆ ರಾಜ್ಯದಲ್ಲಿ 44,819 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 38,60,774 ಮಂದಿಗೆ ಕೊರೊನಾ ಬಂದಿದೆ. ಒಟ್ಟು 36,72,744 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.0.36% … Continued

ಕಂದಾಯ ದಾಖಲೆಗಳನ್ನು ಕೂಡಲೇ ಮನೆ ಬಾಗಿಲಿಗೆ ತಲುಪಿಸಿ: ಜಿಲ್ಲಾಧಿಕಾರಿಗಳಿಗೆ ಸರ್ಕಾರದ ಸೂಚನೆ

ಬೆಂಗಳೂರು: ಕಂದಾಯ ದಾಖಲೆಗಳನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯಡಿ ಅದನ್ನು ತಕ್ಷಣವೇ ತಲುಪಿಸುವಂತೆ ರಾಜ್ಯ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಕುರಿತು ಭೂಮಾಪನ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸುತ್ತೋಲೆ ಮೂಲಕ ಸೂಚನೆ ನೀಡಿದ್ದಾರೆ. ಕಂದಾಯ ದಾಖಲೆ ಮನೆ ಬಾಗಿಲಿಗೆ ಯೋಜನೆಯನ್ನು ಅನುಷ್ಠಾನಗೊಳಿಸಲು ಸೂಚಿಸಲಾಗಿದ್ದು, ಈ ಯೋಜನೆಯಡಿ … Continued

ಕರ್ನಾಟಕದಲ್ಲಿ ಕೊರೊನಾ ದೈನಂದಿನ ಸೋಂಕು ಕುಸಿತ.. ಆದರೆ ಸಾವಿನ ಪ್ರಮಾಣದಲ್ಲಿ ಇಳಿಕೆಯಿಲ್ಲ

ಬೆಂಗಳೂರು: ಕರ್ನಾಟಕದಲ್ಲಿ ಇಂದು, ಬುಧವಾರ ಹೊಸದಾಗಿ 20,505 ಕೊರೊನಾ ಸೋಂಕು ದಾಖಲಾಗಿದ್ದು, 81 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ. ಇದೇವೇಳೆ 40,903 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು, ರಾಜ್ಯದಲ್ಲಿ ಒಟ್ಟು ಈವರೆಗೆ ರಾಜ್ಯದಲ್ಲಿ ಒಟ್ಟು 38,44,338 ಮಂದಿಗೆ ಕೊರೊನಾ ಬಂದಿದೆ. ಒಟ್ಟು ಈವರೆಗೆ 36,27,925 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಆರೋಗ್ಯ ಇಲಾಖೆಯ … Continued

ಕರ್ನಾಟಕದಲ್ಲಿ ಇಳಿಕೆಯತ್ತ ಕೊರೊನಾ ಸೋಂಕು..ಮಂಗಳವಾರ 14,366 ಹೊಸ ಸೋಂಕು ದಾಖಲು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗುತ್ತಿದೆ. ಇಂದು, ಮಂಗಳವಾರ ಒಟ್ಟು 14,366 ಹೊಸ ಪ್ರಕರಣಗಳು ದಾಖಲಾಗಿದ್ದು, ಇದೇವೇಳೆ 58 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ ಹಾಗೂ ಹಾಗೂ ರಾಜ್ಯದಲ್ಲಿ ಒಟ್ಟು 60,914 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ವಿಜಯಪುರದಲ್ಲಿ 7 ವರ್ಷದ ಬಾಲಕ ಮೃತಪಟ್ಟಿದ್ದಾನೆ. ಸಕಾರಾತ್ಮಕ … Continued

ಇಬ್ರಾಹಿಂ ಆರೋಪಕ್ಕೆ ಉತ್ತರ: ವಿಪಕ್ಷ ಉಪನಾಯಕರಾಗಿ ಯು.ಟಿ.ಖಾದರ್

ಬೆಂಗಳೂರು : ವಿಧಾನಸಭೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಹಾಗೂ ವಿಪಕ್ಷದ ಉಪನಾಯಕರಾಗಿ ಶಾಸಕ, ಮಾಜಿ ಸಚಿವ ಯು.ಟಿ.ಖಾದರ್ ಅವರನ್ನು ನೇಮಕ ಮಾಡಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕ ಸಿ.ಎಂ. ಇಬ್ರಾಹಿಂ ಅಲ್ಪಸಂಖ್ಯಾತರು ಕಾಂಗ್ರೆಸ್ಸಿಗೆ ಗೇಣಿದಾರರು, ಆದರೆ ಯಾರಿಗೂ ಸ್ಥಾನಮಾನ ನೀಡಿಲ್ಲ ಎಂದು ಆರೋಪಿಸಿ ಪಕ್ಷ ತೊರೆಯುವುದಾಗಿ ಹೇಳಿದ ಬೆನ್ನಲ್ಲೇ ಕಾಂಗ್ರೆಸ್‌ ಖಾದರ್ ಅವರನ್ನು ಎಐಸಿಸಿ ನೇಮಕ ಮಾಡಿದೆ. … Continued

ಗೋಮಾಳ ಜಮೀನು ಮಂಜೂರಾತಿ ನೀತಿ ರೂಪಣೆಗೆ ಸಮಿತಿ ರಚನೆ

ಬೆಂಗಳೂರು: ಗೋಮಾಳ ಜಮೀನು ಮಂಜೂರಾತಿ ನೀತಿ ರಚನೆ ಕುರಿತು ಸಮಿತಿ ರಚನೆ ಮಾಡಲಾಗಿದೆ. ಸಚಿವ ಸಂಪುಟ ಉಪಸಮಿತಿ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಕಂದಾಯ ಸಚಿವ ಆರ್. ಅಶೋಕ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚನೆ ಮಾಡಲಾಗಿದ್ದು,. ಉಪ ಸಮಿತಿ ಸದಸ್ಯರಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ, ಕಾನೂನು ಸಚಿವ ಮಾಧುಸ್ವಾಮಿ, ಕೃಷಿ ಸಚಿವ ಬಿ.ಸಿ. ಪಾಟೀಲ, ನಗರಾಭಿವೃದ್ಧಿ … Continued