ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಎಫ್ ​ಐಆರ್ ದಾಖಲು

ಮೈಸೂರು : ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶದ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಶುಕ್ರವಾರ ಪ್ರಥಮ ಮಾಹಿತಿ ವರದಿ (FIR) ದಾಖಲಿಸಿದ್ದಾರೆ. ಲೋಕಾಯುಕ್ತ ಎಡಿಜಿಪಿ ಮನೀಶ ಖರ್ಬೀಕರ್ ಸೂಚನೆ ಮೇರೆಗೆ ಮೈಸೂರು ಲೋಕಾಯುಕ್ತ ಎಸ್‌ ಪಿ ಉದೇಶ ನೇತೃತ್ವದಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಜನಪ್ರತಿನಿಧಿಗಳ ನ್ಯಾಯಾಲಯವು ಸಿದ್ದರಾಮಯ್ಯ … Continued

ಕರ್ನಾಟಕದಲ್ಲಿ ಸಿಬಿಐಗೆ ನೀಡಿದ್ದ ಮುಕ್ತ ತನಿಖೆಗೆ ಅನುಮತಿ ಅಧಿಸೂಚನೆ ವಾಪಸ್‌ ; ಸಚಿವ ಸಂಪುಟ ನಿರ್ಧಾರ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸಲು ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸಿದ್ದರಾಮಯ್ಯ ಸರ್ಕಾರ ಗುರುವಾರ ತನ್ನ ಒಪ್ಪಿಗೆಯನ್ನು ಹಿಂಪಡೆದಿದೆ. ದೆಹಲಿ ವಿಶೇಷ ಪೊಲೀಸ್ ಸ್ಥಾಪನೆ (ಡಿಎಸ್‌ಪಿಇ) ಕಾಯಿದೆ, 1946 ರ ಸೆಕ್ಷನ್ 6 ರ ಪ್ರಕಾರ, ಸಿಬಿಐ ತನಿಖೆ ನಡೆಸಲು … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದ್ದು, ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, … Continued

ಮುಡಾ ಪ್ರಕರಣ | ‘ನನಗೆ ಯಾವುದೇ ಭಯವಿಲ್ಲ’: ಲೋಕಾಯುಕ್ತ ತನಿಖೆಗೆ ನ್ಯಾಯಾಲಯದ ಆದೇಶದ ನಂತರ ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದ ತನಿಖೆ ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ ಪುನರುಚ್ಚರಿಸಿದ್ದಾರೆ. ಪ್ರಕರಣದಲ್ಲಿ ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರ ತನಿಖೆಗೆ ವಿಶೇಷ ನ್ಯಾಯಾಲಯ ಆದೇಶಿಸಿದ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಯಾವುದೇ ತನಿಖೆಗೆ ಹೆದರುವುದಿಲ್ಲ. ಕಾನೂನು ಹೋರಾಟ ಮಾಡಲು ತಯಾರಾಗಿದ್ದೇವೆ  ಎಂದು ಹೇಳಿದ್ದಾರೆ. ಮಾಧ್ಯಮದವರೊಂದಿಗೆ … Continued

ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತ ತನಿಖೆಗೆ ಜನಪ್ರತಿನಿಧಿಗಳ ಕೋರ್ಟ್ ಆದೇಶ

ಬೆಂಗಳೂರು : ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ.ಎಂ. ಪಾರ್ವತಿ ಅವರಿಗೆ ಪರಿಹಾರ ರೂಪದಲ್ಲಿ ಅಕ್ರಮವಾಗಿ 14 ನಿವೇಶನಗಳನ್ನು ಮಂಜೂರು ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮೈಸೂರಿನ ಲೋಕಾಯುಕ್ತ ಪೊಲೀಸರಿಗೆ ಬುಧವಾರ ಆದೇಶಿಸಿದೆ. ತನಿಖೆಯನ್ನು ಮೂರು ತಿಂಗಳಲ್ಲಿ ನಡೆಸಿ ವರದಿ ಸಲ್ಲಿಸಲು ಆದೇಶಿಸಲಾಗಿದೆ. ಮೈಸೂರು ನಗರಾಭಿವೃದ್ಧಿ (ಮುಡಾ)ದಲ್ಲಿನ ಆರೋಪಿತ … Continued

ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; 3 ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಬುಧವಾರ (ಸೆಪ್ಟಂಬರ್‌ 25) ಭಾರೀ ಮಳೆ ಸುರಿಯುವ ಮುನ್ಸೂಚನೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ, ಉಡುಪಿ ಹಾಗೂ ಉತ್ತರ ಕನ್ನಡಗಳಲ್ಲಿ ಭಾರೀ ಮಳೆಯಾಗಲಿದ್ದು, ಮೂರೂ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಕರಾವಳಿಯಲ್ಲಿ ಗಾಳಿಯ ವೇಗವೂ ಹೆಚ್ಚಿರಲಿದ್ದು ಮೀನುಗಾರರು ಸಮುದ್ರಕ್ಕೆ … Continued

ಮುಡಾ ಹಗರಣ: ಹೈಕೋರ್ಟ್‌ ಆದೇಶದ ನಂತರ ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ನಾನು ಯಾವುದೇ ತನಿಖೆಗೆ ಹಿಂಜರಿಯುವುದಿಲ್ಲ. ಕಾನೂನು ಅಡಿ ಅಂತಹ ತನಿಖೆಗೆ ಅವಕಾಶ ಇದೆಯೋ ಇಲ್ಲವೋ ಎಂಬ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಿದ ನಂತರ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮುಡಾ ಹಗರಣಕ್ಕೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲ ಥಾವರ ಚಂದ ಗೆಹ್ಲೋಟ್‌ ಅವರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ … Continued

ಇನ್ಮುಂದೆ ಸರ್ಕಾರಿ ರಜಾ ದಿನಗಳಲ್ಲೂ ಆಸ್ತಿ ನೋಂದಣಿ ಮಾಡಬಹುದು…!

ಬೆಂಗಳೂರು: ಇನ್ಮುಂದೆ ಸರ್ಕಾರಿ ರಜಾ ದಿನಗಳಲ್ಲಿಯೂ ಆಸ್ತಿ ನೋಂದಣಿ (Property Registration) ಮಾಡುವ ಸೇವೆ ಲಭ್ಯವಿರಲಿದೆ. ಅಕ್ಟೋಬರ್‌ 21ರಿಂದ ಶನಿವಾರ ಮತ್ತು ಭಾನುವಾರವೂ ನಿರ್ದಿಷ್ಟ ಉಪ ನೋಂದಣಾಧಿಕಾರಿ (Sub Registrar Office) ಕಚೇರಿಗಳಲ್ಲಿ ಈ ಸೇವೆ ಲಭ್ಯವಿರುತ್ತದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ತಿಳಿಸಿದ್ದಾರೆ. ಸರ್ಕಾರಿ ರಜಾ ದಿನಗಳಲ್ಲಿ ಪ್ರತಿ ನೋಂದಣಿ ಜಿಲ್ಲೆಗೂ ಒಂದು ಸಬ್ … Continued

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರ್ನಾಟಕದ 7 ಜಿಲ್ಲೆಗಳಲ್ಲಿ ವಿಪರೀತ ಮಳೆಯ ಮುನ್ಸೂಚನೆ

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು ರಾಜ್ಯದ ವಿವಿಧೆಡೆ ಮಳೆ ಬಿರುಸುಗೊಂಡಿದೆ. ಉತ್ತರ ಕನ್ನಡ ಜಿಲ್ಲೆಗೆ ರೆಡ್​ ಅಲರ್ಟ್​, 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಹಾಗೂ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್​ ಅಲರ್ಟ್​ ನೀಡಲಾಗಿದೆ. ಇನ್ನು … Continued

ಕರ್ನಾಟಕದ 15 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಯೆಲ್ಲೋ ಅಲರ್ಟ್​ ಘೋಷಣೆ

ಬೆಂಗಳೂರು : ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಸೇರಿದಂತೆ ರಾಜ್ಯದ 15 ಜಿಲ್ಲೆಗಳಲ್ಲಿ … Continued