ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಭಾರಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ವಿವಿಧೆಡೆ ಭಾನುವಾರದಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗೆ ಭಾನುವಾರ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ … Continued

ವೀಡಿಯೊ..| ಮೈಸೂರು ದಸರಾ ಆನೆಗಳ ನಡುವೆ ಗುದ್ದಾಟ ; ದಿಕ್ಕಾಪಾಲಾಗಿ ಓಡಿದ ಜನ

ಮೈಸೂರು: ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದು ಅರಮನೆಯಿಂದ‌ ಹೊರಬಂದ ಕಾರಣ ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ವಿಶ್ವವಿಖ್ಯಾತ ದಸರಾ ಗಜಪಡೆಯ (Mysuru Dasara Elephants) ಆನೆ ಧನಂಜಯ ಮತ್ತೊಂದು ಆನೆ ಕಂಜನ್ ಮೇಲೆ ಏಕಾಏಕಿ ದಾಳಿ ಮಾಡಿದ್ದು, ದಾಳಿಗೆ ತತ್ತರಿಸಿದ ಕಂಜನ್‌ ಆನೆ ಅರಮನೆ … Continued

ಕರ್ನಾಟಕದ ಮುಜರಾಯಿ ದೇಗುಲಗಳಲ್ಲಿ ಪೂಜೆ, ಪ್ರಸಾದಕ್ಕೆ ʼನಂದಿನಿ ತುಪ್ಪʼದ ಬಳಕೆ ಕಡ್ಡಾಯ: ಸರ್ಕಾರ ಆದೇಶ

ಬೆಂಗಳೂರು : ರಾಜ್ಯದ ಎಲ್ಲ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಸ್ಥಾನದಲ್ಲಿ ಪ್ರಸಾದಕ್ಕೆ ಕರ್ನಾಟಕ ಹಾಲು ಒಕ್ಕೂಟ(KMF)ದ ನಂದಿನಿ ತುಪ್ಪವನ್ನೇ ಬಳಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ (Muzrai Temple) ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ … Continued

ಕಲಾವಿದರ ಮಾಸಾಶನ 3000 ರೂಪಾಯಿಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಕಲಾವಿದರ ಮಾಸಾಶನವನ್ನು 3000 ರೂ.ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಕರ್ನಾಟಕ ನಾಟಕ ಅಕಾಡೆಮಿಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 2022, 2023, 2024ನೇ ಸಾಲಿನ ವಾರ್ಷಿಕ ನಾಟಕ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದ ಅವರು, ನಮ್ಮ ಸರ್ಕಾರ ನಿರಂತರವಾಗಿ ಕಲೆ, ಸಾಹಿತ್ಯ, ಸಂಸ್ಕೃತಿ ರಂಗಭೂಮಿಯನ್ನು ಬೆಂಬಲಿಸಿಕೊಂಡು ಬಂದಿದೆ. ನಾವು ಅಕಾಡೆಮಿಗಳಿಗೆ ಕೊಡುತ್ತಿದ್ದ … Continued

ಮುಡಾ ವಿಚಾರದಲ್ಲೇ ಸಿಎಂ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ…: ಸರ್ಕಾರದಿಂದ ವಿವರ ಕೇಳಿದ ರಾಜ್ಯಪಾಲರು

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮುಡಾ ವಿಚಾರದಲ್ಲಿಯೇ ಮತ್ತೊಂದು ಸಂಕಷ್ಟ ಎದುರಾಗಿದೆ. ಮುಡಾ ವಿಚಾರದಲ್ಲಿ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದ್ದು, ಈ ಸಂಬಂಧ ರಾಜ್ಯಪಾಲರು ರಾಜ್ಯ ಸರ್ಕಾರಕ್ಕೆ ವರದಿ ಕೇಳಿದ್ದಾರೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ ಅವರಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಈ ಸಂಬಂಧ ಪತ್ರ ಬರೆದು ವರದಿ … Continued

ಕರ್ನಾಟಕದ 9 ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ 9ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಕಲಬುರಗಿಯಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಲಿದೆ ಎಂದು … Continued

ವೀಡಿಯೊ..| ಬೆಂಗಳೂರು : ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದಲ್ಲಿ ಭದ್ರತಾ ಲೋಪ ; ವೇದಿಕೆಗೆ ನುಗ್ಗಿದ ವ್ಯಕ್ತಿ..

ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ನಡೆದ ಪ್ರಜಾಪ್ರಭುತ್ವ ದಿನದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆಯೇ ಭದ್ರತಾ ಲೋಪ ಸಂಭವಿಸಿದೆ. ಕಾರ್ಯಕ್ರಮ ನಡೆಯುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ವೇದಿಕೆಯ ಮೇಲೆ ಬರಲು ಯತ್ನಿಸಿದ ಘಟನೆ ನಡೆದಿದೆ. ಆದರೆ, ಅವರ ಭದ್ರತಾ ಸಿಬ್ಬಂದಿ ತ್ವರಿತವಾಗಿ ಸಮಯಪ್ರಜ್ಞೆ ಪ್ರದರ್ಶಿಸಿದರು ಮತ್ತು ತಕ್ಷಣವೇ ಕಾರ್ಯಪ್ರವೃತ್ತರಾಗಿ ಆತನನ್ನು ತಡೆದರು. ಭದ್ರತಾ ಸಿಬ್ಬಂದಿ ಮುಖ್ಯಮಂತ್ರಿಯಿಂದ ಕೇವಲ … Continued

ಹೆಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನ

ಬೆಂಗಳೂರು : ರಾಜ್ಯದಲ್ಲಿ ವಾಹನಗಳಿಗೆ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (ಹೆಚ್‌ಎಸ್‌ಆರ್‌ಪಿ) ಅಳವಡಿಕೆಗೆ ಸೆಪ್ಟೆಂಬರ್ 15 ಕೊನೆಯ ದಿನವಾಗಿದ್ದು, ಆ ಬಳಿಕ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಸದ ವಾಹನ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ. ಈಗಾಗಲೇ ಸಾರಿಗೆ ಇಲಾಖೆಯು ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ಕೆಲವು ಬಾರಿ ಅವಧಿ ವಿಸ್ತರಣೆ ಮಾಡಿದೆ. ಆದರೆ ಈವರೆಗೆ ಸುಮಾರು 52 … Continued

ನಾಗಮಂಗಲ ಗಲಭೆ : ಕರ್ನಾಟಕ ಬಿಜೆಪಿಯಿಂದ ‘ಸತ್ಯ ಶೋಧನ ತಂಡ’ ರಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆಯ ಮೆರವಣಿಗೆ ಸಂದರ್ಭದಲ್ಲಿ ನಡೆದ ದುರ್ಘಟನೆಯ ಕುರಿತು ಸತ್ಯಾಸತ್ಯತೆ ತಿಳಿಯಲು ರಾಜ್ಯ ಬಿಜೆಪಿಯು ‘ಸತ್ಯ ಶೋಧನ ತಂಡʼವನ್ನು ರಚಿಸಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸೂಚನೆಯ ಮೇರೆಗೆ ಮಾಜಿ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಸತ್ಯ ಶೋಧನ ತಂಡವನ್ನು ರಚನೆ ಮಾಡಲಾಗಿದೆ. ಶಾಸಕ ಬೈರತಿ ಬಸವರಾಜು, ಮಾಜಿ … Continued

ದ್ವಿತೀಯ ಪಿಯು ಲಿಖಿತ ಪರೀಕ್ಷೆಯ ಅವಧಿ ಕಡಿತ

ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳಿಗೆ ನಿಗದಿಯಾಗಿದ್ದ ಸಮಯವನ್ನು ಈ ವರ್ಷದಿಂದ ಕಡಿತ ಮಾಡಿದೆ. ಹೊಸ ನಿಯಮ2024-25ನೇ ಸಾಲಿನ ಪರೀಕ್ಷೆಯಿಂದಲೇ ಜಾರಿ ಆಗಲಿದೆ ಎಂದು ಹೇಳಲಾಗಿದೆ. ಸಮಯ ಕಡಿತ ಮಾಡಿರುವ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದ್ದು, ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆ ವೆಬ್ ಸೈಟ್ … Continued