ರಾಜ್ಯದಲ್ಲಿ ‘ಡೆಂಗೆ’ ಹೆಚ್ಚಳ ; ಎಲ್ಲ ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು : ರಾಜ್ಯದಲ್ಲಿ ಡೆಂಗೆ ಭೀತಿ ಹೆಚ್ಚಳವಾಗಿರುವ ಈ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ಶಾಲೆಗಳಿಗೆ ಶಿಕ್ಷಣ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ರಾಜ್ಯದಲ್ಲಿ ಪ್ರಸ್ತುತ ಡೆಂಗೆ, ಚಿಕೂನ್ ಗುನ್ಯ ಹಾಗೂ ಜಿಕಾ ಮುಂತಾದ ರೋಗಗಳು ಹರಡುತ್ತಿದ್ದು, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಈ ರೋಗಗಳು ಹರಡದಂತೆ ನಿಯಂತ್ರಿಸಲು ಸಂಬಂಧಿಸಿದ ಇಲಾಖೆಗಳು ಮತ್ತು ಶಾಲೆಗಳು ಸೇರಿದಂತೆ ಸಮುದಾಯದ ಸಹಭಾಗಿತ್ವದಲ್ಲಿ ವಹಿಸಬೇಕಾದ … Continued

ಕೆಆರ್‌ಎಸ್ ಭರ್ತಿಯಾಗಿಲ್ಲ ; ಆದ್ರೆ ತಮಿಳುನಾಡಿಗೆ ನಿತ್ಯ 1 ಟಿಎಂಸಿ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಶಿಫಾರಸ್ಸು

ಬೆಂಗಳೂರು : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಜುಲೈ 31 ರವರೆಗೆ ಪ್ರತಿನಿತ್ಯ 1 ಟಿಎಂಸಿ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಸಮಿತಿ ಸೂಚಿಸಿದೆ. ಜುಲೈ 12 ರಿಂದ ಜುಲೈ 31 ಅವಧಿಯಲ್ಲಿ ಬಿಳಿಗುಂಡ್ಲುವಿನಲ್ಲಿ ಸಂಚಿತ ನೀರಿನ ಹರಿವನ್ನು ದಿನಕ್ಕೆ 1 ಟಿಎಂಸಿ (ಸರಾಸರಿ 11,500 ಕ್ಯುಸೆಕ್‌ ಹರಿವು) ಇರುವಂತೆ … Continued

ಕರ್ನಾಟಕದ 13 ಜಿಲ್ಲೆಗಳಲ್ಲಿ ನಾಳೆಯಿಂದ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು :  ಕರ್ನಾಟಕದಲ್ಲಿ ಜುಲೈ12ರ ನಂತರ ಮತ್ತೆ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜುಲೈ12ರಿಂದ ಉತ್ತರ ಒಳನಾಡಿನಲ್ಲಿ ಹಾಗೂ ಜುಲೈ 13 ರಿಂದ ಮಲೆನಾಡು ಜಿಲ್ಲೆಗಳಲ್ಲಿ ಮಳೆ ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಮಲೆನಾಡಿನಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದೆ. ಜುಲೈ 13ರಿಂದ ಮೂರು ದಿನಗಳ ಕಾಲ … Continued

ಎಲ್‌ಕೆಜಿ, ಯುಕೆಜಿ, 1ನೇ ತರಗತಿ ಪ್ರವೇಶಾತಿಗೆ ಗರಿಷ್ಠ ವಯೋಮಿತಿ ನಿಗದಿ ಪಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಮಕ್ಕಳನ್ನು ಎಲ್‌ಕೆಜಿ (LKG), ಯುಕೆಜಿ (UKG) ಹಾಗೂ ಒಂದನೇ ತರಗತಿಗೆ ದಾಖಲಿಸಲು ರಾಜ್ಯ ಸರ್ಕಾರವು ಈಗಾಗಲೇ ಕನಿಷ್ಠ ವಯೋಮಿತಿ ನಿಗದಿಪಡಿಸಿದ್ದ ರಾಜ್ಯ ಸರ್ಕಾರ ಈಗ ಗರಿಷ್ಠ ವಯೋಮಿತಿಯನ್ನು ನಿಗದಿಪಡಿಸಿದೆ. ಮಕ್ಕಳನ್ನು ಎಲ್‌ಕೆಜಿಗೆ ಸೇರಿಸಲು 4 ವರ್ಷ ಕನಿಷ್ಠ ವಯೋಮಿತಿಯಾದರೆ, ಗರಿಷ್ಠ ವಯೋಮಿತಿ 6 ವರ್ಷ ಯುಕೆಜಿಗೆ  5 ವರ್ಷ ಕನಿಷ್ಠ ವಯೋಮಿತಿಯಾದರೆ, 7 ವರ್ಷ … Continued

ರಾಜ್ಯದ ಶೇ.80ರಷ್ಟು ಜನರ ಬಳಿ ಬಿಪಿಎಲ್‌ ಕಾರ್ಡ್ ; ನಕಲಿ ಕಾರ್ಡ್‌ ರದ್ದತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದ ಶೇ.80ರಷ್ಟು ಜನರು ಬಳಿ ಬಿಪಿಎಲ್‌ (BPL) ಕಾರ್ಡ್ ಇದ್ದು, ಯಾರೆಲ್ಲಾ ಬಿಪಿಎಲ್ ಕಾರ್ಡ್‌ ಹೊಂದಲು ಅನರ್ಹರೋ ಅವರನ್ನು ಪತ್ತೆ ಹಚ್ಚಿ ಅಂತಹ ಕಾರ್ಡುಗಳನ್ನು ರದ್ದು ಮಾಡುವಂತೆ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಸೋಮವಾರ ಆದೇಶಿಸಿದೆ. ವಿಧಾನಸೌಧದಲ್ಲಿ ಸೋಮವಾರ ನಡೆದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ ಸಿಇಒಗಳ ಜೊತೆಗಿನ ಸಭೆಯಲ್ಲಿ ಈ ವಿಚಾರವಾಗಿ ಮುಖ್ಯಮಂತ್ರಿಗಳು ಮಹತ್ವದ … Continued

ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ ; ಹಲವು ಜಿಲ್ಲೆಗಳಿಗೆ ಜೋರಾದ ಗಾಳಿಮಳೆಯ ಮುನ್ನೆಚ್ಚರಿಕೆ

ಬೆಂಗಳೂರು: ರಾಜ್ಯದ ಕರಾವಳಿಯಲ್ಲಿ ಮುಂಗಾರು ಅಬ್ಬರಿಸುತ್ತಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಿಗೆ ಜುಲೈ 8, ಜುಲೈ 10 ಮತ್ತು 11ರಂದು ಆರೆಂಜ್ ಅಲರ್ಟ್​​ ಹಾಗೂ ಜುಲೈ 9ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ … Continued

ಮಹದಾಯಿ: ಮಳೆಯ ನಡುವೆ ಚೋರ್ಲಾ ಘಾಟ್ ಪ್ರದೇಶಕ್ಕೆ ಭೇಟಿ ನೀಡಿದ ಕೇಂದ್ರ ಪ್ರವಾಹ ತಂಡ

ಬೆಳಗಾವಿ : ಭಾರಿ ಮಳೆಯ ನಡುವೆ ಮಹದಾಯಿ ಜಲಾನಯನ ಪ್ರದೇಶಕ್ಕೆ ಇಂದು, ಭಾನುವಾರ (ಜುಲೈ 7) ಕೇಂದ್ರದ ಪ್ರವಾಹ ತಂಡದ ಸದಸ್ಯರು ಭೇಟಿ ನೀಡಿದ್ದಾರೆ. ಕರ್ನಾಟಕ ಮತ್ತು ಗೋವಾ ಗಡಿಯ ಚೋರ್ಲಾ ಘಾಟ್ ಪ್ರದೇಶ ಹಾಗೂ ಹರತಾಳ ನಾಲೆ ಬಳಿ ಮಳೆಯಲ್ಲಿ ತಂಡದ ಸದಸ್ಯರು ವೀಕ್ಷಣೆ ನಡೆಸಿದರು. ಕೇಂದ್ರದ ಪ್ರವಾಹ ತಂಡದ ಸದಸ್ಯರಿಗೆ ನೀರಾವರಿ ಇಲಾಖೆಯ … Continued

ಕರ್ನಾಟಕದ 7 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿಯಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಲೆನಾಡಿನಲ್ಲೂ ಮಳೆ ಜೋರಾಗಿ ಸುರಿಯುತ್ತಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಮೂರು ಜಿಲ್ಲೆಗಳಲ್ಲಿ ಮುಂದಿನ ಮೂರ್ನಾಲ್ಕು ದಿನ ಮತ್ತೆ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳು ಹಾಗೂ ಮಲೆನಾಡಿನ … Continued

ರಾಜ್ಯದಲ್ಲಿ ಡೆಂಗ್ಯೂ ಹೆಚ್ಚಳ: ವೈದ್ಯಕೀಯ ತುರ್ತು ಸ್ಥಿತಿ ಘೋಷಿಸಲು ಸಂಸದ ಡಾ.ಮಂಜುನಾಥ ಆಗ್ರಹ

ಬೆಂಗಳೂರು: ಡೆಂಗ್ಯೂ ರಾಜ್ಯಾದ್ಯಂತ ಹರಡುತ್ತಿದ್ದು, ಅದರ ನಿಯಂತ್ರಣಕ್ಕೆ ಕೋವಿಡ್ ಮಾದರಿಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಆಗಬೇಕು. ಇದನ್ನು ‘ವೈದ್ಯಕೀಯ ತುರ್ತು ಸ್ಥಿತಿ’ ಎಂದು ಘೋಷಿಸಬೇಕು ಎಂದು ಬಿಜೆಪಿ ಸಂಸದ ಡಾ. ಸಿ.ಎನ್. ಮಂಜುನಾಥ ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡೆಂಗ್ಯೂ ಜ್ವರ ನಿಯಂತ್ರಣ ಮಾಡಬೇಕಿದ್ದರೆ ಸೊಳ್ಳೆಗಳ ನಿಯಂತ್ರಣ … Continued

ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಿಸಿದ ಬಿಜೆಪಿ

ನವದೆಹಲಿ: ಬಿಜೆಪಿಯು ಕರ್ನಾಟಕ ಸೇರಿದಂತೆ ಅನೇಕ ರಾಜ್ಯಗಳಿಗೆ ರಾಜ್ಯ ಉಸ್ತುವಾರಿಗಳು ಮತ್ತು ಸಹ-ಉಸ್ತುವಾರಿಗಳನ್ನು ನೇಮಕ ಮಾಡಿದೆ. ಮುಂಬರುವ ಕೆಲವು ರಾಜ್ಯಗಳ ವಿಧಾನಸಭೆ ಚುನಾವಣೆಗಳನ್ನು ಗಮನದಲ್ಲಿಟ್ಟು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಶುಕ್ರವಾರ ಈ ನೇಮಕ ಮಾಡಿದ್ದಾರೆ. ವಿವಿಧ ರಾಜ್ಯಗಳ ಉಸ್ತುವಾರಿಗಳು ಹಾಗೂ ಸಹ ಉಸ್ತುವಾರಿಗಳು… ಕರ್ನಾಟಕ : ಡಾ. ರಾಧಾಮೋಹನದಾಸ್ ಅಗರ್ವಾಲ್-ಉಸ್ತುವಾರಿ, ಪ್ರಭಾಕರ ರೆಡ್ಡಿ- … Continued