ಕರ್ನಾಟಕದ 5 ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯ ಮುನ್ಸೂಚನೆ ; 5 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮುಂದುವರಿದಿದೆ. ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ನೀಡಲಾಗಿದೆ. ಸೋಮವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ವಿಜಯಪುರ, ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಮಳೆಯಾಗಲಿದೆ. ಗಾಳಿಯ ವೇಗವು ಗಂಟೆಗೆ 30-40 ರಷ್ಟು ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಚುರುಕಾಗಿದ್ದು, ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳು ಮತ್ತು ಉತ್ತರ ಒಳನಾಡಿನಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಗುಡುಗು-ಮಿಂಚು ಬಿರುಗಾಳಿ ಸಹಿತ … Continued

ರಾಜ್ಯದಲ್ಲಿ ಮುಂಗಾರು ಚುರುಕು: ಶನಿವಾರ 7 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆ ; ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು: ಮುಂಗಾರು ಮಾರುತಗಳು ಇಡೀ ರಾಜ್ಯವನ್ನು ಆವರಿಸಿಕೊಂಡ ಹಿನ್ನೆಲೆಯಲ್ಲಿ ಶನಿವಾರ (ಜೂನ್‌ 8) ರಾಜ್ಯದ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದ ಕರಾವಳಿಯ ಜಿಲ್ಲೆಗಳಾದ ಉತ್ತರ ಕನ್ನಡ ಉಡುಪಿ ಮತ್ತು ಉತ್ತರ ಒಳನಾಡಿನ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ … Continued

ಮಧ್ಯಂತರ ನಿರೀಕ್ಷಣಾ ಜಾಮೀನು ಬೆನ್ನಲ್ಲೇ ಎಸ್ಐಟಿ ವಿಚಾರಣೆಗೆ ಹಾಜರಾದ ಭವಾನಿ ರೇವಣ್ಣ…

ಬೆಂಗಳೂರು: ಸುಮಾರು ಒಂದು ತಿಂಗಳಿಂದ ತಲೆಮರೆಸಿಕೊಂಡಿದ್ದ ಭವಾನಿ ರೇವಣ್ಣ (Bhavani Revanna) ಅವರು ಕೆ.ಆರ್‌.ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಪ್ರಕರಣದ ವಿಚಾರಣೆಗಾಗಿ ಎಚ್ಐಟಿ ಮುಂದೆ ಹಾಜರಾಗಿದ್ದಾರೆ. ಈ ಪ್ರಕರಣದಲ್ಲಿ ಬಂಧನದ ಭೀತಿ ಎದುರಿಸುತ್ತಿದ್ದ ಭವಾನಿ ರೇವಣ್ಣ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್‌ ಅವರಿಗೆ ಒಂದು ವಾರದ ಕಾಲ ಷರತ್ತುಬದ್ಧ ಮಧ್ಯಂತರ ಜಾಮೀನು … Continued

ಬಿಜೆಪಿ ವಿರುದ್ಧ ಸುಳ್ಳು ಜಾಹೀರಾತು​ ಆರೋಪ; ರಾಹುಲ್​ ಗಾಂಧಿಗೆ ಜಾಮೀನು

ಬೆಂಗಳೂರು: 2022ರಲ್ಲಿ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪ ಮಾಡಿ ಜಾಹೀರಾತು ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಕಳೆದ ವರ್ಷ ವಿಧಾನಸಭಾ ಚುನಾವಣೆಯ ಮುನ್ನ ಜಾಹೀರಾತಿನಲ್ಲಿ ರಾಜ್ಯದ ಬಿಜೆಪಿ ಸರ್ಕಾರವು ತನ್ನ 2019-2023 ರ ಆಡಳಿತದಲ್ಲಿ ಎಲ್ಲ ಸಾರ್ವಜನಿಕ ಕೆಲಸ … Continued

ಕರ್ನಾಟಕದಲ್ಲಿ ʼಹಮಾರೆ ಬಾರಾಹ್’ ಸಿನಿಮಾ ನಿಷೇಧಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಮುಸ್ಲಿಂ ಮಹಿಳೆಯರ ಕುರಿತಾದ ಸಿನಿಮಾ ‘ಹಮಾರೆ ಬಾರಾಹ್‌’ (Hamare Baarah) ಬಿಡುಗಡೆಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. “ಹಮಾರೆ ಬಾರಾಹ್” ಸಿನೆಮಾ ಜೂ.7ರಂದು ಬಿಡುಗಡೆ ಆಗಲಿದ್ದು, ಈ ಚಿತ್ರದ ಟ್ರೈಲರ್ ಅನ್ನು ಮಾಧ್ಯಮ, ಸಾಮಾಜಿಕ ಜಾಲತಾಣ, ಸಿನೆಮಾ ಮಂದಿರ, ಖಾಸಗಿ ಟಿವಿ ಚಾನಲ್ ಸೇರಿದಂತೆ ಯಾವುದೇ ಯಲ್ಲೂ ಪ್ರಸಾರ ಮಾಡುವುದನ್ನು ರಾಜ್ಯದಲ್ಲಿ ನಿಷೇಧಿಸಲಾಗಿದೆ … Continued

ದಕ್ಷಿಣ ಶಿಕ್ಷಕರ ಕ್ಷೇತ್ರ: ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿಗೆ ಗೆಲುವು, ಕಾಂಗ್ರೆಸ್ಸಿಗೆ ಸೋಲು

ಮೈಸೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ತಿನ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಮತ ಎಣಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡರಿಗೆ ಸೋಲಾಗಿದೆ. ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಇತಿಹಾಸದಲ್ಲಿ ಮೊದಲ ಪ್ರಾಶಸ್ತ್ಯ ಮತದಲ್ಲಿ ವಿವೇಕಾನಂದ ಮೊದಲ ಗೆಲುವು ಸಾಧಿಸಿದ್ದಾರೆ. ಅವರು 4622 ಮತಗಳಿಂದ ಗೆದ್ದಿದ್ದಾರೆ. ಮರಿತಿಬ್ಬೇಗೌಡರು … Continued

ವಿಧಾನಸಭೆಯಿಂದ ವಿಧಾನ ಪರಿಷತ್ತಿಗೆ 11 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ (Legislative Council) ನಡೆದ ಚುನಾವಣೆಯಲ್ಲಿ ಎಲ್ಲ 11 ಅಭ್ಯರ್ಥಿಗಳೂ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಕಾಂಗ್ರೆಸ್‌ನಿಂದ 7, ಬಿಜೆಪಿಯಿಂದ 3, ಜೆಡಿಎಸ್‌ನಿಂದ 1 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಸಂಬಂಧ ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಅಧಿಕೃತ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್‌ನಿಂದ ಬೋಸರಾಜು, ಐವಾನ್ ಡಿಸೋಜಾ, ವಸಂತಕುಮಾರ, ಬಿಲ್ಕೀಸ್ ಬಾನು‌, ಜಗದೇವ ಗುತ್ತೇದಾರ, … Continued

ಮುಂದಿನ ನಾಲ್ಕೈದು ದಿನ ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ 17 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ ಬಳ್ಳಾರಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂಗಳೂರು … Continued

ಉತ್ತರಾಖಂಡದಲ್ಲಿ ಕೆಟ್ಟ ಹವಾಮಾನದಿಂದಾಗಿ ಕರ್ನಾಟಕದವರು ಸೇರಿ 9 ಚಾರಣಿಗರು ಸಾವು

ಕರ್ನಾಟಕದ 18 ಚಾರಣಿಗರು ಸೇರಿದಂತೆ 22 ಸದಸ್ಯರ ಚಾರಣಿಗರ ತಂಡದಲ್ಲಿದ್ದ ಒಂಬತ್ತು ಚಾರಣಿಗರು ನಿನ್ನೆ ಉತ್ತರಾಖಂಡದ ಉತ್ತರಕಾಶಿಯ ಸಹಸ್ರ ತಾಲ್ (ಸರೋವರ) ಕ್ಕೆ ತೆರಳುತ್ತಿದ್ದಾಗ ಕೆಟ್ಟ ಹವಾಮಾನದಿಂದಾಗಿ ದಾರಿ ತಪ್ಪಿ ಸಿಕ್ಕಿಬಿದ್ದು ಸಾವಿಗೀಡಾಗಿದ್ದಾರೆ. ಮೃತರಲ್ಲಿ ಕರ್ನಾಟಕದ ಐವರು ಇದ್ದಾರೆ ಎಂದು ಹೇಳಲಾಗಿದೆ. ವಾಯು-ನೆಲದ ಜಂಟಿ ಹುಡುಕಾಟ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಇದುವರೆಗೆ ಹದಿಮೂರು … Continued