ಲೋಕಸಭಾ ಚುನಾವಣೆ : ಕರ್ನಾಟಕದಲ್ಲಿ ಬಿಜೆಪಿ 17, ಜೆಡಿಎಸ್‌ 2, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಗೆಲುವು ; ರಾಜ್ಯದಲ್ಲೇ ಅತಿ ಹೆಚ್ಚು ಅಂತರದಲ್ಲಿ ಗೆದ್ದ ಕಾಗೇರಿ

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿಕೂಟ ಹೆಚ್ಚಿನ ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ ಅಥವಾ ಮುಂದಿದೆ. ರಾಜ್ಯದಲ್ಲಿ ಬಿಜೆಪಿ 17, ಜೆಡಿಎಸ್‌ 2, ಕಾಂಗ್ರೆಸ್‌ 9 ಸ್ಥಾನಗಳಲ್ಲಿ ಜಯಗಳಿಸಿದೆ ಅಥವಾ ಮುಂದಿದೆ. ಬೆಂಗಳೂರು ದಕ್ಷಿಣ, ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ಗ್ರಾಮೀಣ, ಚಿಕ್ಕಬಳ್ಳಾಪುರ, ಮೈಸೂರು, ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, … Continued

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂಬುದು ಮೊದಲೇ ಗೊತ್ತಿರುವ ಸಂಗತಿ: ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ

ಬೆಂಗಳೂರು : ಈ ಬಾರಿ ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎನ್ನುವ ವಿಚಾರ ಮೊದಲೇ ಗೊತ್ತಿರುವ ಸಂಗತಿ. ನಾನು ಕಾಂಗ್ರೆಸ್​ ಶಾಸಕನಾದರೂ ನಿಜ ಹೇಳಬೇಕು ಎಂದು ಕೋಲಾರ ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ ಹೇಳಿದ್ದಾರೆ. ಕೋಲಾರದಲ್ಲಿ ಸೋಮವಾರ ಎಕ್ಸಿಟ್​ ಪೋಲ್​ ಬಗ್ಗೆ ಪ್ರತಿಕ್ರಿಯಿಸಿದ ಅವರು, “ಈ ಬಾರಿ ಬಿಜೆಪಿ ಬರಲಿದೆ. 2029ಕ್ಕೆ ಕೇಂದ್ರದಲ್ಲಿ ಕಾಂಗ್ರೆಸ್‌ … Continued

ಭಾರೀ ಮಳೆ ಮುನ್ಸೂಚನೆ : ಕರ್ನಾಟಕದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯಕ್ಕೆ ಭಾನುವಾರ ಮುಂಗಾರು ಪ್ರವೇಶವಾಗಿದೆ. ಹೀಗಾಗಿ, ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಸೋಮವಾರ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಮುಂದಿನ 24 ಗಂಟೆಗಳಿಗೆ (ಜೂನ್‌ ೩)ದಕ್ಷಿಣ ಕನ್ನಡ, ಉತ್ತರ ಕರ್ನಾಟಕ ಭಾಗದ ಬಾಗಲಕೋಟೆ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, … Continued

ಕರ್ನಾಟಕ ಪರಿಷತ್​ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಹೆಸರು ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಬಿಜೆಪಿ ಹೈಕಮಾಂಡ್‌ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಮಾಜಿ ಸಚಿವ ಸಿ.ಟಿ.ರವಿ, ಹಾಲಿ ಸದಸ್ಯ ಎನ್‌. ರವಿಕುಮಾರ್ ಹಾಗೂ ಮಾಜಿ ಶಾಸಕ ಎಂ.ಜಿ. ಮುಳೆ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ವಿಧಾನಸಭೆಯಿಂದ ವಿಧಾನಪರಿಷತ್​ನ 11 ಸ್ಥಾನಗಳಿಗೆ ಜೂನ್ 13ರಂದು ಚುನಾವಣೆ ನಡೆಯಲಿದ್ದು, ಶಾಸಕರ ಸಂಖ್ಯೆಗೆ ಅನುಗುಣವಾಗಿ ಸಂಖ್ಯಾಬಲದ ಬಿಜೆಪಿಗೆ … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಸಿಎಂ ಸಿದ್ದರಾಮಯ್ಯ ಪುತ್ರ ಸೇರಿ 8 ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಕಾಂಗ್ರೆಸ್

ಬೆಂಗಳೂರು :  ಕರ್ನಾಟಕ ವಿಧಾನ ಪರಿಷತ್ತು ಚುನಾವಣೆಗೆ ಕಾಂಗ್ರೆಸ್‌ ತನ್ನ 8 ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದೆ. ಹಿರಿಯರು, ಹಾಲಿ ಸದಸ್ಯರಿಗೆ ಆದ್ಯತೆ ನೀಡಲಾಗಿದೆ. ಈ ಬಗ್ಗೆ ಕಾಂಗ್ರೆಸ್‌ ಮಾಧ್ಯಮ ಮಾಹಿತಿ ನೀಡಿದ್ದು, ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕರ್ನಾಟಕ ವಿಧಾನ ಪರಿಷತ್ತು ಚುನಾವಣೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಗೆ ಅನುಮೋದನೆ ನೀಡಿದ್ದಾರೆ ಎಂದು ತಿಳಿಸಿದೆ. … Continued

ಲೋಕಸಭೆ ಚುನಾವಣೆ ಎಕ್ಸಿಟ್‌ ಪೋಲ್‌ ಪ್ರಕಟ : ಕರ್ನಾಟಕದಲ್ಲಿಯೂ ಎನ್‌ಡಿಎ ಹೆಚ್ಚು ಸೀಟು ಗೆಲ್ಲುತ್ತದೆ ಎಂದ ಎಲ್ಲ ಸಮೀಕ್ಷೆಗಳು….

ಲೋಕಸಭೆ ಚುನಾವಣೆಯಲ್ಲಿ ದೇಶದಲ್ಲಿ ಮತ್ತೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಹುತೇಕ ಸಮೀಕ್ಷೆಗಳು ಹೇಳಿವೆ. ಅದೇರೀತಿ ಕರ್ನಾಟಕದಲ್ಲಿಯೂ ಬಹುತೇಕ ಎಲ್ಲ ಸಮೀಕ್ಷೆಗಳು ಎನ್‌ಡಿಎ (ಬಿಜೆಪಿ+ ಜೆಡಿಎಸ್‌ ಮೈತ್ರಿಕೂಟ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂದು ಹೇಳಿದೆ. ಕರ್ನಾಟಕದಲ್ಲಿ 28 ಸ್ಥಾನಗಳಿದ್ದು, ಇದರಲ್ಲಿ ಎನ್‌ಡಿಎ ಮೈತ್ರಿಕೂಟವು ಮುನ್ನಡೆ ಕಾಯ್ದುಕೊಂಡಿದೆ ಎಂದು ಸಮೀಕ್ಷೆ ಹೇಳುತ್ತಿದೆ. … Continued

ಕರ್ನಾಟಕಕ್ಕೆ ಮುಂದಿನ 48 ಗಂಟೆಗಳಲ್ಲಿ ಮುಂಗಾರು ಪ್ರವೇಶ : ಈ ಜಿಲ್ಲೆಗಳಲ್ಲಿ ಭಾರೀ ಗಾಳಿಮಳೆಯ ಮುನ್ಸೂಚನೆ

ಬೆಂಗಳೂರು: ಎಲ್ಲರೂ ನಿರೀಕ್ಷಿಸುತ್ತಿದ್ದ ನೈರುತ್ಯ ಮುಂಗಾರು (southwest monsoon) ಜೂನ್ 2 ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಜೂನ್‌ 5-6ರ ಆಗಮಿಸಲಿದೆ ಎಂದು ನಿರೀಕ್ಷಿಸಲಾಗಿದ್ದ ದಿನಾಂಕಗಳಿಗಿಂತ ಮುಂಚಿತವಾಗಿ ಆಗಮಿಸುತ್ತಿದೆ…! ಭಾರತೀಯ ಹವಾಮಾನ ಇಲಾಖೆ (IMD) ವರದಿ ಮಾಡಿರುವಂತೆ ಕೇರಳಕ್ಕೆ ಗುರುವಾರ (ಮೇ 30) ಮಾನ್ಸೂನ್ ಆಗಮನದ ಹಿನ್ನೆಲೆಯಲ್ಲಿ ಈ ಪ್ರಕಟಣೆ ಬಂದಿದೆ. ನೈಋತ್ಯ ಮಾನ್ಸೂನ್ ಗುರುವಾರ (ಮೇ … Continued

ವಿಧಾನ ಪರಿಷತ್ ಚುನಾವಣೆ : ಕಾಂಗ್ರೆಸ್ಸಿನಲ್ಲಿ 300ಕ್ಕೂ ಹೆಚ್ಚು ಟಿಕೆಟ್ ಆಕಾಂಕ್ಷಿಗಳಿದ್ದಾರೆ : ಡಿಕೆ ಶಿವಕುಮಾರ

ಬೆಂಗಳೂರು: “ವಿಧಾನ ಪರಿಷತ್ ಚುನಾವಣೆ ಟಿಕೆಟ್‌ಗಾಗಿ ಕಾಂಗ್ರೆಸ್ಸಿನಲ್ಲಿ 300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಹೀಗಾಗಿ ಹಂಚಿಕೆ ಟಿಕೆಟ್‌ ಹಂಚಿಕೆ ಬಗ್ಗೆ ಪಕ್ಷದ ಹೈಕಮಾಂಡ್ ತೀರ್ಮಾನಿಸುತ್ತದೆ” ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಹೇಳಿದ್ದಾರೆ. ಟಿಕೆಟ್ ಹಂಚಿಕೆ ಸಂಬಂಧ ಹೈಕಮಾಂಡ್ ಭೇಟಿಗಾಗಿ ದೆಹಲಿಗೆ ಪ್ರಯಾಣ ಬೆಳೆಸುವ ಮುನ್ನ ಶಿವಕುಮಾರ ಅವರು ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ … Continued

ಮುಂಗಾರು ಮಳೆ: ಈ ವರ್ಷ ಕರ್ನಾಟಕಕ್ಕೆ ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ತಿಂಗಳಾಂತ್ಯಕ್ಕೆ ಕೇರಳಕ್ಕೆ ಮುಂಗಾರು ಆಗಮನವಾಗಲಿದ್ದು, ಜೂನ್‌ ಮೊದಲ ವಾರದಲ್ಲಿ ರಾಜ್ಯ ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋುತ್ಯ ಮಾನ್ಸೂನ್‌ ಕುರಿತು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸೋಮವಾರ ಅಂತಿಮ ವರದಿ ಬಿಡುಗಡೆ ಮಾಡಿದೆ. ಜೂನ್‌ನಿಂದ ಸೆಪ್ಟೆಂಬರ್‌ವರೆಗೆ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದಲ್ಲಿ ವಾಡಿಕೆಗಿಂತ ತುಸು ಹೆಚ್ಚು ಮಳೆ … Continued

ಮೇ 31ರಂದೇ ಕರ್ನಾಟಕಕ್ಕೆ ಮುಂಗಾರು ಮಳೆ ಪ್ರವೇಶ : ಈ ಬಾರಿ ಉತ್ತಮ ಮಳೆ ನಿರೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಈ ನಡುವಲ್ಲೇ ಹವಮಾನ ಇಲಾಖೆ ಕರ್ನಾಟಕಕ್ಕೆ ಮೇ 31 ರಂದು ನೈರುತ್ಯ ಮಾನ್ಸೂನ್‌ ಆಗಮಿಸಲಿದೆ ಎಂದು ಮಾಹಿತಿ ನೀಡಿದೆ. ಕಳೆದ ವರ್ಷ ಮುಂಗಾರು ಮಳೆ ಕೈಕೊಟ್ಟು ಕರ್ನಾಟಕ ಸೇರಿದಂತೆ ಹಲವಾರು ರಾಜ್ಯಗಳು ಭೀಕರ ಬರಗಾಲ ಎದುರಿಸಿದ್ದವು. ಆದರೆ, ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆ ಇದೆ … Continued