ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ರಾಜ್ಯ ಸರ್ಕಾರ ಸಿದ್ಧವಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಲೋಕಸಭೆ ಚುನಾವಣೆ ಫಲಿತಾಂಶದ ನಂತರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ಹೇಳಿದ್ದಾರೆ. ಇಂದು, ಶುಕ್ರವಾರ ಮೈಸೂರಿನ ಮೈಲಾರಿ ಹೋಟೆಲ್ ನಲ್ಲಿ ಉಪಾಹಾರ ಸೇವನೆ ಬಳಿಕ … Continued

ಪರಿಷತ್ ಚುನಾವಣೆ: ಕಾಂಗ್ರೆಸ್ಸಿನಿಂದ ಐವರು ಬಂಡಾಯ ಅಭ್ಯರ್ಥಿಗಳ ಉಚ್ಚಾಟನೆ

ಬೆಂಗಳೂರು: ‌ರಾಜ್ಯದಲ್ಲಿ ಜೂನ್‌ 3ರಂದು ನಡೆಯಲಿರುವ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿರುವ ಐವರನ್ನು ಕಾಂಗ್ರೆಸ್ ಗುರುವಾರ ಪಕ್ಷದಿಂದ ಉಚ್ಚಾಟನೆ ಮಾಡಿದೆ. ಕರ್ನಾಟಕ ವಿಧಾನ ಪರಿಷತ್ತಿಗೆ ಒಟ್ಟು 6 ಕ್ಷೇತ್ರಗಳಿಗೆ ಜೂನ್‌ 3ರಂದು ಚುನಾವಣೆ ನಡೆಯಲಿದೆ. ಕಾಂಗ್ರೆಸ್ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, ಟಿಕೆಟ್ ಕೈತಪ್ಪಿದ … Continued

ಬೆಂಗಳೂರಿನ ಮೂರು ಪ್ರತಿಷ್ಠಿತ ಹೋಟೆಲ್​ಗಳಿಗೆ ಬಾಂಬ್​ ಬೆದರಿಕೆ

ಬೆಂಗಳೂರು : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಒಟೆರಾ ಹೋಟೆಲ್ ಸೇರಿದಂತೆ ಮೂರು ಪ್ರತಿಷ್ಠಿತ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಯ ಇಮೇಲ್ ಕಳುಹಿಸಲಾಗಿದ್ದು, ಅಧಿಕಾರಿಗಳು ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾರೆ. ಆಗ್ನೇಯ ಬೆಂಗಳೂರು ಡಿಸಿಪಿ ಪ್ರಕಾರ, ಪೊಲೀಸರು, ಬಾಂಬ್ ಸ್ಕ್ವಾಡ್ ಮತ್ತು ಸ್ನಿಫರ್ ಡಾಗ್‌ಗಳನ್ನು ಹೊಟೇಲ್‌ಗಳಿಗೆ ಕಳುಹಿಸಲಾಗಿದೆ. ಮಧ್ಯರಾತ್ರಿ 2 ಗಂಟೆಗೆ ಬಾಂಬ್​ ಸ್ಫೋಟಿಸುವುದಾಗಿ ಹೇಳಲಾಗಿದೆ. ಗುರುವಾರ ಬೆಳಗ್ಗೆ ಹೋಟೆಲ್ … Continued

ಪ್ರಜ್ವಲ್ ರೇವಣ್ಣ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದು ಮಾಡಲು ಕೋರಿ ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ

ಬೆಂಗಳೂರು : ಲೈಂಗಿಕ ಹಗರಣದ ಆರೋಪದ ನಂತರ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎರಡನೇ ಪತ್ರ ಬರೆದಿದ್ದಾರೆ. ಲೈಂಗಿಕ ದೌರ್ಜನ್ಯದ ಆರೋಪಿತ ವೀಡಿಯೊ ಕ್ಲಿಪ್‌ಗಳನ್ನು ಒಳಗೊಂಡಿರುವ ಪೆನ್ ಡ್ರೈವ್‌ಗಳು ಹೊರಹೊಮ್ಮಿದ ನಂತರ ಜೆಡಿ(ಎಸ್) ಸಂಸದ … Continued

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ಕರ್ನಾಟಕದ ಈ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: : ಅರಬ್ಬೀ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಮೂರು ದಿನ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 23 ರಿಂದ 25 ರವರೆಗೆ ವ್ಯಾಪಕ ಮಳೆಯಾಗಲಿದ್ದು, ಮೇ 23ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಕೊಡಗು, ಮಂಡ್ಯ, … Continued

ಟೆರೇಸ್‌ ಮೇಲೆ ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಬೆಳೆದ ಉಡುಪಿಯ ರೈತ…ಇದರ ಬೆಲೆ ಕೆ.ಜಿ.ಗೆ ₹3 ಲಕ್ಷ…!

ಉಡುಪಿಯ ಶಂಕರಪುರದ ರೈತರೊಬ್ಬರು ತಮ್ಮ ತಾರಸಿ ಮೇಲಿನ ತೋಟದಲ್ಲಿ ವಿಶ್ವದ ಅತ್ಯಂತ ದುಬಾರಿ ಮತ್ತು ಹೆಚ್ಚು ಬೇಡಿಕೆಯಿರುವ ʼಮಿಯಾಜಾಕಿ ತಳಿʼಯ ಮಾವನ್ನು ಬೆಳೆದು ಅಚ್ಚರಿ ಮೂಡಿಸಿದ್ದಾರೆ. ಈ ಮಅವಿನ ಹಣ್ಣಿನ ಬೆಲೆ ಒಂದು ಕಿಲೋಗ್ರಾಂ ಗೆ 3 ಲಕ್ಷ ರೂಪಾಯಿಗಳ ವರೆಗೆ ಇರುತ್ತದೆ. ಉಡುಪಿಯ ಶಂಕರಪುರದ ರೈತರಾದ ಜೋಸೆಫ್ ಲೋಬೊ ಎಂಬವರು ತಮ್ಮ ಮನೆಯ ತಾರಸಿಯಲ್ಲಿ … Continued

ಕರ್ನಾಟಕದಲ್ಲಿ ಇಂದಿನಿಂದ (ಮೇ19) 5 ದಿನ ಧಾರಾಕಾರ ಮಳೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆ ಭಾನುವಾರ(ಮೇ 19)ದಿಂದ ಐದು ದಿನ 17 ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗದ ಜಿಲ್ಲೆಗಳಿಗೆ ಜೋರಾಗಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳು ಹಾಗೂ … Continued

ಎಸ್ಎಸ್ಎಲ್ ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಶನಿವಾರ ಎಸ್​ಎಸ್​​ಎಲ್​ಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಿಸಿದ್ದು, ಜೂನ್​ 14ರಿಂದ 22ರ ವರೆಗೆ ಪರೀಕ್ಷೆ ನಡೆಯಲಿದೆ. ಜೂನ್​​ 7 ರಿಂದ ನಡೆಯಬೇಕಿದ್ದ ಎಸ್ಎಸ್ಎಲ್‌ಸಿ ಪೂರಕ ಪರೀಕ್ಷೆಯನ್ನು ಇತ್ತೀಚೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದೂಡಿತ್ತು. ಇದೀಗ ಪರಿಷ್ಕೃತ ವೇಳಾಪಟ್ಟಿಯನ್ನು ಇಂದು ಮಂಡಳಿಯ … Continued

ಹುಬ್ಬಳ್ಳಿ : ಅಂಜಲಿ ಹತ್ಯೆ ಆರೋಪಿ ಬಂಧನ ; ಈತನ ಬಂಧನವಾಗಿದ್ದೇ ರೋಚಕ

ಹುಬ್ಬಳ್ಳಿ : ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಹುಬ್ಬಳ್ಳಿಯ ಅಂಜಲಿ ಅಂಬಿಗೇರ (20) ಎಂಬ ಯುವತಿ ಹತ್ಯೆ ಆರೋಪಿಯನ್ನು ಗುರುವಾರ ತಡರಾತ್ರಿ ಪೊಲೀಸರು ದಾವಣಗೆರೆ ಬಳಿ ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಕೊಲೆ ಆರೋಪಿ ಆಟೋ ಚಾಲಕ ಗಿರೀಶ (ವಿಶ್ವ) ಸಾವಂತ (21) ಎಂಬಾತನನ್ನು ದಾವಣಗೆರೆ ಬಳಿ ರೈಲ್ವೇ ಪೊಲೀಸರ ಸಹಾಯದಿಂದ ಬಂಧಿಸಲಾಗಿದೆ. ರೈಲಿನಿಂದ ಜಿಗಿದು ಗಾಯಗೊಂಡಿದ್ದ ಆರೋಪಿಯನ್ನು … Continued

ಕರ್ನಾಟಕದ ಈ ಪ್ರದೇಶಗಳೂ ಸೇರಿ ದಕ್ಷಿಣ ಭಾರತದಲ್ಲಿ ಭಾರೀ ಮಳೆ ಮುನ್ಸೂಚನೆ

ನವದೆಹಲಿ: ಭಾರತೀಯ ಹವಾಮಾನ ಇಲಾಖೆ (IMD) ಉತ್ತರ ಭಾರತಕ್ಕೆ ಉಷ್ಣ ಅಲೆಯ ಎಚ್ಚರಿಕೆ ನೀಡಿದ್ದು, ವಿಶೇಷವಾಗಿ ದೆಹಲಿ, ರಾಜಸ್ಥಾನ, ಪಂಜಾಬ್ ಮತ್ತು ಹರಿಯಾಣದ ಮೇಲೆ ಪರಿಣಾಮ ಬೀರುವ ನಿರೀಕ್ಷೆಯಿದೆ ಎಂದು ಗುರುವಾರ ಹೇಳಿದೆ. ಇದಕ್ಕೆ ವ್ಯತಿರಿಕ್ತವಾಗಿ, ದಕ್ಷಿಣ ಭಾರತದಲ್ಲಿ ಮೇ 22 ರವರೆಗೆ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ದಕ್ಷಿಣ ಭಾರತದಲ್ಲಿ ಮುಂದಿನ ಏಳು ದಿನಗಳ … Continued