ವೀಡಿಯೊ..| ಬೀದರ : ಬಸ್‌ ಸೀಟಿಗಾಗಿ ಬಟ್ಟೆ ಎಳೆದಾಡಿ ಚಪ್ಪಲಿಯಿಂದ ಹೊಡೆದಾಡಿಕೊಂಡ ಮಹಿಳೆಯರು…!

ಬಸ್ ಸೀಟಿಗಾಗಿ ಇಬ್ಬರು ಮಹಿಳೆಯರು ಪರಸ್ಪರ ಚಪ್ಪಲಿಯಿಂದ ಹೊಡೆದಾಡಿಕೊಂಡ ಘಟನೆ ಬೀದರ ಜಿಲ್ಲೆಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಚಪ್ಪಲಿಯಿಂದ ಹೊಡೆದಾಡಿಕೊಂಡ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಬೀದರಿನಿಂದ ಕಲಬುರಗಿಗೆ ಹೋಗುವ ಬಸ್ಸಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಸರ್ಕಾರದ ಶಕ್ತಿ ಯೋಜನೆ ಅಡಿ ಉಚಿತ ಟಿಕೆಟ್ ಪಡೆದಿದ್ದ ಇಬ್ಬರು ಮಹಿಳೆಯರು ಪರಸ್ಪರ ಕಿತ್ತಾಡಿಕೊಂಡಿದ್ದಾರೆ. ಬಸ್‌ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಒಂದು ವಾರದ ವರೆಗೆ ಜೋರಾಗಿ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಸುಮಾರು 10 ಜಿಲ್ಲೆಗಳಲ್ಲಿ ಇಂದಿನಿಂದ (ಮೇ 15) ಒಂದು ವಾರ ಜೋರಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಾಮರಾಜನಗರ, ಹಾಸನ, ಕೊಡಗು,ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಜೋರಾಗಿ ಮಳೆಯಾಗಲಿದೆ. ಮಳೆಯ … Continued

ಸಿಹಿ ಸುದ್ದಿ ನೀಡಿದ ಹವಾಮಾನ ಇಲಾಖೆ : ನೈಋತ್ಯ ಮಾನ್ಸೂನ್ ಮುಂಚಿತವಾಗಿ ಆಗಮನ ; ಮುಂಗಾರು ಪೂರ್ವ ಮಳೆಯೂ ಜೋರು…!

ನವದೆಹಲಿ : ನೈಋತ್ಯ ಮಾನ್ಸೂನ್‌ ಮೇ 19ರೊಳಗೆ ಅಂದರೆ ಸಾಮಾನ್ಯವಾಗಿ ಆಗಮಿಸುವುದಕ್ಕಿಂತ ಮೂರು ದಿನ ಮುಂಚಿತವಾಗಿ ದಕ್ಷಿಣ ಅಂಡಮಾನ್ ಸಮುದ್ರ, ಬಂಗಾಳ ಕೊಲ್ಲಿಯ ಕೆಲವು ಭಾಗಗಳು ಮತ್ತು ನಿಕೋಬಾರ್ ದ್ವೀಪಗಳನ್ನು ಪ್ರವೇಶಿಸುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ. ನೈಋತ್ಯ ಮಾನ್ಸೂನ್‌ ಸಾಮಾನ್ಯವಾಗಿ ಮೇ 22 ರಂದು ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಕ್ಕೆ … Continued

ವಿಧಾನ ಪರಿಷತ್ ಚುನಾವಣೆ : ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ; ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್‌

ಉಡುಪಿ : ವಿಧಾನ ಪರಿಷತ್‌ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಟಿಕೆಟ್ ಆಕಾಂಕ್ಷಿಯಾಗಿದ್ದ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ ತೀರ್ಮಾನಿಸಿದ್ದಾರೆ. ನೈರುತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ಅವರು ಕರಂಬಳ್ಳಿಯ ತಮ್ಮ ನಿವಾಸದಲ್ಲಿ ಮಾಧ್ಯಮದವರಿಗೆ ತಿಳಿಸಿದ್ದಾರೆ. ನಾನು ಬಿಜೆಪಿ ಕಾರ್ಯಕರ್ತರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತೇನೆ. ಸೋತರೂ … Continued

ಕರ್ನಾಟಕದಲ್ಲಿ ಮೇ 13ರಿಂದ ಎರಡ್ಮೂರು ದಿನ ಜೋರು ಮಳೆ ಸಾಧ್ಯತೆ ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಿದೆ. ಶನಿವಾರ ಹಾಗೂ ಭಾನುವಾರ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಗುಡುಗು-ಸಿಡಿಲಿನಿಂದ ಕೂಡಿದ ಮಳೆ ಸುರಿದಿದೆ. ಮೇ 13ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗುವ ಸಂಭವವಿದ್ದು, ಹವಾಮಾನ ಇಲಾಖೆ ಕೆಲ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ನೀಡಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ, … Continued

ಲೈಂಗಿಕ ದೌರ್ಜನ್ಯ ಪ್ರಕರಣ: ಬಿಜೆಪಿ ಮುಖಂಡ ದೇವರಾಜೇಗೌಡಗೆ 14 ದಿನ ನ್ಯಾಯಾಂಗ ಬಂಧನ

ಹಾಸನ : ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿರುವ ಹಾಸನ ಬಿಜೆಪಿ ಮುಖಂಡ ಹಾಗೂ ವಕೀಲ ಡಿ. ದೇವರಾಜೇಗೌಡ ಅವರನ್ನು ಹಾಸನ ಜಿಲ್ಲೆಯ ಹೊಳೆನರಸೀಪುರ ನ್ಯಾಯಾಲಯವು ಶನಿವಾರ 14 ದಿನ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಆರೋಪಿ ದೇವರಾಜೇಗೌಡ ಅವರನ್ನು ಶನಿವಾರ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಎಸ್‌. … Continued

ಕರ್ನಾಟಕ ವಿಧಾನ ಪರಿಷತ್ ಚುನಾವಣೆ : ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ವಿಧಾನ ಪರಿಷತ್ ಚುನಾವಣೆಯಲ್ಲಿಯೂ ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ ಬೆನ್ನಲ್ಲೇ ಪರಿಷತ್‌ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. ಪರಿಷತ್ತಿನ 6 ಕ್ಷೇತ್ರಗಳ ಪೈಕಿ ಐದು ಕ್ಷೇತ್ರದಲ್ಲಿ ಬಿಜೆಪಿ ಸ್ಪರ್ಧಿಸುತ್ತಿದೆ. ಒಂದು ಸ್ಥಾನವನ್ನು ಜೆಡಿಎಸ್‌ಗೆ ನೀಡಲಾಗಿದೆ. ಈಶಾನ್ಯ ಪದವೀಧರ, ನೈರುತ್ಯ, ಬೆಂಗಳೂರು ಪದವೀಧರ, ಆಗ್ನೇಯ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಗಾಳಿ ಮಳೆ ಮುನ್ಸೂಚನೆ

ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮೇ 17 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೀದರ್ ನಿಂದ ಚಾಮರಾಜನಗರದ ವರೆಗೂ ಮಳೆಯಾಗುವ ಲಕ್ಷಣವಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಮೇ 10 ರಂದು ಬೀದರ, ಬೆಳಗಾವಿ, ಧಾರವಾಡ, ವಿಜಯನಗರ, ಶಿವಮೊಗ್ಗ, ರಾಯಚೂರು, ದಕ್ಷಿಣ … Continued

ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆ

ಬೆಂಗಳೂರು : 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ (ಮೇ 9) ಪ್ರಕಟವಾಗಿದೆ. ಇದರ ಬೆನ್ನಲ್ಲೇ ಈಗ ಎಸ್‌ಎಸ್‌ಎಲ್‌ಸಿ ಪರೀಕ್ಷೆ -2ರ ವೇಳಾಪಟ್ಟಿ ಬಿಡುಗಡೆಯಾಗಿದೆ. ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಇನ್ನೂ ಉತ್ತಮ ಅಂಕಗಳನ್ನು ಗಳಿಸಲು ಪರೀಕ್ಷಾ ಮಂಡಳಿ ಅವಕಾಶ ಕಲ್ಪಿಸಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ವೇಳಾಪಟ್ಟಿ (SSLC 2 … Continued

ಪ್ರಚೋದನಾಕಾರಿ ವೀಡಿಯೊ : ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ಅಧ್ಯಕ್ಷ ನಡ್ಡಾ, ವಿಜಯೇಂದ್ರಗೆ ಪೊಲೀಸ್‌ ನೋಟಿಸ್‌

ಬೆಂಗಳೂರು : ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿ ಇರುವ ಸಮಯದಲ್ಲಿ ಸಾಮಾಜಿಕ ಜಾಲತಾಣದಲ್ಲಿ ವರ್ಗಗಳ ನಡುವೆ ದ್ವೇಷ ಮತ್ತು ವೈಮನಸ್ಸು ಉಂಟುಮಾಡುವ ರೀತಿಯಲ್ಲಿ ಪೋಸ್ಟ್‌ ಮಾಡಿದ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ , .ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಅವರಿಗೆ ಬೆಂಗಳೂರಿನ … Continued