ನಾಳೆ (ಮೇ 9) ಎಸ್‌ ಎಸ್‌ ಎಲ್‌ ಸಿ ಫಲಿತಾಂಶ ಪ್ರಕಟ ; ಫಲಿತಾಂಶ ಎಲ್ಲಿ ನೋಡುವುದು..? ಇಲ್ಲಿದೆ ಮಾಹಿತಿ

ಬೆಂಗಳೂರು: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ (SSLC Exam) ಫಲಿತಾಂಶವು ಮೇ 9ರ ಬೆಳಗ್ಗೆ 10:30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ಅನ್ನು ದಿನಾಂಕ: 25.03.2024 … Continued

ಪತಿ ಸಾವಿನ ಸುದ್ದಿ ತಿಳಿದ ನಂತರವೂ ಮತಗಟ್ಟೆಗೆ ಬಂದು ಮತ ಚಲಾಯಿಸಿದ ಪತ್ನಿ

ಶಿವಮೊಗ್ಗ: ಪತಿ ನಿಧನರಾದ ಸುದ್ದಿ ತಿಳಿದ ನಂತರವೂ ಮಂಗಳವಾರ ಮತಕೇಂದ್ರಕ್ಕೆ ತೆರಳಿ ಪತ್ನಿ ಮತ ಚಲಾಯಿಸಿದ್ದಾರೆ ಎಂದು ವರದಿಯಾಗಿದೆ. ಆ ಮೂಲಕ ಪ್ರಜಾಪ್ರಭುತ್ವದ ಬಲಪಡಿಸುವ ಆಶಯದಲ್ಲಿ ಅವರು ಪಾಲ್ಗೊಂಡಿದ್ದಾರೆ. ತಾಲೂಕಿನ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ ಆಡುಗೋಡು ಗ್ರಾಮದ ಕಲಾವತಿ ಎಂಬ ಮಹಿಳೆ ತನ್ನ ಗಂಡನ ಕಳೆದುಕೊಂಡ ದುಃಖದ ನಡುವೆಯೂ ಮತಚಲಾಯಿಸಿದ್ದಾರೆ. ನಾಲ್ಕೈದು ದಿನಗಳ ಅನಾರೋಗ್ಯದ ಹಿನ್ನೆಲೆಯಲ್ಲಿ … Continued

ರಾಜ್ಯದ ಲೋಕಸಭೆ ಚುನಾವಣೆ 2ನೇ ಹಂತದಲ್ಲಿ ಶೇ.70.03 ಮತದಾನ; ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನ ? ಇಲ್ಲಿದೆ ವಿವರ..

ಬೆಂಗಳೂರು: ಎರಡನೇ ಹಂತದ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ 14 ಕ್ಷೇತ್ರಗಳಲ್ಲಿ ಮಂಗಳವಾರ ನಡೆದ ಮತದಾನ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಈ ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 70.03 ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 14 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಮತದಾನ ಆರಂಭವಾಗಿದ್ದು, ಸಂಜೆ 6 ಗಂಟೆವರೆಗೆ ಮತದಾನಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಜನರು ಬಿಸಿಲಿನ ನಡುವೆಯೂ … Continued

ಮೇ 7ರ ಚುನಾವಣೆ ಬಳಿಕ ಪ್ರಜ್ವಲ್ ರೇವಣ್ಣ ಭಾರತಕ್ಕೆ ?

ಬೆಂಗಳೂರು : ವಿದೇಶದಲ್ಲಿರುವ ಲೈಂಗಿಕ ದೌರ್ಜನ್ಯ ವೀಡಿಯೊದ ಪ್ರಕರಣ ಪ್ರಮುಖ ಆರೋಪಿ ಸಂಸದ ಪ್ರಜ್ವಲ್‌ ರೇವಣ್ಣ ಅವರು ಮೇ 7ರಂದು ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮುಗಿದ ನಂತರ ಭಾರತಕ್ಕೆ ವಾಪಸಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದ ದಿನವೇ, ಅಂದರೆ ಏಪ್ರಿಲ್ 26ರ ಮಧ್ಯರಾತ್ರಿಯೇ ಪ್ರಜ್ವಲ್‌ … Continued

ಪ್ರಜ್ವಲ್ ರೇವಣ್ಣ ವಿರುದ್ಧ ಬ್ಲೂ ಕಾರ್ನರ್ ನೋಟಿಸ್ ಜಾರಿ : ಗೃಹ ಸಚಿವ ಡಾ..ಪರಮೇಶ್ವರ

ಬೆಂಗಳೂರು : ಲೈಂಗಿಕ ಕಿರುಕುಳ ಪ್ರಕರಣ ಎದುರಿಸುತ್ತಿರುವ ಹಾಸನ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಭಾರತಕ್ಕೆ ಕರೆತರಲು ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ಇಂಟರ್‌ಪೋಲ್‌ ಸಹಾಯ ಪಡೆಯಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಭಾನುವಾರ ಹೇಳಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದಂತೆ ವ್ಯಕ್ತಿಯ ಗುರುತು, ಸ್ಥಳ ಅಥವಾ ಚಟುವಟಿಕೆಗಳ ಕುರಿತು ಅದರ ಸದಸ್ಯ ರಾಷ್ಟ್ರಗಳಿಂದ … Continued

ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ 3-4 ದಿನ ಮಳೆ ಬೀಳುವ ಮುನ್ಸೂಚನೆ

ಬೆಂಗಳೂರು : ರಾಜ್ಯದಲ್ಲಿ ಮುಂದಿನ ಐದಾರು ದಿನಗಳ ಕಾಲ ಕೆಲವು ಜಿಲ್ಲೆಗಳಲ್ಲಿ ಮಳೆಯಾಗಬಹುದು ಹಾಗೂ ಇನ್ನೂ ಕೆಲವು ಜಿಲ್ಲೆಗಳಲ್ಲಿ ಬಿಸಿಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 4ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು -ಸಿಡಿಲಿನಿಂದ ಕೂಡಿದ ಮಳೆಯಾಗಬಹುದು. ಅಲ್ಲದೆ, … Continued

ಬೆಂಗಳೂರಿನ ಹಲವೆಡೆ ಜೋರಾಗಿ ಮಳೆ

ಬೆಂಗಳೂರು: ಬಿಸಿಲಿನಿಂದ ಕಂಗೆಟ್ಟ ರಾಜಧಾನಿ ಬೆಂಗಳೂರು ಜನತೆಗೆ ಮಳೆರಾಯ ಬುಧವಾರ ಕೊಂಚ ತಂಪೆರೆದಿದ್ದಾನೆ. ನಗರದ ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಾಗಿದ್ದು ಬಿಸಿಲಿನಿಂದ ಬೇಸತ್ತಿದ್ದ ಜನ ಕೊಂಚ ರಿಲೀಫ್ ಆಗಿದ್ದಾರೆ. ಸುಮಾರು 5 ತಿಂಗಳ ಬಳಿಕ ಬೆಂಗಳೂರಿನಲ್ಲಿ ಜೋರಾಗಿ ಮಳೆಯಾಗಿದೆ. ಗುರುವಾರ ಸಂಜೆ 6 ಗಂಟೆ ಸುಮಾರಿಗೆ ಆರಂಭವಾದ ಮಳೆಯು ತುಸು ಕಾಲ ಜೋರಾಗಿ ಸುರಿಯಿತು. ಆ … Continued

ರಾಜ್ಯದ ವಿಧಾನ ಪರಿಷತ್ತಿನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ಕರ್ನಾಟಕ ವಿಧಾನಪರಿಷತ್‌ನ (Karnataka Legislative Council Elections 2024) ಆರು ಸ್ಥಾನಗಳಿಗೆ ಚುನಾವಣೆ ಘೋಷಣೆಯಾಗಿದೆ. 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಆಗಿದ್ದು, ಜೂನ್ 3 ರಂದು ಮತದಾನ ನಡೆಯಲಿದೆ ಹಾಗೂ ಜೂನ್ 6 ರಂದು ಮತ ಎಣಿಕೆ ನಡೆಯಲಿದೆ. ಬೆಂಗಳೂರು ಪದವೀಧರ ಕ್ಷೇತ್ರ , ಕರ್ನಾಟಕ ಈಶಾನ್ಯ … Continued

ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ದೊಡ್ಡ ಟ್ವಿಸ್ಟ್‌: ವೀಡಿಯೊ ನೀಡಿದ್ದು ನಾನೇ ಎಂದಿದ್ದ ಮಾಜಿ ಕಾರು ಚಾಲಕ ಕಾರ್ತಿಕ್ ನಾಪತ್ತೆ…!?

ಹಾಸನ : ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ದಿನಕ್ಕೊಂದು ಟ್ವಿಸ್ಟ್ ಆಗುತ್ತಿದೆ. ಪ್ರಜ್ವಲ್​​ ರೇವಣ್ಣ ಅವರ ಅಶ್ಲೀಲ ವಿಡಿಯೋ ನೀಡಿದ್ದು ನಾನೇ ಎಂದು ಹೇಳಿದ್ದ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್​ ಇದೀಗ ನಾಪತ್ತೆ ಆಗಿದ್ದಾರೆ ಎಂದು ಹೇಳಲಾಗುತ್ತಿದೆ. ಹಾಸನದ ಪೆನ್‌ಡ್ರೈವ್‌ ಪ್ರಕರಣ ದೇಶದಾದ್ಯಂತ ಸುದ್ದಿಯಾಗುತ್ತಿದ್ದಂತೆ ಎರಡು … Continued

ಏಪ್ರಿಲ್‌ ತಿಂಗಳಲ್ಲಿ ದಾಖಲೆಯ ಪ್ರಮಾಣದ ಜಿಎಸ್‌ಟಿ ಸಂಗ್ರಹ ; ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ದೇಶದಲ್ಲಿ ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ) ಸಂಗ್ರಹ ದಾಖಲೆ ಪ್ರಮಾಣದಲ್ಲಿ ಏರಿಕೆಯಾಗಿದ್ದು ಏಪ್ರಿಲ್ ತಿಂಗಳಲ್ಲಿ ₹2.10 ಲಕ್ಷ ಕೋಟಿ ಸಂಗ್ರಹವಾಗಿದೆ. ಇದೇ ಮೊದಲ ಬಾರಿಗೆ ಜಿಎಸ್‌ಟಿ ಸಂಗ್ರಹ 2 ಲಕ್ಷ ಕೋಟಿ ರೂ. ಗಡಿ ದಾಟಿದೆ. ಈ ಕುರಿತಂತೆ ಹಣಕಾಸು ಸಚಿವಾಲಯವು ಪ್ರಕಟಣೆ ಹೊರಡಿಸಿದೆ. ದೇಶೀಯ ವಹಿವಾಟು ಮತ್ತು ಆಮದು ಹೆಚ್ಚಳದಿಂದ ತೆರಿಗೆ ಸಂಗ್ರಹವೂ … Continued