41.8 ಡಿಗ್ರಿ ತಲುಪಿದ ಬೆಂಗಳೂರು ತಾಪಮಾನ ; ರಾಜ್ಯದ ಈ ಜಿಲ್ಲೆಗಳಲ್ಲಿ ನಾಲ್ಕೈದು ದಿನ ಬಿಸಿಗಾಳಿ ಮುನ್ನೆಚ್ಚರಿಕೆ

ಬೆಂಗಳೂರು ; ಪ್ರಸಕ್ತ ವರ್ಷ ಬೆಂಗಳೂರು ಸೇರಿದಂತೆ ಕರ್ನಾಟಕದ ಬಹುತೇಕ ಜಿಲ್ಲಿಗಳಲ್ಲಿ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಇದರಿಂದ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿದೆ. ಆರೋಗ್ಯ ಇಲಾಖೆ ಬಿಸಿಲಿನಲ್ಲಿ ಕೆಲಸಗಳಿಂದ ದೂರವಿರುವಂತೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಈ ವರ್ಷದ ಗರಿಷ್ಠ 41.8 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ಬೆಂಗಳೂರಿನ ಇತಿಹಾಸದಲ್ಲಿ ದಾಖಲಾಗಿರುವ 3ನೇ ಗರಿಷ್ಠ ತಾಪಮಾನವಾಗಿದೆ. ಮಂಗಳವಾರ … Continued

ಕೊನೆಗೂ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ

ಬೆಂಗಳೂರು : ಬರ ಪರಿಹಾರ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದ ಬಳಿಕ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 3,454 ಕೋಟಿ ರೂಪಾಯಿ ಬರ ಪರಿಹಾರವನ್ನು ಬಿಡುಗಡೆ ಮಾಡಿದೆ. ಅಲ್ಲದೆ, ತಮಿಳುನಾಡಿಗೆ 275 ಕೋಟಿ ರೂ. ನೆರೆ ಪರಿಹಾರವನ್ನು ಕೂಡ ಬಿಡುಗಡೆ ಮಾಡಿದೆ. ಕಳೆದ ವರ್ಷ ನೈರುತ್ಯ ಮಾನ್ಸೂನ್‌ ವಿಫಲವಾಗಿ ರಾಜ್ಯದಲ್ಲಿ ಭೀಕರ … Continued

ಏಪ್ರಿಲ್‌ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಹಲವೆಡೆ ಮಳೆ ಏಪ್ರಿಲ್‌ 30ರಿಂದ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐಎಂಡಿ ಪ್ರಕಾರ ಏಪ್ರಿಲ್‌ 27, 28 ಮತ್ತು 29ರಂದು ರಾಜ್ಯಾದ್ಯಂತ ಒಣಹವೆ ಮುಂದುವರೆಯಲಿದೆ. ಏಪ್ರಿಲ್‌ 30 ರಿಂದ ಮೇ 3 ರವರೆಗೆ ರಾಜ್ಯದ ಹಲವೆಡೆ ಮಳೆಯಾಗಲಿದೆ. ಏಪ್ರಿಲ್‌ 30ರಂದು ಬೀದರ, ಕಲಬುರಗಿ, ಯಾದಗಿರಿ, ವಿಜಯಪುರ, ಚಿಕ್ಕಮಗಳೂರು, … Continued

ಲೋಕಸಭಾ ಚುನಾವಣೆ : ಕರ್ನಾಟಕದ ಮೊದಲ ಹಂತದಲ್ಲಿ ಶೇ. 69.23 ಮತದಾನ ; 14 ಕ್ಷೇತ್ರಗಳ ಮತದಾನದ ಪ್ರಮಾಣದ ವಿವರ…

ಬೆಂಗಳೂರು:  ಲೋಕಸಭಾ ಚುನಾವಣೆ ಕರ್ನಾಟಕದ ಮೊದಲ ಹಂತದ 14 ಕ್ಷೇತ್ರಗಳಲ್ಲಿ ಶುಕ್ರವಾರ ಮತದಾನ ಪೂರ್ಣಗೊಂಡಿದೆ. ಇತ್ತೀಚಿನ ಮಾಹಿತಿಯ ಪ್ರಕಾರ 14 ಲೋಕಸಭಾ ಕ್ಷೇತ್ರಗಳಲ್ಲಿ ಒಟ್ಟು 69.23 ರಷ್ಟು ಮತದಾನ ನಡೆದಿದೆ. ಚಾಮರಾಜನಗರ ಜಿಲ್ಲೆಯ ಗ್ರಾಮವೊಂದರಲ್ಲಿ ಮೂಲಸೌಕರ್ಯ ನೀಡದೇ ಇದ್ದುದ್ದಕ್ಕೆ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಮತಯಂತ್ರಕ್ಕೆ ಹಾನಿ ಮಾಡಿದ್ದು ಹೊರತುಪಡಿಸಿದರೆ ರಾಜ್ಯದಲ್ಲಿ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಈ … Continued

ಕರ್ನಾಟಕದ ಈ ಜಿಲ್ಲೆಗಳಲ್ಲಿ 3-4 ದಿನ ಬಿಸಿಗಾಳಿ : ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಗುರುವಾರದಿಂದ ಐದು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಗಾಳಿ ಎಚ್ಚರಿಕೆ ನೀಡಿದ್ದು, ಜನರು ಬೆಳಗ್ಗೆ 11 ರಿಂದ ಸಂಜೆ 4 ರವರೆಗೆ ಆದಷ್ಟು ಹೊರಗೆ ಹೋಗಬೇಡಿ ಎಂದು ಸಲಹೆ ನೀಡಿದೆ. ಏಪ್ರಿಲ್‌ 26ರಂದು ವಿಜಯಪುರ, ಯಾದಗಿರಿ, ಕೊಪ್ಪಳ, ರಾಯಚೂರು, ಬಾಗಲಕೋಟೆ, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ಮೈಸೂರು, … Continued

ಬಿಜೆಪಿಯಿಂದ ಕೆ.ಎಸ್‌. ಈಶ್ವರಪ್ಪ ಉಚ್ಚಾಟನೆ

ಬೆಂಗಳೂರು: ಶಿವಮೊಗ್ಗ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡಿರುವ ಕೆ.ಎಸ್. ಈಶ್ವರಪ್ಪ ಅವರನ್ನು ಸೋಮವಾರ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಈ ಬಗ್ಗೆ ಸೋಮವಾರ ಸಂಜೆ ರಾಜ್ಯ ಬಿಜೆಪಿ ಘಟಕದಿಂದ ಉಚ್ಚಾಟನೆ ಮಾಡಿ ಆದೇಶ ಹೊರಡಿಸಿದ್ದು, ಪಕ್ಷದ ಆದೇಶವನ್ನು ಉಲ್ಲಂಘಿಸಿ ನೀವು ಶಿವಮೊಗ್ಗದಿಂದ ಸ್ಪರ್ಧೆ ಮಾಡಿರುವುದು ಪಕ್ಷದ ಮುಜುಗರಕ್ಕೆ ಕಾರಣವಾಗಿದೆ. ಇದು ಪಕ್ಷದ ಶಿಸ್ತು … Continued

ಹುಬ್ಬಳ್ಳಿಯ ನೇಹಾ ಹಿರೇಮಠ ಹತ್ಯೆ ಪ್ರಕರಣ ತನಿಖೆ ಸಿಐಡಿಗೆ ಹಸ್ತಾಂತರ

ಬೆಂಗಳೂರು: ಹುಬ್ಬಳ್ಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿದೆ. ಕೆಲ ದಿನಗಳ ಹಿಂದೆ ಬಿವಿಬಿ ಕಾಲೇಜು ಕ್ಯಾಂಪಸ್‌ನಲ್ಲಿ ನೇಹಾ ಹಿರೇಮಠ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಫಯಾಜ್‌ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಂತರ ರಾಜ್ಯಾದ್ಯಂತ ಈ ಬಗ್ಗೆ ಭರಾಇ ಪ್ರತಿಭಟನೆಯಾಗಿತ್ತು. ಇದೀಗ ರಾಜ್ಯ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ ; ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಕೆಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಎರಡು ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಯೆಲ್ಲೊ ಹಾಗೂ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಿದೆ. ಏಪ್ರಿಲ್‌ 21ರಂದು ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡಕ್ಕೆ ಯೆಲ್ಲೊ ಅಲರ್ಟ್ ನೀಡಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, … Continued

ಕಾರು ಅಡ್ಡ ಹಾಕಿ ನಟಿ ಹರ್ಷಿಕಾ ಪೂಣಚ್ಚ ದಂಪತಿಗೆ ಕಿರುಕುಳ : “ನಾವು ಪಾಕಿಸ್ತಾನ ಅಥವಾ ಅಫ್ಘಾನಿಸ್ತಾನದಲ್ಲಿದ್ದೇವೆಯೇ ಎಂದು ನಟಿ ಪ್ರಶ್ನೆ

ಬೆಂಗಳೂರು : ಸ್ಯಾಂಡಲ್‌ವುಡ್ ನಟಿ ಹರ್ಷಿಕಾ ಮತ್ತು ನಟ ಭುವನ್ ಪೊನ್ನಣ್ಣ ದಂಪತಿ ಬೆಂಗಳೂರಿನಲ್ಲಿ ತಮಗಾದ ಕರಾಳ ಅನುಭವವೊಂದನ್ನು ಬಿಚ್ಚಿಟ್ಟಿದ್ದಾರೆ. ರೆಸ್ಟೋರೆಂಟ್‌ವೊಂದಕ್ಕೆ ಊಟಕ್ಕೆ ಹೋದಾಗ, ಅಲ್ಲಿನ ಕೆಲವರು ತಮ್ಮ ಪತಿ ಭುವನ್ ಮೇಲೆ ಹಲ್ಲೆ ಮಾಡಿದ್ದಾರೆ. “ನಾವು ಕನ್ನಡದಲ್ಲಿ ಮಾತನಾಡಿದ್ದೇ ಅವರಿಗೆ ತಪ್ಪಾಗಿ ಕಾಣಿಸಿದೆ” ಎಂದು ನಟಿ ಹರ್ಷಿಕಾ ಪೂಣಚ್ಚ ಆರೋಪಿಸಿದ್ದು, ಈ ಬಗ್ಗೆ ಸುದೀರ್ಘವಾಗಿ … Continued

ಕರ್ನಾಟಕದಲ್ಲಿ ಪೂರ್ವ ಮುಂಗಾರು ಚುರುಕು; ಏಪ್ರಿಲ್‌ 19 ರಿಂದ ಮೂರು ದಿನ ಈ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಹಲವೆಡೆ ಮಳೆಯಾಗಿದೆ. ಏಪ್ರಿಲ್‌ 19 ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, … Continued