ಏಪ್ರಿಲ್‌ 20ರಂದು ಕರ್ನಾಟಕಕ್ಕೆ ಪ್ರಧಾನಿ ಮೋದಿ, ಎರಡು ಚುನಾವಣಾ ಸಮಾವೇಶದಲ್ಲಿ ಭಾಗಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಏ.20ರಂದು ಕರ್ನಾಟಕಕ್ಕೆ ಆಗಮಿಸಲಿದ್ದು, ಎರಡು ವಿಜಯ ಸಂಕಲ್ಪ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ವಿ. ಸುನೀಲಕುಮಾರ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏ.20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರ ಮತ್ತು ಕೋಲಾರ ಸೇರಿ ಚಿಕ್ಕಬಳ್ಳಾಪುರದಲ್ಲಿ ಸಭೆ, ಸಂಜೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಬೃಹತ್ ಸಾರ್ವಜನಿಕ … Continued

ಲೋಕಸಭೆ ಚುನಾವಣೆ : ಬಿಜೆಪಿ ಮೈತ್ರಿಕೂಟ Vs ಕಾಂಗ್ರೆಸ್‌ ಮೈತ್ರಿಕೂಟದ ಜಿದ್ದಾಜಿದ್ದಿ ಸ್ಪರ್ಧೆಯಲ್ಲಿ ಯಾರಿಗೆ ಎಷ್ಟು ಸ್ಥಾನಗಳು..? ಎಬಿಪಿ-ಸಿವೋಟರ್ ಸಮೀಕ್ಷೆ ಏನು ಹೇಳುತ್ತದೆ..?

ನವದೆಹಲಿ : 2024ರ ಲೋಕಸಭೆ ಚುನಾವಣೆಗೂ ಮುನ್ನ ನಡೆದ ಬಹು ನಿರೀಕ್ಷಿತ ಎಬಿಪಿ-ಸಿವೋಟರ್ ಸರ್ವೆಯು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಸಂಭವನೀಯ ಫಲಿತಾಂಶಗಳ ಮೇಲೆ ಬೆಳಕು ಚೆಲ್ಲಿದೆ. ಇತ್ತೀಚಿನ ಎಬಿಪಿ-ಸಿವೋಟರ್ (ABP-CVoter) ಅಭಿಪ್ರಾಯ ಸಮೀಕ್ಷೆ ಪ್ರಕಾರ, ಒಟ್ಟು 543 ಸ್ಥಾನಗಳಲ್ಲಿ ಎನ್‌ಡಿಎ 373 ಗೆಲ್ಲುವ ಮೂಲಕ ಭರ್ಜರಿ ಗೆಲುವು ಸಾಧಿಸುವ ನಿರೀಕ್ಷೆಯಿದೆ. ಬಿಜೆಪಿ ಸ್ವಂತವಾಗಿ … Continued

ನಾಳೆಯಿಂದ ಸಿಇಟಿ ಪರೀಕ್ಷೆ ಆರಂಭ

ಬೆಂಗಳೂರು : ವೃತ್ತಿಪರ ಕೋರ್ಸ್‍ಗಳಿಗೆ 2024ನೇ ಸಾಲಿನ ಸಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಪರೀಕ್ಷೆಗೆ ನಾಳೆಯಿಂದ (ಏಪ್ರಿಲ್‌ 18) ರಿಂದ ನಡೆಯಲಿದೆ. ಪರೀಕ್ಷೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕೆಲವು ಷರತ್ತು ಹಾಗೂ ಸೂಚನೆಗಳನ್ನು ಪ್ರವೇಶ ಪತ್ರದೊಂದಿಗೆ ನೀಡಿದೆ. ಈ ಬಾರಿ ದಾಖಲೆ ಪ್ರಮಾಣದಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕ ಪರೀಕ್ಷಾ … Continued

ಏಪ್ರಿಲ್‌ 18, 19ರಂದು ಕರ್ನಾಟಕದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು : ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಏಪ್ರಿಲ್ 18, 19ರಂದು ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆ ಸುರಿಯುವ ಮುನ್ಸೂಚನೆ ನಂತರ ಈ ಎರಡು ದಿನ ಬಹುತೇಕ ಎಲ್ಲ ಜಿಲ್ಲೆಗಳಿಗೂ  ಐಎಂಡಿ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನು ಪ್ರತಿ ಗಾಳಿಯ ವೇಗವು ಗಂಟೆಗೆ 30-40 ಕಿಲೋ … Continued

ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್​ 18ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು : ಕೆಲವು ದಿನಗಳಿಂದ ರಾಜ್ಯದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದ್ದು, ಶನಿವಾರ(ಏಪ್ರಿಲ್‌ 13)ದಿಂದ ಏಪ್ರಿಲ್​ 18ರವರೆಗೆ ಆರು ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್ 13 ರಿಂದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೀದರ, ಬೆಳಗಾವಿ, ಕಲಬುರಗಿ, ರಾಯಚೂರು, ವಿಜಯಪುರ, … Continued

2024- 25ನೇ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ : ಮೇ 29 ರಿಂದ ಶಾಲೆಗಳು ಪುನರಾರಂಭ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ 2024- 25 ನೇ ಸಾಲಿನ ಶೈಕ್ಷಣಿಕ ವರ್ಷದ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ರಾಜ್ಯ ಪಠ್ಯಕ್ರಮದ ಎಲ್ಲ ಸರ್ಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮೇ 29ರಿಂದ ಪುನಾರಂಭಗೊಳ್ಳಲಿವೆ. ಈ ಶೈಕ್ಷಣಿಕ ವರ್ಷದಲ್ಲಿ 18 ದಿನ ದಸರಾ ರಜೆ, 48 ದಿನ ಬೇಸಿಗೆ ರಜೆ, 244 … Continued

‘ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು, ಆದರೆ…’: ಲೋಕಸಭೆ ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ

ಬೆಂಗಳೂರು : 2024ರ ಲೋಕಸಭೆ ಚುನಾವಣೆಗೆ ಮುನ್ನ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಪಕ್ಷಗಳ ಇಂಡಿಯಾ ಮೈತ್ರಿಕೂಟಕ್ಕೆ ಸಂಪೂರ್ಣ ಬಹುಮತ ಸಿಗದೇ ಇರಬಹುದು ಎಂದು ಹೇಳಿದ್ದಾರೆ. ಆದರೆ  ಇದೇ ವೇಳೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಕೂಡ ಸಂಪೂರ್ಣ ಬಹುಮತ  ಪಡೆಯುವುದಿಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ. ಆದ್ದರಿಂದ, ಇಂಡಿಯಾ ಮೈತ್ರಿಕೂಟವು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ, … Continued

ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ ವಿಧಿವಶ

ಬೆಂಗಳೂರು: ನಾಡಿನ ಖ್ಯಾತ ಜ್ಯೋತಿಷಿ ಎಸ್.ಕೆ.ಜೈನ್ (67) ಅವರು ಶುಕ್ರವಾರ ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಇಹಲೋಕ ತ್ಯಜಿಸಿದ್ದಾರೆ. ಎಸ್ ಕೆ ಜೈನ್ ಅವರು ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ ಹಾಗೂ ಪುತ್ರಿಯನ್ನು ಅಗಲಿದ್ದಾರೆ. … Continued

ಕರ್ನಾಟಕದ 14 ಕ್ಷೇತ್ರಗಳ 2ನೇ ಹಂತದ ಚುನಾವಣೆಗೆ ಇಂದಿನಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು : ಇಂದಿನಿಂದ (ಏಪ್ರಿಲ್‌ 12) ರಾಜ್ಯದಲ್ಲಿ 2ನೇ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಆರಂಭವಾಗಿದೆ. ಈ ಕ್ಷೇತ್ರಗಳಿಗೆ ಮೇ 7ರಂದು ಮತದಾನ ನಡೆಯಲಿದೆ. ಏಪ್ರಿಲ್ 19 ನಾಮಪತ್ರ ಸಲ್ಲಿಕೆಯ ಕೊನೆಯ ದಿನವಾಗಿದೆ. ಏಪ್ರಿಲ್ 20 ರಂದು ನಾಮಪತ್ರ ಪರಿಶೀಲನೆ, ಏಪ್ರಿಲ್ 22 ನಾಮಪತ್ರ ಹಿಂಪಡೆಯಲು ಅವಕಾಶವಿದೆ. ರಾಜ್ಯದ ಒಟ್ಟು … Continued

ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಸೂಚನೆ: ದಿನೇಶ ಗುಂಡೂರಾವ್

ಬೆಂಗಳೂರು: ಪತಂಜಲಿ ಆಯುರ್ವೇದದ ಜಾಹೀರಾತುಗಳ ಕುರಿತು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾದ ಉತ್ತರಾಖಂಡದ ಔಷದ ಪರವಾನಗಿ ಮತ್ತು ನಿಯಂತ್ರಣ ಪ್ರಾಧಿಕಾರವನ್ನು ಸುಪ್ರೀಕೋರ್ಟ್ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ ಗುಂಡೂರಾವ್ ಅವರು ರಾಜ್ಯದಲ್ಲಿ ಎಲ್ಲ ಪತಂಜಲಿ ಉತ್ಪನ್ನಗಳ ಗುಣಮಟ್ಟ ಪರಿಶೀಲನೆಗೆ ಆದೇಶಿಸಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಅವರು, ಪತಂಜಲಿ … Continued