ಕರ್ನಾಟಕದ ಈ ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರ ವರೆಗೆ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿಯಿಂದ ಕರ್ನಾಟಕದ ಕೆಲವೇ ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಿದೆ. ಹುಬ್ಬಳ್ಳಿ ಸೇರಿದಂತೆ ರಾಜ್ಯದ ಹಲವೆಡೆ ಬುಧವಾರ ಮಳೆಯಾಗಿದೆ. ಇದೇವೇಳೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಏಪ್ರಿಲ್​ 17ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 13ರ … Continued

ಸಿಎಂ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಪೋಸ್ಟ್‌ : 7 ಜನರ ವಿರುದ್ಧ ಎಫ್‌ಐಆರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸುಳ್ಳು ಸುದ್ದಿ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಹಿಂದೂ ವೋಟ್ ಬೇಡ, ಮುಸ್ಲಿಂ ವೋಟ್ ಸಾಕು ಎಂಬ ಸುಳ್ಳು ಸುದ್ದಿಯನ್ನು ದಿನ ಪತ್ರಿಕೆಯಲ್ಲಿ ಪ್ರಕಟವಾಗಿದೆ ಎಂಬಂತೆ ಪೋಸ್ಟ್‌ ಅನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಈ ಬಗ್ಗೆ ದೂರು ನೀಡಿದೆ. ಈ … Continued

ದ್ವಿತೀಯ ಪಿಯುಸಿ 2024 ಫಲಿತಾಂಶ : ವಿಜ್ಞಾನ, ಕಲಾ, ವಾಣಿಜ್ಯ ಮೂರು ವಿಭಾಗಗಳಲ್ಲೂ ಬಾಲಕಿಯರಿಗೇ ಮೊದಲ ರ‍್ಯಾಂಕ್

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1 ಫಲಿತಾಂಶದಲ್ಲಿ ಕಲೆ, ವಾಣಿಜ್ಯ ಹಾಗೂ ವಿಜ್ಞಾನ ಮೂರೂ ವಿಭಾಗಗಳಲ್ಲಿ ಬಾಲಕಿಯರೇ ಪ್ರಥಮ ಸ್ಥಾನಗಳನ್ನು ಗಳಿಸಿದ್ದಾರೆ. ಕಲಾ ವಿಭಾಗದಲ್ಲಿ ಮೂವರು ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದಿರುವುದು ವಿಶೇಷವಾಗಿದೆ. ಕಲಾ ವಿಭಾಗದಲ್ಲಿ ಬೆಂಗಳೂರು ಜಯನಗರದ ಎನ್‌ಎಂಕೆಆರ್‌ವಿ (NMKRV)ಯ ಮೇಧಾ ಡಿ , ವಿಜಯಪುರದ ಎಸ್‌.ಎಸ್‌. ಪಿಯು ಕಾಲೇಜಿನ ವೇದಾಂತ್ ಜ್ಞಾನುಭ … Continued

ದ್ವಿತೀಯ ಪಿಯು ಫಲಿತಾಂಶ ಪ್ರಕಟ, ಶೇ 81.15 ಮಂದಿ ಉತ್ತೀರ್ಣ ; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ -1ರ ಫಲಿತಾಂಶವನ್ನು (2nd PUC Result) ಬುಧವಾರ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಒಟ್ಟಾರೆ 81.15ರಷ್ಟು %ಮಂದಿ ಉತ್ತೀರ್ಣರಾಗಿದ್ದಾರೆ. ಹೊಸದಾಗಿ ಪರೀಕ್ಷೆ ಬರೆದವರು ಶೇ.84.59 ಫಲಿತಾಂಶ ದಾಖಲಿಸಿದ್ದಾರೆ. ವಿಜ್ಞಾನ ವಿಭಾಗದಲ್ಲಿ 2,49,927 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ 1,74,315 ವಿದ್ಯಾರ್ಥಿಗಳು, ಕಲಾ ವಿಭಾಗದಲ್ಲಿ … Continued

ಲೋಕಸಭಾ ಚುನಾವಣೆ : ಕರ್ನಾಟಕದ 14 ಕ್ಷೇತ್ರಗಳಲ್ಲಿ 247 ಅಭ್ಯರ್ಥಿಗಳು ಕಣದಲ್ಲಿ ; ಕ್ಷೇತ್ರವಾರು ಪ್ರಮುಖ ಪಕ್ಷಗಳ ಅಭ್ಯರ್ಥಿಗಳ ಪಟ್ಟಿ

ಬೆಂಗಳೂರು : ಏಪ್ರಿಲ್‌ 26ರಂದು ಕರ್ನಾಟಕದಲ್ಲಿ ಲೋಕಸಭೆಗೆ ನಡೆಯುವ ಮೊದಲ ಹಂತದಲ್ಲಿ ಚುನಾವಣೆಗೆ 14 ಕ್ಷೇತ್ರಗಳಲ್ಲಿ ನಾಮಪತ್ರ ವಾಪಸ್ ಪಡೆಯುವ ಗಡುವು ಸೋಮವಾರ ಮುಕ್ತಾಯಗೊಂಡಿದ್ದು, 247 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ. ಲೋಕಸಭೆ ಚುನಾವಣೆಯ ಕರ್ನಾಟಕದ ಮೊದಲ ಹಂತದ ಅಖಾಡ ಸಿದ್ಧವಾಗಿದೆ. ಏಪ್ರಿಲ್‌ 26ರಂದು ನಡೆಯುವ ಮೊದಲ ಹಂತದ ಚುನಾವಣೆಗೆ ಒಟ್ಟು 358 ಅಭ್ಯರ್ಥಿಗಳಿಂದ 492 ನಾಮಪತ್ರಗಳು … Continued

ನಾಳೆ (ಏಪ್ರಿಲ್‌ 10) ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಫಲಿತಾಂಶ ನೋಡುವುದು ಹೇಗೆ…?

ಬೆಂಗಳೂರು : ಮಾರ್ಚ್‌ 1ರಿಂದ ಮಾರ್ಚ್ 22ರ ವರೆಗೆ ನಡೆದಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶವನ್ನು (Second PU Result) ನಾಳೆ, ಬುಧವಾರ (ಏಪ್ರಿಲ್‌ 10) ಪ್ರಕಟಿಸಲಾಗುತ್ತದೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮುಕ್ತಾಯವಾಗಿದ್ದು, ಬುಧವಾರ ಫಲಿತಾಂಶ ಪ್ರಕಟಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಂದಾಗಿದೆ. ಬುಧವಾರ ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ … Continued

ರಾಜ್ಯದ ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ

ಬೆಂಗಳೂರು : ಯುಗಾದಿ ಹಬ್ಬದ ದಿನದಂದು ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ತೀವ್ರ ಉಷ್ಣಾಂಶ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಟಾಂಶ ಗರಿಷ್ಠ ಮಟ್ಟ ತಲುಪಿದೆ. ಈ ಮಧ್ಯೆ ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆ ನೀಡಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮುಂತಾದ ದಕ್ಷಿಣ … Continued

ಬರ ಪರಿಹಾರಕ್ಕೆ ಕರ್ನಾಟಕದ ಅರ್ಜಿ : ಕೇಂದ್ರ-ರಾಜ್ಯಗಳ ನಡುವೆ ವ್ಯಾಜ್ಯ ಬೇಡ ಎಂದ ಸುಪ್ರೀಂ ಕೋರ್ಟ್‌

ನವದೆಹಲಿ: ಕೇಂದ್ರ ಸರ್ಕಾರವು ಬರ ಪರಿಹಾರ ಬಿಡುಗಡೆ ಮಾಡುತ್ತಿಲ್ಲ ಎಂದು ಕರ್ನಾಟಕ ಸರ್ಕಾರ ಆಕ್ಷೇಪಿಸಿರುವ ಅರ್ಜಿಯ ವಿಚಾರಣೆಯ ವೇಳೆ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಮತ್ತು ರಾಜ್ಯ ಸರ್ಕಾರದ ನಡುವೆ ವ್ಯಾಜ್ಯ ಬೇಡ ಎಂದು ಸೋಮವಾರ ಕಿವಿಮಾತು ಹೇಳಿದ್ದು, ಕರ್ನಾಟಕದ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸೂಚಿಸಿದೆ. ಕರ್ನಾಟಕದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ಆರ್‌. ಗವಾಯಿ ಮತ್ತು … Continued

5, 8, 9ನೇ ತರಗತಿ ಬೋರ್ಡ್‌ ಪರೀಕ್ಷೆ : ಹೈಕೋರ್ಟ್​ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ; ಫಲಿತಾಂಶ ಪ್ರಕಟಿಸಿದಂತೆ ಆದೇಶ

ನವದೆಹಲಿ: 5, 8 ಮತ್ತು 9ನೇ ತರಗತಿ ಬೋರ್ಡ್‌ ಪರೀಕ್ಷೆ ಕುರಿತು ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಲ್ಲದೆ, ಈ ತರಗತಿಗಳ ಬೋರ್ಡ್‌ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಪೀಠ ಆದೇಶಿಸಿದೆ. ಈ ಕುರಿತು ಎರಡು ವಾರಗಳಲ್ಲಿ ಉತ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್‌ ನೀಡಿದೆ. ರಾಜ್ಯ … Continued

ಏಪ್ರಿಲ್‌ 14 ರಂದು ರಾಜ್ಯದಲ್ಲಿ ಮೋದಿ ಪ್ರಚಾರ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಪ್ರಧಾನಿ ಮೋದಿ ಏಪ್ರಿಲ್ 14ರಂದು ರಾಜ್ಯದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮೋದಿ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ದೇವನಹಳ್ಳಿ ಬಳಿ ಬೃಹತ್‌ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಉತ್ತರ ಕ್ಷೇತ್ರದ ವ್ಯಾಪ್ತಿಯಲ್ಲಿ ಮೋದಿ ರೋಡ್ ಶೋ ನಡೆಸಲಿದ್ದಾರೆ. ಹೆಬ್ಬಾಳ ಮತ್ತು ಬ್ಯಾಟರಾಯನಪುರದಲ್ಲಿ ರೋಡ್ ಶೋ ನಡೆಯಲಿದೆ.