ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡ್ತಾರಾ ? ಇಂದಿನ ‘ಬ್ರೇಕ್‌ಫಾಸ್ಟ್ ಮೀಟಿಂಗ್’ ಮೇಲೆ ಎಲ್ಲರ ಕಣ್ಣು !

 ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಆಡಳಿತಾರೂಢ ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ವದಂತಿಗಳು ಬುಧವಾರದ ಹಠಾತ್ ಬೆಳವಣಿಗೆಗಳಿಂದಾಗಿ ಮತ್ತಷ್ಟು ತೀವ್ರಗೊಂಡಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ( ಮೇ 28) ಬೆಳಿಗ್ಗೆ ಕರೆದಿರುವ ನಿರ್ಣಾಯಕ ಉಪಾಹಾರ ಕೂಟದ (Breakfast Meeting) ಮೇಲೆ ಈಗ ಇಡೀ ರಾಜ್ಯದ ರಾಜಕೀಯ ವಲಯದ ಕಣ್ಣು ನೆಟ್ಟಿದ್ದು,  ಸಿದ್ದರಾಮಯ್ಯ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಜೋರಾದ ಮಳೆ ಮುನ್ಸೂಚನೆ : 9 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’

ಬೆಂಗಳೂರು: ಗುರುವಾರ (ಮೇ 28) ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ತೀವ್ರಗೊಂಡಿರುವ ಹಿನ್ನೆಲೆಯಲ್ಲಿ, ಹವಾಮಾನ ಇಲಾಖೆಯು ಒಂಬತ್ತು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಿದ್ದು, ಮುಂಬರುವ ಕೆಲವು ದಿನಗಳವರೆಗೆ ಬಲವಾದ ಗಾಳಿ, ಗುಡುಗು … Continued

ಸಿಎಂ ಬದಲಾವಣೆಯ ಚರ್ಚೆಯ ಬೆನ್ನಲ್ಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿದ್ದರಾಮಯ್ಯ !

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ನಾಯಕತ್ವ ಬದಲಾವಣೆ ಚರ್ಚೆಗಳ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 28ರ ಗುರುವಾರದಂದು ಭೇಟಿಯಾಗಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಸಮಯಾವಕಾಶ ಕೋರಿದ್ದಾರೆ ಎಂದು ಮುಖ್ಯಮಂತ್ರಿ ಕಾರ್ಯಾಲಯದ (ಸಿಎಂಒ) ಉನ್ನತ ಮೂಲಗಳನ್ನು ಉಲ್ಲೇಖಿಸಿದ ವರದಿಯೊಂದು ಬುಧವಾರ ತಿಳಿಸಿವೆ. ಮುಖ್ಯಮಂತ್ರಿಗಳು ರಾಜ್ಯಪಾಲರನ್ನು ಭೇಟಿ ಮಾಡಲು ಗುರುವಾರ ಸಮಯ ಕೇಳಿದ್ದಾರೆ,” … Continued

ಕರ್ನಾಟಕದ ವಿಧಾನ ಪರಿಷತ್ತಿನ 7 ಸ್ಥಾನಗಳಿಗೆ ಚುನಾವಣೆ ಘೋಷಣೆ

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಜೂನ್ 30ಕ್ಕೆ ಅವಧಿ ಮುಕ್ತಾಯವಾಗುವ ಏಳು ಸದಸ್ಯರ ಸ್ಥಾನಗಳಿಗೆ ಜೂನ್ 18ಕ್ಕೆ ಮತದಾನ ನಡೆಸಲು ಕೇಂದ್ರ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಕಾಂಗ್ರೆಸ್ ಸದಸ್ಯರಾದ ಗೋವಿಂದ ರಾಜು, ನಸೀರ್ ಅಹ್ಮದ್, ತಿಪ್ಪಣ್ಣಪ್ಪ ಮತ್ತು ಬಿ ಕೆ ಹರಿಪ್ರಸಾದ್, ಬಿಜೆಪಿ ಸದಸ್ಯರಾದ ಎನ್ ನಾಗರಾಜು(ಎಂಟಿಬಿ), ಪ್ರತಾಪ್ ಸಿಂಹ ನಾಯಕ್ ಕೆ ಮತ್ತು ಸುನಿಲ್ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ನಾಲ್ಕೈದು ದಿನ ಗಾಳಿ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು, ಮಿಂಚು ಮತ್ತು ಜೋರಾದ ಗಾಳಿ ಸಹಿತ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಮೇ 30 ರವರೆಗೆ ರಾಜ್ಯದಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಅದರಲ್ಲೂ ವಿಶೇಷವಾಗಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮೇ 25 ರಂದು ಅಲ್ಲಲ್ಲಿ ಸಿಡಿಲು ಸಹಿತ … Continued

ಅತಿದೊಡ್ಡ ಸೈಬರ್‌ ವಂಚನೆ : ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ನಿವೃತ್ತ ಶಿಕ್ಷಕಿಗೆ ‘ಡಿಜಿಟಲ್ ಅರೆಸ್ಟ್’; 24 ಕೋಟಿ ರೂ. ಲೂಟಿ..!

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೂಡ್ಡದಾದ ‘ಡಿಜಿಟಲ್ ಅರೆಸ್ಟ್’ ವಂಚನೆ ಜಾಲವನ್ನು ರಾಜ್ಯದ ಸೈಬರ್ ಕಮಾಂಡ್ ಭೇದಿಸಿದ್ದು, ಸಿಬಿಐ (CBI) ಅಧಿಕಾರಿಗಳ ಸೋಗಿನಲ್ಲಿ ಬಂದು ನಿವೃತ್ತ ಶಿಕ್ಷಕಿಯೊಬ್ಬರಿಗೆ ಬರೋಬ್ಬರಿ 24 ಕೋಟಿ ರೂಪಾಯಿ ವಂಚಿಸಿದ್ದ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಸಕಾಲಿಕ ಮತ್ತು ಚುರುಕಿನ ಕಾರ್ಯಾಚರಣೆಯಿಂದಾಗಿ ವಂಚನೆಗೊಳಗಾಗಿದ್ದ ಹಣದಲ್ಲಿ ಸುಮಾರು 5.46 ಕೋಟಿ … Continued

ಕರ್ನಾಟಕದಲ್ಲಿ ಕಾರ್ಮಿಕರ ಕನಿಷ್ಠ ವೇತನ ಶೇ. 60ರಷ್ಟು ಹೆಚ್ಚಳ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು : ರಾಜ್ಯ ಸರ್ಕಾರವು ಶನಿವಾರ (ಮೇ 23) ಕಾರ್ಮಿಕರ ಕನಿಷ್ಠ ವೇತನವನ್ನು ಶೇಕಡಾ 60 ರಷ್ಟು ಹೆಚ್ಚಿಸಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ ವ್ಯವಸ್ಥೆಯಡಿ ಬೆಂಗಳೂರಿನ ಕಾರ್ಮಿಕರು ಇನ್ಮುಂದೆ ಮಾಸಿಕ ಕನಿಷ್ಠ 23,376 ರೂಪಾಯಿ ವೇತನ ಪಡೆಯಲಿದ್ದಾರೆ. ಈ ನಿರ್ಧಾರವನ್ನು ಪ್ರಕಟಿಸಿದ ಕಾರ್ಮಿಕ ಖಾತೆ ಸಚಿವ ಸಂತೋಷ ಲಾಡ್ ಅವರು, “ಈ ಕ್ರಮವು ಕಾರ್ಮಿಕರ … Continued

ಕರ್ನಾಟಕ ಸೇರಿ 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಜೂ.18ರಂದು ಚುನಾವಣೆ ; ರಾಜ್ಯಸಭೆಯಲ್ಲಿ ಎನ್‌ಡಿಎಗೆ ಸಿಗುವುದೇ 3ನೇ 2ರಷ್ಟು ಬಹುಮತ ?

ನವದೆಹಲಿ: ಜೂನ್ ಮತ್ತು ಜುಲೈ ತಿಂಗಳಿನಲ್ಲಿ ತೆರವಾಗಲಿರುವ 10 ರಾಜ್ಯಗಳ ಒಟ್ಟು 24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18 ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗವು ಪ್ರಕಟಿಸಿದೆ. ಮತದಾನ ಮುಗಿದ ತಕ್ಷಣ ಅಂದೇ ಸಂಜೆ ಮತ ಎಣಿಕೆ ಕಾರ್ಯವೂ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಪ್ರಸಕ್ತ ಸಾಲಿನ ಜೂನ್ 21 ರಿಂದ ಜುಲೈ 19 … Continued

ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ 3 ದಿನ ಜೋರಾಗಿ ಮಳೆ ; ಮುನ್ಸೂಚನೆ

ಬೆಂಗಳೂರು: ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಶುಕ್ರವಾರದಿಂದ ಮಳೆ ಮತ್ತೆ ತೀವ್ರತೆ ಪಡೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಹಾಗೂ ಕರಾವಳಿ ಹಾಗೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ 22ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ,  ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳ ಒಂದೆರಡು ಕಡೆ … Continued

ಗೃಹಲಕ್ಷ್ಮಿ ಯೋಜನೆ ಹಣ ಬಾಕಿ : ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ಬೆಂಗಳೂರು : ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಹಿಂಬಾಕಿ ಹಣ ಬಿಡುಗಡೆ ಮಾಡಲು ಆದೇಶಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಗೃಹಲಕ್ಷ್ಮಿ ಯೋಜನೆಯಡಿ ಹಿಂಬಾಕಿ ಹಣ ಬಿಡುಗಡೆ ಮಾಡಲು ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಬೆಂಗಳೂರಿನ ಬಸವೇಶ್ವರ ನಗರದ ನಿವಾಸಿ … Continued