ಬಿಜೆಪಿ ಅಭ್ಯರ್ಥಿಗಳ 7ನೇ ಪಟ್ಟಿ ಪ್ರಕಟ : ಚಿತ್ರದುರ್ಗದಲ್ಲಿ ಹಾಲಿ ಸಂಸದರಿಗೆ ಕೊಕ್, ಯಡಿಯೂರಪ್ಪ ಆಪ್ತನಿಗೆ ಟಿಕೆಟ್‌

ನವದೆಹಲಿ: ಭಾರತೀಯ ಜನತಾ ಪಕ್ಷ (ಬಿಜೆಪಿ) 2024ರ ಲೋಕಸಭೆ ಚುನಾವಣೆಗೆ ತನ್ನ ಏಳನೇ ಅಭ್ಯರ್ಥಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಿದೆ. ಏಳನೇ ಪಟ್ಟಿಯಲ್ಲಿ ಮಹಾರಾಷ್ಟ್ರದ ಅಮರಾವತಿ ಮತ್ತು ಕರ್ನಾಟಕದ ಚಿತ್ರದುರ್ಗ ಎರಡು ಮೀಸಲು ಕ್ಷೇತ್ರದಿಂದ ಇಬ್ಬರು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಬಿಜೆಪಿಯು ಪಕ್ಷವು ಕರ್ನಾಟಕದ ಚಿತ್ರದುರ್ಗ ಮೀಸಲು ಕ್ಷೇತ್ರದಿಂದ (SC) ಮಾಜಿ ಸಚಿವ ಗೋವಿಂದ ಕಾರಜೋಳ … Continued

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬೆಂಗಳೂರು, ತೀರ್ಥಹಳ್ಳಿ, ಚೆನ್ನೈ ಸೇರಿದಂತೆ ಅನೇಕ ಕಡೆ ಎನ್‌ಐಎ ದಾಳಿ

ಬೆಂಗಳೂರು: ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬುಧವಾರ ಬೆಂಗಳೂರು, ತೀರ್ಥಹಳ್ಳಿ ಹಾಗೂ ಚೆನ್ನೈನ ಅನೇಕ ಭಾಗಗಳಲ್ಲಿ ದಾಳಿ ನಡೆಸಿದೆ. ಎನ್‌ಐಎ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ತೀರ್ಥಹಳ್ಳಿ ಪಟ್ಟಣದ ಐದಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ಕಾರ್ಯ ನಡೆಸಿದ್ದಾರೆ. ರಾಮೇಶ್ವರಂ ಕೆಫೆ ಸ್ಫೋಟದ ಶಂಕಿತ ಆರೋಪಿ ತೀರ್ಥಹಳ್ಳಿ ಮೂಲದವನು ಎಂದು … Continued

ಕೋಲಾರದಲ್ಲಿ ಕಾಂಗ್ರೆಸ್‌ ಬಣಗಳ ತಿಕ್ಕಾಟ ತಾರಕಕ್ಕೆ : ಐವರು ಶಾಸಕರಿಂದ ರಾಜೀನಾಮೆ ಬೆದರಿಕೆ; ರಾಜೀನಾಮೆ ಪತ್ರ ತೋರಿಸಿ ಎಂಎಲ್‌ ಸಿಗಳಿಂದ ಹೈಡ್ರಾಮಾ…!

ಬೆಂಗಳೂರು : ಕೋಲಾರ ಕಾಂಗ್ರೆಸ್‌ನ ಹಿರಿಯ ನಾಯಕರಾದ ಕೆ.ಎಚ್‌. ಮುನಿಯಪ್ಪ ಹಾಗೂ ಮಾಜಿ ಸ್ಪೀಕರ್‌ ಕೆ.ಆರ್‌. ರಮೇಶಕುಮಾರ ಬಣಗಳ ನಡುವಿನ ತಿಕ್ಕಾಟ ತಾರಕಕ್ಕೇರಿದ್ದು,ಸಚಿವ ಕೆ.ಎಚ್‌. ಮುನಿಯಪ್ಪ ಅವರ ಅಳಿಯ ಪೆದ್ದಚಿಕ್ಕಣ್ಣಗೆ ಟಿಕೆಟ್‌ ಬಹುತೇಕ ಖಚಿತವಾಗುತ್ತಿದ್ದಂತೆ ಕಾಂಗ್ರೆಸ್‌ ಶಾಸಕರ ರಾಜೀನಾಮೆ ನೀಡಲು ಮುಂದಾದ ವಿದ್ಯಮಾನ ನಡೆದಿದೆ. ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ … Continued

ಲೋಕಸಭೆ ಚುನಾವಣೆ : ಮೂರು ಕ್ಷೇತ್ರಗಳಿಗೆ ಜೆಡಿಎಸ್‌ ಅಭ್ಯರ್ಥಿಗಳು ಅಂತಿಮ

ಹಾಸನ/ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್‌ ಕೊನೆಗೂ ಅಭ್ಯರ್ಥಿಗಳ ಆಯ್ಕೆ ಅಂತಿಮ ಮಾಡಿದೆ. ತಮಗೆ ನೀಡಿರುವ ಮೂರು ಕ್ಷೇತ್ರಗಳಾದ ಹಾಸನ, ಮಂಡ್ಯ ಹಾಗೂ ಕೋಲಾರ ಕ್ಷೇತ್ರಗಳಿಗೆ ಅಭ್ಯರ್ಥಿಗಳು ಯಾರೆಂದು ಜೆಡಿಎಸ್‌ ವರಿಷ್ಠ ಹೆಚ್‌.ಡಿ.ದೇವೇಗೌಡ ಅವರು ಹಾಸನದಲ್ಲಿ ಪ್ರಕಟಿಸಿದ್ದಾರೆ. ಹಾಸನದಿಂದ ಪ್ರಜ್ವಲ ರೇವಣ್ಣ, ಮಂಡ್ಯದಿಂದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಗೂ ಕೋಲಾರದಿಂದ … Continued

ಬೆಂಗಳೂರು ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣ: ಮತ್ತಿಬ್ಬರು ಎನ್ ​​​ಐಎ ವಶಕ್ಕೆ

ಬೆಂಗಳೂರು: ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಮೂಲದ ಇಬ್ಬರನ್ನು ಎನ್‌ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಈ ಇಬ್ಬರು ವ್ಯಕ್ತಿಗಳು ರಾಮೇಶ್ವರಂ ಕೆಫೆಯಲ್ಲಿ ಬಾಂಬ್‌ ಇಟ್ಟ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದರು ಎಂದು ವರದಿಯಾಗಿದ್ದು, ಶನಿವಾರ ಸಂಜೆ ಅವರನ್ನು ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ. ಬಾಂಬರ್ ಸುಳಿವು ಪತ್ತೆ ಹಚ್ಚಿದ ನಂತರ ಆತನ … Continued

ಕರ್ನಾಟಕದ ಕರಾವಳಿ-ಮಲೆನಾಡಿನ ಹಲವು ಜಿಲ್ಲೆಗಳಲ್ಲಿ ಮಾರ್ಚ್ 31ರಿಂದ ಎರಡು ದಿನ ಮಳೆ ಸಾಧ್ಯತೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನ ಕೆಲ ಜಿಲ್ಲೆಗಳಲ್ಲಿ ಮಾರ್ಚ್​ 31 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಹಾಗೂ ಮಲೆನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ … Continued

ಲೋಕಸಭೆ ಚುನಾವಣೆ: ಬಿಜೆಪಿಯ 5ನೇ ಪಟ್ಟಿ ಬಿಡುಗಡೆ, ಕರ್ನಾಟಕದ 4 ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ, ಅನಂತಕುಮಾರ ಹೆಗಡೆಗೆ ತಪ್ಪಿದ ಟಿಕೆಟ್‌

ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದ್ದು, ಕರ್ನಾಟಕ ಸೇರಿದಂತೆ 8 ರಾಜ್ಯಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದ ನಾಲ್ಕು ಲೋಕಸಭಾ ಕ್ಷೇತ್ರಗಳಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ ಸಂಸದ ಅನಂತಕುಮಾರ ಹೆಗಡೆಗೆ ಟಿಕೆಟ್ ಕೈತಪ್ಪಿದ್ದು, ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. … Continued

ನೀತಿ ಸಂಹಿತೆ ಉಲ್ಲಂಘನೆ : ಬಿ.ವೈ.ರಾಘವೇಂದ್ರ ವಿರುದ್ಧ ದೂರು ದಾಖಲು

ಚಿತ್ರದುರ್ಗ: ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇರೆಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಧಾರ್ಮಿಕ ಸ್ಥಳವಾದ ಭೋವಿ ಗುರುಪೀಠವನ್ನು ರಾಜಕೀಯ ಉದ್ದೇಶಕ್ಕೆ ದುರ್ಬಳಕೆ ಮಾಡಿಕೊಂಡಿದ್ದಾರೆ ಹಾಗೂ ಅನುಮತಿ ಪಡೆಯದೆ ಸಭೆ ನಡೆಸಿ ಬಿಜೆಪಿ ಪರ ಪ್ರಚಾರ ಮಾಡುವ ಮೂಲಕ ಸಂಸದ ಬಿ.ವೈ.ರಾಘವೇಂದ್ರ ಅವರು … Continued

ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆ : ಬಿಜೆಪಿ ಸೇರುವುದಾಗಿ ಘೋಷಿಸಿದ ಜನಾರ್ದನ ರೆಡ್ಡಿ, ಕೆಆರ್‌ಪಿಪಿ ಪಕ್ಷವೂ ಬಿಜೆಪಿಯಲ್ಲಿ ವಿಲೀನ..!

ಬೆಂಗಳೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕರ್ನಾಟಕದ ರಾಜಕೀಯದಲ್ಲಿ ಭಾರೀ ಬೆಳವಣಿಗೆಯಾಗಿದ್ದು, ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (Kalyana Rajya Pragati Party) ಸಂಸ್ಥಾಪಕ ಹಾಗೂ ಶಾಸಕ ಗಾಲಿ ಜನಾರ್ದನ ರೆಡ್ಡಿ (Gali Janardhan Reddy) ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಅಲ್ಲದೆ,‌ ತಮ್ಮ ಪಕ್ಷವನ್ನು ಬಿಜೆಪಿ ಜತೆ ವಿಲೀನ ಮಾಡುವುದಾಗಿ ಹೇಳಿದ್ದಾರೆ. ಬಳ್ಳಾರಿ, … Continued

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ಬೆಂಗಳೂರು : 2023-24ನೇ ಸಾಲಿನ ಎಸ್​​ಎಸ್​​ಎಲ್​ಸಿ ಪರೀಕ್ಷೆ-1 ನಾಳೆ (ಮಾರ್ಚ್‌ 25) ಆರಂಭವಾಗಲಿದ್ದು, ಏಪ್ರಿಲ್​​ 6ರವರೆಗೆ ನಡೆಯಲಿದೆ. ರಾಜ್ಯಾದ್ಯಂತ 2,750 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲು ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆಗೆ ನೋಂದಣಿ ಮಾಡಿಕೊಂಡ ವಿದ್ಯಾರ್ಥಿಗಳಲ್ಲಿ 8,10,368 ಶಾಲಾ ವಿದ್ಯಾರ್ಥಿಗಳು ಹಾಗೂ 18,225 ಖಾಸಗಿ ವಿದ್ಯಾರ್ಥಿಗಳು ಸೇರಿದ್ದಾರೆ. 41,375 ಪುನರಾವರ್ತಿತ ಸಹ ವಿದ್ಯಾರ್ಥಿಗಳು … Continued