23 ಸಂಸದರ ಆಸ್ತಿ 15 ವರ್ಷಗಳಲ್ಲಿ ಸರಾಸರಿ 1,045%ರಷ್ಟು ಏರಿಕೆ : ಕರ್ನಾಟಕದ ಯಾವ ಸಂಸದರ ಆಸ್ತಿಯಲ್ಲಿ ಏರಿಕೆ ?

ನವದೆಹಲಿ : ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲೇ ಕಳೆದ ಇಪ್ಪತ್ತು ವರ್ಷಗಳಲ್ಲಿ ಆಸ್ತಿ ಹೆಚ್ಚಿಸಿಕೊಂಡ ಸಂಸದರ ಪಟ್ಟಿ ಬಹಿರಂಗವಾಗಿದೆ. ವರದಿಯೊಂದರ ಪ್ರಕಾರ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೇನಕಾ ಗಾಂಧಿ ಸೇರಿದಂತೆ 2004ರಿಂದ ಪುನರಾಯ್ಕೆಗೊಳ್ಳುತ್ತಿರುವ 23 ಸಂಸದರ ಒಟ್ಟಾರೆ ಆಸ್ತಿ ಮೌಲ್ಯವು 35.18 ಕೋಟಿ ರೂ.ಗಳಿಂದ 402.79 ಕೋಟಿರೂ.ಗಳಿಗೆ ಏರಿಕೆಯಾಗಿದೆ ಎಂದು ತಿಳಿದು ಬಂದಿದೆ. ಅಸೋಸಿಯೇಷನ್‌ … Continued

1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ : ದ್ವಿತೀಯ ಪಿಯು ಉತ್ತೀರ್ಣರಾದವರು ಅರ್ಜಿ ಸಲ್ಲಿಸಬಹುದು

ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ ಉಳಿಕೆ ಮೂಲ ವೃಂದ ಹಾಗೂ ಕಲ್ಯಾಣ ಕರ್ನಾಟಕ (ಸ್ಥಳೀಯ) ವೃಂದದಲ್ಲಿರುವ ಒಟ್ಟು 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಬಿಡುಗಡೆ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಅರ್ಹರಿಂದ ಆಹ್ವಾನಿಸಲಾಗಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕವಾಗಿ ಅರ್ಹತೆ … Continued

ಧಾರ್ಮಿಕ ದತ್ತಿ ವಿಧೇಯಕ ಅಂಗೀಕಾರ, ದೇವಸ್ಥಾನದ ಆದಾಯದ ಶೇ.10 ರಷ್ಟು ಹಣ ಸರ್ಕಾರಕ್ಕೆ

ಬೆಂಗಳೂರು : ಹಿಂದು ಧಾರ್ಮಿಕ ಸಂಸ್ಥೆ ಮತ್ತು ಧರ್ಮದಾಯ ದತ್ತಿ ವಿಧೇಯಕ ವಿಧಾನಸಭೆಯಲ್ಲಿ ಬುಧವಾರ ಅಂಗೀಕಾರಗೊಂಡಿದೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳ ಮತ್ತು ಧರ್ಮದಾಯ ದತ್ತಿಗಳ ವಿಧೇಯಕದಲ್ಲಿ ಬದಲಾವಣೆ ಮಾಡಲಾಗಿದೆ. ವಿಧೇಯಕದಲ್ಲಿ ಸರ್ಕಾರದ ಮುಜರಾಯಿ ಇಲಾಖೆಗೆ ದೇವಸ್ಥಾನಗಳು ನೀಡುತ್ತಿದ್ದ ಆದಾಯದ ಹಣವನ್ನು ದ್ವಿಗುಣಗೊಳಿಸಲಾಗಿದೆ. ಇನ್ನು ಮುಂದೆ 10 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳ ವರೆಗಿನ … Continued

ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ : ಐಜೂರು ಠಾಣೆಯ ಪಿಎಸ್ಐ ಅಮಾನತು

ಬೆಂಗಳೂರು : ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಐಜೂರು ಠಾಣಾ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಮಾಡುವುದಾಗಿ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬುಧವಾರದ ಕಾರ್ಯಕಲಾಪ ಆರಂಭವಾದ ಬಳಿಕ ಐಜೂರು ಪೊಲೀಸ್ ಇನ್ಸ್ ಪೆಕ್ಟರ್ ತನ್ವೀರ್ ಹುಸ್ಸೇನ್ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವ … Continued

ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟ

ಬೆಂಗಳೂರು: 2024ರ ದ್ವಿತೀಯ ಪಿಯುಸಿ ಹಾಗೂ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ (SSLC And PUC Exam) ದಿನಾಂಕವನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಮಾರ್ಚ್‌ 1ರಿಂದ 22ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ಹಾಗೂ ಮಾರ್ಚ್‌ 25ರಿಂದ ಏಪ್ರಿಲ್‌ 6ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಈ ಕುರಿತು ವಿಕಾಸಸೌಧದಲ್ಲಿ ಫೆಬ್ರವರಿ 20ರಂದು ಶಾಲಾ ಶಿಕ್ಷಣ ಹಾಗೂ … Continued

ರಾಜ್ಯದಲ್ಲಿ 190 ಅಗತ್ಯ ಔಷಧಿಗಳ ದಾಸ್ತಾನು ಇಲ್ಲ: ಆರೋಗ್ಯ ಸಚಿವ ಗುಂಡೂರಾವ್

ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಪೂರೈಕೆಯಾಗುವ 410 ಅಗತ್ಯ ಔಷಧಗಳ ಪೈಕಿ 190 ಔಷಧಗಳ ದಾಸ್ತಾನು ಇಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ತಿಳಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಗಳು ಲಭ್ಯವಾಗದೆ ಬಡ ರೋಗಿಗಳಿಗೆ ಆಗುತ್ತಿರುವ ತೊಂದರೆಗಳ ಕುರಿತು ವಿಧಾನ ಪರಿಷತ್‌ ಸದಸ್ಯ ಎಚ್‌.ಎಸ್‌. ಗೋಪಿನಾಥ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಾವು … Continued

ಜಯಲಲಿತಾ ಚಿನ್ನಾಭರಣ ಪಡೆಯಲು 6 ದೊಡ್ಡ ಟ್ರಂಕ್‌ ಜೊತೆ ಬರಲು ತಮಿಳುನಾಡು ಸರ್ಕಾರಕ್ಕೆ ನ್ಯಾಯಾಲಯದ ಆದೇಶ

ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಜಯಲಲಿತಾ ಅವರಿಂದ ಜಪ್ತಿ ಮಾಡಲಾದ ಕೋಟ್ಯಂತರ ರೂಪಾಯಿ ಬೆಲೆಬಾಳುವ ಚಿನ್ನಾಭರಣ ಸ್ವೀಕರಿಸಿಲು ಆರು ದೊಡ್ಡ ಟ್ರಂಕ್‌ ಹಾಗೂ ಅಗತ್ಯ ಭದ್ರತೆಯೊಂದಿಗೆ ಬರುವಂತೆ ತಮಿಳುನಾಡು ಸರ್ಕಾರದ ಗೃಹ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಬೆಂಗಳೂರಿನ ವಿಶೇಷ ನ್ಯಾಯಾಲಯವು ಸೋಮವಾರ ಆದೇಶಿಸಿದೆ. ಆರ್‌ಟಿಐ ಕಾರ್ಯಕರ್ತ … Continued

ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳಲ್ಲಿ ಏಕರೂಪದ ಅಂಕ ಪದ್ಧತಿ-ಗ್ರೇಡ್ ಪದ್ಧತಿ ಜಾರಿ : ಸಚಿವ ಸುಧಾಕರ

ಬೆಂಗಳೂರು : ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಏಕರೂಪದ ಅಂಕ ವ್ಯವಸ್ಥೆ ಹಾಗೂ ಗ್ರೇಡ್ ವ್ಯವಸ್ಥೆ ಜಾರಿಗೆ ತರಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಸುಧಾಕರ ತಿಳಿಸಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಅವರು ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಅಂಕಗಳು ನೀಡುವ ವ್ಯವಸ್ಥೆ ಒಂದೊಂದು ವಿಶ್ವವಿದ್ಯಾಲಯಕ್ಕೆ ಒಂದೊಂದು ತೆರನಾದ ವ್ಯವಸ್ಥೆ … Continued

ಬಜೆಟ್‌ನಲ್ಲಿ 7ನೇ ವೇತನ ಆಯೋಗ ಜಾರಿ ಬಗ್ಗೆ ಸಿದ್ದರಾಮಯ್ಯ ಏನು ಹೇಳಿದರು…?

ಬೆಂಗಳೂರು : ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಹಣಕಾಸು ಸಚಿವ ಸಿದ್ದರಾಮಯ್ಯ 2024-25ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದಾರೆ. ಬಜೆಟ್ ಭಾಷಣದಲ್ಲಿ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆ ಕುರಿತು ಅವರು ಉಲ್ಲೇಖಿಸಿದ್ದಾರೆ. ಶೀಘ್ರವೇ 7ನೇ ವೇತನ ಆಯೋಗ ಜಾರಿ ಮಾಡುವ ಬಗ್ಗೆ ಬಜೆಟ್‌ನಲ್ಲಿ ಸುಳಿವು ನೀಡಿರುವ ಸಿದ್ದರಾಮಯ್ಯ ಸಮಿತಿ ವರದಿ ಆಧಾರದಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಘೋಷಣೆ … Continued

ಕರ್ನಾಟಕ ಬಜೆಟ್ 2024 : ಸಿದ್ದರಾಮಯ್ಯ ಕೃಷಿ ವಲಯಕ್ಕೆ ಕೊಟ್ಟಿದ್ದೇನು..?

ಬೆಂಗಳೂರು : ಕರ್ನಾಟಕ ಬಜೆಟ್ 2024ನಲ್ಲಿ ಕೃಷಿ ಕ್ಷೇತ್ರಕ್ಕೆ 6688 ಕೋಟಿ ರೂಪಾಯಿ ಅನುದಾನ ಘೋಷಿಸಲಾಗಿದೆ. ಇದೇ ವೇಳೆ ಕರ್ನಾಟಕ ರೈತ ಸಮೃದ್ಧಿ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಈ ಯೋಜನೆಯಡಿಯಲ್ಲಿ ರೈತರಿಗೆ ಕೃಷಿ, ಪಶುಸಂಗೋಪನೆ, ತೋಟಗಾರಿಕೆಗೆ ಬೆಂಬಲ ನೀಡಲಾಗುತ್ತದೆ. ಅಲ್ಲದೆ, ಹೈನುಗಾರಿಕೆಗಳನ್ನು ಒಳಗೊಂಡಂತೆ ಸಮಗ್ರ ಕೃಷಿ ಕೈಗೊಳ್ಳುವ ಮೂಲಕ ಆದಾಯದಲ್ಲಿ ಸುಸ್ಥಿರತೆಗೆ ಬೆಂಬಲ ನೀಡುತ್ತದೆ. ಅಲ್ಲದೆ, … Continued