ಚಲನಚಿತ್ರ ನಿರ್ಮಾಪಕ ರಾಕ್‌ ಲೈನ್ ವೆಂಕಟೇಶಗೆ ಶಾಕ್‌ ನೀಡಿದ ಬಿಬಿಎಂಪಿ : ರಾಕ್‌ ಲೈನ್ ಮಾಲ್​ ಗೆ ಬೀಗ

ಬೆಂಗಳೂರು: ತೆರಿಗೆ ಪಾವತಿಸದ ಕಾರಣ ದಾಸರಹಳ್ಳಿ ವಲಯ ವ್ಯಾಪ್ತಿಯಲ್ಲಿ ಬರುವ ಚಲನಚಿತ್ರ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ ಅವರ ಒಡೆತನದ ರಾಕ್‌ಲೈನ್ ಮಾಲ್ ಅನ್ನು ಇಂದು, ಬುಧವಾರ ಪಾಲಿಕೆ ಕಂದಾಯ ಅಧಿಕಾರಿಗಳು ಬೀಗ ಹಾಕಿದ್ದಾರೆ. ದಾಸರಹಳ್ಳಿ ವಲಯದ ಬಿಬಿಎಂಪಿ ಕಂದಾಯ ಅಧಿಕಾರಿಗಳು ಇಂದು ಬುಧವಾರ ಬೆಳ್ಳಂಬೆಳಿಗ್ಗೆ ರಾಕ್‌ಲೈನ್ ಮಾಲ್ ಬಳಿ ತೆರಳಿಬೀಗ ಜಡಿದಿದ್ದಾರೆ. ರಾಕ್​ಲೈನ್ ಮಾಲ್​ 2011 … Continued

ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಬಸವಣ್ಣನವರ ಭಾವಚಿತ್ರ ಹಾಕಲು ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: 12 ನೇ ಶತಮಾನದ ಸಾಮಾಜಿಕ ಕ್ರಾಂತಿಯ ಹರಿಕಾರ, ವಿಶ್ವಮಾನವತಾವಾದಿ ಜಗಜ್ಯೋತಿ ಬಸವಣ್ಣನವರ ಭಾವಚಿತ್ರವನ್ನು ರಾಜ್ಯದ ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಫೆಬ್ರವರಿ 17ರಂದು ಹಾಕುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಇಂದು, ಮಂಗಳವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬಸವಣ್ಣ ಭಾವಚಿತ್ರ ಅನಾವರಣಗೊಳಿಸಿ ಮಾತನಾಡಿದ ಅವರು, ಬಸವಣ್ಣನವರ ಭಾವಚಿತ್ರದಲ್ಲಿ ‘ವಿಶ್ವ ಗುರು ಬಸವಣ್ಣ -ಸಾಂಸ್ಕೃತಿಕ ನಾಯಕ’ ಎಂದು … Continued

ಬೈಕ್‌ ಡಿಕ್ಕಿ ಹೊಡೆದು ಯುವಕ ಸಾವು : ಅಪಘಾತಕ್ಕೆ ನಾನೇ ಕಾರಣವೆಂದು ಮನನೊಂದು ಮತ್ತೊಬ್ಬ ಬೈಕ್‌ ಸವಾರ ಆತ್ಮಹತ್ಯೆ..

ಮಡಿಕೇರಿ : ಮಡಿಕೇರಿಯಲ್ಲಿ ಶುಕ್ರವಾರ ನಡೆದ ಎರಡು ಬೈಕ್‌ಗಳ ನಡುವಿನ ಅಪಘಾತದಲ್ಲಿ ಪದವೀಧರ ವಿದ್ಯಾರ್ಥಿ ಮೃತಪಟ್ಟ ನಂತರ ಈ ಅಪಘಾತಕ್ಕೆ ತಾನೇ ಕಾರಣ, ನನ್ನಿಂದಾಗಿ ಒಂದು ಜೀವ ಹೋಯಿತು ಎಂದು ಮನನೊಂದ ಮತ್ತೊಬ್ಬ ಬೈಕ್ ಸವಾರ ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದೆ. ಮಮನೊಂದು ಆತ್ಮಹತ್ಯೆ ಮಾಡಿಕೊಂಡ ಬೈಕ್‌ ಸವಾರನನ್ನು ಹೆರವನಾಡಿನ ತಮ್ಮಯ್ಯ (57) ಎಂದು ಗುರುತಿಸಲಾಗಿದೆ. … Continued

ಬಜೆಟ್‌ ಅಧಿವೇಶನ : ಕೇಸರಿ ಶಾಲು ಧರಿಸಿ ಕಲಾಪದಲ್ಲಿ ಪಾಲ್ಗೊಂಡ ಬಿಜೆಪಿ ಸದಸ್ಯರು

ಬೆಂಗಳೂರು: ಸೋಮವಾರದಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಅಧಿವೇಶನದ ಮೊದಲ ದಿನವೇ ಬಿಜೆಪಿ ಶಾಸಕರು ಕೇಸರಿ ಶಾಲು ಧರಿಸಿ ಆಗಮಿಸಿದ್ದು ವಿಶೇಷವಾಗಿತ್ತು. ಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ, ಉಪನಾಯಕ ಅರವಿಂದ ಬೆಲ್ಲದ ಸೇರಿದಂತೆ ಬಿಜೆಪಿಯ ಎಲ್ಲ ಶಾಸಕರು ಕೇಸರಿ ಶಾಲು ಹಾಕಿಕೊಂಡು ಸದನದಲ್ಲಿ ಕುಳಿತಿದ್ದರು. ಮಂಡ್ಯದ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ವಿಚಾರ ರಾಜ್ಯವ್ಯಾಪಿ ಚರ್ಚೆ … Continued

ರಾಜ್ಯಸಭಾ ಚುನಾವಣೆ: ಕರ್ನಾಟಕದಿಂದ ನಾರಾಯಣಸಾ ಭಾಂಡಗೆಗೆ ಬಿಜೆಪಿ ಟಿಕೆಟ್ ಘೋಷಣೆ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಬಿಡುಗಡೆ ಮಾಡಿದೆ. ಕರ್ನಾಟಕದಿಂದ ವಿಧಾನ ಪರಿಷತ್‌ ಮಾಜಿ ಸದಸ್ಯ ಹಾಗೂ ಬಿಜೆಪಿ ಮಾಜಿ ರಾಜ್ಯ ಉಪಾಧ್ಯಕ್ಷ ನಾರಾಯಣ ಭಾಂಡಗೆ ಅವರಿಗೆ ಟಿಕೆಟ್‌ ನೀಡಲಾಗಿದೆ. ಟಿಕೆಟ್‌ ಆಕಾಂಕ್ಷಿಯಾಗಿದ್ದ ಮಾಜಿ ಸಚಿವ ವಿ.ಸೋಮಣ್ಣ ಅವರಿಗೆ ನಿರಾಸೆಯಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎರಡು ಕಡೆ ಸ್ಪರ್ಧಿಸಿ ಸೋತಿದ್ದ ವಿ … Continued

ಬಳ್ಳಾರಿ ಕಾಂಗ್ರೆಸ್ ಶಾಸಕ ನಾರಾ ಭರತ ರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ ದಾಳಿ

ಬಳ್ಳಾರಿ: ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ ರೆಡ್ಡಿ ಮನೆ, ಕಚೇರಿಗಳ ಮೇಲೆ ಶನಿವಾರ ಮುಂಜಾನೆ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ತಂಡ ದಾಳಿ ನಡೆಸಿದೆ. ಅಲ್ಲದೆ, ಅವರ ತಂದೆ ಹಾಗೂ ಮಾಜಿ ಶಾಸಕ ಸೂರ್ಯನಾರಾಯಣ ರೆಡ್ಡಿ, ಚಿಕ್ಕಪ್ಪ ಪ್ರತಾಪ ರೆಡ್ಡಿ ಮತ್ತು ಸಂಬಂಧಿಗಳ ಮನೆಗಳು, ಕಚೇರಿಗಳ ಮೇಲೆಯೂ ದಾಳಿ ನಡೆಸಲಾಗಿದೆ. ಜಾರಿ ನಿರ್ದೇಶನಾಲಯ … Continued

ನಡ್ಡಾ, ಬಿ.ಎಲ್‌. ಸಂತೋಷ ಭೇಟಿ ನಂತರ ಪ್ರಧಾನಿ ಮೋದಿ ಭೇಟಿ ಮಾಡಿದ ಸುಮಲತಾ ಅಂಬರೀಷ : ಮಂಡ್ಯ ಟಿಕೆಟ್‌ ಬಗ್ಗೆ ಚರ್ಚೆ..?

ನವದೆಹಲಿ : ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಹಾಗೂ ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್‌. ಸಂತೋಷ ಅವರನ್ನು ಭೇಟಿಯಾಗಿದ್ದ ಸುಮಲತಾ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ಮಂಡ್ಯ ಟಿಕೆಟ್‌ ಬಗ್ಗೆ ಮೋದಿ ಅವರ ಜೊತೆ ಸುಮಲತಾ ಚರ್ಚೆ ನಡೆಸಿದ್ದು, ಪ್ರಧಾನಿ ಟಿಕೆಟ್‌ ಭರವಸೆ … Continued

ನಿವೃತ್ತಿಗೂ ಎರಡು ತಿಂಗಳು ಮೊದಲೇ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ದಿಢೀರ್‌ ರಾಜೀನಾಮೆ

ಬೆಂಗಳೂರು : ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಪ್ರತಾಪ ರೆಡ್ಡಿ ಅವರು ನಿವೃತ್ತಿಗೂ ಎರಡು ತಿಂಗಳು ಮೊದಲೇ ಸ್ವಯಂ ನಿವೃತ್ತಿ ಕೋರಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಪ್ರತಾಪ ರೆಡ್ಡಿ ಅವರು ಪ್ರಸ್ತುತ ಕರ್ನಾಟಕದ ಆಂತರಿಕ ಭದ್ರತೆ ವಿಭಾಗದ ಡಿಜಿಪಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದೇ ವರ್ಷ ಮೇ ತಿಂಗಳಲ್ಲಿ ಅವರು ನಿವೃತ್ತರಾಗುತ್ತಿದ್ದರು. ಆದರೆ, ವೈಯಕ್ತಿಕ ಕಾರಣ ನೀಡಿ … Continued

ಈಗಲೇ ಲೋಕಸಭೆ ಚುನಾವಣೆ ನಡೆದರೆ ಕರ್ನಾಟಕದಲ್ಲಿ ಬಿಜೆಪಿ – ಜೆಡಿಎಸ್‌ ಮೈತ್ರಿ 24 ಸ್ಥಾನಗಳಲ್ಲಿ ಗೆಲ್ಲಬಹುದು.; ಮೂಡ್ ಆಫ್ ದಿ ನೇಷನ್ ಸಮೀಕ್ಷೆ

ನವದೆಹಲಿ: ಈಗಲೇ ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಯ ಎನ್‌ಡಿಎ 24 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದೆ ಎಂದು ಖಾಸಗಿ ಸುದ್ದಿವಾಹಿನಿ ಇಂಡಿಯಾ ಟುಡೇ ‘ಮೂಡ್ ಆಫ್ ದಿ ನೇಷನ್‌ ಸಮೀಕ್ಷೆ’ ತಿಳಿಸಿದೆ. ರಾಜ್ಯದ ಲೋಕಸಭಾ ಕ್ಷೇತ್ರಗಳಲ್ಲಿ 2023 ಡಿಸೆಂಬರ್ 15 ರಿಂದ 2024 ಜನವರಿ 28 ರ ನಡುವೆ ನಡೆಸಿದ ಚುನಾವಣಾ … Continued

ಕರ್ನಾಟಕದಲ್ಲಿ ಹುಕ್ಕಾ ಬಾರ್, ಮಾರಾಟ, ಬಳಕೆ ಸಂಪೂರ್ಣ ನಿಷೇಧ

ಬೆಂಗಳೂರು : ಕರ್ನಾಟಕದಲ್ಲಿ ಎಲ್ಲ ಬಗೆಯ ಹುಕ್ಕಾ ಉತ್ಪನ್ನಗಳ ಮಾರಾಟ, ಬಳಕೆ, ಸ್ವಾಧೀನ ಮತ್ತು ಅವುಗಳ ಜಾಹೀರಾತಿನ ಮೇಲೆ ಬುಧವಾರದಿಂದ ಜಾರಿಗೆ ಬರುವಂತೆ ಆರೋಗ್ಯ ಇಲಾಖೆ ತಕ್ಷಣದಿಂದ ನಿಷೇಧಿಸಿದೆ. ಕರ್ನಾಟಕ ಆರೋಗ್ಯ ಇಲಾಖೆಯು ಹುಕ್ಕಾ ಮಾರಾಟ ಮತ್ತು ಸೇವನೆ ನಿಷೇಧಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ‘ಸಾರ್ವಜನಿಕ ಆರೋಗ್ಯ’ವನ್ನು ಉಲ್ಲೇಖಿಸಿ ಸರ್ಕಾರವು ಹುಕ್ಕಾ ಬಾರ್‌ಗಳಲ್ಲಿ ಹುಕ್ಕಾ ಮಾರಾಟವನ್ನು … Continued