ಮನೆ ಬದಲಿಸುವ ಬಾಡಿಗೆದಾರರಿಗೆ ಗುಡ್‌ ನ್ಯೂಸ್‌ : ‘ಗೃಹ ಜ್ಯೋತಿ’ ನಿಯಮದಲ್ಲಿ ಬದಲಾವಣೆಗೆ ಸೂಚನೆ

ಬೆಂಗಳೂರು : ಇಂಧನ ಇಲಾಖೆಯು ಗೃಹಜ್ಯೋತಿಯ ಫ‌ಲಾನುಭವಿಗಳು ಬಾಡಿಗೆ ಮನೆ ಅಥವಾ ಮನೆ ಬದಲಾಯಿಸಿದ ಬಳಿಕವೂ ಗೃಹಜ್ಯೋತಿ ಯೋಜನೆ ಲಾಭ ಮುಂದುವರಿಸಲು ಅವಕಾಶ ಕಲ್ಪಿಸಿದೆ. ಗೃಹ ಜ್ಯೋತಿ ಯೋಜನೆಯಿಂದ ಗ್ರಾಹಕರು ತಮ್ಮ ಖಾತೆಗಳನ್ನು ಡಿ-ಲಿಂಕ್ ಮಾಡಲು, ವಿಳಾಸ ಬದಲಾವಣೆ ಮತ್ತು ಶಿಫ್ಟಿಂಗ್‌ ನಂತರ ಮರು ಲಿಂಕ್ ಮಾಡಲು ಅವಕಾಶ ಒದಗಿಸುವ ಪ್ರಕ್ರಿಯೆಯನ್ನು ಪ್ರಾರಂಭಿಸಲು ವಿದ್ಯುತ್ ಸರಬರಾಜು … Continued

ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ- ದೆಹಲಿ ಪ್ರತಿಭಟನೆಯು ಕರ್ನಾಟಕ, ಕನ್ನಡಿಗರ ಹಿತ ಕಾಯುವ ಚಳವಳಿ ಎಂದು ಸಿದ್ದರಾಮಯ್ಯ

ನವದೆಹಲಿ : ಕೇಂದ್ರ ಸರ್ಕಾರ ರಾಜ್ಯಕ್ಕೆ ತೆರಿಗೆ ಹಂಚಿಕೆಯಲ್ಲಿ ಮಾಡಿರುವ ಅನ್ಯಾಯದ ವಿರುದ್ಧ ಇಂದು, ಬುಧವಾರ ದೆಹಲಿಯ ಜಂತರ್ ಮಂತರ್ ನಲ್ಲಿ ಹಮ್ಮಿಕೊಂಡಿರುವ ಹೋರಾಟ ಕರ್ನಾಟಕದ, ಕನ್ನಡಿಗರ ಹಿತ ಕಾಪಾಡುವ ಚಳುವಳಿಯಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನವದೆಹಲಿಯ ಜಂತರ್ ಮಂತರ್ ನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹಮ್ಮಿಕೊಂಡಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ … Continued

ಓಲಾ, ಉಬರ್ ಸೇರಿದಂತೆ ರಾಜ್ಯಾದ್ಯಂತ ಎಲ್ಲ ಟ್ಯಾಕ್ಸಿಗಳಿಗೆ ಏಕರೂಪ ದರ ನಿಗದಿಪಡಿಸಿದ ಸರ್ಕಾರ

ಬೆಂಗಳೂರು: ಪೀಕ್ ಅವರ್​ನಲ್ಲಿ ದರ ಏರಿಸಿ ಜನರ ಸುಲಿಗೆ ತಡೆಯಲು ಆ್ಯಪ್ ಆಧಾರಿತ ಅಗ್ರಿಗೇಟರ್‌ಗಳಾದ ಓಲಾ, ಉಬರ್, ರ್ಯಾಪಿಡೋ ಮತ್ತು ಸಿಟಿ ಟ್ಯಾಕ್ಸಿಗಳಿಗೆ ರಾಜ್ಯ ಸರ್ಕಾರ ಈಗ ಏಕರೂಪ ದರ ನಿಗದಿಪಡಿಸಿದೆ. ಆ್ಯಪ್ ಆಧಾರಿತ ಕ್ಯಾಬ್ ಅಗ್ರಿಗೇಟರ್‌ಗಳು ಮತ್ತು ಸಿಟಿ ಟ್ಯಾಕ್ಸಿಗಳ ದರಗಳು ಏಕರೂಪವಾಗಿರುತ್ತವೆ ಎಂದು ಸರ್ಕಾರದ ಆದೇಶವು ಹೇಳಿದೆ. ಪರಿಷ್ಕೃತ ದರಗಳು ತಕ್ಷಣದಿಂದ ಜಾರಿಗೆ … Continued

ದೆಹಲಿಯಲ್ಲಿ ಫೆ.7 ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಧರಣಿ

ಬೆಂಗಳೂರು: ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಪಾಲಿನ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಮಾಡಿದೆ ಎಂದು ಆರೋಪಿಸಿ ಕಾಂಗ್ರೆಸ್ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಶುಕ್ರವಾರ ತಿಳಿಸಿದ್ದಾರೆ. ಕೇಂದ್ರ ಸರ್ಕಾರದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ನಡೆಯುವ ಧರಣಿಯ ನೇತೃತ್ವವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಹಿಸಲಿದ್ದಾರೆ. ಅಲ್ಲದೆ, ರಾಜ್ಯದ 138 … Continued

ರಾಜ್ಯದಲ್ಲಿ ಮತ್ತೆ ಬಿಯರ್ ದರ ಏರಿಕೆ

ಬೆಂಗಳೂರು : ರಾಜ್ಯದ ಬಜೆಟ್ ಹೊಸ್ತಿಲಲ್ಲೇ ರಾಜ್ಯ ಸರ್ಕಾರ ಬಿಯರ್ ಬೆಲೆ ಏರಿಕೆಯಲ್ಲಿ ಏರಿಕೆ ಮಾಡಿ ಆದೇಶ ಹೊರಡಿಸಿದೆ. ಹಾಗೂ ಇದು ಗುರುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ. ಬಿಯರ್ ಬಾಟಲಿ ಬೆಲೆಯಲ್ಲಿ 10 ರಿಂದ 15 ರೂಪಾಯಿವರೆಗೆ ಹೆಚ್ಚಳ ಮಾಡಲಾಗಿದೆ. ಇಂದಿನಿಂದಲೇ ಹೊಸ ದರ ಜಾರಿಗೆ ಬಂದಿದೆ. ಬಿಯರ್ ಅಬಕಾರಿ ಸುಂಕ ಹೆಚ್ಚಳಕ್ಕೆ ಜನವರಿ 20ರಂದು … Continued

ಹಣ ಕೊಡದಿದ್ರೆ ದಕ್ಷಿಣ ಭಾರತಕ್ಕೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗ್ತದೆ : ಸಂಸದ ಡಿ.ಕೆ. ಸುರೇಶ ವಿವಾದಾತ್ಮಕ ಹೇಳಿಕೆ

ನವದೆಹಲಿ/ಬೆಂಗಳೂರು : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿ.ಕೆ.ಸುರೇಶ ಅವರು ದಕ್ಷಿಣ ಭಾರತದ ರಾಜ್ಯಗಳಿಗೆ ಕೇಂದ್ರವು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗೆ ಹೀಗೆ ಅನ್ಯಾಯವಾದರೆ ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿದೆ. ಗುರುವಾರ ದೆಹಲಿಯಲ್ಲಿ ಕೇಂದ್ರದ ಮಧ್ಯಂತರ ಬಜೆಟ್‌ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ … Continued

ಯಾವುದೇ ವಿಶೇಷ ಪ್ರೋತ್ಸಾಹದಾಯಕ ಯೋಜನೆಗಳಿಲ್ಲದ ಅತ್ಯಂತ ನಿರಾಶದಾಯಕ ಬಜೆಟ್ : ವಸಂತ ಲದವಾ

ಹುಬ್ಬಳ್ಳಿ : ಕೇಂದ್ರ ಸರ್ಕಾರ ಇಂದು, ಗುರುವಾರ ಮಂಡಿಸಿದ ಕೇಂದ್ರ ಮುಂಗಡಪತ್ರ ಯಾವುದೇ ವಿಶೇಷ ಅಭಿವೃದ್ಧಿ ಉದ್ಯೋಗ ಸೃಷ್ಟಿ, ಉತ್ಪಾದನಾ ಕ್ಷೇತ್ರ, ರ‍ಆರ್ಥಿಕ ಹಾಗೂ ಕೃಷಿ ವಲಯಗಳಿಗೆ ಉತ್ತೇಜನ ಮತ್ತು ಪ್ರೋತ್ಸಾಹವಿಲ್ಲದೆ ನಿರಾಶದಾಯ ಬಜೆಟ್ ಆಗಿದೆ ಎಂದು ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಮಾಜಿ ಅಧ್ಯಕ್ಷ ವಸಂತ ಲದವಾ ಪ್ರತಿಕ್ರಯಿಸಿದ್ದಾರೆ. ೨೦೧೪ ರಲ್ಲಿದ್ದ ೫೬ ಲಕ್ಷ ಕೋಟಿ … Continued

ರಾಜ್ಯದ 10 ಜಿಲ್ಲೆಗಳ 40 ಕಡೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಘೋಷಿತ ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿರುವ ಆರೋಪ ಹೊತ್ತಿರುವ ರಾಜ್ಯದ ವಿವಿಧ ಇಲಾಖೆಗಳ 10 ಅಧಿಕಾರಿಗಳ ವಿರುದ್ಧ ಹತ್ತು ಜಿಲ್ಲೆಗಳಲ್ಲಿ 40 ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ರಾಜ್ಯದ 10 ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿ,ಸಂಬಂಧಿಕರ ಮನೆಗಳ ಮೇಲೂ ಲೋಕಾಯುಕ್ತ ದಾಳಿ ನಡೆದಿದೆ. ದಾಳಿ ವೇಳೆ ಸಿಕ್ಕ ಅಪಾರ ಪ್ರಮಾಣದ ಹಣ, … Continued

ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಗ್ಯಾರಂಟಿ ಯೋಜನೆಗಳು ರದ್ದಾಗಬಹುದು : ಶಾಸಕ ಬಾಲಕೃಷ್ಣ

ರಾಮನಗರ : ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಹೆಚ್ಚು ಸ್ಥಾನಗಳಲ್ಲಿ ಗೆಲ್ಲದಿದ್ದರೆ ರಾಜ್ಯ ಸರ್ಕಾರ ಕೊಟ್ಟಿರುವ 5 ಗ್ಯಾರಂಟಿ ಯೋಜನೆಗಳನ್ನು ರದ್ದುಗೊಳಿಸಬಹುದು ಎಂದು ಮಾಗಡಿ ಶಾಸಕ ಎಚ್.ಡಿ. ಬಾಲಕೃಷ್ಣ ಹೇಳಿದ್ದಾರೆ. ಜಿಲ್ಲೆಯ ಮಾಗಡಿ ತಾಲೂಕಿನ ಶ್ರೀಗಿರಿಪುರದ ಜನಸಂಪರ್ಕ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬಡವರ … Continued

ದೆಹಲಿಗೆ ತೆರಳುವ ವಿಮಾನದಲ್ಲಿ ಅಸ್ವಸ್ಥ : ಅಗರ್ತಲಾ ಆಸ್ಪತ್ರೆಗೆ ದಾಖಲಾದ ಕರ್ನಾಟಕ ಕ್ರಿಕೆಟ್‌ ತಂಡದ ನಾಯಕ ಮಯಾಂಕ್ ಅಗರ್ವಾಲ್

ನವದೆಹಲಿ : ಭಾರತ ಕ್ರಿಕೆಟಿಗ ಮಯಾಂಕ್ ಅಗರ್ವಾಲ್ ಅವರು ಅಗರ್ತಲಾ ವಿಮಾನ ನಿಲ್ದಾಣದಿಂದ ನವದೆಹಲಿಗೆ ಹೋಗುವ ವಿಮಾನ ಟೇಕಾಫ್ ಆಗುವ ಮೊದಲು ಅನಾರೋಗ್ಯಕ್ಕೆ ತುತ್ತಾದ ನಂತರ ಮಂಗಳವಾರ (ಜನವರಿ 30) ಆಸ್ಪತ್ರೆಗೆ ಸೇರಿಸಲಾಯಿತು. ಮಯಾಂಕ್ ಅಗರ್ವಾಲ್ ಅವರು ವಿಮಾನದಲ್ಲಿ ತಮ್ಮ ಆಸನದಲ್ಲಿ ಕುಳಿತ ನಂತರ ತಮ್ಮ ಗಂಟಲಿನಲ್ಲಿ ತೊಂದರೆ ಅನುಭವಿಸಿದರು. ತಕ್ಷಣವೇ ಅವರನ್ನು ಅಗರ್ತಲಾದ ಹತ್ತಿರದ … Continued