ಕರ್ನಾಟಕಕ್ಕೆ ಬಂತು ೪ ಲಕ್ಷ ಲಸಿಕೆ, ಇನ್ನೂ ಬರಲಿದೆ ೧೨ಲಕ್ಷ

ಬೆಂಗಳೂರು : ಬುಧವಾರ ತಡರಾತ್ರಿ ರಾಜ್ಯಕ್ಕೆ 4 ಲಕ್ಷ ಡೋಸ್ ಕೊರೊನಾ ಲಸಿಕೆ ಬಂದಿದೆ, ಈ ವಾರದೊಳಗೆ ಇನ್ನೂ 12 ಲಕ್ಷ ಡೋಸ್ ಲಸಿಕೆ ಬರಲಿದೆ. ರಾಜ್ಯದಲ್ಲಿ ಲಸಿಕೆಯ ಕೊರತೆ ಉಂಟಾಗದಂತೆ ಕ್ರಮ ಕೈಗೊಂಡಿದ್ದು,ಎಲ್ಲ ಅರ್ಹ ನಾಗರೀಕರು ಕೂಡಲೇ ನೋಂದಣಿ ಮಾಡಿ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ ಮನವಿ … Continued

ಪರಿಷತ್ತಿನಲ್ಲಿ‌ ಕಾಂಗ್ರೆಸ್‌ ಧರಣಿ ಮಧ್ಯೆಯೇ ಬಜೆಟ್ ಅಂಗೀಕಾರ, ಅಧಿವೇಶನ ಮುಂದೂಡಿಕೆ

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಮಂಡಿಸಿದ 2021ನೇ ಸಾಲಿನ ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಹೆಚ್ಚಿನ ಚರ್ಚೆ ನಡೆಯದೆ ಪ್ರತಿಪಕ್ಷ ಕಾಂಗ್ರೆಸ್‍ನ ಗದ್ದಲದ ನಡುವೆ ಧ್ವನಿಮತದ ಮೂಲಕ ಅಂಗೀಕಾರಗೊಂಡಿದೆ. ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಬಜೆಟ್ ಮೇಲೆ ವಿಧಾನ ಪರಿಷತ್‍ನಲ್ಲಿ ಬಹಳಷ್ಟು ಮಂದಿ ಮಾತನಾಡಿಲ್ಲ. ಖುದ್ದು ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಅವರೇ ಮಾತನಾಡಿರಲಿಲ್ಲ. ಬುಧವಾರ ಬೆಳಗ್ಗೆ ಪ್ರಶ್ನೋತ್ತರ … Continued

ಕೊರೊನಾ ಸೋಂಕು ಹೆಚ್ಚಳ:ಕರ್ನಾಟಕದಲ್ಲಿ ಖಾಸಗಿ ಆಸ್ಪತ್ರೆಗೆ ಸಜ್ಜಾಗಲು ಸರ್ಕಾರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಚಿಕಿತ್ಸೆಗೆ ಸಜ್ಜಾಗುವಂತೆ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯಸ ಸರಕಾರ ಸೂಚಿಸಿದೆ. ಖಾಸಗಿ ಆಸ್ಪತ್ರೆಗಳ ಸಭೆ ನಡೆಸಿದ ಸರಕಾರ, ಕೊರೊನಾ ರೋಗಿಗಳ ಚಿಕಿತ್ಸೆಗೆ ಸಮರ್ಪಕ ವ್ಯವಸ್ಥೆ ಮಾಡಿಕೊಳ್ಳುವಂತೆ ತಿಳಿಸಿದೆ. ಮೊದಲ ಹಂತದಲ್ಲಿ ೨೦೦ಕ್ಕಿಂತ ಹೆಚ್ಚು ಹಾಸಿಗೆಗಳಿರುವ ಆಸ್ಪತ್ತೆಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಕೋರಮಂಗಲದ ಒಳಾಂಗಣ ಕ್ರೀಡಾಂಗಣ, ಹಜ್‌ ಭವನ, … Continued

ಕರ್ನಾಟಕದಲ್ಲಿ ದೈನಂದಿನ ಕೊರೊನಾ ಸೋಂಕು ಬುಧವಾರವೂ ಹೆಚ್ಚಳ..

ಬೆಂಗಳೂರು : ಕರ್ನಾಟಕದಲ್ಲಿ ಬೂದವಾರವೂ ಕೊರೊನಾ ಪ್ರಕರನ ಹೆಚ್ಚಳ ಕಂಡಿದೆ. ಕಳೆದ 24 ತಾಸಿನಲ್ಲಿ ಬರೋಬ್ಬರಿ 2,298 ಕೊರೊನಾ ಸೋಂಕು ದಾಖಲಾಗಿದೆ.. ಸೋಂಕಿನಿಂದ 12 ಜನ ಮೃತಪಟ್ಟಿದ್ದು, ಇಲ್ಲಿಯವರೆಗೆ ಮೃತಪಟ್ಟವರ ಸಂಖ್ಯೆ 12,461ಕ್ಕೆ ಏರಿದೆ.ರಾಜ್ಯದಲ್ಲಿ ಒಟ್ಟು ಕೊರಪೊನಾ ಸೋಂಕಿತರ ಸಂಖ್ಯೆ 9,75,955 ಕ್ಕೆ ಏರಿದೆ. ಬುಧವಾರ 995 ಗುಣಮುಖರಾಗಿದ್ದು, ಸೋಂಕಿನ ಸಕ್ರಿಯ ಪ್ರಕರಣಗಳು 16,886 ಕ್ಕೆ … Continued

ಲಾಕ್‌ ಲ್ಯಾಂಡ್‌ ಭೂಮಿ ಮಾರಾಟಕ್ಕೆ ಸರ್ಕಾರದ ನಿರ್ಧಾರ: ಸಚಿವ ಅಶೋಕ

ಬೆಂಗಳೂರು: ಸರ್ಕಾರಿ ರಸ್ತೆ ಇಲ್ಲದೆ ಮಧ್ಯ ಸಿಲುಕಿರುವ ಲಾಕ್‍ಲ್ಯಾಂಡ್ ಭೂಮಿಯನ್ನು ಅಕ್ಕಪಕ್ಕದ ಜಮೀನಿನ ಮಾಲೀಕರಿಗೆ ಮಾರಾಟ ಮಾಡಲು ಸರ್ಕಾರ ನಿರ್ಧರಿಸಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದ್ದಾರೆ. ಪರಿಷತ್‍ನ ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿರುವ ಬಿ-ಖರಾಬು ಭೂಮಿಗಳು ಹಾಗು ಬೆಂಗಳೂರಿನಲ್ಲಿ ಭೂ ಕಬಳಿಕೆ ಆಗಿರುವ ಜಮೀನುಗಳ ಕುರಿತು ವಿವರಣೆ … Continued

ಟಿಕಾಯತ್‌ ಮೇಲಿನ ಪ್ರಕರಣ ಹಿಂಪಡೆಯಲು ಒತ್ತಾಯಿಸಿ ಗೃಹ ಸಚಿವ ಬೊಮ್ಮಾಯಿಗೆ ಪತ್ರ

ಮೈಸೂರು: ಸಂಯುಕ್ತ ಕಿಸಾನ್ ಮೋರ್ಚಾದ ನಾಯಕ ರಾಕೇಶ್ ಟಿಕಾಯತ್ ಅವರ ವಿರುದ್ಧ ಶಿವಮೊಗ್ಗದ ಕೋಟೆ ಠಾಣೆಯಲ್ಲಿ ದಾಖಲಿಸಿರುವ ಪ್ರಕರಣ ಹಾಗೂ ರಾಜ್ಯದ ಇತರೆ ಯಾವುದೇ ಠಾಣೆಗಳಲ್ಲಿ ದಾಖಲಿಸಿರುವ ಕೇಸುಗಳನ್ನು ಕೂಡಲೇ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳ ಪ್ರಮುಖರು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಪತ್ರ ಬರೆದು ಒತ್ತಾಯಿಸಿದ್ದಾರೆ. ರೈತ ಚಳವಳಿಯ ಪರವಾಗಿ ಚುಕ್ಕಿ ನಂಜುಡಸ್ವಾಮಿ, … Continued

ಟಿಕಾಯತ್‌ ವಿರುದ್ಧ ಶಿವಮೊಗ್ಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿದ ಪೊಲೀಸರು

ಶಿವಮೊಗ್ಗ :ನಗರದಲ್ಲಿ ನಡೆದಂತ ರೈತರ ಮಹಾ ಪಂಚಾಯತ್ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನಲೆಯಲ್ಲಿ, ಸಂಯುಕ್ತ ಕಿಸಾನ್ ಮೋರ್ಚಾ ನಾಯಕ ರಾಕೇಶ್ ಟಿಕಾಯತ್ ವಿರುದ್ಧ ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಪ್ರಚೋದನಾಕಾರಿ ಭಾಷಣದ ಹಿನ್ನೆಲೆಯಲ್ಲಿ ಸ್ವಯಂ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಾರ್ಚ್ 20ರಂದು ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯ ಸೈನ್ಸ್ ಮೈದಾನದಲ್ಲಿ ರೈತರ ಮಹಾ … Continued

ಸಭೆ-ಸಮಾರಂಭ, ಕಾರ್ಯಕ್ರಮಗಳಿಗೆ ಕಡಿವಾಣ: ಜಿಲ್ಲಾಡಳಿತಕ್ಕೆ ಆರೋಗ್ಯ ಸಚಿವರ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಮುಂದುವರಿಯುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಒಂದು ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗಬಹುದು. ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದ್ದು, ಹೀಗಾಗಿ … Continued

ಕರಾವಳಿ ಜಿಲ್ಲೆಗಳಿಗೆ ಲವಣಾಂಶ ರಹಿತ ಮರಳು ಪೂರೈಕೆ: ನಿರಾಣಿ

ಬೆಂಗಳೂರು: ಕರಾವಳಿ ಜಿಲ್ಲೆಗಳಲ್ಲಿ ಲವಣಾಂಶ ರಹಿತ ಮರಳನ್ನು ಪೂರೈಕೆ ಮಾಡುತ್ತಿದ್ದೇವೆ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಹೇಳಿದರು. ಕಾಂಗ್ರೆಸ್‍ನ ಕೆ.ಪ್ರತಾಪ ಚಂದ್ರಶೆಟ್ಟಿ ಪ್ರಶ್ನೆಗೆ ಉತ್ತರಿಸಿದ ಅವರು, ಉಪ್ಪಿನಂಶ ಇರುವ ಮರಳು ಬಳಕೆಯಿಂದ ಗುಣಮಟ್ಟ ಹಾಳಾಗುತ್ತದೆ ಎಂದು ಸಮಿತಿಯು ನೀಡಿದ ವರದಿ ಆಧಾರದ ಹಿನ್ನೆಲೆಯಲ್ಲಿ ನಾವು ಈ ಕ್ರಮ ತೆಗೆದುಕೊಂಡಿದ್ದೇವೆ … Continued

ಕರ್ನಾಟಕದಲ್ಲಿ 2 ಸಾವಿರ ದಾಟಿದ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ..ಬೇಕಿದೆ ಕಟ್ಟೆಚ್ಚರ..!!

ಬೆಂಗಳೂರು: ಕಳೆದ 24 ತಾಸಿನಲ್ಲಿ ಕರ್ನಾಟಕದಲ್ಲಿ 2,000ಕ್ಕು ಹೆಚ್ಚು ಪ್ರಕರನಗಳು ದಾಖಲಾಗಿವೆ. ಸೋಮವಾರ ಏರಿಕೆಗೆ ಬ್ರೇಕ್‌ ಬಿದ್ದಿದ್ದರಿಂದ ಕೊಂಚ ನಿಟ್ಟುಸಿರು ಬಿಟ್ಟಿದ್ದ ಜನರಿಗೆ ಮಂಗಳವಾರದ ದೈನಂದಿನ ಸೋಂಕು ಆತಂಕಕ್ಕೆ ಕಾರಣವಾಗಿದೆ. ಕರ್ನಾಕಟದ ಆರೋಗ್ಯ ಇಲಾಖೆ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯವು 2,000 ಕ್ಕೂ ಹೆಚ್ಚು ಪ್ರಕರಣಗಳನ್ನು ಸೇರಿಸಿದ್ದರಿಂದ ಕರಣಾಟಕ ಮಂಗಳವಾರ ದೈನಂದಿನ ಕೋವಿಡ್ … Continued