ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆ ಮತ್ತೆ 5 ವರ್ಷ ಮುಂದುವರಿಸಿ

ಬೆಂಗಳೂರು: ಜಿಎಸ್‍ಟಿ ನಷ್ಟ ಪರಿಹಾರದ ಕಾಯ್ದೆಯನ್ನು ಮತ್ತೆ 5 ವರ್ಷಗಳ ಕಾಲ ಮುಂದುವರಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕೆಂದು ಜೆಡಿಎಸ್‍ನ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಒತ್ತಾಯಿಸಿದ್ದಾರೆ. ವಿಧಾನಪರಿಷತ್‍ನ ಪ್ರಶ್ನೋತ್ತರ ಅವಯಲ್ಲಿ ಪ್ರಶ್ನೆ ಕೇಳಿದ ಅವರು, ಜಿಎಸ್‍ಟಿ ಜಾರಿಗೆ ಬರುವ ಮೊದಲು ಕರ್ನಾಟಕದಲ್ಲಿ 36 ಸಾವಿರ ಕೋಟಿರೂ.ಗಳ ತೆರಿಗೆ ಸಂಗ್ರಹವಾಗುತ್ತಿತ್ತು. ಜಿಎಸ್‍ಟಿಯಿಂದ ಪ್ರತಿ ವರ್ಷ ಶೇ.14ರಷ್ಟು ತೆರಿಗೆ … Continued

ಜಾಗತಿಕ ನಾವೀನ್ಯತೆ ಸೂಚ್ಯಂಕ: ೩ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

ಜಾಗತಿಕ ನಾವೀನ್ಯತೆ ಸೂಚ್ಯಂಕದಲ್ಲಿ ಕರ್ನಾಟಕದ ರಾಜಧಾನಿ ಬೆಂಗಳೂರು ಮೂರನೇ ಸ್ಥಾನಕ್ಕೆ ಕುಸಿದಿದ್ದು, ‘ಸೂಪರ್ ಸಿಟಿ’ ಎಂಬ ಹೆಗ್ಗಳಿಕೆ ಕಳೆದುಕೊಂಡಿದೆ. ಕೆನಡಾದ ಟೊರೊಂಟೊ ಮೊದಲ ಸ್ಥಾನ ಗಳಿಸಿದೆ. ಕಾರ್ಯತಂತ್ರದ ಸಲಹೆ, ಸಂಶೋಧನೆ ಮತ್ತು ಹೂಡಿಕೆ ಸಲಹಾ ಸಂಸ್ಥೆ ಥೋಲೋನ್ಸ್ ಬಿಡುಗಡೆ ಮಾಡಿರುವ ಜಾಗತಿಕ ನಾವೀನ್ಯತೆ ಸೂಚ್ಯಂಕದ ಪ್ರಕಾರ, ಭಾರತದ ಟೆಕ್ ಕ್ಯಾಪಿಟಲ್ ಎಂದೇ ಗುರುತಿಸಲ್ಪಟ್ಟು ಪ್ರಥಮ ಸ್ಥಾನದಲ್ಲಿದ್ದ … Continued

ಮೇಲ್ಮನೆಯಲ್ಲಿ ಪ್ರತಿಧ್ವನಿಸಿದ ಹಿರೇನಾಗವಲ್ಲಿ ಸ್ಫೋಟ ಪ್ರಕರಣ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿ ಬಂಡೆಯ ಹಿರೇನಾಗವಲ್ಲಿ ಗ್ರಾಮದ ಬಳಿ ಜಿಲೆಟಿನ್ ಮತ್ತಿತರ ವಸ್ತು ಸ್ಫೋಟಗೊಂಡು 6 ಮಂದಿ ಮೃತಪಟ್ಟ ಘಟನೆ ವಿಧಾನ ಪರಿಷತ್‍ನಲ್ಲಿ ಗುರುವಾರ ಪ್ರತಿಧ್ವನಿಸಿತು.ವಿಷಯ ಪ್ರಸ್ತಾಪಿಸಿದ ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಒಂದು ತಿಂಗಳ ಅವಯಲ್ಲಿ ಎರಡು ಘಟನೆ ಸಂಭವಿಸಿದೆ. ಶಿವಮೊಗ್ಗದಲ್ಲಿ ಸ್ಫೋಟ ನಡೆದು ಐವರು ಅಮೂಲ್ಯ ಜೀವ ಕಳೆದುಕೊಂಡರು. ಈ ಬಗ್ಗೆ … Continued

2020-21ನೇ ಸಾಲಿನ ಜನವರಿ ಅಂತ್ಯಕ್ಕೆ ಪೆಟ್ರೋಲ್-ಡೀಸೆಲ್ ತೆರಿಗೆಯಿಂದ ರಾಜ್ಯ ಸಂಗ್ರಹಿಸಿದ ಹಣವೆಷ್ಟೆಂದರೆ..

ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲೆ ವಿಧಿಸಲಾಗುತ್ತಿರುವ ತೆರಿಗೆಯಿಂದ ರಾಜ್ಯ ಸರ್ಕಾರಕ್ಕೆ 2020-21ನೇ ಸಾಲಿನ ಜನವರಿ ಅಂತ್ಯಕ್ಕೆ 12,432.27 ಕೋಟಿ ರೂ.ತೆರಿಗೆ ಸಂಗ್ರಹವಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಗುರುವಾರ ವಿಧಾನ ಪರಿಷತ್‍ನ ಪ್ರಶ್ನೋತ್ತರ ಅಧಿವಯಲ್ಲಿ ಕಾಂಗ್ರೆಸ್ ಸದಸ್ಯ ಪ್ರಕಾಶ್‍ ರಾಥೋಡ್ ಅವರ ಪ್ರಶ್ನೆಗೆ ಮುಖ್ಯಮಂತ್ರಿಗಳ ಪರವಾಗಿ ಉತ್ತರ ನೀಡಿದ ಸಭಾನಾಯಕ ಹಾಗೂ ಸಚಿವ ಕೋಟಾ ಶ್ರೀನಿವಾಸಪೂಜಾರಿ, … Continued

ಕರ್ನಾಟಕವೂ ಸೇರಿದಂತೆ ೬ ರಾಜ್ಯಗಳ ಕೊರೊನಾ ಸೋಂಕು ಹೆಚ್ಚಳ: ಕೇಂದ್ರ

ಕರ್ನಾಟಕ, ಮಹಾರಾಷ್ಟ್ರ, ತಮಿಳುನಾಡು, ಕೇರಳ, ಪಂಜಾಬ್, ಗುಜರಾತ್ ರಾಜ್ಯಗಳಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಏರಿಕೆಯಾಗಿದೆ. 24 ಗಂಟೆಗಳ ಅವಧಿಯಲ್ಲಿ ದೃಢಪಟ್ಟ ಹೊಸ ಪ್ರಕರಣಗಳ ಪೈಕಿ ಶೇ 85.95 ಈ ರಾಜ್ಯಗಳಿಂದ ವರದಿಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ತಿಳಿಸಿದೆ. ದೇಶದಲ್ಲಿ 24 ತಾಸುಗಳ ಅವಧಿಯಲ್ಲಿ 14,989 ಕೊರೊನಾ ಸೋಕುಗಳ ವರದಿಯಾಗಿದ್ದು, ಇದರಲ್ಲಿ ಮಹಾರಾಷ್ಟ್ರದಲ್ಲಿ ಗರಿಷ್ಠ, 7,863 … Continued

ರಾಜ್ಯದಲ್ಲಿ ಹೆಚ್ಚಿದ ೫೨೧ ಜನರಿಗೆ ಕೊರೊನಾ ಸಂಕು, ಐದು ಸಾವು

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚಾಗುತ್ತಿದ್ದು, ರವಿವಾರ 521 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,51,251ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 5 ಮಂದಿ ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,331ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ರವಿವಾರ 312 ಮಂದಿಗೆ … Continued

ಲಗ್ನಪತ್ರಿಕೆಯಲ್ಲಿ ಕೃಷಿ ಮಾಹಿತಿ: ಸಮಗ್ರ ಕೃಷಿ ಉತ್ತೇಜನಕ್ಕೆ ಮುಂದಾದ ಯುವ ರೈತ

ರಾಮನಗರ: ಮದುವೆಯ ಆಮಂತ್ರಣ ಪತ್ರಿಕೆಯಲ್ಲಿ ಸಮಗ್ರ ಕೃಷಿ ಬಗ್ಗೆ ಜಾಗೃತಿ ಮೂಡಿಸುವ ಮಾಹಿತಿ ಪ್ರಕಟಿಸಿದ ಕನಕಪುರದ ಯುವ ರೈತರೊಬ್ಬರು ಕೃಷಿಕರ ಚಿತ್ತ ಸೆಳೆದಿದ್ದಾರೆ. ತಾಲೂಕಿನ ಗೊಲ್ಲಹಳ್ಳಿ ಸಮೀಪದ ತೆರಿಗೆದೊಡ್ಡಿಯ ಅರ್ಜುನ ನಾಯಕ್‌ ಅವರ ಮದುವೆ ಗಂಗಾಬಾಯಿ ಅವರೊಂದಿಗೆ ಮಾರ್ಚ್‌ ೭ರಂದು ಜರುಗಲಿದೆ. ತಮ್ಮ ಲಗ್ನ ಪತ್ರಿಕೆಯಲ್ಲಿ ಒಂದು ಪುಟವನ್ನು ಕೃಷಿ ಪದ್ಧತಿಗಳು ಅವುಗಳ ಪ್ರಯೋಜನಗಳ ಬಗ್ಗೆ … Continued

ಒಂದು ವಾರದಲ್ಲಿ ರಾಜ್ಯ ನಾಲ್ಕು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆ ಸಾಧ್ಯತೆ

ಬೆಂಗಳೂರು: ರಾಜ್ಯದ ಒಂದು ಲೋಕಸಭೆ ಮತ್ತು ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಸುವ ಸಂಬಂಧ ಮುಂದಿನ ವಾರ ವೇಳಾ ಪಟ್ಟಿ ಪ್ರಕಟವಾಗಲಿದೆ ಎಂದು ಚುನಾವಣಾ ಆಯೋಗದ ರಾಜ್ಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಕುಮಾರ್ ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ನವದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭೆ ಚುನಾವಣೆ ಮತ್ತು ಆಯಾ ರಾಜ್ಯಗಳಲ್ಲಿ ತೆರವಾಗಿರುವ ಲೋಕಸಭಾ … Continued

ಮೈಸೂರು: ಎಸಿಬಿ ಬಲೆಗೆ ಬಿದ್ದ ಪಿಡಿಒ-ಎಸ್‌ಡಿಎ

ಮೈಸೂರು: ಮೈಸೂರು ಜಿಲ್ಲೆಯ ಎಚ್‌.ಡಿ.ಕೋಟೆ ತಾಲೂಕಿನಲ್ಲಿ ಲಂಚ ಪಡೆಯುತ್ತಿದ್ದ ಪಂಚಾಯತ ಅಭಿವೃದ್ಧಿ ಅಧಿಕಾರಿ ಹಾಗೂ ದ್ವಿತಿಯ ದರ್ಜೆ ಸಹಾಯಕ ಎಸಿಬಿ ಬಲೆಗೆ ಬಿದ್ದಿದ್ದಾರೆ. ತಾಲೂಕಿನ ಮಾದಾಪುರ ಗ್ರಾಮದಲ್ಲಿ ನಿವೇಶನವೊಂದರ ಖಾತೆ ಬದಲಾವಣೆಗೆ ೩೦,೦೦೦ರೂ. ಲಂಚ ಕೇಳಿದ್ದರು. ಈ ಕುರಿತು ಕೇಶರಾಮ್‌ ಎಂಬುವವರು ಎಸಿಬಿಗೆ ದೂರು ನೀಡಿದ್ದರು. ಶುಕ್ರವಾರ ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ … Continued

ಕರ್ನಾಟಕ: ೩೧೭ ಜನರಿಗೆ ಕೊರೋನಾ ಸೋಂಕು ದೃಢ, ಐವರ ಸಾವು

ಬೆಂಗಳೂರು; ಕಳೆದ ೨೪ ತಾಸಿನಲ್ಲಿ ೩೧೭ ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಕೊರೊನಾದಿಂದ ಐವರು ಸೋಂಕಿತ ರು ಮೃತಪಟ್ಟಿದ್ದು ಬೆಂಗಳೂರು ನಗರದಲ್ಲಿ ಮೂರು, ಧಾರವಾಡ ಹಾಗೂ ತುಮಕೂರು ಜಿಲ್ಲೆಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ರಾಜ್ಯದಲ್ಲಿ ಕೊರೋನಾ ಸೋಂಕು ಇಳಿಕೆಯ ಹಾದಿಯಲ್ಲಿದೆ. ರಾಜ್ಯದ 8 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸ ಪ್ರಕರಣಗಳು ವರದಿಯಾಗಿಲ್ಲ. ಬೆಂಗಳೂರಿನಲ್ಲಿ ಕಳೆದ … Continued