ಹಿಜಾಬ್ ನಿಷೇಧ ಹಿಂಪಡೆಯಲು ಸೂಚನೆ ನೀಡಿದ್ದೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಾರಿಗೆ ತರಲಾಗಿದ್ದ ಹಿಬಾಬ್‌ ನಿಷೇಧ ಆದೇಶ ಹಿಂಪಡೆಯಲು ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲೆಯ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. … Continued

ಕ್ರಿಸ್‌ಮಸ್ ರಜೆ : ಕೆಎಸ್‌ಆರ್‌ಟಿಸಿಯಿಂದ 1000 ಹೆಚ್ಚುವರಿ ವಿಶೇಷ ಬಸ್‌ಗಳ ಓಡಾಟ

ಬೆಂಗಳೂರು: ಕ್ರಿಸ್‌ಮಸ್‌ ಹಬ್ಬದ ಸಂದರ್ಭದ ಸಾಲು ಸಾಲು ರಜೆ ಬಂದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ಕೆಎಸ್‌ಆರ್‌ಟಿಸಿ 1000 ವಿಶೇಷ ಬಸ್‌ಗಳನ್ನು ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಓಡಿಸಲಿದೆ. ಅಲ್ಲದೆ, ರಾಜ್ಯದ ಪ್ರಮುಖ ಸ್ಥಳಗಳ ನಡುವೆಯೂ ಸಂಚಾರಿಸಲಿವೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಡಿಸೆಂಬರ್‌ 22 , 23 ಹಾಗೂ 24 ಬೆಂಗಳೂರಿನಿಂದ ವಿಶೇಷ ಬಸ್‌ಗಳು ಸಂಚಾರ ನಡೆಸಲಿವೆ. ಸದ್ಯ … Continued

ಬೆಳಗಾವಿ ಮಹಿಳೆ ವಿವಸ್ತ್ರ ಪ್ರಕರಣ: ಮೌನ ವಹಿಸಿದ್ದ ಗ್ರಾಮಸ್ಥರಿಗೆ ಸಾಮೂಹಿಕ ಜವಾಬ್ದಾರಿ ನಿಗದಿಗೆ ಹೈಕೋರ್ಟ್ ಸಲಹೆ

ಬೆಂಗಳೂರು : ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ವಂಟಮುರಿ ಗ್ರಾಮದ ಮಹಿಳೆಯರ ವಿವಸ್ತ್ರ ಪ್ರಕರಣದ ಸಂದರ್ಭದಲ್ಲಿ ಮೂಕಪ್ರೇಕ್ಷಕರಾಗಿದ್ದ ಗ್ರಾಮದ ಜನರಿಂದ ಪರಿಹಾರದ ರೂಪದಲ್ಲಿ ಹಣ ಸಂಗ್ರಹಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸರ್ಕಾರಕ್ಕೆ ಮೌಖಿಕವಾಗಿ ಸಲಹೆ ನೀಡಿದೆ. ಅಲ್ಲದೆ, ಸಾಮೂಹಿಕ ಜವಾಬ್ದಾರಿ ನಿಗದಿಪಡಿಸಬೇಕು ಎಂದು ಅಭಿಪ್ರಾಯಪಟ್ಟಿದೆ. ಮಹಿಳೆಯ ವಿವಸ್ತ್ರ ಘಟನೆ ಬಗ್ಗೆ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡ ಅರ್ಜಿಯ … Continued

ಕೇರಳದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ : ಕರ್ನಾಟಕದಲ್ಲಿ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾಸ್ಕ್‌ ಧರಿಸಲು ಸಲಹೆ

ಬೆಂಗಳೂರು : ಕೇರಳದಲ್ಲಿ ಕೋವಿಡ್ -19 ಪ್ರಕರಣಗಳ ಹೆಚ್ಚಳದ ಮಧ್ಯೆ ಹಿರಿಯ ನಾಗರಿಕರು ಮತ್ತು ಕೊಮೊರ್ಬಿಡಿಟಿ ಇರುವವರು ಮಾಸ್ಕ್ ಧರಿಸುವಂತೆ ರಾಜ್ಯ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಸೋಮವಾರ ಸಲಹೆ ನೀಡಿದ್ದಾರೆ. ಕೊಡಗಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಯಪಡುವ ಅಗತ್ಯವಿಲ್ಲ. ನಾವು ಸಭೆ ನಡೆಸಿದ್ದೇವೆ, ಅಲ್ಲಿ ನಾವು ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಚರ್ಚಿಸಿದ್ದೇವೆ. ನಾವು … Continued

ʼಕೆಎಸ್‌ಆರ್‌ಟಿಸಿʼ ಹೆಸರು ಬಳಕೆ : ಕೇರಳದ ತಕರಾರು ಅರ್ಜಿ ತಿರಸ್ಕರಿಸಿದ ಮದ್ರಾಸ್‌ ಹೈಕೋರ್ಟ್‌, ಕರ್ನಾಟಕಕ್ಕೆ ಗೆಲುವು

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್‌ಆರ್‌ಟಿಸಿ’ ಸಂಕ್ಷೇಪಣಾ ಗುರುತು ಬಳಸಬಾರದು ಎಂದು ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಸಲ್ಲಿಸಿದ ಮನವಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾಗೊಳಿಸಿದೆ. ಹಾಗೂ ಕೆಎಸ್ಆಆರ್​ಟಿಸಿ ಹೆಸರು ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ‘ಕೆಎಸ್ಆರ್ ಟಿ ಸಿ’ಕಾನೂನು ಹೋರಾಟದಲ್ಲಿ ಕರ್ನಾಟಕಕ್ಕೆ ಜಯ ಸಿಕ್ಕಿದೆ, ಕೇರಳಕ್ಕೆ ಹಿನ್ನಡೆಯಾಗಿದೆ. … Continued

ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡ ಮೂವರು ಬಿಜೆಪಿ ಶಾಸಕರು…!

  ಬೆಳಗಾವಿ :ಕೆಲ ತಿಂಗಳುಗಳಿಂದ ಬಿಜೆಪಿ ತೊರೆದು ಕಾಂಗ್ರೆಸ್ ಸೇರುತ್ತಾರೆ ಎಂಬ ಚರ್ಚೆಗೆ ಗ್ರಾಸ ಒದಗಿಸಿದ್ದ ಬಿಜೆಪಿ ಶಾಸಕರಾದ ಶಿವರಾಮ ಹೆಬ್ಬಾರ್, ಎಸ್. ಟಿ.ಸೋಮಶೇಖರ ಹಾಗೂ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಬುಧವಾರ ರಾತ್ರಿ ಬೆಳಗಾವಿಯ ಹೊರವಲಯದಲ್ಲಿ ನಡೆದ ಕಾಂಗ್ರೆಸ್ ಔತಣಕೂಟದಲ್ಲಿ ಪಾಲ್ಗೊಂಡು ಅಚ್ಚರಿ ಮೂಡಿಸಿದ್ದಾರೆ. ಎಚ್. ವಿಶ್ವನಾಥ ವಿಧಾನ ಪರಿಷತ್ ಸದಸ್ಯರಾಗಿ ಆಗಾಗ … Continued

ಬೆಂಗಳೂರಿನ 6 ಕಡೆ ಎನ್ ಐಎ ದಾಳಿ

ಬೆಂಗಳೂರು: ರಾಜಧಾನಿಯ ಒಟ್ಟು 6 ಕಡೆಗಳಲ್ಲಿ ಇಂದು, ಬುಧವಾರ ಬೆಳ್ಳಂಬೆಳಿಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ (NIA) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಂಕಿತ ಉಗ್ರ ನಸೀರ್ ಎಂಬಾತ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿ ನಡೆಸಿದೆ ಎಂದು ಹೇಳಲಾಗಿದೆ. ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ … Continued

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆ : ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಭಾನುವಾರ ಮಳೆಯಾಗಲಿದೆ. ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, … Continued

ಐಸಿಸ್ ಸಂಚು ಪ್ರಕರಣ : ಕರ್ನಾಟಕ, ಮಹಾರಾಷ್ಟ್ರದ 40 ಕ್ಕೂ ಹೆಚ್ಚು ಸ್ಥಳಗಳಲ್ಲಿ ಎನ್​​ಐಎ ದಾಳಿ ; 13 ಜನರ ಬಂಧನ

ನವದೆಹಲಿ: ಇಸ್ಲಾಮಿಕ್ ಸ್ಟೇಟ್ ಭಯೋತ್ಪಾದನೆ ಸಂಚಿನ ಪ್ರಕರಣದಲ್ಲಿ ಮಹಾರಾಷ್ಟ್ರ ಮತ್ತು ಕರ್ನಾಟಕದಾದ್ಯಂತ 40ಕ್ಕೂ ಹೆಚ್ಚು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (National Investigation Agency)ಯ ತಂಡಗಳು ಶನಿವಾರ ದಾಳಿ ನಡೆಸಿದ್ದು, 13 ಜನರನ್ನು ಬಂಧಿಸಲಾಗಿದೆ. ಬಂಧಿತರು ಪುಣೆ ಮೂಲದವರಾಗಿದ್ದು, ಇಸ್ಲಾಮಿಕ್ ಸ್ಟೇಟ್ ಜೊತೆ ನಂಟು ಹೊಂದಿದ ಆರೋಪದ ಮೇರೆಗೆ ಬಂಧಿಸಲಾಗಿದೆ. ವಿವರಗಳ ಪ್ರಕಾರ, ಕರ್ನಾಟಕದ ಕೆಲವು … Continued

ಸಾವರ್ಕರ್ ಫೋಟೋ ತೆರವಿಗೆ ಯಾವುದೇ ಪ್ರಸ್ತಾವನೆ ಬಂದಿಲ್ಲ : ಸ್ಪೀಕರ್‌ ಯುಟಿ ಖಾದರ್‌

ಬೆಳಗಾವಿ: ವಿಧಾನಸಭೆ ಸಭಾಂಗಣದಲ್ಲಿ ವೀರ್‌ ಸಾವರ್ಕರ್ ಫೋಟೋ ತೆರವಿಗಾಗಿ ಯಾವುದೇ ಪ್ರಸ್ತಾವನೆ ಬಂದಿಲ್ಲ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಬೆಳಗಾವಿ ಸುವರ್ಣಸೌಧದಲ್ಲಿ‌ ಗುರುವಾರ ಪ್ರತಿಕ್ರಿಯೆ ನೀಡಿದ ಅವರು, ವಿಧಾನಸಭೆ ಸಭಾಂಗಣದಲ್ಲಿರುವ ಸಾವರ್ಕರ್ ಭಾವಚಿತ್ರ ತೆರವುಗೊಳಿಸಲು ಯಾವುದೇ ಪ್ರಸ್ತಾವನೆ ಬಂದಿಲ್ಲ.‌ ಪ್ರಸ್ತಾವನೆ ಬಂದ ಮೇಲೆ ಆ ಬಗ್ಗೆ ವಿಚಾರ ಮಾಡೋಣ. ಈಗಲೇ ಅದರ ಬಗ್ಗೆ ಏಕೆ..? … Continued