ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ನಾಮಪತ್ರ ಸಲ್ಲಿಕೆ

ಕಾರವಾರ : ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ. ಅಪಾರ ಬೆಂಬಲಿಗರೊಂದಿಗೆ ಕಾರವಾರ ನಗರದ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಕಾಗೇರಿ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರಿಗೆ ನಾಮಪತ್ರ ಸಲ್ಲಿಸಿದರು. ಅವರು ಒಟ್ಟು ಮೂರು ನಾಮಪತ್ರ ಸಲ್ಲಿಕೆ ಮಾಡಿದರು. ಪತ್ನಿ, ಪುತ್ರಿ ಹಾಗೂ … Continued

ಕಾರವಾರ: ಮೋದಿ ಮತ್ತೆ ಪ್ರಧಾನಿಯಾಗಲೆಂದು ಬೆರಳನ್ನೇ ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ಅಭಿಮಾನಿ..!

ಕಾರವಾರ: ಅಭಿಮಾನಿಯೊಬ್ಬ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಪ್ರಾರ್ಥಿಸಿ ಕಾಳಿ ಮಾತೆಗೆ ತನ್ನ ಬೆರಳನ್ನೇ ತುಂಡು ಮಾಡಿ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಸೋನಾರವಾಡದ ಅರುಣ ವರ್ಣೇಕರ ಎಂಬವರು ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ತನ್ನ ಎಡಗೈನ ಬೆರಳನ್ನೇ ಕಾಳಿ ಮಾತೆಗೆ ಅರ್ಪಿಸಿದ್ದಾರೆ. ಎಡಗೈ ತೋರು ಬೆರಳು … Continued

ಕಾರವಾರ: ಬಸ್‌ ಅಡ್ಡಗಟ್ಟಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ ಮಾಡಿದ ವ್ಯಕ್ತಿ

ಕಾರವಾರ: ತನಗೆ ಬಸ್ ಚಾಲಕ ಸೈಡ್ ಬಿಟ್ಟಿಲ್ಲ ಎನ್ನುವ ಕಾರಣಕ್ಕೆ ಬೈಕ್ ಸವಾರನೊಬ್ಬ ಸಾರಿಗೆ ಬಸ್ ಅಡ್ಡಗಟ್ಟಿ ಬಸ್‌ ಚಾಲಕ, ನಿರ್ವಾಹಕ ಹಾಗೂ ಪ್ರಯಾಣಿಕನಿಗೆ ಹಲ್ಲೆ ನಡೆಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಸಮೀಪದ ಶಿರವಾಡದ ಜಾಂಬಾ ಕ್ರಾಸ್ ಬಳಿ ನಡೆದಿದೆ. ಸಾರಿಗೆ ಬಸ್‌ ಕಾರವಾರ ನಗರದಿಂದ ಸಿದ್ದರಕ್ಕೆ ಪ್ರಯಾಣಿಸುತ್ತಿತ್ತು. ಬಸ್ ಶಿರವಾಡಕ್ಕೆ ತಲುಪುತ್ತಿದ್ದಂತೆ … Continued

ಮಂಗಳೂರು- ಮಡಗಾಂವಗೆ ವಂದೇ ಭಾರತ ರೈಲು ಸಂಚಾರಕ್ಕೆ ಚಾಲನೆ : ಕಾರವಾರದಲ್ಲಿ ಹರ್ಷೋದ್ಗಾರಗಳೊಂದಿಗೆ ಸ್ವಾಗತ

ಕಾರವಾರ: ಭಾರತೀಯ ರೈಲ್ವೆ ಇಲಾಖೆಯ ಅತಿ ವೇಗ ಸುಸಜ್ಜಿತ ರೈಲು ಎನಿಸಿರುವ ವಂದೇ ಭಾರತ ರೈಲು ಮಂಗಳೂರಿನಿಂದ ಮಡಗಾಂವಗೆ ಓಡಾಟ ಆರಂಭಿಸಿದ್ದು ಜಿಲ್ಲಾ ಕೇಂದ್ರ ಕಾರವಾರ ರೈಲ್ವೆ ನಿಲ್ದಾಣಕ್ಕೆ ಆಗಮಿಸಿದ ವಂದೇ ಭಾರತ ರೈಲಿಗೆ ಹರ್ಷೋದ್ಗಾರಗಳೊಂದಿಗೆ ಸ್ವಾಗತ ಕೋರಲಾಯಿತು. ಕಾರವಾರ ರೈಲ್ವೆ ನಿಲ್ದಾಣಕ್ಕೆ ರೈಲು ಆಗಮಿಸುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಯಕಾರ ಕೂಗಿದರು. ಕಾರವಾರ-ಅಂಕೋಲಾ … Continued

ಕಾರವಾರ: ಚಕ್ರವರ್ತಿ ಸೂಲೆಬೆಲೆ ವಿರುದ್ಧ ದೂರು ದಾಖಲು

ಕಾರವಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ ವಿಷಯಕ್ಕೆ ಸಂಬಂಧಿಸಿ ಯುವ ಬ್ರೀಗೇಡ್‌ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಕಾರವಾರದ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವರದಿಯಾಗಿದೆ. ಕೆಲವು ದಿನಗಳ ಹಿಂದೆ ಕಾರವಾರಕ್ಕೆ ಆಗಮಿಸಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಅವಹೇಳನಾಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾರವಾರ ಗ್ರಾಮೀಣ ಪೊಲೀಸರು ಸುಮೊಟೋ ಪ್ರಕರಣ … Continued

ಕಾರವಾರ: ಭಾರೀ ಗಾಳಿ-ಮಳೆ ಮುನ್ಸೂಚನೆ, ಸಮುದ್ರ ಪ್ರಕ್ಷುಬ್ಧ, ಕಡಲತೀರಕ್ಕೆ ಮರಳಿದ ಮೀನುಗಾರಿಕಾ ಬೋಟ್‌ಗಳು

ಕಾರವಾರ : ವಾಯುಭಾರ ಕುಸಿತದಿಂದ ಹವಮಾನ ವೈಪರೀತ್ಯದಿಂದಾಗಿ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಮೀನುಗಾರಿಕಾ ಬೋಟ್‌ಗಳು ಕರಾವಳಿ ತೀರದ ಕಡಲತೀರಗಳಲ್ಲಿ ಲಂಗರು ಹಾಕಿ ಆಶ್ರಯ ಪಡೆದುಕೊಂಡಿದೆ. ಹಾಗೂ ಮೀನುಗಾರಿಕೆಗೆ ತೆರಳಿದ ಬೋಟ್‌ಗಳು ಸಹ ವಾಪಸ್ಸಾಗುತ್ತಿವೆ. ಸಮುದ್ರದಲ್ಲಿ ಅಲೆಗಳ ಭೋರ್ಗರೆತ ಜೋರಾಗಿದ್ದು, ಪ್ರವಾಸಿಗರಿಗೆ ಎಚ್ಚರಿಕೆಯಾಗಿ ರೆಡ್ ಫ್ಲ್ಯಾಗ್‌ಗಳನ್ನು ಅಳವಡಿಸಲಾಗಿದೆ. ಎರಡ್ಮೂರು ದಿನಗಳಿಂದ ಕರಾವಳಿಯಲ್ಲಿ ಮಳೆಯಾಗುತ್ತಿರುವ ಕಾರಣ … Continued

ಕಾರವಾರ : ಬಾರೆ ರಸ್ತೆಯಲ್ಲಿ ವಾಹನದ ಪಕ್ಕವೇ ಕಾಣಿಸಿಕೊಂಡ ಹುಲಿ : ಜನರತ್ತ ನೋಡಿ ಘರ್ಜನೆ | ವೀಕ್ಷಿಸಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಮಲ್ಲಾಪುರ-ಕೈಗಾ-ಬಾರೆ-ಯಲ್ಲಾಪುರ ರಸ್ತೆಯಲ್ಲಿ ಹುಲಿಯೊಂದು ಕಾರಿನ ಪಕ್ಕದಲ್ಲಿಯೇ ಕಾಣಿಸಿಕೊಂಡಿದ್ದು, ಇದರ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಕೈಗಾ ಎನ್‌ಪಿಸಿಐಎಲ್‌ ಉದ್ಯೋಗಿ ಚೇತನ ತೇಲ್ಕರ ಎಂಬವರು ಹುಲಿ ಕಾಣಿಸಿಕೊಂಡಿದ್ದನ್ನು ವೀಡಿಯೊ ಚಿತ್ರೀಕರಣ ಮಾಡಿದ್ದಾರೆ. ಬೃಹತ್‌ ಗಾತ್ರದ ಹುಲಿ ರಸ್ತೆ ಬದಿಯಲ್ಲೇ ನಿಂತು ಕಾರಿನಲ್ಲಿದ್ದವರನ್ನು ನೋಡಿ ಘರ್ಜಿಸುವುದನ್ನು ವೀಡಿಯೊದಲ್ಲಿ ನೋಡಬಹುದಾಗಿದೆ. ಕಾರನ್ನು ಹಿಂಬಾಲಿಸಿದಂತೆ … Continued

ಕಾರವಾರ : ಆಟವಾಡುತ್ತಿದ್ದಾಗ ಆಯತಪ್ಪಿ ಬಾವಿಗೆ ಬಿದ್ದು 3 ವರ್ಷದ ಮಗು ಸಾವು

ಕಾರವಾರ: ಮೂರು ವರ್ಷದ ಬಾಲಕಿಯೊಬ್ಬಳು ಮನೆಯ ಪಕ್ಕದಲ್ಲೇ ಇದ್ದ ಬಾವಿಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಕಾರವಾರ ನಗರದ ಹರಿದೇವ ನಗರದಲ್ಲಿ ಈ ಘಟನೆ ನಡೆದಿದ್ದು, ಬಾಲಕಿ ಬಾವಿಯ ಸಮೀಪ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಮೃತಳನ್ನು ಮೂರುವರ್ಷದ ಬಾಲಕಿ ಸ್ತುತಿ ಎಂದು ಗುರುತಿಸಲಾಗಿದೆ. ಈಕೆ … Continued

ಕಾರವಾರ : ಮನೆ ಮುಂದೆ ನಿಲ್ಲಿಸಿದ್ದ ಬೈಕಿನೊಳಗೆ ಅಡಗಿಕೊಂಡಿದ್ದ ಬೃಹತ್‌ ಕಾಳಿಂಗ ಸರ್ಪದ ರಕ್ಷಣೆ | ವೀಕ್ಷಿಸಿ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದ ಶೇಜವಾಡ ಬಳಿ ಮನೆಯಂಗಳದಲ್ಲಿ ನಿಲ್ಲಿಸಿದ್ದ ಬೈಕ್‌ನಲ್ಲಿ ಕಾಳಿಂಗ ಸರ್ಪ ಪತ್ತೆಯಾದ ವಿದ್ಯಮಾನ ವರದಿಯಾಗಿದೆ…! ಶೇಜವಾಡದ ಮಂಜುನಾಥ ನಾಯ್ಕ ಎಂಬವರ ಬೈಕ್‌‌ನ ಒಳಗೆ ಕಾಳಿಂಗ ಸರ್ಪ ಸೇರಿಕೊಂಡಿತ್ತು. ಬೈಕ್ ಹಿಂಬದಿಯ ಚೈನ್ ಪಾಕೆಟ್‌ ಬಳಿ ಈ ಬೃಹತ್‌ ಕಾಳಿಂಗ ಸರ್ಪ ಅಡಗಿಕೊಂಡಿತ್ತು. ಇದನ್ನು ಗಮನಿಸಿದ ಮನೆಯವರು  ಅದನ್ನು … Continued

ಕಾರವಾರ: ಜನರ ಜೊತೆ ಬೆರೆಯುತ್ತಿದ್ದ ಕಾಡು ಹಂದಿಗೆ ಆಹಾರದಲ್ಲಿ ಸ್ಫೋಟಕ ಇಟ್ಟು ಸಾಯಿಸಿದ ದುಷ್ಕರ್ಮಿಗಳು

ಕಾರವಾರ: ಉತ್ತರ ಕನ್ನಡ ಜಿಲ್ಲೆ ಕಾರವಾರ ತಾಲೂಕಿನ ಚಂಡಿಯಾ ಗ್ರಾಮದಲ್ಲಿ ಜನರೊಂದಿಗೆ ಸ್ನೇಹದಿಂದ ಇದ್ದು ಅವರು ಕೊಟ್ಟ ಆಹಾರ ತಿಂದು ಬದುಕಿದ್ದ ಕಾಡುಹಂದಿಯನ್ನು ಕೋಳಿ ಮಾಂಸದಲ್ಲಿ ನಾಡಬಾಂಬ್ ಇಟ್ಟು ದುಷ್ಕರ್ಮಿಗಳು ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಈ ಹಂದಿ ಊರಿನಲ್ಲಿ ಜನರು ನೀಡಿದ ಆಹಾರವನ್ನ ಸೇವಿಸುತ್ತ ಜನರ ಪ್ರೀತಿ ಗಳಿಸಿತ್ತು. ಕಾಂತಾರ ಸಿನೆಮಾ … Continued