ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣ ಮುಗಿದ ನಂತರ ಎಎಸ್‌ಐ ಹೃದಯಾಘಾತದಿಂದ ಸಾವು

.ಕಾರವಾರ: ಗಣರಾಜ್ಯೋತ್ಸವ ಧ್ವಜಾರೋಹಣದಲ್ಲಿ ಪಾಲ್ಗೊಂಡ ನಂತರ ಸಂಚಾರಿ ಪೊಲೀಸ್ ಠಾಣೆಯ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಕಾರವಾರದಲ್ಲಿ ಇಂದು, ಮಂಗಳವಾರ ನಡೆದಿದೆ. ನಗರದ ಸಂಚಾರಿ ಠಾಣೆಯಲ್ಲಿ ಎಎಸ್​ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಬ್ದುಲ್ ಖಾದರ್ ಮಹ್ಮದ್ ಶೇಖ್ (57) ಮೃತ ಅಧಿಕಾರಿಯಾಗಿದ್ದಾರೆ. ಸಂಚಾರಿ ಠಾಣೆಯಲ್ಲಿ ಬೆಳಗ್ಗೆ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಿದ್ದರು. ಧ್ವಜಾರೋಹಣ ಮುಗಿದ ಕೆಲ ಸಮಯದ … Continued

ಕಾರವಾರ: ಶಾಲೆಗೆ ಹೋಗುತ್ತಿದ್ದ ಮಕ್ಕಳ ಮೇಲೆ ಜೇನು ದಾಳಿ: 16 ಮಂದಿ ಆಸ್ಪತ್ರೆಗೆ ದಾಖಲು

ಕಾರವಾರ: ಶಾಲೆಗೆ ಹೋಗುತ್ತಿದ್ದ 20ಕ್ಕೂ ಹೆಚ್ಚು ಮಕ್ಕಳಿಗೆ ಜೇನು ನೊಣ ದಾಳಿ ಮಾಡಿ ಕಡಿದ ಘಟನೆ ಕಾರವಾರ ತಾಲೂಕಿನ ಕಿನ್ನರ ಗ್ರಾಮದ ನ್ಯೂ ಹೈಸ್ಕೂಲಿನಲ್ಲಿ ಮಂಗಳವಾರ ನಡೆದ ಬಗ್ಗೆ ವರದಿಯಾಗಿದೆ. ಜೇನು ಕಡಿತದಿಂದ 16 ಮಕ್ಕಳು ಅಸ್ವಸ್ಥರಾಗಿದ್ದು, ಕೆಲ ಮಕ್ಕಳ ಬೆನ್ನು, ಕುತ್ತಿಗೆ, ಮುಖ, ತಲೆಗೆ ಗಾಯಗಳಾಗಿವೆ. ಗಾಯಗೊಂಡಿರುವ ಮಕ್ಕಳನ್ನು ಊರವರ ಸಹಾಯದಿಂದ ಕಾರವಾರ ಜಿಲ್ಲಾಸ್ಪತ್ರೆಗೆ … Continued

ಕಾರವಾರ: ತಂದೆಗೆ ಅಂತ್ಯ ಸಂಸ್ಕಾರ ನೆರವೇರಿಸಿದ ಮಗಳು..!

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಂದೆಯ ಚಿತೆಗೆ ಮಗಳೇ ಅಗ್ನಿ ಸ್ಪರ್ಶ ಮಾಡಿದ ವಿದ್ಯಮಾನ ವರದಿಯಾಗಿದೆ. ಕಾರವಾರ ತಾಲೂಕಿನಲ್ಲಿ ಮಹಿಳೆಯೋರ್ವಳು ತನ್ನ ತಂದೆಗೇ ತಾನೇ ಅಂತ್ಯಕ್ರಿಯೆ ವಿಧಿವಿಧಾನ ನೆರವೇರಿಸಿ ಅಗ್ನಿಸ್ಪರ್ಶ ಮಾಡಿ ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. ತಾಲೂಕಿನ ಮುಡಗೇರಿಯಲ್ಲಿ ಇದು ನಡೆದಿದ್ದು, . ಹಿಂದೂ ಧಾರ್ಮಿಕ ವಿಧಿ-ವಿಧಾನದಂತೆ ತಂದೆಗೆ ಅಂತ್ಯಸಂಸ್ಕಾರ ಮಾಡಿದ್ದಾರೆ. ಹಿಂದೂ ಧರ್ಮದಲ್ಲಿ … Continued

ಪ್ರಧಾನಿ ಮೋದಿ 71ನೇ ಜನ್ಮದಿನ: ಕಾರವಾರದ ಕಡಲತೀರದ ಮರಳಿನಲ್ಲಿ ಮೂಡಿದ ಕಲಾಕೃತಿ

ಕಾರವಾರ : ನರೇಂದ್ರ ಮೋದಿಯವರ 71 ನೇ ಜನ್ಮದಿನದ ಅಂಗವಾಗಿ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ರವೀಂದ್ರನಾಥ ಠಾಗೋರ್ ಕಡಲತೀರದಲ್ಲಿ, ಮರಳಿನಲ್ಲಿ ಮೋದಿ ಕಲಾಕೃತಿ ಮೂಡಿಬಂದಿದೆ. ಮೋದಿಯವರ ಅಭಿಮಾನಿ ವಿಷ್ಟು ಎಂಬವರು ಮೋದಿಯವರ ಮರಳಿನ ಕಲಾಕೃತಿ ರಚಿಸಿ ವಿಶಿಷ್ಟವಾಗಿ ಮೋದಿ ಜನ್ಮದಿನವನ್ನು ಆವರಿಸಿದರು. ಅಂಕೋಲದ ವಿಷ್ಟು ಅವರ ಜೊತೆಗೆ ಮೂರು ಜನ ಕಲಾವಿದರು ಆರು ತಾಸುಗಳ … Continued

ವಾಹನ ಚಲಾಯಿಸುತ್ತಿದ್ದಾಗಲೇ ಹೃದಯಾಘಾತದಿಂದ ಸಾವು

ಕಾರವಾರ: ವಾಹನ ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಹೃದಯಾಘಾತದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಸಂಭವಿಸಿದೆ. ಮೃತನನ್ನು ಧಾರವಾಡ ಜಿಲ್ಲೆಯ  ಮೈಲಾರಿ ಸಹದೇವಪ್ಪ  ಜರಗ (23) ಎಂದು ಗುರುತಿಸಲಾಗಿದೆ. ಈತ ಹುಬ್ಬಳ್ಳಿಯಿಂದ ಕಾರವಾರ ನಗರಕ್ಕೆ ಇಲೆಕ್ಟ್ರಿಕಲ್ ಸಾಮಗ್ರಿಗಳನ್ನು ಪೂರೈಸುತ್ತಿದ್ದ ಎನ್ನಲಾಗಿದ್ದು, ಶುಕ್ರವಾರ ಅಣಶಿ ಮಾರ್ಗವಾಗಿ ನಗರಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಟಾಟಾ ಏಸ್ ವಾಹನದಲ್ಲಿಯೇ ಹೃದಯಾಘಾತ … Continued

ಕಾರವಾರ: ಬಲೆಗೆ ಬಿದ್ದ 19 ಕೆಜಿ ತೂಕದ ಕುರಡೆ ಮೀನು

ಕಾರವಾರ: ನಗರದ ರವೀಂದ್ರನಾಥ ಟ್ಯಾಗೋರ್ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ವೇಳೆ 19 ಕೆಜಿ ತೂಕದ ಕುರಡೆ ಮೀನು ಬಲೆಗೆ ಸೋಮವಾರ ಸಿಕ್ಕಿಬಿದ್ದಿದೆ. ತಾಲೂಕಿನಲ್ಲಿ ಕಳೆದ ಒಂದು ವಾರದಿಂದ ಭಾರೀ ಮಳೆ ಸುರಿಯುತ್ತಿದೆ. ಈ ಅವಧಿಯಲ್ಲಿ ಸಮುದ್ರದಲ್ಲಿ ಭಾರೀ ಗಾತ್ರದ ಅಲೆಗಳು ಸೃಷ್ಟಿಯಾಗುತ್ತಿದ್ದರಿಂದ ಮೀನುಗಾರಿಕೆ ಸಾಧ್ಯವಾಗಿರಲಿಲ್ಲ. ಆದರೆ ಸೋಮವಾರ ಮಳೆ ಕೊಂಚ ವಿರಾಮ ನೀಡಿದ ವೇಳೆಯಲ್ಲಿ … Continued