ಕಾಶ್ಮೀರ : ಎನ್‌ಕೌಂಟರಿನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಈ ವೇಳೆ ಇಬ್ಬರು ಭದ್ರತಾ ಸಿಬ್ಬಂದಿ ಸಹ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂದು, ಬುಧವಾರ ಬೆಳಗ್ಗೆ ಬಾರಾಮುಲ್ಲಾ ಜಿಲ್ಲೆಯ ವಾಟರ್‌ಗಾಮ್ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ದೊರೆತ ನಂತರ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ … Continued

ಜೂನ್ 21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ : ಕಾಶ್ಮೀರದ ಶ್ರೀನಗರದಲ್ಲಿ ನಡೆಯುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಈ ವರ್ಷದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಜೂನ್ 21 ರಂದು ಶ್ರೀನಗರದ ಶೇರ್-ಇ-ಕಾಶ್ಮೀರ್ ಇಂಟರ್ನ್ಯಾಷನಲ್ ಕಾನ್ಫರೆನ್ಸ್ ಸೆಂಟರ್ (ಎಸ್‌ಕೆಐಸಿಸಿ) ನಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಆಯೋಜಿಸಲಾಗುವುದು ಎಂದು ಆಯುಷ್ ಖಾತೆ ಸಚಿವ ಪ್ರತಾಪರಾವ್‌ ಜಾಧವ್ ಮಂಗಳವಾರ ತಿಳಿಸಿದ್ದಾರೆ. . ಜಾಧವ್ ಅವರು, ಆಯುಷ್ ರಾಜ್ಯ ಸಚಿವ (ಸ್ವತಂತ್ರ ಉಸ್ತುವಾರಿ), ಈ ವರ್ಷದ … Continued

‘ಮೋಸ್ಟ್ ವಾಂಟೆಡ್’ ಭಯೋತ್ಪಾದಕ ಸೇರಿದಂತೆ ಮೂವರು ಉಗ್ರರನ್ನು ಎನ್‌ಕೌಂಟರ್‌ ವೇಳೆ ಹೊಡೆದುರುಳಿಸಿದ ಭದ್ರತಾ ಪಡೆಗಳು

ನವದೆಹಲಿ: ಮಹತ್ವದ ಪ್ರಗತಿಯೊಂದರಲ್ಲಿ, ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೋಸ್ಟ್ ವಾಂಟೆಡ್ ಭಯೋತ್ಪಾದಕ ಮತ್ತು ಎಲ್‌ಇಟಿ ಕಮಾಂಡರ್ ಸೇರಿ ಮೂವರು ಹತರಾಗಿದ್ದಾರೆ. ದಕ್ಷಿಣ ಕಾಶ್ಮೀರದ ಕುಲ್ಗಾಮ್‌ನ ರೆಡ್ವಾನಿ ಪಯೀನ್ ಪ್ರದೇಶದಲ್ಲಿ ಸೋಮವಾರ ತಡರಾತ್ರಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಭಯೋತ್ಪಾದಕರನ್ನು … Continued

“ನಿಮ್ಮ ಬೌಲರ್ ಯಾರು?”: ಕಾಶ್ಮೀರದ ಗುಲ್ಮಾರ್ಗ ರಸ್ತೆಯಲ್ಲಿ ಸ್ಥಳೀಯರೊಂದಿಗೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ | ವೀಕ್ಷಿಸಿ

ಭಾರತದ ಕ್ರಿಕೆಟ್‌ ದಂತಕಥೆ ಸಚಿನ್ ತೆಂಡೂಲ್ಕರ್ ಪ್ರಸ್ತುತ ಕಾಶ್ಮೀರ ಮೊದಲ ಪ್ರವಾಸದಲ್ಲಿದ್ದು, ಅವರು ಅಲ್ಲಿನ ಗುಲ್ಮಾರ್ಗ್‌ನಲ್ಲಿ ಸ್ಥಳೀಯರೊಂದಿಗೆ ಗಲ್ಲಿ ಕ್ರಿಕೆಟ್ ಆಟದಲ್ಲಿ ತೊಡಗಿರುವ ವೀಡಿಯೊ ವೈರಲ್‌ ಆಗಿದೆ. ಗುಲ್ಮಾರ್ಗ್‌ದ ಸುಂದರವಾದ ಪರಿಸರದ ನಡುವೆ ಸಚಿನ್ ಒಂದು ಓವರ್ ಕ್ರಿಕೆಟ್‌ ಆಡಿದರು. ಸಾಮಾಜಿಕ ಮಾಧ್ಯಮದಲ್ಲಿ ತೆಂಡೂಲ್ಕರ್ ಅವರು ಸ್ಥಳೀಯರೊಂದಿಗೆ ಪಾಲ್ಗೊಂಡ ಮತ್ತು ಗಲ್ಲಿ ಕ್ರಿಕೆಟ್ ಆಟವನ್ನು ಆನಂದಿಸುವ … Continued

ಮೋಡಿಮಾಡುವ ವೀಡಿಯೊ…| ಕಾಶ್ಮೀರದ ಗುಲ್ಮಾರ್ಗ್ ಪ್ರದೇಶದ ಚಳಿಗಾಲದ ಅದ್ಭುತ ದೃಶ್ಯ ಕಾವ್ಯ ಡ್ರೋನ್‌ ಕ್ಯಾಮರಾದಲ್ಲಿ ಸೆರೆ

ಉತ್ತರ ಕಾಶ್ಮೀರದ ಹೆಸರಾಂತ ಪ್ರವಾಸಿ ತಾಣವಾದ ಗುಲ್ಮಾರ್ಗ್ ಹಲವಾರು ಅಡಿಗಳಷ್ಟು ಹಿಮದಿಂದ ಆವೃತವಾಗಿದೆ. ಬೆರಗುಗೊಳಿಸುವ ಅಪರೂಪದ ದೃಶ್ಯವನ್ನು ಡ್ರೋನ್ ಕ್ಯಾಮರಾ ತೋರಿಸಿದೆ. ಕಳೆದ 72 ಗಂಟೆಗಳಿಂದ ತಾಪಮಾನವು ಘನೀಕರಿಸುವ ಹಂತಕ್ಕಿಂತ ಕೆಳಗೆ ಹಲವಾರು ಡಿಗ್ರಿಗಳಷ್ಟು ಕುಸಿದಿದೆ ಮತ್ತು ಭಾನುವಾರ ಮೈನಸ್ 7.0 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.ಹಿಮಪಾತದಿಂದಾಗಿ ಶ್ರೀನಗರ ವಿಮಾನ ನಿಲ್ದಾಣದಿಂದ ದಿನದ ಎಲ್ಲ ವಿಮಾನಗಳನ್ನು ರದ್ದುಗೊಳಿಸಲಾಗಿದೆ. … Continued

ಕಾಶ್ಮೀರ : ಭಯೋತ್ಪಾದಕರ ವಿರುದ್ಧದ ಎನ್‌ ಕೌಂಟರಿನಲ್ಲಿ ಸೇನಾಧಿಕಾರಿ, ಸೈನಿಕ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಜಿ ಮಾಲ್ ಅರಣ್ಯದಲ್ಲಿ ನಡೆದ ಭೀಕರ ಎನ್‌ಕೌಂಟರ್‌ನಲ್ಲಿ ಕ್ಯಾಪ್ಟನ್ ಶ್ರೇಣಿಯ ಒಬ್ಬ ಸೇನಾಧಿಕಾರಿ ಮತ್ತು ಒಬ್ಬ ಯೋಧ ಹುತಾತ್ಮರಾಗಿದ್ದಾರೆ. ಎನ್‌ಕೌಂಟರ್‌ನಲ್ಲಿ ಇಬ್ಬರು ಯೋಧರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿಯ ನಂತರ ಸೇನೆಯ ವಿಶೇಷ ಪಡೆಗಳು ಮತ್ತು ಪೊಲೀಸರು ಜಂಟಿ … Continued

ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರ : ಶ್ರೀನಗರದ ಡೌನ್ಟೌನ್ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇನ್ಸ್ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಭಾನುವಾರ ಈದ್ಗಾ ಮೈದಾನದಲ್ಲಿ ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು … Continued

2010ರ ಪ್ರಚೋದನಕಾರಿ ಭಾಷಣ ಪ್ರಕರಣ : ಲೇಖಕಿ ಅರುಂಧತಿ ರಾಯ್, ಕಾಶ್ಮೀರದ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮಕ್ಕೆ ದೆಹಲಿ ಎಲ್‌ಜಿ ಅನುಮೋದನೆ

ನವದೆಹಲಿ: ಪ್ರಚೋದನಕಾರಿ ಭಾಷಣಗಳಿಗೆ ಸಂಬಂಧಿಸಿದ 2010ರ ಪ್ರಕರಣದಲ್ಲಿ ಲೇಖಕಿ ಅರುಂಧತಿ ರಾಯ್ ಮತ್ತು ಮಾಜಿ ಕಾಶ್ಮೀರಿ ಪ್ರಾಧ್ಯಾಪಕರ ವಿರುದ್ಧ ಕಾನೂನು ಕ್ರಮ ಜರುಗಿಸಲು ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ಅನುಮತಿ ನೀಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ. ಸುಶೀಲ್ ಪಂಡಿತ ಮತ್ತು ‘ರೂಟ್ಸ್ ಇನ್ ಕಾಶ್ಮೀರ್’ ಎಂಬ ಹೆಸರಿನ ಕಾಶ್ಮೀರಿ ಪಂಡಿತ ಸಂಘಟನೆಯು … Continued

ಕಾಶ್ಮೀರ : ಎನ್‌ಕೌಂಟರ್‌ ವೇಳೆ 2 ಸೇನಾ ಅಧಿಕಾರಿಗಳು, ಓರ್ವ ಪೊಲೀಸ್‌ ಅಧಿಕಾರಿ ಹುತಾತ್ಮ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಲ್, ಸೇನೆಯ ರಾಷ್ಟ್ರೀಯ ರೈಫಲ್ಸ್ ಘಟಕದ ಮೇಜರ್ ಮತ್ತು ಜಮ್ಮು ಮತ್ತು ಕಾಶ್ಮೀರದ ಪೊಲೀಸ್ ಉಪಾಧೀಕ್ಷಕರು ಹತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಲ್ ಮನ್‌ಪ್ರೀತ್ ಸಿಂಗ್, ಮೇಜರ್ ಆಶಿಶ್ ಧೋಂಚಕ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ ಹುಮಾಯೂನ್‌ ಮುಜಾಮಿಲ್ ಭಟ್ ಅವರು ಗುಂಡಿನ ಚಕಮಕಿಯಲ್ಲಿ … Continued

ಕಾಶ್ಮೀರ: ಪೂಂಚ್‌ನಲ್ಲಿ ನಾಲ್ವರು ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್‌ನ ಸಿಂಧರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮಂಗಳವಾರ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ನಾಲ್ವರು ಭಯೋತ್ಪಾದಕರು ಹತರಾಗಿದ್ದಾರೆ. ಮಾಹಿತಿಯ ಪ್ರಕಾರ, ಸೋಮವಾರ (ಜುಲೈ 17) ರಾತ್ರಿ 11:30 ರ ಸುಮಾರಿಗೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಮೊದಲ ಮುಖಾಮುಖಿ ನಡೆದಿದ್ದು, ನಂತರ ಇತರ ರಾತ್ರಿ ಕಣ್ಗಾವಲು ಉಪಕರಣಗಳೊಂದಿಗೆ ಡ್ರೋನ್‌ಗಳನ್ನು … Continued