ಆರ್‌ಎಸ್‌ಎಸ್‌ ಪಥಸಂಚಲನದಲ್ಲಿ ಭಾಗಿಯಾಗಿದ್ದ ಶಿಕ್ಷಕರಿಗೆ ರಿಲೀಫ್‌ : ಅಮಾನತು ಆದೇಶಕ್ಕೆ ಕೆಎಟಿ ತಡೆ

ಕಲಬುರಗಿ : ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಪಥಸಂಚಲನದಲ್ಲಿ ಭಾಗವಹಿಸಿದ್ದ ಆರೋಪದ ಮೇಲೆ ಅಮಾನತುಗೊಂಡಿದ್ದ ಇಬ್ಬರು ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (KAT) ಕಲಬುರಗಿ ಪೀಠ ತಡೆ ನೀಡಿದೆ. ಹುಣಸಗಿ ಪಟ್ಟಣದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗುರುರಾಜ ಜೋಶಿ ಹಾಗೂ ಕುಪ್ಪಿ ಶಾಲೆಯ ಅಣ್ಣಾಸಾಹೇಬ ದೇಶಮುಖ್ ಅವರು … Continued

ಪಿಎಸ್‌ಐ ನೇಮಕ ಮರುಪರೀಕ್ಷೆ: ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್‌ ಅಸ್ತು ; ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು : ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ಮರು ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್‌ ಶುಕ್ರವಾರ ಎತ್ತಿ ಹಿಡಿದಿದೆ. ಅಲ್ಲದೇ, ನ್ಯಾಯಯುತ ಮತ್ತು ಪಾರದರ್ಶಕ ಮರು ಪರೀಕ್ಷೆ ನಡೆಸುವುದನ್ನು ಖಾತರಿಪಡಿಸಲು ರಾಜ್ಯ ಸರ್ಕಾರವು ಸ್ವತಂತ್ರ ಸಂಸ್ಥೆಗೆ ಪರೀಕ್ಷೆ ನಡೆಸುವ ಜವಾಬ್ದಾರಿ ವಹಿಸಬೇಕು ಎಂದು ಆದೇಶಿಸಿದೆ. ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ … Continued

ಪಿಎಸ್‌ಐ ನೇಮಕಾತಿ ಮರು ಪರೀಕ್ಷೆ: ಸರ್ಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಮೇ 24ರ ವರೆಗೆ ಕಾಲಾವಕಾಶ ನೀಡಿದ ಕೆಎಟಿ

ಬೆಂಗಳೂರು: ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ಗಳ (ಪಿಎಸ್‌ಐ) ನೇಮಕಾತಿಗೆ ಸಂಬಂಧಿಸಿದ ಹಗರಣ ಬೆಳಕಿಗೆ ಬಂದ ಬೆನ್ನಲ್ಲೇ ಮರುಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಇಪ್ಪತ್ತೆಂಟು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗೆ ಕರ್ನಾಟಕ ರಾಜ್ಯ ಆಡಳಿತ ನ್ಯಾಯಮಂಡಳಿಯು (ಕೆಎಸ್‌ಎಟಿ) ಬುಧವಾರ ಆಕ್ಷೇಪಣೆ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಮೇ 24ರ ವರೆಗೆ ಕಾಲಾವಕಾಶ … Continued

ಶಿಕ್ಷಕರ ವರ್ಗಾವಣೆ: ಕೆಎಟಿ ಆದೇಶ ಎತ್ತಿ ಹಿಡಿದ ಹೈಕೋರ್ಟ್‌

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತಂತೆ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 2020 -21 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರಿಗೆ ಆದ್ಯತೆ ನೀಡಬೇಕೆಂದು ಶಿಕ್ಷಣ ಇಲಾಖೆಯ ಆದೇಶ ರದ್ದುಗೊಳಿಸಿ ಕರ್ನಾಟಕ ಆಡಳಿತ ನ್ಯಾಯ ಮಂಡಳಿ(KAT) ತೀರ್ಪು ನೀಡಿತ್ತು. ಈ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಹೈಕೋರ್ಟ್ ಹಿರಿಯ … Continued