ಸೆ. 26 ರಂದು ಬೆಂಗಳೂರು ಬಂದ್‌ : ಯಾವುದೆಲ್ಲ ಸ್ಥಗಿತವಾಗಲಿದೆ..?

ಬೆಂಗಳೂರು: ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಸೆ.26ರಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿ ನೀಡಿರುವ ‘ಬೆಂಗಳೂರು ಬಂದ್‌’ ಕರೆಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ರಾಜಧಾನಿ ಬಹುತೇಕ ಸ್ತಬ್ಧವಾಗುವ ಸಾಧ್ಯತೆಯಿದೆ. ಬಿಜೆಪಿ ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳು, 100 ಕ್ಕೂ ಹೆಚ್ಚು ಸಂಘಟನೆಗಳು, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ನೌಕರರ ಸಂಘ, ಓಲಾ, ಉಬರ್‌ ಚಾಲಕರು ಮತ್ತು … Continued

ಕಾವೇರಿ ನೀರು ವಿವಾದ: ಮಧ್ಯಸ್ಥಿಕೆ ವಹಿಸುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದ ದೇವೇಗೌಡ

ಬೆಂಗಳೂರು : ಕರ್ನಾಟಕ ಹಾಗೂ ತಮಿಳುನಾಡಿನ ನಡುವಿನ ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿಲ್ಲದಿದ್ದರೂ ಸಹ ತಮಿಳುನಾಡಿಗೆ ನೀರು ಹರಿಸುವಂತೆ ಸುಪ್ರೀಂಕೋರ್ಟ್ ಆದೇಶಿಸಿದೆ. ಈ ಹಿನ್ನೆಲೆಯಲ್ಲಿ … Continued

ಕಾವೇರಿ ಹೋರಾಟ: ಇಂದು ಮಂಡ್ಯ, ಮದ್ದೂರು ಬಂದ್

ಮಂಡ್ಯ : ದಿನದಿಂದ ದಿನ ಕಾವೇರಿ ಹೋರಾಟದ ತೀವ್ರತೆ ಹೆಚ್ಚಾಗುತ್ತಿದ್ದು, ಇಂದು, ಶನಿವಾರ ಮಂಡ್ಯ ಹಾಗೂ ಮದ್ದೂರ್ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸೂಚಿಸಿದ ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಇಂದು ರೈತ, ಕನ್ನಡ ಪರ, ಪ್ರಗತಿ ಪರ ಸಂಘಟನೆಗಳು ಮಂಡ್ಯ ನಗರ ಹಾಗೂ ಮದ್ದೂರು ಪಟ್ಟಣ ಬಂದ್‍ಗೆ ಕರೆ ನೀಡಿವೆ. … Continued