ಜಾರಿ ನಿರ್ದೇಶನಾಲಯದ ಕಸ್ಟಡಿಯಿಂದ ಮೊದಲನೇ ಸರ್ಕಾರಿ ಆದೇಶ ಹೊರಡಿಸಿದ ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿ ಮದ್ಯ ನೀತಿ ಪ್ರಕರಣದಲ್ಲಿ ಬಂಧಿತರಾಗಿರುವ ಅರವಿಂದ ಕೇಜ್ರಿವಾಲ್ ಅವರು ಜಾರಿ ನಿರ್ದೇಶನಾಲಯದ ಕಸ್ಟಡಿಯಲ್ಲಿರುವಾಗಲೇ ಸರ್ಕಾರಕ್ಕೆ ತಮ್ಮ ಮೊದಲ ಆದೇಶವನ್ನು ನೀಡಿದ್ದಾರೆ. ಈ ಆದೇಶವು ಜಲ ಸಚಿವಾಲಯಕ್ಕೆ ಸಂಬಂಧಿಸಿದೆ ಮತ್ತು ಸೂಚನೆಯ ಮೂಲಕ ನಿರ್ದೇಶನವನ್ನು ಕಳುಹಿಸಲಾಗಿದೆ. ದೆಹಲಿ ಸಚಿವರಾದ ಅತಿಶಿ ಇಂದು ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅರವಿಂದ್ ಕೇಜ್ರಿವಾಲ್ ಹೊರಡಿಸಿದ ಆದೇಶದ ಬಗ್ಗೆ … Continued

ದೆಹಲಿ: ಬಾಲಕಿಯ ಅತ್ಯಾಚಾರ, ಹತ್ಯೆ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ; ಕೇಜ್ರಿವಾಲ್

ನವದೆಹಲಿ: ದೇಶದ ರಾಜಧಾನಿಯಲ್ಲಿ 9 ವರ್ಷದ ದಲಿತ ಬಾಲಕಿಯ ಅತ್ಯಾಚಾರಗೈದು, ಆಕೆಯನ್ನು ಹತ್ಯೆಗೈದ ಘೋರ ಕೃತ್ಯದ ಬಗ್ಗೆ ಮ್ಯಾಜಿಸ್ಟ್ರೇಟ್ ಮಟ್ಟದ ತನಿಖೆಗೆ ದೆಹಲಿ ಸರ್ಕಾರ ಆದೇಶಿಸಲಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ತಿಳಿಸಿದ್ದಾರೆ. ಬಾಲಕಿಯ ಸಂತ್ರಸ್ತ ಕುಟುಂಬಕ್ಕೆ 10 ಲಕ್ಷ ರೂ.ಗಳ ಪರಿಹಾರ ಕೂಡಾ ನೀಡಲಾಗುವುದೆಂದು ಅವರು ಘೋಷಿಸಿದ್ದಾರೆ. ದೆಹಲಿಯಲ್ಲಿ ಮೃತ ಬಾಲಕಿಯ ಕುಟುಂಬದವರನ್ನು ಭೇಟಿಯಾದ … Continued

ದೆಹಲಿ ಮಸೂದೆ ವಿವಾದ: ರಾಜ್ಯಸಭೆಯಲ್ಲಿ ಗದ್ದಲ

ನವ ದೆಹಲಿ: ದೆಹಲಿಯಲ್ಲಿ ಚುನಾಯಿತ ಸರ್ಕಾರದ ಅಧಿಕಾರಗಳನ್ನು ಮೊಟಕುಗೊಳಿಸಿ, ಲೆಫ್ಟಿನೆಂಟ್ ಗವರ್ನರ್‌ಗೆ ಮತ್ತಷ್ಟು ಅಧಿಕಾರ ನೀಡುವ ಕೇಂದ್ರ ಸರ್ಕಾರದ ಹೊಸ ಮಸೂದೆ ವಿರುದ್ಧ ರಾಜ್ಯಸಭೆಯಲ್ಲಿ ಬುಧವಾರ ತೀವ್ರ ಕೋಲಾಹಲ ಉಂಟಾಯಿತು. ಹಣಕಾಸು ಮಸೂದೆ ಕುರಿತು ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡುವಾಗ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ತಿವ್ರ ವಾಗ್ವಾದ ನಡೆಯಿತು. … Continued

ಕೆಂಪು ಕೋಟೆ ಹಿಂಸಾಚಾರ ಬಿಜೆಪಿ ಪೂರ್ವ ನಿಯೋಜಿತ ಕೃತ್ಯ: ಕೇಜ್ರಿವಾಲ್‌

ಗಣರಾಜ್ಯೋತ್ಸವದಿನದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರ ಬಿಜೆಪಿಯ ಪೂರ್ವ ನಿಯೋಜಿತ ಕೃತ್ಯ ಎಂದು ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್‌ ಆರೋಪಿಸಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿ ಕಿಸಾನ್‌ ಮಹಾಪಂಚಾಯತ್‌ನಲ್ಲಿ ಮಾತನಾಡಿ, ಕೆಂಪು ಕೋಟೆಯಲ್ಲಿ ನಡೆದ ಹಿಂಸಾಚಾರವನ್ನು ಕೇಸರಿ ಪಕ್ಷ ಮೊದಲೇ ಯೋಜಿಸಿತ್ತು. ಕೇಂದ್ರದ ಮೂರು ಕೃಷಿ ಕಾನೂನುಗಳು ರೈತರಿಗೆ ಡೆತ್ ವಾರಂಟ್ ಇದ್ದಂತೆ ಎಂದರು. ಇಡೀ ಕೆಂಪು … Continued

ಕಾಂಗ್ರೆಸ್‌ ಬಿಜೆಪಿ ಬಿ ಟೀಮ್‌: ಕೇಜ್ರಿವಾಲ್‌ ಆರೋಪ

ನವದೆಹಲಿ: ಸಿಲಾಂಪುರದಲ್ಲಿ ನಡೆದ ಎಎಪಿ ರೋಡ್‌ ಶೋದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಕಾಂಗ್ರೆಸ್‌ ಪಕ್ಷ ಬಿಜೆಪಿಯ “ಬಿʼ ಟೀಮ್‌ ಎಂದು ಟೀಕೆ ಮಾಡಿದ್ದಾರೆ. ಕಾಂಗ್ರೆಸ್ ದೇಶಾದ್ಯಂತ ನಾಶವಾಗುತ್ತಿದೆ. ಕಾಂಗ್ರೆಸ್‌ಗೆ ಭವಿಷ್ಯ ಇಲ್ಲ ಎಂಬುದು ಸೂರತ್‌ ಸ್ಥಳಿಯ ಸಂಸ್ಥೆಯ ಚುನಾವಣೆಯಲ್ಲಿ ಸಾಬೀತಾಗಿದೆ. ಕಾಂಗ್ರೆಸ್‌ ಶೂನ್ಯ ಸಾಧನೆ ಮಾಡಿದೆ. ಸೂರತ್ ಮಹಾನಗರ ಪಾಲಿಕೆಯ 120 ಸ್ಥಾನಗಳಲ್ಲಿ ಎಎಪಿ … Continued