ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲೂ ಹಿಜಾಬ್, ಕೇಸರಿ ಶಾಲು, ಸ್ಕಾರ್ಫ್​​ಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್‌ ಸಂಘರ್ಷದ ಹೊತ್ತಲ್ಲೇ ಸರ್ಕಾರದ ಮತ್ತೊಂದು ಆದೇಶ ಹೊರಬಿದ್ದಿದೆ. ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ ಶಾಲೆಗಳಲ್ಲಿ ಹಿಜಾಬ್‌, ಕೇಸರಿ ಶಾಲು, ಸ್ಕಾರ್ಫ್​​​ ಧರಿಸದಂತೆ ಆದೇಶಿಸಿ ಸುತ್ತೋಲೆ ಹೊರಡಿಸಲಾಗಿದೆ. ಹೈಕೋರ್ಟ್‌ ಮಧ್ಯಂತರ ಆದೇಶದ ನಂತರ ಸರ್ಕಾರ ಈ ಸುತ್ತೋಲೆಯೊಂದನ್ನು ಹೊರಡಿಸಿದ್ದು, ಅಲ್ಪಸಂಖ್ಯಾತ ಕಲ್ಯಾಣ ಶಾಲೆಗಳಲ್ಲಿ ಹಿಜಾಬ್‌ ನಿಷೇಧಿಸಿ ಆದೇಶಿಸಿದೆ. ‌ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ … Continued

ವಿಜಯಪುರ ಜಿಲ್ಲೆಗೂ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳು

ವಿಜಯಪುರ: ಉಡುಪಿ ಜಿಲ್ಲೆಯಲ್ಲಿ ಕೆಲವು ದಿನಗಳಿಂದ ನಡೆಯುತ್ತಿರುವ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ಈಗ ವಿಜಯಪುರ ‌ಜಿಲ್ಲೆಯಲ್ಲಿಯೂ ಕಾಣಿಸಿಕೊಂಡಿದೆ. ಜಿಲ್ಲೆಯ ಇಂಡಿ ಪಟ್ಟಣದ ಎರಡು ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸಿದ್ದಾರೆ. ಜಿಲ್ಲೆ ಇಂಡಿ ಪಟ್ಟಣದಲ್ಲಿ ಶಾಂತೇಶ್ವರ ಪಿಯು ಹಾಗೂ ಪದವಿ ಕಾಲೇಜು ವಿದ್ಯಾರ್ಥಿಗಳು ಕೇಸರಿ ಶಾಲು ಸಮೇತ ಇಂದು, ಸೋಮವಾರ … Continued

ಈಗ ಬೈಂದೂರು ಕಾಲೇಜಿನಲ್ಲೂ ಹಿಜಾಬ್ ವಿವಾದ: ಕೇಸರಿ ಶಾಲು ಧರಿಸಿದ ಬಂದ ವಿದ್ಯಾರ್ಥಿಗಳು

ಬೈಂದೂರು: ಉಡುಪಿ , ಕುಂದಾಪುರ ಕಾಲೇಜಿನಲ್ಲಿ ಹಿಜಾಬ್ ವಿವಾದ ಪ್ರಕರಣದ ಬೆನ್ನಲ್ಲೇ ಇದೀಗ ಬೈಂದೂರು ಕಾಲೇಜಿನಲ್ಲಿ ಇಂಥದ್ದೇ ವಿವಾದ ಉಂಟಾಗಿದೆ. ಬೈಂದೂರು ಸರಕಾರಿ ಪದವಿಪೂರ್ವ ಕಾಲೇಜಿನ ಮುನ್ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಹಾಜರಾಗಿದ್ದಾರೆ, ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರೂ ತರಗತಿಗೆ ಪ್ರವೇಶ ಪಡೆದಿದ್ದಾರೆ. ಬೈಂದೂರಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ … Continued